ಡಿಸೆಂಬರ್ 4 ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ ಬಿಎಸ್ಎ ಹೊಸ ಮೋಟಾರ್‌ಸೈಕಲ್

ಭಾರತೀಯ ಮಾರುಕಟ್ಟೆಯಲ್ಲಿ ಹೊಸ ರೂಪದೊಂದಿಗೆ ಬಿಡುಗಡೆಯಾಗಿರುವ ಜಾವಾ ಕ್ಲಾಸಿಕ್ ಬೈಕ್‌ಗಳು ಗ್ರಾಹಕರ ಆಕರ್ಷಣೆಗೆ ಕಾರಣವಾಗಿದ್ದು, ಜಾವಾ ಬೈಕ್‌ಗಳನ್ನು ಹೊಸ ರೂಪದಲ್ಲಿ ಬಿಡುಗಡೆಗೊಳಿಸಿ ಯಶಸ್ವಿಯಾಗಿರುವ ಕ್ಲಾಸಿಕ್ ಲೆಜೆಂಡ್ ಕಂಪನಿಯು ಇದೀಗ ಯಜ್ಡಿ ಮತ್ತು ಬಿಎಸ್ಎ ಬೈಕ್‌ಗಳನ್ನು ಹೊಸ ರೂಪದಲ್ಲಿ ಬಿಡುಗಡೆ ಮಾಡಲು ಮುಂದಾಗಿದೆ.

ಡಿಸೆಂಬರ್ 4 ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ ಬಿಎಸ್ಎ ಹೊಸ ಮೋಟಾರ್‌ಸೈಕಲ್

ಮಹೀಂದ್ರಾ ಅಂಗಸಂಸ್ಥೆಯಾಗಿರುವ ಕ್ಲಾಸಿಕ್ ಲೆಜೆಂಡ್ ಕಂಪನಿಯು ಜಾವಾ ಮೋಟಾರ್‌ಸೈಕಲ್‌ಗಳ ಬಿಡುಗಡೆ ನಂತರ ಇದೀಗ ಮತ್ತೊಂದು ಜನಪ್ರಿಯ ಕ್ಲಾಸಿಕ್ ಬೈಕ್ ಮಾದರಿಯಾಗಿರುವ ಯಜ್ಡಿ ಮತ್ತು ಬಿಎಸ್ಎ ಬೈಕ್‌ ಮಾದರಿಗಳನ್ನು ಸಹ ಹೊಸ ಎಂಜಿನ್ ಮತ್ತು ನವೀಕರಿಸಿದ ವಿನ್ಯಾಸದೊಂದಿಗೆ ಬಿಡುಗಡೆಗೊಳಿಸುವ ಸುಳಿವು ನೀಡಿದೆ.

ಡಿಸೆಂಬರ್ 4 ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ ಬಿಎಸ್ಎ ಹೊಸ ಮೋಟಾರ್‌ಸೈಕಲ್

ಕ್ಲಾಸಿಕ್ ಲೆಜೆಂಡ್ ಕಂಪನಿಯು ಕ್ಲಾಸಿಕ್ ಬೈಕ್ ಪ್ರಿಯರಲ್ಲಿ ಮತ್ತೊಮ್ಮೆ ಕುತೂಹಲ ಹುಟ್ಟುಹಾಕಿದ್ದು, ಹೊಸ ಬೈಕ್ ಬಿಡುಗಡೆಗೂ ಮುನ್ನ ಅಧಿಕೃತ ಟ್ವಿಟರ್ ಖಾತೆ ತೆರೆಯುವ ಮೂಲಕ ಹೊಸ ಬೈಕ್ ಟೀಸರ್ ಹಂಚಿಕೊಳ್ಳಲಾಗಿದೆ.

ಡಿಸೆಂಬರ್ 4 ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ ಬಿಎಸ್ಎ ಹೊಸ ಮೋಟಾರ್‌ಸೈಕಲ್

ಹೊಸ ಟ್ವಿಟರ್ ಖಾತೆಯಲ್ಲಿ ಹೊಸ ಬೈಕ್ ಮಾದರಿಯೊಂದಿಗೆ ಭಾರತದಲ್ಲಿ ಹೊಸ ಅಧ್ಯಾಯ ಆರಂಭಿಸುತ್ತಿರುವ ಬಗೆಗೆ ಮಾಹಿತಿ ಹಂಚಿಕೊಂಡಿರುವ ಬಿಎಸ್ಎ ಕಂಪನಿಯು ಡಿಸೆಂಬರ್ 4ರಂದು ಹೊಸ ಬೈಕ್ ಬಿಡುಗಡೆಯ ಮಾಹಿತಿ ಹಂಚಿಕೊಂಡಿದೆ.

ಡಿಸೆಂಬರ್ 4 ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ ಬಿಎಸ್ಎ ಹೊಸ ಮೋಟಾರ್‌ಸೈಕಲ್

ಸದ್ಯ ಜಾವಾ ಮತ್ತು ಯಜ್ಡಿ ಬೈಕ್‌ಗಳ ಮರು ನಿರ್ಮಾಣ ಮತ್ತು ಮಾರಾಟದ ಹಕ್ಕು ಕ್ಲಾಸಿಕ್ ಲೆಜೆಂಡ್ ಪ್ರೈವೆಟ್ ಲಿಮಿಟೆಡ್ ಕಂಪನಿ ಬಳಿಯಿದ್ದು, ಇದು ಶೇ.60 ಶೇರ್ ಹೊಂದಿರುವ ಮಹೀಂದ್ರಾ ಅಂಗಸಂಸ್ಥೆಯಾಗಿ ಭಾರತದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದೆ.

ಡಿಸೆಂಬರ್ 4 ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ ಬಿಎಸ್ಎ ಹೊಸ ಮೋಟಾರ್‌ಸೈಕಲ್

ಸದ್ಯ ಮಾರುಕಟ್ಟೆಯಲ್ಲಿರುವ ಜಾವಾ, ಜಾವಾ 42 ಮತ್ತು ಪೆರಾಕ್ ಬೈಕ್‌ಗಳನ್ನು ಕ್ಲಾಸಿಕ್ ಲೆಜೆಂಡ್ ಪ್ರೈವೆಟ್ ಲಿಮಿಟೆಡ್ ಕಂಪನಿಯೇ ಅಭಿವೃದ್ದಿಗೊಳಿಸಿ ನಿರ್ಮಾಣ ಮಾಡುತ್ತಿದ್ದು, ಇದು ಜಾಗತಿಕ ಮಾರುಕಟ್ಟೆಯಲ್ಲಿ ಭಾರೀ ಜನಪ್ರಿಯತೆ ಪಡೆದಿರುವ ಬಿಎಸ್ಎ ಮೋಟಾರ್‌ಸೈಕಲ್ ಕಂಪನಿಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿದೆ.

ಡಿಸೆಂಬರ್ 4 ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ ಬಿಎಸ್ಎ ಹೊಸ ಮೋಟಾರ್‌ಸೈಕಲ್

ಅಸಲಿಗೆ ಜಾವಾ ಮತ್ತು ಯೆಜ್ಡಿ ಕಂಪನಿಗಳು 90ರ ದಶಕದಲ್ಲೇ ಬಿಎಸ್ಎ ಮೋಟಾರ್‌‌ಸೈಕಲ್ ಕಂಪನಿಯ ಪಾಲಾಗಿದ್ದು, ಬಿಎಸ್ಎ ಮೋಟಾರ್‌‌ಸೈಕಲ್ ಕಂಪನಿಯು ಭಾರತವನ್ನು ಹೊರತುಪಡಿಸಿ ಯುರೋಪ್ ಮತ್ತು ದಕ್ಷಿಣ ಅಮೆರಿಕದ ಕೆಲವು ರಾಷ್ಟ್ರಗಳಲ್ಲಿ ಮಾತ್ರ ತನ್ನ ಮಾರಾಟ ಜಾಲವನ್ನು ಹೊಂದಿದೆ.

ಡಿಸೆಂಬರ್ 4 ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ ಬಿಎಸ್ಎ ಹೊಸ ಮೋಟಾರ್‌ಸೈಕಲ್

ಹಲವು ಪ್ರಯತ್ನಗಳ ನಂತರ ಮಹೀಂದ್ರಾ ಅಂಗಸಂಸ್ಥೆಯಾದ ಕ್ಲಾಸಿಕ್ ಲೆಜೆಂಡ್ ಪ್ರೈವೆಟ್ ಲಿಮಿಟೆಡ್ ಕಂಪನಿಯು ಬಿಎಸ್ಎ ಕಂಪನಿಯೊಂದಿಗೆ ಮಹತ್ವದ ಒಪ್ಪಂದ ಮಾಡಿಕೊಂಡಿದ್ದು, ಭಾರತದಲ್ಲಿ ಜಾವಾ ಮತ್ತು ಯಜ್ಡಿ ಬೈಕ್‌ಗಳೊಂದಿಗೆ ಬಿಎಸ್ಎ ಮಾದಿರಗಳನ್ನು ಸಹ ಪ್ರಸ್ತುತ ಮಾರುಕಟ್ಟೆಯಲ್ಲಿ ಬೇಡಿಕೆಯ ಅನುಸಾರ ಉತ್ಪಾದನೆ ಪುನಾರಂಭಿಸುವ ಬಗ್ಗೆ ಯೋಜನೆ ರೂಪಿಸಿವೆ.

ಡಿಸೆಂಬರ್ 4 ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ ಬಿಎಸ್ಎ ಹೊಸ ಮೋಟಾರ್‌ಸೈಕಲ್

ಹೊಸ ಯೋಜನೆಯ ಭಾಗವಾಗಿ ಬಿಎಸ್ಎ ಮೋಟಾರ್‌ಸೈಕಲ್ ಕಂಪನಿಯು ಕೆಲವು ಪ್ರೀಮಿಯಂ ಬೈಕ್‌ಗಳನ್ನು ಭಾರತದಲ್ಲಿ ಬಿಡುಗಡೆ ಮಾಡುತ್ತಿದ್ದು, ಸದ್ಯ ವಿದೇಶಿ ಮಾರುಕಟ್ಟೆಯಲ್ಲಿರುವ ಬಿಎಸ್ಎ 550ಸಿಸಿ, 750ಸಿಸಿ ಬೈಕ್‌ಗಳನ್ನೇ ಭಾರತದಲ್ಲೂ ಮಾರಾಟ ಆರಂಭವಾಗಲಿವೆ.

ಡಿಸೆಂಬರ್ 4 ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ ಬಿಎಸ್ಎ ಹೊಸ ಮೋಟಾರ್‌ಸೈಕಲ್

ಜೊತೆಗೆ ಮಾರುಕಟ್ಟೆಯಲ್ಲಿನ ಬೇಡಿಕೆ ಅನುಸಾರವಾಗಿ ಎಲೆಕ್ಟ್ರಿಕ್ ಕ್ಲಾಸಿಕ್ ಬೈಕ್ ಮಾದರಿಯನ್ನು ಅಭಿವೃದ್ದಿಗೊಳಿಸುವ ಯೋಜನೆಯಿದ್ದು, ಸದ್ಯಕ್ಕೆ ಜಾವಾ ಬೈಕಿನಲ್ಲಿ ಎಲೆಕ್ಟ್ರಿಕ್ ಆವೃತ್ತಿಯನ್ನು ಅಭಿವೃದ್ದಿಗೊಳ್ಳುತ್ತಿರುವುದಾಗಿ ಕ್ಲಾಸಿಕ್ ಲೆಜೆಂಡ್ ಕಂಪನಿಯೇ ಖಚಿತಪಡಿಸಿದೆ.

ಡಿಸೆಂಬರ್ 4 ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ ಬಿಎಸ್ಎ ಹೊಸ ಮೋಟಾರ್‌ಸೈಕಲ್

ಆಕ್ಸ್‌ಫರ್ಡ್‌ಶೈರ್‌ನ ಬ್ಯಾನ್‌ಬರಿಯಲ್ಲಿ ತಂತ್ರಜ್ಞಾನ ಹಾಗೂ ವಿನ್ಯಾಸ ಕೇಂದ್ರವನ್ನು ಅಭಿವೃದ್ಧಿಪಡಿಸುವ ಮೂಲಕ ಕ್ಲಾಸಿಕ್ ಲೆಜೆಂಡ್ಸ್ ತನ್ನ ಕೆಲಸವನ್ನು ಆರಂಭಿಸಲಿದೆ. ನಂತರ ಮಿಡ್‌ಲ್ಯಾಂಡ್ಸ್‌ನಲ್ಲಿರುವ ಬಿಎಸ್‌ಎ ಘಟಕದಲ್ಲಿ ಹೊಸ ಮೋಟಾರ್‌ಸೈಕಲ್‌ಗಳನ್ನು ಜೋಡಿಸಲಾಗುತ್ತದೆ. ಬಿಎಸ್‌ಎ ಮೋಟಾರ್‌ಸೈಕಲ್ಸ್ ಅನ್ನು ಪುಣೆಯಲ್ಲಿ ಪರೀಕ್ಷಿಸಲಾಗಿದೆ ಎಂಬುದು ವಿಶೇಷ.

ಡಿಸೆಂಬರ್ 4 ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ ಬಿಎಸ್ಎ ಹೊಸ ಮೋಟಾರ್‌ಸೈಕಲ್

ಭಾರತದಲ್ಲಿ ಕ್ಲಾಸಿಕ್ ಲೆಜೆಂಡ್ಸ್‌ನಿಂದ ಹೊಸ ಸರಣಿಯ ಬೈಕುಗಳನ್ನು ಈಗಾಗಲೇ ಅಭಿವೃದ್ಧಿಪಡಿಸಲಾಗಿದೆ ಎಂಬುದು ಇದರಿಂದ ಸಾಬೀತಾಗಿದ್ದು, ಇದರ ಜೊತೆಗೆ ಕಂಪನಿಯು ತನ್ನ ಹೊಸ ಲೋಗೋ ವಿನ್ಯಾಸವನ್ನು ಸಹ ಹಂಚಿಕೊಂಡಿದೆ.

ಡಿಸೆಂಬರ್ 4 ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ ಬಿಎಸ್ಎ ಹೊಸ ಮೋಟಾರ್‌ಸೈಕಲ್

ಬಿಎಸ್ಎ ಕಂಪನಿಯು ಇಂಗ್ಲೆಂಡ್ ಮೂಲವಾಗಿರುವುದರಿಂದ ಅಲ್ಲಿನ ಸರ್ಕಾರವು ಈಗಾಗಲೇ ಕ್ಲಾಸಿಕ್ ಲೆಜೆಂಡ್ಸ್‌ ಕಂಪನಿಗೆ 4.6 ಮಿಲಿಯನ್ ಯುರೋ ಅಂದರೆ ಸುಮಾರು ರೂ. 45.2 ಕೋಟಿ ಅನುದಾನವನ್ನು ನೀಡಿದೆ. ಇದು ಕೋವೆಂಟ್ರಿ ಬಳಿಯ ಬ್ಯಾನ್‌ಬರಿಯಲ್ಲಿ ಆರ್ ಅಂಡ್ ಡಿ ಕೇಂದ್ರವನ್ನು ತೆರೆಯಲು ಅಗತ್ಯವಿರುವ ಅರ್ಧದಷ್ಟು ಮೊತ್ತವಾಗಿದೆ.

ಡಿಸೆಂಬರ್ 4 ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ ಬಿಎಸ್ಎ ಹೊಸ ಮೋಟಾರ್‌ಸೈಕಲ್

ಎಲೆಕ್ಟ್ರಿಕ್ ಪವರ್‌ಟ್ರೇನ್‌ಗಳೊಂದಿಗೆ ಬೈಕ್‌ಗಳನ್ನು ಅಭಿವೃದ್ಧಿಪಡಿಸಲು ಈ ಘಟಕವನ್ನು ಪ್ರತ್ಯೇಕವಾಗಿ ಬಳಸಲಿದ್ದು, ಈ ಮೊದಲು ಬರ್ಮಿಂಗ್ಹ್ಯಾಮ್ ಸ್ಮಾಲ್ ಆರ್ಮ್ಸ್ ಅರ್ಥಾತ್ ಬಿಎಸ್‌ಎ ಕಂಪನಿಯನ್ನು 1861 ರಲ್ಲಿ ಬರ್ಮಿಂಗ್ಹ್ಯಾಮ್'ನ ಸ್ಮಾಲ್ ಹೀತ್'ನಲ್ಲಿ ಶಸ್ತ್ರಾಸ್ತ್ರ ಉತ್ಪಾದನಾ ಘಟಕವಾಗಿ ಆರಂಭಿಸಲಾಯಿತು.

ಡಿಸೆಂಬರ್ 4 ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ ಬಿಎಸ್ಎ ಹೊಸ ಮೋಟಾರ್‌ಸೈಕಲ್

ಸ್ಮಾಲ್ ಹೀತ್‌ನ ಸೆಟ್ಟಿಂಗ್ ಅನ್ನು ಜನಪ್ರಿಯ ಬಿ‌ಬಿ‌ಸಿ ನೆಟ್‌ವರ್ಕ್ ಶೋ ಪೀಕಿ ಬ್ಲೈಂಡರ್ಸ್‌ನಲ್ಲಿ ತೋರಿಸಲಾಗಿದೆ. ಕಂಪನಿಯು 1910 ರಲ್ಲಿ ಮೋಟಾರ್‌ಸೈಕಲ್‌ಗಳ ಉತ್ಪಾದನೆಯನ್ನು ಆರಂಭಿಸಿತು. ನಂತರ 1960ರ ದಶಕದ ಮಧ್ಯಭಾಗದವರೆಗೆ ಜನಪ್ರಿಯತೆಯನ್ನು ಹೊಂದಿತ್ತು. ಜಪಾನ್ ಕಂಪನಿಗಳು ಮಾರುಕಟ್ಟೆಯನ್ನು ಪ್ರವೇಶಿಸಿದ ನಂತರ ಮಾರಾಟದಲ್ಲಿ ಕುಸಿತ ದಾಖಲಿಸಿದ ಕಾರಣ 1972 ರಲ್ಲಿ ಕಂಪನಿಯ ಎಲ್ಲಾ ಕಾರ್ಯಾಚರಣೆಗಳನ್ನು ನಿಲ್ಲಿಸಬೇಕಾಯಿತು.

ಡಿಸೆಂಬರ್ 4 ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ ಬಿಎಸ್ಎ ಹೊಸ ಮೋಟಾರ್‌ಸೈಕಲ್

ಬ್ರಿಟಿಷ್ ಸರ್ಕಾರದ ಉತ್ತೇಜನದ ಹೊರತಾಗಿ, ಮಹೀಂದ್ರಾ ಕಂಪನಿಯು ಬಿಎಸ್‌ಎ ಮೋಟಾರ್‌ಸೈಕಲ್‌ ಕಂಪನಿಯನ್ನು ಪುನರುಜ್ಜೀವನಗೊಳಿಸಲು ಪ್ರಮುಖ ಕಾರಣವೆಂದರೆ ಕಂಪನಿಯ ಪರಂಪರೆಯನ್ನು ಕಾಪಾಡುವುದು. ಈ ಯೋಜನೆಯನ್ನು ಮಹೀಂದ್ರಾ ಕಂಪನಿಯ ಕ್ಲಾಸಿಕ್ ಲೆಜೆಂಡ್ಸ್ ಅಂಗಸಂಸ್ಥೆಯ ಸಹ ಸಂಸ್ಥಾಪಕರಾದ ಅನುಪಮ್ ಥರೇಜಾ ನಿರ್ವಹಿಸುತ್ತಿದ್ದಾರೆ.

Most Read Articles

Kannada
English summary
New bsa motorcycle set to launch first bike on 4th december
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X