ಹೊಸ ಸಿಎಫ್‌ಮೋಟೋ 650ಎನ್‌ಕೆ ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಚೀನಾ ಮೂಲದ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಸಿಎಫ್‌ಮೋಟೋ ತನ್ನ ಹೊಸ 650ಎನ್‌ಕೆ ಬೈಕನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ ಹೊಸ ಸಿಎಫ್‌ಮೋಟೋ 650ಎನ್‌ಕೆ ಬೈಕಿನ ಖರೀದಿಗಾಗಿ ಆನ್‌ಲೈನ್‌ ಮೂಲಕ ಬುಕ್ಕಿಂಗ್ ಅನ್ನು ಪ್ರಾರಂಭಿಸಿದೆ.

ಹೊಸ ಸಿಎಫ್‌ಮೋಟೋ 650ಎನ್‌ಕೆ ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಹೊಸ ಸಿಎಫ್‌ಮೋಟೋ 650ಎನ್‌ಕೆ ಬೈಕನ್ನು ಖರೀದಿಸಲು ಬಯಸುವ ಗ್ರಾಹಕರು ಟೋಕನ್ ಮೊತ್ತ ರೂ.5,000 ಪಾವತಿಸಿ ಆನ್‌ಲೈನ್‌ನಲ್ಲಿ ಬುಕ್ಕಿಂಗ್ ಮಾಡಿಕೊಳ್ಳಬಹುದು. ಸಿಎಫ್‌ಮೋಟೋ ದೇಶಿಯ ಮಾರುಕಟ್ಟೆಯಲ್ಲಿ ತನ್ನ ಎರಡನೇ ಮಾದರಿಯಾಗಿ 650ಎನ್‌ಕೆ ಬೈಕನ್ನು ಬಿಡುಗಡೆಗೊಳಿಸಲಿದೆ. ಸಿಎಫ್‌ಮೋಟೋ 650ಎನ್‌ಕೆ ಅನ್ನು ಮಿಡ್ ವೈಟ್ ನೇಕೆಡ್ ವಿಭಾಗದಲ್ಲಿ ಇರಿಸಲಾಗುತ್ತದೆ. ಹೊಸ ಸಿಎಫ್‌ಮೋಟೋ 650ಎನ್ ಬೈಕ್ ಹಿಂದಿನ ಬಿಎಸ್-4 ಆವೃತ್ತಿಯ ಪ್ರತಿರೂಪದಲ್ಲಿ ಒಂದೆರಡು ಕಾಸ್ಮೆಟಿಕ್ ಬದಲಾವಣೆಗಳನ್ನು ಪಡೆಯಬಹುದು ಎಂದು ನಿರೀಕ್ಷಿಸುತ್ತೇವೆ.

ಹೊಸ ಸಿಎಫ್‌ಮೋಟೋ 650ಎನ್‌ಕೆ ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಇನ್ನು ಈ ಹೊಸ ಸಿಎಫ್‌ಮೋಟೋ 650ಎನ್‌ಕೆ ಬೈಕ್ ಮರುವಿನ್ಯಾಸಗೊಳಿಸಲಾದ ಫ್ಯೂಯಲ್ ಟ್ಯಾಂಕ್ ಮತ್ತು ಮುಂಭಾಗದ ಫೆಂಡರ್‌ಗಳನ್ನು ಒಳಗೊಂಡಿರುತ್ತದೆ. ಉಳಿದಂತೆ ಯಾವುದೆ ಪ್ರಮುಖ ಬದಲಾವಣೆಗಳನ್ನು ಹೊಂದಿರುವುದಿಲ್ಲವೆಂದು ನಿರೀಕ್ಷಿಸುತ್ತೇವೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಹೊಸ ಸಿಎಫ್‌ಮೋಟೋ 650ಎನ್‌ಕೆ ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಹೊಸ ಸಿಎಫ್‌ಮೋಟೋ 650ಎನ್‌ಕೆ ಬೈಕಿನಲ್ಲಿ ಹಿಂದಿನ ಬಿಎಸ್-4 ಮಾದರಿಯಲ್ಲಿದ್ದ ಅದೇ ಎಂಜಿನ್ ಅನ್ನು ಮುಂದುವರಿವರಿಸಬಹುದು. ಅದರೆ ಈ ಎಂಜಿನ್ ಅನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗುತ್ತದೆ.

ಹೊಸ ಸಿಎಫ್‌ಮೋಟೋ 650ಎನ್‌ಕೆ ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಇದು 649ಸಿಸಿ ಇನ್-ಲೈನ್ ಪ್ಯಾರಲಲ್ ಎಂಜಿನ್ ಆಗಿದೆ. ಈ ಎಂಜಿನ್ 66.6 ಬಿಹೆಚ್‍ಪಿ ಪವರ್ ಮತ್ತು 56 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನು ಹೊಂದಿರುತ್ತದೆ. ಈ ಎಂಜಿನ್ ಅನ್ನು 6-ಸ್ಪೀಡ್ ಗೇರ್‌ಬಾಕ್ಸ್‌ಗೆ ಸಂಯೋಜಿಸಲಾಗಿದೆ.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಹೊಸ ಸಿಎಫ್‌ಮೋಟೋ 650ಎನ್‌ಕೆ ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಈ ಎಂಜಿನ್ ಅನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿದ ಬಳಿಕ ಇದರ ಪವರ್ ಮತ್ತು ಟಾರ್ಕ್ ಅಂಕಿ ಅಂಶದಲ್ಲಿ ಯಾವುದೇ ಪ್ರಮುಖ ಬದಲಾವಣೆಗಳಾಗುವುದಿಲ್ಲೆವೆಂದು ನಿರೀಕ್ಷಿಸುತ್ತೇವೆ.

ಹೊಸ ಸಿಎಫ್‌ಮೋಟೋ 650ಎನ್‌ಕೆ ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಬಿಎಸ್-4 ಸಿಎಫ್‌ಮೋಟೋ 650ಎನ್‌ಕೆ ಬೈಕ್ ಅಗ್ರೇಸಿವ್ ಸ್ಟೈಲಿಂಗ್ ಅನ್ನು ಒಳಗೊಂಡಿತ್ತು. ಹೊಸ ಸಿಎಫ್‌ಮೋಟೋ 650ಎನ್ ಬೈಕಿನಲ್ಲಿ ಅದೇ ಅಗ್ರೇಸಿವ್ ಲುಕ್ ಅನ್ನು ಉಳಿಸಿಕೊಂಡು ಕೆಲವು ಕಾಸ್ಮೆಟಿಕ್ ಬದಲಾವಣೆಗಳನ್ನು ಪಡೆಯುತ್ತದೆ.

MOST READ: ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಎಡಿಷನ್ ಬಿಡುಗಡೆ

ಹೊಸ ಸಿಎಫ್‌ಮೋಟೋ 650ಎನ್‌ಕೆ ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಹೊಸ ಸಿಎಫ್‌ಮೋಟೋ 650ಎನ್‌ಕೆ ಬೈಕಿನಲ್ಲಿ ಸಿಂಗಲ್-ಪೀಸ್ ಹ್ಯಾಂಡಲ್‌ಬಾರ್, ಸ್ಪ್ಲಿಟ್ ಸೀಟುಗಳು, ಡಿಆರ್‌ಎಲ್‌ಗಳೊಂದಿಗಿನ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ಎಲ್‌ಇಡಿ ಟೈಲ್‌ಲ್ಯಾಂಪ್‌ಗಳು ಮತ್ತು ಸ್ಲೀಕ್ ಆಗಿ ಕಾಣುವ ಎಕ್ಸಾಸ್ಟ್, ನಂಬರ್ ಪ್ಲೇಟ್ ಹೊಂದಿರುವವರೊಂದಿಗೆ ಟೈಲ್ ವಿಭಾಗವನ್ನು ಹೊಂದಿರುತ್ತದೆ.

ಹೊಸ ಸಿಎಫ್‌ಮೋಟೋ 650ಎನ್‌ಕೆ ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಇದರೊಂದಿಗೆ ಎಲ್‌ಸಿಡಿ ಪ್ಯಾನೆಲ್ ಇಲ್ಲದೆ ಅದೇ ಪೂರ್ಣ ಪ್ರಮಾಣದ ಡಿಜಿಟಲ್ ಡ್ಯಾಶ್‌ಬೋರ್ಡ್ ಅನ್ನು ಉಳಿಸಿಕೊಳ್ಳುವ ನಿರೀಕ್ಷೆಯಿದೆ. ಇನ್ನು ಈ ಬಿಎಸ್-6 650ಎನ್‌ಕೆ ಬೈಕಿನ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ ಕೆವೈಬಿಯ ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗದಲ್ಲಿ ಮೊನೊ-ಶಾಕ್ ಸೆಟಪ್ ಅನ್ನು ಹೊಂದಿರುತ್ತದೆ.

ಹೊಸ ಸಿಎಫ್‌ಮೋಟೋ 650ಎನ್‌ಕೆ ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಇನ್ನು ಹೊಸ ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ ಡ್ಯುಯಲ್-ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ ಸಿಂಗಲ್ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಲಾಗಿರುತ್ತದೆ. ಇನ್ನು ಇದರೊಂದಿಗೆ ಸ್ಟ್ಯಾಂಡರ್ಡ್ ಆಗಿ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ಕೂಡ ಪಡೆಯುತ್ತದೆ.

ಹೊಸ ಸಿಎಫ್‌ಮೋಟೋ 650ಎನ್‌ಕೆ ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಹೊಸ ಸಿಎಫ್‌ಮೋಟೋ 650ಎನ್‌ಕೆ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಕವಾಸಕಿ ಝಡ್650, ರಾಯಲ್‌ ಎನ್‌ಫೀಲ್ಡ್‌ ಇಂಟರ್ಸೆಪ್ಟರ್, ಹೋಂಡಾ ಸಿಬಿ650 ಮತ್ತು ಟ್ರಯಂಫ್ ಟ್ರೈಡೆಂಟ್ 660 ಬೈಕ್ ಗಳಿಗೆ ಪೈಪೋಟಿ ನೀಡುತ್ತದೆ.

Most Read Articles

Kannada
English summary
CFMoto 650NK BS6 Bookings Start Ahead Of India Launch. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X