ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಬಿಎಂಡಬ್ಲ್ಯು ಆರ್ 1250 ಜಿಎಸ್ ಬೈಕ್

ಬಿಎಂಡಬ್ಲ್ಯು ಮೋಟೊರಾಡ್ ಕಂಪನಿಯು ತನ್ನ ಬಿಎಸ್6 ಆರ್ 1250 ಜಿಎಸ್ ಅಡ್ವೆಂಚರ್-ಟೂರರ್ ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಈ ಹೊಸ ಬಿಎಂಡಬ್ಲ್ಯು ಆರ್ 1250 ಜಿಎಸ್ ಬೈಕ್ ಶೀಘ್ರದಲ್ಲೇ ಭಾರತೀಯ ಮಾರುಕಟ್ಟೆಗೆ ಲಗ್ಗೆಯಿಡಲಿದೆ.

ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಬಿಎಂಡಬ್ಲ್ಯು ಆರ್ 1250 ಜಿಎಸ್ ಬೈಕ್

ಬಿಎಂಡಬ್ಲ್ಯು ಮೋಟೊರಾಡ್ ಕಂಪನಿಯು ತಮ್ಮ ಸಾಮಾಜಿಕ ಜಾಲತಾಣದ ಪೇಜ್ ನಲ್ಲಿ ಆರ್ 1250 ಜಿಎಸ್ ಅಡ್ವೆಂಚರ್ ಬೈಕ್ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದು ಟೀಸರ್ ಚಿತ್ರದೊಂದಿಗೆ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. 2021ರ ಬಿಎಂಡಬ್ಲ್ಯು ಆರ್ 1250 ಜಿಎಸ್ ಬೈಕ್ ಸ್ಟ್ಯಾಂಡರ್ಡ್ ಮತ್ತು ಅಡ್ವೆಂಚರ್ ಎಂಬ ಎರಡು ರೂಪಾಂತರಗಳಲ್ಲಿ ಬಿಡುಗಡೆಯಾಗಲಿದೆ. ಈ ಹೊಸ ಬೈಕ್ ಅನ್ನು ಕಂಪ್ಲೀಟ್ ಬಿಲ್ಟ್-ಅಪ್ ಯುನಿಟ್(ಸಿಬಿಯು) ಆಗಿ ಭಾರತೀಯ ಮಾರುಕಟ್ಟೆಗೆ ತರಬಹುದು.

ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಬಿಎಂಡಬ್ಲ್ಯು ಆರ್ 1250 ಜಿಎಸ್ ಬೈಕ್

ಈ ಹೊಸ ಬಿಎಂಡಬ್ಲ್ಯು ಆರ್ 1250 ಜಿಎಸ್ ಬೈಕಿನ ಬೆಲೆಯು ಅಂದಾಜು ಎಕ್ಸ್ ಶೋರೂಂ ಪ್ರಕಾರ ರೂ.20 ಲಕ್ಷಗಳಾಗಿರಬಹುದು. ಈ ಆರ್ 1250 ಜಿಎಸ್ ಬಿಎಂಡಬ್ಲ್ಯು ಮೋಟೊರಾಡ್‌ನ ಪ್ರಮುಖ ಅಡ್ವೆಂಚರ್-ಟೂರಿಂಗ್ ಬೈಕ್ ಆಗಿದೆ.

ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಬಿಎಂಡಬ್ಲ್ಯು ಆರ್ 1250 ಜಿಎಸ್ ಬೈಕ್

ಈ ಹೊಸ ಅಡ್ವೆಂಚರ್ ಬೈಕನ್ನು ಹಿಂದಿನ ಮಾದರಿಗಿಂತ ಹಲವಾರು ಬದಲಾವಣೆಗಳೊಂದಿಗೆ ಬಿಡುಗಡೆಗೊಳಿಸಲಾಗುತ್ತದೆ. ಇದು ನವೀಕರಿಸಿದ ವಿನ್ಯಾಸ, ಎಂಜಿನ್, ಎಲೆಕ್ಟ್ರಾನಿಕ್ಸ್ ಪ್ಯಾಕೇಜ್ ಮತ್ತು ಹೊಸ ಬಣ್ಣಗಳನ್ನು ಒಳಗೊಂಡಿರುತ್ತದೆ.

ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಬಿಎಂಡಬ್ಲ್ಯು ಆರ್ 1250 ಜಿಎಸ್ ಬೈಕ್

ಹೊಸ ಬಿಎಂಡಬ್ಲ್ಯು ಆರ್ 1250 ಜಿಎಸ್ ಬೈಕಿನ ಸ್ಟ್ಯಾಂಡರ್ಡ್ ರೂಪಾಂತರವು ಟ್ರಿಪಲ್ ಬ್ಲ್ಯಾಕ್, ಲೈಟ್ ವೈಟ್ ಮತ್ತು ರ್ಯಾಲಿ ಬಣ್ಣಗಳ ಆಯ್ಕೆಯನ್ನು ಹೊಂದಿದ್ದರೆ, ಅಡ್ವೆಂಚರ್ ರೂಪಾಂತರವು ಟ್ರಿಪಲ್ ಬ್ಲ್ಯಾಕ್, ಐಸ್ ಗ್ರೇ ಮತ್ತು ರ್ಯಾಲಿ ಎಂಬ ಬಣ್ಣಗಳ ಆಯ್ಕೆಯನ್ನು ಹೊಂದಿರುತ್ತದೆ.

ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಬಿಎಂಡಬ್ಲ್ಯು ಆರ್ 1250 ಜಿಎಸ್ ಬೈಕ್

ಹಳೆಯ ಮಾದರಿಗೆ ಹೋಲಿಸಿದರೆ 2021ರ ಬಿಎಂಡಬ್ಲ್ಯು ಆರ್ 1250 ಜಿಎಸ್ ವಿನ್ಯಾಸದ ವಿಷಯದಲ್ಲಿ ಹೆಚ್ಚು ಬದಲಾಗಿಲ್ಲ. ಮುಂಭಾಗದಲ್ಲಿ ಅನನ್ಯವಾಗಿ ವಿನ್ಯಾಸಗೊಳಿಸಲಾದ ಹೆಡ್‌ಲ್ಯಾಂಪ್, ಫ್ರಂಟ್ ಬೀಕ್ ಮತ್ತು ಹೊಂದಾಣಿಕೆ ಮಾಡಬಹುದಾದ ವಿಂಡ್‌ಸ್ಕ್ರೀನ್ ಅನ್ನು ಹೊಂದಿದೆ.

ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಬಿಎಂಡಬ್ಲ್ಯು ಆರ್ 1250 ಜಿಎಸ್ ಬೈಕ್

ಈ ಐಷಾರಾಮಿ ಅಡ್ವೆಂಚರ್-ಟೂರರ್ ಬೈಕಿನಲ್ಲಿ ಸಿಂಗಲ್-ಪೀಸ್ ಹ್ಯಾಂಡಲ್‌ಬಾರ್, ಮೆತ್ತನೆಯ ಸೀಟ್, ಆಫ್-ರೋಡ್ ಬಯಾಸ್ಡ್ ಗ್ರಿಪ್ಪಿ ಫುಟ್‌ಪೆಗ್‌ಗಳು ಮತ್ತು ಫ್ಯೂಯಲ್ ಟ್ಯಾಂಕ್ ಸವಾರನಿಗೆ ಎದ್ದು ನಿಂತು ಬೈಕ್ ರೈಡ್ ಮಾಡಲು ಸಾಕಷ್ಟು ಸಹಕಾರಿಯಾಗುವಂತೆ ಫುಟ್ ಪೆಗ್ ಗಳನ್ನು ಒಳಗೊಂಡಿದೆ.

ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಬಿಎಂಡಬ್ಲ್ಯು ಆರ್ 1250 ಜಿಎಸ್ ಬೈಕ್

ಹೊಸ ಬಿಎಂಡಬ್ಲ್ಯು ಆರ್ 1250 ಜಿಎಸ್ ಬೈಕಿನಲ್ಲಿ ಬಾಕ್ಸರ್ ಕಾನ್ಫಿಗರೇಶನ್‌ನಲ್ಲಿ ಟ್ವಿನ್-ಸಿಲಿಂಡರ್ 1254 ಸಿಸಿ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ ಅನ್ನು ಯುರೋ5ಬಿಎಸ್6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗಿದೆ,

ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಬಿಎಂಡಬ್ಲ್ಯು ಆರ್ 1250 ಜಿಎಸ್ ಬೈಕ್

ಈ ಎಂಜಿನ್ 7,750 ಆರ್‌ಪಿಎಂನಲ್ಲಿ 134 ಬಿಹೆಚ್‌ಪಿ ಪವರ್ ಮತ್ತು 6,250 ಆರ್‌ಪಿಎಂನಲ್ಲಿ 143 ಎನ್ಎಂ ಟಾರ್ಜ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು 6-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಯಾಗಿ ಸ್ಲಿಪ್-ಅಸಿಸ್ಟ್ ಕ್ಲಚ್ ಅನ್ನು ಸ್ಟ್ಯಾಂಡರ್ಡ್ ಆಗಿ ಜೋಡಿಸಲಾಗಿದೆ.

ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಬಿಎಂಡಬ್ಲ್ಯು ಆರ್ 1250 ಜಿಎಸ್ ಬೈಕ್

ಈ ಬಿಎಂಡಬ್ಲ್ಯು ಆರ್ 1250 ಜಿಎಸ್ ಬೈಕಿನಲ್ಲಿ 6.5-ಇಂಚಿನ ಟಿಎಫ್ಟಿ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಬಿಎಂಡಬ್ಲ್ಯು ಬ್ಲೂಟೂತ್ ಕನೆಕ್ಟಿವಿಟಿಯೊಂದಿಗೆ ಸ್ಟ್ಯಾಂಡರ್ಡ್ ಆಗಿ ಹೊಂದಿರುತ್ತದೆ. ಇನ್ನು ಈ ಬೈಕಿನಲ್ಲಿ ಯುಎಸ್ಬಿ ಸಾಕೆಟ್, ಇಂಟಿಗ್ರಲ್ ಎಬಿಎಸ್ ಪ್ರೊ, ಹಿಲ್ ಸ್ಟಾರ್ಟ್ ಕಂಟ್ರೋಲ್ (ಎಚ್ಎಸ್ಸಿ), ಡೈನಾಮಿಕ್ ಟ್ರ್ಯಾಕ್ಷನ್ ಕಂಟ್ರೋಲ್ (ಡಿಟಿಸಿ) ಮತ್ತು ಐಎಂಯು ಫುಲ್-ಎಲ್ಇಡಿ ಲೈಟಿಂಗ್ ನಂತಹ ಇತರ ಫೀಚರ್ಸ್ ಗಳನ್ನು ಹೊಂದಿರುತ್ತದೆ.

Most Read Articles

Kannada
English summary
2021 BMW R 1250 GS BS6 India Launch Teased. Read In Kannada.
Story first published: Saturday, June 19, 2021, 16:57 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X