ಹೊಸ ಬಿಎಂಡಬ್ಲ್ಯು ಆರ್ 1250 ಜಿಎಸ್ ಬೈಕ್ ಬಿಡುಗಡೆ ದಿನಾಂಕ ಬಹಿರಂಗ

ಐಷಾರಾಮಿ ಬೈಕ್ ತಯಾರಕ ಕಂಪನಿಯಾದ ಬಿಎಂಡಬ್ಲ್ಯು ಮೋಟೊರಾಡ್ ತನ್ನ ಹೊಸ ಆರ್ 1250 ಜಿಎಸ್ ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ ಹೊಸ ಬಿಎಂಡಬ್ಲ್ಯು ಆರ್ 1250 ಜಿಎಸ್ ಬೈಕ್ ಭಾರತದಲ್ಲಿ ಬಿಡುಗಡೆಯಾಗಲಿರುವ ಐಷಾರಾಮಿ ಬೈಕ್‌ಗಳಲ್ಲಿ ಒಂದಾಗಿದೆ.

ಹೊಸ ಬಿಎಂಡಬ್ಲ್ಯು ಆರ್ 1250 ಜಿಎಸ್ ಬೈಕ್ ಬಿಡುಗಡೆ ದಿನಾಂಕ ಬಹಿರಂಗ

ಬಿಎಂಡಬ್ಲ್ಯು ಮೋಟೊರಾಡ್ ಕಂಪನಿಯು ಭಾರತದಲ್ಲಿ ಬಿಎಂಡಬ್ಲ್ಯು ಆರ್ 1250 ಜಿಎಸ್ ಬೈಕನ್ನು ಬಿಡುಗಡೆಗೊಳಿಸಲಿರುವ ದಿನಾಂಕವನ್ನು ಬಹಿರಂಗಪಡಿಸಿದೆ. ಅದರಂತೆ ಈ ಹೊಸ ಬಿಎಂಡಬ್ಲ್ಯು ಆರ್ 1250 ಜಿಎಸ್ ಬೈಕ್ ಇದೇ ತಿಂಗಳ 8 ರಂದು ಭಾರತದಲ್ಲಿ ಬಿಡುಗಡೆಗೊಳಿಸಲಿದೆ, ಈ ಹೊಸ ಬಿಎಂಡಬ್ಲ್ಯು ಆರ್ 1250 ಜಿಎಸ್ ಬೈಕ್ ಸ್ಟ್ಯಾಂಡರ್ಡ್ ಮತ್ತು ಅಡ್ವೆಂಚರ್ ಎಂಬ ಎರಡು ರೂಪಾಂತರಗಳಲ್ಲಿ ಬಿಡುಗಡೆಯಾಗಲಿದೆ.

ಹೊಸ ಬಿಎಂಡಬ್ಲ್ಯು ಆರ್ 1250 ಜಿಎಸ್ ಬೈಕ್ ಬಿಡುಗಡೆ ದಿನಾಂಕ ಬಹಿರಂಗ

ಹೊಸ ಬಿಎಂಡಬ್ಲ್ಯು ಆರ್ 1250 ಜಿಎಸ್ ಬೈಕಿನ ಸ್ಟ್ಯಾಂಡರ್ಡ್ ರೂಪಾಂತರವು ಟ್ರಿಪಲ್ ಬ್ಲ್ಯಾಕ್, ಲೈಟ್ ವೈಟ್ ಮತ್ತು ರ್ಯಾಲಿ ಬಣ್ಣಗಳ ಆಯ್ಕೆಯನ್ನು ಹೊಂದಿದ್ದರೆ, ಅಡ್ವೆಂಚರ್ ರೂಪಾಂತರವು ಟ್ರಿಪಲ್ ಬ್ಲ್ಯಾಕ್, ಐಸ್ ಗ್ರೇ ಮತ್ತು ರ್ಯಾಲಿ ಎಂಬ ಬಣ್ಣಗಳ ಆಯ್ಕೆಯನ್ನು ಹೊಂದಿರುತ್ತದೆ.

ಹೊಸ ಬಿಎಂಡಬ್ಲ್ಯು ಆರ್ 1250 ಜಿಎಸ್ ಬೈಕ್ ಬಿಡುಗಡೆ ದಿನಾಂಕ ಬಹಿರಂಗ

ಈ ಹೊಸ ಬಿಎಂಡಬ್ಲ್ಯು ಆರ್ 1250 ಜಿಎಸ್ ಬೈಕ್ ಖರೀದಿಗಾಗಿ ಪ್ರಿ-ಬುಕ್ಕಿಂಗ್ ಅನ್ನು ಪ್ರಾರಂಭಿಸಿದ್ದಾರೆ. ಈ ಹೊಸ ಐಷಾರಾಮಿ ಬೈಕನ್ನು ಅನ್ನು ಕಂಪ್ಲೀಟ್ ಬಿಲ್ಟ್-ಅಪ್ ಯುನಿಟ್(ಸಿಬಿಯು) ಆಗಿ ಭಾರತೀಯ ಮಾರುಕಟ್ಟೆಗೆ ತರಬಹುದು.

ಹೊಸ ಬಿಎಂಡಬ್ಲ್ಯು ಆರ್ 1250 ಜಿಎಸ್ ಬೈಕ್ ಬಿಡುಗಡೆ ದಿನಾಂಕ ಬಹಿರಂಗ

ಹೊಸ ಬಿಎಂಡಬ್ಲ್ಯು ಆರ್ 1250 ಜಿಎಸ್ ಅಡ್ವೆಂಚರ್ ಬೈಕನ್ನು ಹಿಂದಿನ ಮಾದರಿಗಿಂತ ಹಲವಾರು ಹೊಸ ಬದಲಾವಣೆಗಳೊಂದಿಗೆ ಬಿಡುಗಡೆಗೊಳಿಸಲಾಗುತ್ತದೆ. ಇದರಲ್ಲಿ ವಿನ್ಯಾಸ, ಎಂಜಿನ್, ಎಲೆಕ್ಟ್ರಾನಿಕ್ಸ್ ಪ್ಯಾಕೇಜ್ ಮತ್ತು ಹೊಸ ಬಣ್ಣಗಳನ್ನು ಒಳಗೊಂಡಿರುತ್ತದೆ.

ಹೊಸ ಬಿಎಂಡಬ್ಲ್ಯು ಆರ್ 1250 ಜಿಎಸ್ ಬೈಕ್ ಬಿಡುಗಡೆ ದಿನಾಂಕ ಬಹಿರಂಗ

ಈ ಐಷಾರಾಮಿ ಬೈಕಿನ ಬೆಲೆಯು ಅಂದಾಜು ಎಕ್ಸ್ ಶೋರೂಂ ಪ್ರಕಾರ ರೂ.20 ಲಕ್ಷಗಳಾಗಿರಬಹುದು. ಈ ಆರ್ 1250 ಜಿಎಸ್ ಬಿಎಂಡಬ್ಲ್ಯು ಮೋಟೊರಾಡ್‌ನ ಪ್ರಮುಖ ಅಡ್ವೆಂಚರ್-ಟೂರಿಂಗ್ ಬೈಕ್ ಆಗಿದೆ.

ಹೊಸ ಬಿಎಂಡಬ್ಲ್ಯು ಆರ್ 1250 ಜಿಎಸ್ ಬೈಕ್ ಬಿಡುಗಡೆ ದಿನಾಂಕ ಬಹಿರಂಗ

ಹಳೆಯ ಮಾದರಿಗೆ ಹೋಲಿಸಿದರೆ 2021ರ ಬಿಎಂಡಬ್ಲ್ಯು ಆರ್ 1250 ಜಿಎಸ್ ಬೈಕಿನ ವಿನ್ಯಾಸದ ವಿಷಯದಲ್ಲಿ ಹೆಚ್ಚಿನ ಬದಲಾವಣೆಗಳನ್ನು ಪಡೆದುಕೊಂಡಿದೆ. ಮುಂಭಾಗದಲ್ಲಿ ಅನನ್ಯವಾಗಿ ವಿನ್ಯಾಸಗೊಳಿಸಲಾದ ಹೆಡ್‌ಲ್ಯಾಂಪ್, ಫ್ರಂಟ್ ಬೀಕ್ ಮತ್ತು ಹೊಂದಾಣಿಕೆ ಮಾಡಬಹುದಾದ ವಿಂಡ್‌ಸ್ಕ್ರೀನ್ ಅನ್ನು ಕೂಡ ಹೊಂದಿರಲಿದೆ.

ಹೊಸ ಬಿಎಂಡಬ್ಲ್ಯು ಆರ್ 1250 ಜಿಎಸ್ ಬೈಕ್ ಬಿಡುಗಡೆ ದಿನಾಂಕ ಬಹಿರಂಗ

ಈ ಅಡ್ವೆಂಚರ್-ಟೂರರ್ ಬೈಕಿನಲ್ಲಿ ಸಿಂಗಲ್-ಪೀಸ್ ಹ್ಯಾಂಡಲ್‌ಬಾರ್, ಮೆತ್ತನೆಯ ಸೀಟ್, ಆಫ್-ರೋಡ್ ಬಯಾಸ್ಡ್ ಗ್ರಿಪ್ಪಿ ಫುಟ್‌ಪೆಗ್‌ಗಳು ಮತ್ತು ಫ್ಯೂಯಲ್ ಟ್ಯಾಂಕ್ ಸವಾರನಿಗೆ ಎದ್ದು ನಿಂತು ಬೈಕ್ ರೈಡ್ ಮಾಡಲು ಸಾಕಷ್ಟು ಸಹಕಾರಿಯಾಗುವಂತೆ ಫುಟ್ ಪೆಗ್ ಗಳನ್ನು ಕೂಡ ಒಳಗೊಂಡಿರುತ್ತದೆ.

ಹೊಸ ಬಿಎಂಡಬ್ಲ್ಯು ಆರ್ 1250 ಜಿಎಸ್ ಬೈಕ್ ಬಿಡುಗಡೆ ದಿನಾಂಕ ಬಹಿರಂಗ

ಈ ಹೊಸ ಬಿಎಂಡಬ್ಲ್ಯು ಆರ್ 1250 ಜಿಎಸ್ ಬೈಕಿನಲ್ಲಿ 6.5-ಇಂಚಿನ ಟಿಎಫ್ಟಿ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಬಿಎಂಡಬ್ಲ್ಯು ಬ್ಲೂಟೂತ್ ಕನೆಕ್ಟಿವಿಟಿಯೊಂದಿಗೆ ಸ್ಟ್ಯಾಂಡರ್ಡ್ ಆಗಿ ಹೊಂದಿರುತ್ತದೆ. ಇನ್ನು ಈ ಬೈಕಿನಲ್ಲಿ ಯುಎಸ್ಬಿ ಸಾಕೆಟ್, ಇಂಟಿಗ್ರಲ್ ಎಬಿಎಸ್ ಪ್ರೊ, ಹಿಲ್ ಸ್ಟಾರ್ಟ್ ಕಂಟ್ರೋಲ್ (ಎಚ್ಎಸ್ಸಿ), ಡೈನಾಮಿಕ್ ಟ್ರ್ಯಾಕ್ಷನ್ ಕಂಟ್ರೋಲ್ (ಡಿಟಿಸಿ), ಐಎಂಯು ಫುಲ್-ಎಲ್ಇಡಿ ಲೈಟಿಂಗ್ ಮತ್ತು ಇತರ ಫೀಚರ್ಸ್ ಗಳನ್ನು ಹೊಂದಿರಲಿವೆ.

ಹೊಸ ಬಿಎಂಡಬ್ಲ್ಯು ಆರ್ 1250 ಜಿಎಸ್ ಬೈಕ್ ಬಿಡುಗಡೆ ದಿನಾಂಕ ಬಹಿರಂಗ

ಈ ಬಿಎಂಡಬ್ಲ್ಯು ಆರ್ 1250 ಜಿಎಸ್ ಬೈಕಿನಲ್ಲಿ ಬಾಕ್ಸರ್ ಕಾನ್ಫಿಗರೇಶನ್‌ನಲ್ಲಿ ಟ್ವಿನ್-ಸಿಲಿಂಡರ್ 1254 ಸಿಸಿ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 7,750 ಆರ್‌ಪಿಎಂನಲ್ಲಿ 134 ಬಿಹೆಚ್‌ಪಿ ಪವರ್ ಮತ್ತು 6,250 ಆರ್‌ಪಿಎಂನಲ್ಲಿ 143 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು 6-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಯಾಗಿ ಸ್ಲಿಪ್-ಅಸಿಸ್ಟ್ ಕ್ಲಚ್ ಅನ್ನು ಸ್ಟ್ಯಾಂಡರ್ಡ್ ಆಗಿ ಜೋಡಿಸಲಾಗುತ್ತದೆ.

Most Read Articles

Kannada
English summary
BMW R 1250 GS BS6 India Launch date Revaled. Read In Kannada.
Story first published: Friday, July 2, 2021, 18:56 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X