2021ರಲ್ಲಿ ಬಿಡುಗಡೆಯಾದ ಬೆಸ್ಟ್ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್‌ಗಳಿವು..

ಹೆಚ್ಚುತ್ತಿರುವ ಇಂಧನಗಳ ಬೆಲೆ ಮತ್ತು ಮಾಲಿನ್ಯದ ಕಾರಣಕ್ಕೆ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹ ನೀಡುತ್ತಿರುವುದು ಹೊಸ ಬದಲಾವಣೆಗೆ ಕಾರಣವಾಗುತ್ತಿದೆ.

2021ರಲ್ಲಿ ಬಿಡುಗಡೆಯಾದ ಬೆಸ್ಟ್ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್‌ಗಳಿವು..

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಬ್ಸಡಿ ಯೋಜನೆಗಳ ಪರಿಣಾಮ ಇವಿ ವಾಹನಗಳಿಗೆ ಬೇಡಿಕೆಯು ಕಳೆದ ವರ್ಷಕ್ಕಿಂತಲೂ ಇದೀಗ ಸಾಕಷ್ಟು ಹೆಚ್ಚಳವಾಗಿದ್ದು, ಇವಿ ದ್ವಿಚಕ್ರವಾಹನ ಮಾರಾಟವು ಸಾಕಷ್ಟು ಬೆಳವಣಿಗೆ ಸಾಧಿಸುತ್ತಿದೆ. ಹಾಗಾದರೆ ಈ ವರ್ಷ ಬಿಡುಗಡೆಯಾದ ಪ್ರಮುಖ ಇವಿ ಸ್ಕೂಟರ್‌ಗಳು ಯಾವವು? ಮತ್ತು ಅವುಗಳ ವಿಶೇಷತೆ, ಬೆಲೆ ಮಾಹಿತಿಯನ್ನು ಇಲ್ಲಿ ತಿಳಿಯೋಣ.

2021ರಲ್ಲಿ ಬಿಡುಗಡೆಯಾದ ಬೆಸ್ಟ್ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್‌ಗಳಿವು..

ಓಲಾ ಎಸ್1 ಮತ್ತು ಎಸ್1 ಪ್ರೊ

ಎಲೆಕ್ಟ್ರಿಕ್ ಸ್ಕೂಟರ್ ವಿಭಾಗದಲ್ಲಿ ಈ ವರ್ಷ ಹೆಚ್ಚು ಗಮನಸೆಳೆದ ಇವಿ ಸ್ಕೂಟರ್ ಮಾದರಿಗಳಲ್ಲಿ ಓಲಾ ಎಲೆಕ್ಟ್ರಿಕ್ ನಿರ್ಮಾಣದ ಹೊಸ ಎಸ್1 ಮತ್ತು ಎಸ್1 ಪ್ರೊ ಪ್ರಮುಖವಾಗಿವೆ. ಹೊಸ ಸ್ಕೂಟರ್‌ಗಳು ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 99,999 ಬೆಲೆ ಹೊಂದಿದ್ದರೆ ಎಸ್1 ಪ್ರೊ ಮಾದರಿಯು ರೂ. 1,29,999 ಬೆಲೆ ಹೊಂದಿದೆ.

2021ರಲ್ಲಿ ಬಿಡುಗಡೆಯಾದ ಬೆಸ್ಟ್ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್‌ಗಳಿವು..

ಅತ್ಯತ್ತಮ ಕಾರ್ಯಕ್ಷಮತೆ, ಗರಿಷ್ಠ ಮೈಲೇಜ್, ಪ್ರೀಮಿಯಂ ಫೀಚರ್ಸ್ ಮತ್ತು ಬಜೆಟ್ ಬೆಲೆಯು ಹೊಸ ಸ್ಕೂಟರ್ ಆಯ್ಕೆ ಮೌಲ್ಯವನ್ನು ಹೆಚ್ಚಿಸಿದ್ದು, ಆರಂಭಿಕ ಮಾದರಿಯಾದ ಎಸ್1 ವೆರಿಯೆಂಟ್‌‌ನಲ್ಲಿ 2.98kWh ಮತ್ತು ಎಸ್1 ಪ್ರೊ ಮಾದರಿಯಲ್ಲಿ 3.97kWh ಲೀಥಿಯಂ ಅಯಾನ್ ಬ್ಯಾಟರಿ ಜೋಡಣೆ ಮಾಡಲಾಗಿದೆ.

2021ರಲ್ಲಿ ಬಿಡುಗಡೆಯಾದ ಬೆಸ್ಟ್ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್‌ಗಳಿವು..

ಪ್ರತಿ ಚಾರ್ಜ್‌ಗೆ ಎಸ್1 ಮಾದರಿಯು ಗರಿಷ್ಠ 121 ಕಿ.ಮೀ ಮೈಲೇಜ್ ಹಿಂದಿರುಗಿಸಿದರೆ ಎಸ್1 ಪ್ರೊ ಮಾದರಿಯು ಪ್ರತಿ ಚಾರ್ಜ್‌ಗೆ 181 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, ಎಸ್1 ಮಾದರಿಯು ಗಂಟೆಗೆ 90 ಕಿ.ಮೀ ಟಾಪ್ ಸ್ಪೀಡ್‌ ಹೊಂದಿದ್ದರೆ ಎಸ್1 ಪ್ರೊ ಮಾದರಿಯು ಪ್ರತಿ ಗಂಟೆಗೆ 115ಕಿ.ಮೀ ಟಾಪ್ ಸ್ಪೀಡ್‌ ಹೊಂದಿದೆ. ಎಸ್1 ಮಾದರಿಯಲ್ಲಿ ನಾರ್ಮಲ್ ಮತ್ತು ಸ್ಪೋರ್ಟ್ ರೈಡ್ ಮೋಡ್‌ಗಳಿದ್ದರೆ ಎಸ್1 ಪ್ರೊ ಮಾದರಿಯಲ್ಲಿ ನಾರ್ಮಲ್, ಸ್ಪೋರ್ಟ್ ಮತ್ತು ಹೈಪರ್ ರೈಡಿಂಗ್ ಮೋಡ್‌ಗಳನ್ನು ಒಳಗೊಂಡಿದೆ.

2021ರಲ್ಲಿ ಬಿಡುಗಡೆಯಾದ ಬೆಸ್ಟ್ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್‌ಗಳಿವು..

ಸಿಂಪಲ್ ಒನ್ ಇವಿ ಸ್ಕೂಟರ್

ಬೆಂಗಳೂರು ಮೂಲದ ಸಿಂಪಲ್ ಎನರ್ಜಿ ನಿರ್ಮಾಣದ ಸಿಂಪಲ್ ಒನ್ ಇವಿ ಸ್ಕೂಟರ್ ಮಾದರಿಯು ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ರೂ. 1.10 ಲಕ್ಷ ಬೆಲೆ ಹೊಂದಿದ್ದು, ಹೊಸ ಇವಿ ಸ್ಕೂಟರ್‌ನಲ್ಲಿ 4.5KW ಎಲೆಕ್ಟ್ರಿಕ್ ಮೋಟಾರ್ ಜೊತೆಗೆ 4.8kWh ಲೀಥಿಯಂ ಅಯಾನ್ ಬ್ಯಾಟರಿ(ಡ್ಯುಯಲ್ ಬ್ಯಾಟರಿ) ಜೋಡಣೆ ಮಾಡಲಾಗಿದೆ.

2021ರಲ್ಲಿ ಬಿಡುಗಡೆಯಾದ ಬೆಸ್ಟ್ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್‌ಗಳಿವು..

ಹೊಸ ಇವಿ ಸ್ಕೂಟರ್ ಪ್ರತಿ ಚಾರ್ಚ್‌ಗೆ ವಿವಿಧ ರೈಡ್ ಮೋಡ್‌ಗಳ ಚಾಲನಾ ಶೈಲಿ ಆಧಾರದ ಮೇಲೆ ಕನಿಷ್ಠ 203 ಕಿ.ಮೀ ನಿಂದ ಗರಿಷ್ಠ 236 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ. ಜೊತೆಗೆ ಪ್ರತಿ ಗಂಟೆಗೆ 105 ಕಿ.ಮೀ ಟಾಪ್ ಸ್ಪೀಡ್ ಹೊಂದಿರುವ ಹೊಸ ಸಿಂಪಲ್ ಒನ್ ಸ್ಕೂಟರ್ ಅತಿ ಹೆಚ್ಚು ಮೈಲೇಜ್ ನೀಡುವ ಇವಿ ಸ್ಕೂಟರ್ ಮಾದರಿಯಾಗಿದ್ದು, ಸದ್ಯ ಬಿಡುಗಡೆಗೊಂಡಿರುವ ಹೊಸ ಸ್ಕೂಟರ್ ಮಾದರಿಯು ಮುಂದಿನ ತಿಂಗಳು ಗ್ರಾಹಕರ ಕೈಸೇರಲಿದೆ.

2021ರಲ್ಲಿ ಬಿಡುಗಡೆಯಾದ ಬೆಸ್ಟ್ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್‌ಗಳಿವು..

ಗ್ಲೈಡ್ ಎಸ್‌ಎಕ್ಸ್ ಮತ್ತು ಗ್ಲೈಡ್ ಎಸ್‌ಎಕ್ಸ್ ಪ್ಲಸ್

ಅರ್ಥ್ ಎನರ್ಜಿ ನಿರ್ಮಾಣದ ಹೊಸ ಗ್ಲೈಡ್ ಎಸ್‌ಎಕ್ಸ್ ಮತ್ತು ಗ್ಲೈಡ್ ಎಸ್‌ಎಕ್ಸ್ ಪ್ಲಸ್ ಇವಿ ಸ್ಕೂಟರ್ ಮಾದರಿಗಳು ವಿವಿಧ ತಾಂತ್ರಿಕ ಅಂಶಗಳಿಗೆ ಅನುಗುಣವಾಗಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 78 ಸಾವಿರದಿಂದ ಟಾಪ್ ಎಂಡ್ ಮಾದರಿಯು ರೂ. 1 ಲಕ್ಷ ಬೆಲೆ ಹೊಂದಿದೆ.

2021ರಲ್ಲಿ ಬಿಡುಗಡೆಯಾದ ಬೆಸ್ಟ್ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್‌ಗಳಿವು..

ಹೊಸ ಸ್ಕೂಟರ್‌ಗಳಲ್ಲಿ ಅರ್ಥ್ ಎನರ್ಜಿ ಕಂಪನಿಯು ಸುಧಾರಿತ ತಂತ್ರಜ್ಞಾನ ಪ್ರೇರಿತ 3.9 kW ಬ್ಯಾಟರಿ ಪ್ಯಾಕ್‌ ಜೋಡಣೆ ಮಾಡಿದ್ದು, ಗ್ಲೈಡ್ ಎಸ್ಎಕ್ಸ್ ಮಾದರಿಯ ಪ್ರತಿ ಚಾರ್ಜ್‌ಗೆ ಗರಿಷ್ಠ 150 ಕಿ.ಮೀ ಮೈಲೇಜ್‌ನೊಂದಿಗೆ ಪ್ರತಿ ಗಂಟೆಗೆ 25 ಕಿ.ಮೀ ಟಾಪ್ ಸ್ಪೀಡ್ ಹೊಂದಿದ್ದರೆ ಗ್ಲೈಡ್ ಎಸ್‌ಎಕ್ಸ್ ಪ್ಲಸ್ ಮಾದರಿಯು ಪ್ರತಿ ಚಾರ್ಜ್‌ಗೆ ಗರಿಷ್ಠ 100 ಕಿ.ಮೀ ಮೈಲೇಜ್‍ನೊಂದಿಗೆ ಪ್ರತಿ ಗಂಟೆಗೆ 90 ಕಿ.ಮೀ ಟಾಪ್ ಸ್ಪೀಡ್ ತಲುಪಬಲ್ಲದು.

2021ರಲ್ಲಿ ಬಿಡುಗಡೆಯಾದ ಬೆಸ್ಟ್ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್‌ಗಳಿವು..

ಗ್ಲೈಡ್ ಎಸ್‌ಎಕ್ಸ್ ಮಾದರಿಯು ಲೋ ಸ್ಪೀಡ್ ಮಾದರಿಯಾಗಿರುವುದರಿಂದ ಈ ಸ್ಕೂಟರ್ ನೋಂದಣಿ ಮತ್ತು ಚಾಲನೆಗೆ ಡಿಎಲ್ ಅವಶ್ಯವಿಲ್ಲ ಎಂದು ಕಂಪನಿಯು ಮಾಹಿತಿ ನೀಡಿದ್ದು, ಹೈ ಸ್ಪೀಡ್ ಮಾದರಿಯಾದ ಗ್ಲೈಡ್ ಎಸ್‌ಎಕ್ಸ್ ಪ್ಲಸ್ ಮಾದರಿಗೆ ಸಾಮಾನ್ಯ ಸ್ಕೂಟರ್‌ಗಳಂತೆ ನೋಂದಣಿ, ಚಾಲನೆಗೆ ಡಿಎಲ್ ಅಗತ್ಯವಾಗಿರುತ್ತದೆ. ಹೊಸದಾಗಿ ಬಿಡುಗಡೆಯಾಗಿರುವ ಈ ಇವಿ ಸ್ಕೂಟರ್‌ಗಳು ಮುಂಬರುವ ಮಾರ್ಚ್ ಹೊತ್ತಿಗೆ ದೇಶಾದ್ಯಂತ ಖರೀದಿಗೆ ಲಭ್ಯವಿರಲಿವೆ.

2021ರಲ್ಲಿ ಬಿಡುಗಡೆಯಾದ ಬೆಸ್ಟ್ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್‌ಗಳಿವು..

ಬೌನ್ಸ್ ಇನ್ಪಿನಿಟಿ ಇ1

ಬೌನ್ಸ್ ಕಂಪನಿಯು ಪರಿಚಯಿಸಿರುವ ಹೊಸ ಇನ್ಪಿನಿಟಿ ಇ1 ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 45,099(ಬ್ಯಾಟರಿ ಮತ್ತು ಚಾರ್ಜರ್ ರಹಿತ) ಬೆಲೆ ಹೊಂದಿದ್ದು, ಬ್ಯಾಟರಿ ಜೋಡಣೆ ಹೊಂದಿರುವ ಬೌನ್ಸ್ ಇವಿ ಸ್ಕೂಟರ್ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ರೂ. 68,999 ಬೆಲೆ ಹೊಂದಿದೆ.

2021ರಲ್ಲಿ ಬಿಡುಗಡೆಯಾದ ಬೆಸ್ಟ್ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್‌ಗಳಿವು..

ಬೌನ್ಸ್ ಕಂಪನಿಯು ಹೊಸ ಇವಿ ಸ್ಕೂಟರ್ ಮಾದರಿಯಲ್ಲಿ 2kWh ಲೀಥಿಯಂ ಅಯಾನ್ ಬ್ಯಾಟರಿ ಅಳಡಿಸಿದ್ದು, ಅತ್ಯುತ್ತಮ ರೈಡಿಂಗ್ ಸೌಲಭ್ಯದೊಂದಿಗೆ 40 ಕಿ.ಮೀ ಟಾಪ್ ಸ್ಪೀಡ್ ಮೂಲಕ ಪ್ರತಿ ಚಾರ್ಜ್‌ಗೆ ಗರಿಷ್ಠ 85 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

2021ರಲ್ಲಿ ಬಿಡುಗಡೆಯಾದ ಬೆಸ್ಟ್ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್‌ಗಳಿವು..

ಜೊತೆಗೆ ಬೌನ್ಸ್ ಕಂಪನಿಯು ಹೊಸ ಸ್ಕೂಟರ್ ಮೇಲೆ ಸ್ಟ್ಯಾಂಡರ್ಡ್ ಆಗಿ 3 ವರ್ಷ ಅಥವಾ 50 ಸಾವಿರ ಕಿ.ಮೀ ತನಕ ವಾರಂಟಿ ಘೋಷಣೆ ಮಾಡಿದ್ದು, ಶೋರೂಂಗಳ ಬದಲಾಗಿ ಕಂಪನಿಯು ಸಂಪೂರ್ಣವಾಗಿ ಆನ್‌ಲೈನ್ ಪ್ಲ್ಯಾಟ್‌ಫಾರ್ಮ್ ಮೂಲಕ ಸ್ಕೂಟರ್ ಮಾರಾಟ ಮತ್ತು ಗ್ರಾಹಕರ ಸೇವೆಗಳನ್ನು ಮನೆಬಾಗಿಲಿಗೆ ತಲುಪಿಸಲಿದೆ.

2021ರಲ್ಲಿ ಬಿಡುಗಡೆಯಾದ ಬೆಸ್ಟ್ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್‌ಗಳಿವು..

ಇವೆ ಸೋಲ್

ಇವೆ ಕಂಪನಿಯು ತನ್ನ ಹೊಸ ಸೋಲ್ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಕಳೆದ ತಿಂಗಳು ಬಿಡುಗಡೆ ಮಾಡಿದ್ದು, ಹೊಸ ಸ್ಕೂಟರ್ ಎಕ್ಸ್ ಶೋರೂಂ ದರದಂತೆ ರೂ. 1.40 ಲಕ್ಷ ಬೆಲೆ ಹೊಂದಿದೆ. ಈ ಎಲೆಕ್ಟ್ರಿಕ್ ಸ್ಕೂಟರಿನಲ್ಲಿ ಅತ್ಯಾಧುನಿಕ ಫೀಚರ್ ಗಳನ್ನು ನೀಡಲಾಗಿದ್ದು, ಪೂರ್ತಿಯಾಗಿ ಚಾರ್ಜ್ ಮಾಡಿದ ನಂತರ ಸುಮಾರು 120 ಕಿ.ಮೀಗಳವರೆಗೆ ಚಲಿಸಬಹುದು.

2021ರಲ್ಲಿ ಬಿಡುಗಡೆಯಾದ ಬೆಸ್ಟ್ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್‌ಗಳಿವು..

ಸೋಲ್ ಸ್ಕೂಟರ್ ಅನ್ನು ಇಕೋ ಮೋಡ್‌ನಲ್ಲಿ 40 ಕಿ.ಮೀ ವೇಗದಲ್ಲಿ ಚಾಲನೆ ಮಾಡಿದರೆ ಮಾತ್ರ 120 ಕಿ.ಮೀಗಳವರೆಗೆ ಚಲಿಸಬಹುದು. ಹೈ ಸ್ಪೀಡ್ ಮೋಡ್‌ಗಳಲ್ಲಿ ವೇಗದ ಹೆಚ್ಚಳದಿಂದಾಗಿ ಈ ಎಲೆಕ್ಟ್ರಿಕ್ ಸ್ಕೂಟರಿನ ವ್ಯಾಪ್ತಿ ಕಡಿಮೆಯಾಗಲಿದ್ದು, ಇವೆ ಸೋಲ್ ಎಲೆಕ್ಟ್ರಿಕ್ ಸ್ಕೂಟರಿನ ಸೀಟಿನ ಅಡಿಯಲ್ಲಿ ಎರಡು ಲಿಥಿಯಂ ಫೆರಸ್ ಫಾಸ್ಫೇಟ್ (LFP) ಬ್ಯಾಟರಿ ಪ್ಯಾಕ್‌ಗಳನ್ನು ಅಳವಡಿಸಲಾಗಿದೆ.

Most Read Articles

Kannada
English summary
New electric scooter launched in 2021 details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X