Just In
- 2 hrs ago
ಅನಾವರಣವಾಯ್ತು ಫೋಕ್ಸ್ವ್ಯಾಗನ್ ಗಾಲ್ಫ್ ಜಿಟಿಐ ಕ್ಲಬ್ಸ್ಪೋರ್ಟ್ 45 ಕಾರು
- 4 hrs ago
35 ಸಾವಿರಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ಉಚಿತ ಲಸಿಕೆ ನೀಡಲು ಮುಂದಾದ ಟಿವಿಎಸ್ ಕಂಪನಿ
- 6 hrs ago
ವಾರದ ಪ್ರಮುಖ ಸುದ್ದಿ: ಏರ್ಬ್ಯಾಗ್ ಕಡ್ಡಾಯ, ಬಿಡುಗಡೆಗೆ ಸಜ್ಜಾದ ಸಿಟ್ರನ್, ಟೊಯೊಟಾ ನೌಕರರ ಮುಷ್ಕರ ಅಂತ್ಯ!
- 16 hrs ago
ವೆಂಟೊ ಟ್ರೆಂಡ್ಲೈನ್ ವೆರಿಯೆಂಟ್ ಬುಕ್ಕಿಂಗ್ ಪ್ರಕ್ರಿಯೆಗೆ ಸ್ಥಗಿತಗೊಳಿಸಿದ ಫೋಕ್ಸ್ವ್ಯಾಗನ್
Don't Miss!
- Movies
ರಾಖಿ ಸಾವಂತ್ ಬಯೋಪಿಕ್ ಈ ಸ್ಟಾರ್ ನಟಿಯೇ ಮಾಡಬೇಕಂತೆ
- News
Breaking: ರಮೇಶ್ ಜಾರಕಿಹೊಳಿ ವಿರುದ್ಧ ನೀಡಿದ್ದ ದೂರು ವಾಪಸ್ ಪಡೆದ ದಿನೇಶ್ ಕಲ್ಲಹಳ್ಳಿ?
- Sports
ಐಪಿಎಲ್ 2021: ಈ ಬಾರಿಯ ಆವೃತ್ತಿಯ ಕೆಲ ಗಮನಾರ್ಹ ಬದಲಾವಣೆಗಳು
- Finance
ದಕ್ಷಿಣ ಭಾರತದ ಅತಿದೊಡ್ಡ ಆಭರಣ ರೀಟೈಲರ್ ಮೇಲೆ ಐಟಿ ದಾಳಿ
- Lifestyle
"ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?"
- Education
Mandya District Court Recruitment 2021: 10 ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಅನಾವರಣವಾಯ್ತು ಹೊಸ ಸಿಎಫ್‌ಮೋಟೋ 300ಎನ್‌ಕೆ ಬೈಕ್
ಚೀನಾ ಮೂಲದ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಸಿಎಫ್‌ಮೋಟೋ ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಬಿಎಸ್-6 300ಎನ್‌ಕೆ ಬೈಕನ್ನು ಅನಾವರಣಗೊಳಿಸಿದೆ. ಈ ಹೊಸ ಸಿಎಫ್‌ಮೋಟೋ 300ಎನ್‌ಕೆ ಅಗ್ರೇಸಿವ್ ಬಾಡಿವರ್ಕ್ ಅನ್ನು ಒಳಗೊಂಡಿರುತ್ತದೆ.

ಬಿಎಸ್-6 ಸಿಎಫ್‌ಮೋಟೋ 300ಎನ್‌ಕೆ ಬೈಕ್ ಫುಲ್-ಎಲ್ಇಡಿ ಹೆಡ್‌ಲ್ಯಾಂಪ್, ಮಸ್ಕ್ಲರ್ ಫ್ಯೂಯಲ್ ಟ್ಯಾಂಕ್, ಅಪ್‌ಸ್ಪೆಟ್ ಹಿಂಭಾಗದ ವಿಭಾಗ, ಸ್ಪ್ಲಿಟ್-ಸೀಟ್ ಸೆಟಪ್, ಅಂಡರ್ ಬೆಲ್ಲಿ ಎಕ್ಸಾಸ್ಟ್, ರಿಯರ್-ಫೆಂಡರ್ ಮೌಂಟಡ್ ಸಂಖ್ಯೆಯನ್ನು ಒಳಗೊಂಡಿರುತ್ತದೆ ಪ್ಲೇಟ್, ಮತ್ತು 5-ಸ್ಪೋಕ್ ಅಲಾಯ್ ವ್ಹೀಲ್ ಅನ್ನು ಒಳಗೊಂಡಿದೆ. ಇನ್ನು ಹೊಸ ಸಿಎಫ್‌ಮೋಟೋ 300ಎನ್‌ಕೆ ಬೈಕ್ ಬಣ್ಣ ಮತ್ತು ಗ್ರಾಫಿಕ್ಸ್ ಬಿಎಸ್ 4 ಮಾದರಿಗೆ ಹೋಲುತ್ತದೆ. ಫೀಚರ್ ಗಳು ಕೂಡ ಹಿಂದಿನ ಮಾದರಿಯಲ್ಲಿರುವುದನ್ನು ಅದೇ ರೀತಿ ಮುಂದುವರೆಸಲಾಗಿದೆ.

ಇನ್ನು ಈ ಬಿಎಸ್-6 300ಎನ್‌ಕೆ ಬೈಕ್ ಫುಲ್ ಎಲ್ಇಡಿ ಲೈಟಿಂಗ್ ಮತ್ತು ಎರಡು ಡಿಸ್ ಪ್ಲೇ ಮೋಡ್ ಗಳೊಂದಿಗೆ ಕಲರ್ ಟಿಎಫ್ಟಿ ಸ್ಕ್ರೀನ್ ಅನ್ನು ಹೊಂದಿದೆ. ಬಿಎಸ್-6 3 ಸಿಎಫ್‌ಮೋಟೋ 300ಎನ್‌ಕೆ ಬೈಕ್ ಹೊಸ ಫೀಚರ್ ಗಳು ಹೊಂದಿರುವುದಿಲ್ಲವೆಂದು ನಿರೀಕ್ಷಿಸುತ್ತೇವೆ.
MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಹೊಸ ಸಿಎಫ್‌ಮೋಟೋ 300ಎನ್‌ಕೆ ಬೈಕ್ 1,990 ಎಂಎಂ ಉದ್ದ, 1,070 ಎಂಎಂ ಎತ್ತರವಿದೆ ಮತ್ತು 1,360 ಎಂಎಂ ವೀಲ್‌ಬೇಸ್ ಹೊಂದಿದೆ. ಈ ಬೈಕು ಸೀಟ್ ಎತ್ತರವನ್ನು 795ಎಂಎಂ ನೀಡಿದರೆ, ಗ್ರೌಂಡ್ ಕ್ಲಿಯರೆನ್ಸ್ 150 ಎಂಎಂ ಆಗಿದೆ. ಇನ್ನು 2.5-ಲೀಟರ್ ಇಂಧನ ಸಾಮರ್ಥ್ಯವನ್ನು ಹೊಂದಿದೆ.

ಇನ್ನು ಈ ಸಿಎಫ್‌ಮೋಟೋ 300ಎನ್‌ಕೆ ಬೈಕಿನ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್‌ಗಳು ಮತ್ತು ಹಿಂಭಾಗದ ಮೊನೊ-ಶಾಕ್ ಸೆಟಪ್ ಅನ್ನು ಹೊಂದಿದೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಇನ್ನು ಸುರಕ್ಷತಾ ವಿಭಾಗದಲ್ಲಿ ಪ್ರಮುಖ ಪಾತ್ರವಹಿಸುವ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಸಿಎಫ್‌ಮೋಟೋ 300ಎನ್‌ಕೆ ಬೈಕ್ ಎರಡು ಕಡೆಗಳಲ್ಲಿ ಡಿಸ್ಕ್ ಬ್ರೇಕ್ ಗಳನ್ನು ಅಳವಡಿಸಿದೆ. ಇದರೊಂದಿಗೆ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ಒದಗಿಸುತ್ತದೆ. ಈ ಬೈಕ್ ಒಟ್ಟು 151 ಕೆ.ಜಿ. ತೂಕವಿದೆ.

ಸಿಎಫ್‌ಮೋಟೋ 300ಎನ್‌ಕೆ ಬೈಕಿನ ಸ್ಟೈಲಿಂಗ್ ಮತ್ತು ಫೀಚರ್ ಗಳಲ್ಲಿ ಯಾವುದೇ ಪ್ರಮುಖ ಬದಲಾವಣೆಗಳನ್ನು ಮಾಡಲಾಗಿಲ್ಲ. ಆದರೆ ಇದರಲ್ಲಿ ಪ್ರಮುಖ ಬದಲಾವಣೆ ಅಂದರೆ ಎಂಜಿನ್ ಅನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗುತ್ತದೆ.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍ಮಾಸ್ಟರ್ ಬೈಕ್

ಇನ್ನು ಈ ಹೊಸ ಬೈಕಿನಲ್ಲಿ ಅದೇ 292.4ಸಿಸಿ, ಸಿಂಗಲ್ ಸಿಲಿಂಡರ್, ಲಿಕ್ವಿಡ್-ಕೂಲ್ಡ್, ಫ್ಯೂಯಲ್-ಇಂಜೆಕ್ಟ್ ಎಂಜಿನ್ ಅನ್ನು ಅಳವಡಿಸಲಾಗುತ್ತದೆ. ಇದರ ಹಿಂದಿನ ಬಿಎಸ್ 4 ಮಾದರಿಯು 33.5 ಬಿಹೆಚ್‌ಪಿ ಪವರ್ ಮತ್ತು 20.5 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತಿತ್ತು. ಈ ಎಂಜಿನ್ ಅನ್ನು 6-ಸ್ಪೀಡ್ ಗೇರ್‌ಬಾಕ್ಸ್‌ಗೆ ಸ್ಲಿಪ್ ಮತ್ತು ಅಸಿಸ್ಟ್ ಕ್ಲಚ್‌ನೊಂದಿಗೆ ಜೋಡಿಸಲಾಗುತ್ತದೆ.

ಆದರೆ ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿದ ಬಳಿಕ ಪವರ್ ಮತ್ತು ಟಾರ್ಕ್ ಅಂಕಿಅಂಶಗಳು ಸ್ವಲ್ಪ ಕಡಿಮೆಯಾಗಬಹುದು. ಇನ್ನು ಈ ಹೊಸ ಸಿಎಫ್‌ಮೋಟೋ 300ಎನ್‌ಕೆ ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸುತ್ತೇವೆ.