ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಡುಕಾಟಿ ಮಾನ್ಸ್ಟರ್ ಬೈಕ್ ಉತ್ಪಾದನೆ ಆರಂಭ

ಇಟಲಿ ಮೂಲದ ದ್ವಿಚಕ್ರ ವಾಹನ ತಯಾರಕ ಸಂಸ್ಥೆಯಾದ ಡುಕಾಟಿ ತನ್ನ 2021ರ ಮಾನ್ಸ್ಟರ್ ಬೈಕನ್ನು ಇತ್ತೀಚೆಗೆ ಜಾಗತಿಕವಾಗಿ ಅನಾವರಣಗೊಳಿಸಿತ್ತು. 2021ರ ಡುಕಾಟಿ ಮಾನ್ಸ್ಟರ್ ಬೈಕ್ ವಿನ್ಯಾಸದ ವಿಷಯದಲ್ಲಿ ಮಾತ್ರವಲ್ಲದೆ ಹೊಸ ಫೀಚರ್, ರೈಡರ್ ಏಡ್ಸ್ ಮತ್ತು ಹೆಚ್ಚು ಪವರ್ ಫುಲ್ ಎಂಜಿನ್ ಅನ್ನು ಸಹ ಒಳಗೊಂಡಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಡುಕಾಟಿ ಮಾನ್ಸ್ಟರ್ ಬೈಕ್ ಉತ್ಪಾದನೆ ಆರಂಭ

2021ರ ಡುಕಾಟಿ ಮಾನ್ಸ್ಟರ್ ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ. ಇದರ ಉತ್ಪಾದನೆಯನ್ನು ಇಟಲಿ ಪ್ರಾರಂಭಿಸಿದ. ಈ ಹೊಸ ಡುಕಾಟಿ ಮಾನ್ಸ್ಟರ್ ಬೈಕ್ ದೈತ್ಯಾಕಾರದ ಹಗುರವಾದ ನೇಕೆಡ್ ಸ್ಟ್ರೀಟ್ ಫೈಟರ್ ಆಗಿದೆ. 2021ರ ಡುಕಾಟಿ ಮಾನ್ಸ್ಟರ್ ಬೈಕ್ ಸ್ಪೋರ್ಟಿಯರ್ ಮತ್ತು ಸ್ಕಪಲಡಡ್ ವಿನ್ಯಾಸದೊಂದಿಗೆ ಬರುತ್ತದೆ. 2021ರ ಡುಕಾಟಿ ಮಾನ್ಸ್ಟರ್ ಹೊಚ್ಚ ಹೊಸ ಎಲ್ಇಡಿ ಹೆಡ್‌ಲ್ಯಾಂಪ್‌ಗಳನ್ನು ಹೊಂದಿದೆ. ಅದರ ಸುತ್ತಲಿನ ವೃತ್ತಾಕಾರದ ಎಲ್‌ಇಡಿ ಡಿಆರ್‌ಎಲ್‌ಗಳಿಂದ ಎದ್ದು ಕಾಣುತ್ತದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಡುಕಾಟಿ ಮಾನ್ಸ್ಟರ್ ಬೈಕ್ ಉತ್ಪಾದನೆ ಆರಂಭ

2021ರ ಮಾನ್ಸ್ಟರ್ ಹೊಸ ಮಾನ್ಸ್ಟರ್ ಸ್ಕಪಲಡಡ್ ಟ್ಯಾಂಕ್ ವಿನ್ಯಾಸ, ಡೈನಾಮಿಕ್ ಟರ್ನ್ ಇಂಡಿಕೇಟರ್ಸ್ ಮತ್ತು ಹಿಂಭಾಗದಲ್ಲಿ ಎಲ್ಇಡಿ ಟೈಲ್‌ಲೈಟ್‌ಗಳನ್ನು ಸಹ ಒಳಗೊಂಡಿದೆ. ಇನ್ನು ಹೊಸ ಬೈಕಿನಲ್ಲಿ ಹ್ಯಾಂಡಲ್‌ಬಾರ್ ಮತ್ತು ಫುಟ್‌ಪೆಗ್ ಸ್ಥಾನಗಳಿಗೆ ಬದಲಾಯಿಸಿದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಡುಕಾಟಿ ಮಾನ್ಸ್ಟರ್ ಬೈಕ್ ಉತ್ಪಾದನೆ ಆರಂಭ

ಹೊಸ ಡುಕಾಟಿ ಮಾನ್ಸ್ಟರ್ ಬೈಕ್ ಸ್ಟೈಲಿಂಗ್ ಅಪ್‌ಡೇಟ್‌ನೊಂದಿಗೆ, ಡುಕಾಟಿ ಹೊಸ ಮಾನ್ಸ್ಟರ್ ಇನ್ನೂ ಹಗುರವಾದ ಆವೃತ್ತಿಯಾಗಿದೆ ಎಂದು ಖಚಿತಪಡಿಸಿದೆ. ಇಟಾಲಿಯನ್ ಸೂಪರ್‌ಬೈಕ್ ತಯಾರಕರು ಈ ಬೈಕಿನ ತೂಕವನ್ನು ಇಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಡುಕಾಟಿ ಮಾನ್ಸ್ಟರ್ ಬೈಕ್ ಉತ್ಪಾದನೆ ಆರಂಭ

ಹಿಂದಿನ ಮಾದರಿಗೆ ಹೋಲಿಸಿದರೆ ಹೊಸ ಡುಕಾಟಿ ಮಾನ್ಸ್ಟರ್ ಬೈಕಿಗೆ 18 ಕೆಜಿ ಕಡಿಮೆಯಾಗಿದೆ. 2021ರ ಡುಕಾಟಿ ಮಾನ್ಸ್ಟರ್ ಬೈಕ್ ದೊಡ್ಡ ಪ್ಯಾನಿಗಲೆ ಒಡಹುಟ್ಟಿದವರಿಂದ ಕಾನ್ಸೆಪ್ಟ್ ಅನ್ನು ಎರವಲು ಪಡೆಯುತ್ತದೆ.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಡುಕಾಟಿ ಮಾನ್ಸ್ಟರ್ ಬೈಕ್ ಉತ್ಪಾದನೆ ಆರಂಭ

ಬೈಕಿನ ಹೃದಯ ಭಾಗ ಎಂದೇ ಹೇಳಬಹುದಾದ ಎಂಜಿನ್ ಬಗ್ಗೆ ಹೇಳುವುದಾದರೆ, 2021ರ ಡುಕಾಟಿ ಮಾನ್ಸ್ಟರ್ ಬೈಕಿನಲ್ಲಿ ಪವರ್ ಫುಲ್ 937ಸಿಸಿ ಎಲ್-ಟ್ವಿನ್ ಟೆಸ್ಟಾಸ್ಟ್ರೆಟಾ ಎಂಜಿನ್‌ ಅನ್ನು ಅಳವಡಿಸಲಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಡುಕಾಟಿ ಮಾನ್ಸ್ಟರ್ ಬೈಕ್ ಉತ್ಪಾದನೆ ಆರಂಭ

ಈ ಎಂಜಿನ್ 9250 ಆರ್‌ಪಿಎಂನಲ್ಲಿ 111 ಬಿಹೆಚ್‌ಪಿ ಪವರ್ ಮತ್ತು 6500 ಆರ್‌ಪಿಎಂನಲ್ಲಿ 93 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಎಂಜಿನ್ ಅನ್ನು 6-ಸ್ಪೀಡ್ ಗೇರ್‌ಬಾಕ್ಸ್‌ನೊಂದಿಗೆ ಜೋಡಿಸಲಾಗಿದೆ. 2021ರ ಡುಕಾಟಿ ಮಾನ್ಸ್ಟರ್ ಬೈಕ್ ಟೋ-ವೇ ಕ್ವೀಕ್ ಶಿಫ್ಟರ್ ನೊಂದಿಗೆ ಸ್ಟ್ಯಾಂಡರ್ಡ್ ಆಗಿ ಬರುತ್ತದೆ.

MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಡುಕಾಟಿ ಮಾನ್ಸ್ಟರ್ ಬೈಕ್ ಉತ್ಪಾದನೆ ಆರಂಭ

2021ರ ಡುಕಾಟಿ ಮಾನ್ಸ್ಟರ್ ಬೈಕಿನಲ್ಲಿನ ಇತರ ಫೀಚರ್ ಗಳಾದ, ಎಲೆಕ್ಟ್ರಾನಿಕ್ ರೈಡರ್ ಅಸಿಸ್ಟ್ ಗಳು ಮತ್ತು 4.3-ಇಂಚಿನ ಪೂರ್ಣ-ಬಣ್ಣದ ಟಿಎಫ್‌ಟಿ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿದೆ. ಇದರೊಂದಿಗೆ ಸ್ಪೋರ್ಟ್, ಅರ್ಬನ್ ಮತ್ತು ಟೂರಿಂಗ್ ಎಂಬ ಮೂರು ರೈಡಿಂಗ್ ಮೋಡ್‌ಗಳನ್ನು ಒಳಗೊಂಡಿವೆ.

€ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಡುಕಾಟಿ ಮಾನ್ಸ್ಟರ್ ಬೈಕ್ ಉತ್ಪಾದನೆ ಆರಂಭ

ಇನ್ನು ಈ ಬೈಕಿನಲ್ಲಿ ಐಷಾರಾಮಿ ಮಾದರಿಗಳಲ್ಲಿರುವಂತ ಟ್ಯಾಕ್ಷನ್ ಕಂಟ್ರೋಲ್, ವ್ಹೀಲಿ ಕಂಟ್ರೋಲ್ ಮತ್ತು ಲಾಂಚ್ ಕಂಟ್ರೋಲ್ ಗಳನ್ನು ಹೊಂದಿವೆ. 2021ರ ಡುಕಾಟಿ ಮಾನ್ಸ್ಟರ್ ಬೈಕ್ ಶೀಘ್ರದಲ್ಲೇ ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಬಿಡುಗಡೆಯಾಗಲಿದೆ. ನಂತರದಲ್ಲಿ ಈ ಹೊಸ ಡುಕಾಟಿ ಮಾನ್ಸ್ಟರ್ ಬೈಕ್ ಭಾರತೀಯ ಮಾರುಕಟ್ಟೆಗೂ ಲಗ್ಗೆ ಇಡಲಿದೆ.

Most Read Articles

Kannada
Read more on ಡುಕಾಟಿ ducati
English summary
India-bound Ducati Monster Production Begins. Read In Kannada.
Story first published: Saturday, March 6, 2021, 17:30 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X