ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ 1250 ಬೈಕ್

ಐಷಾರಾಮಿ ದ್ವಿಚಕ್ರ ತಯಾರಕ ಕಂಪನಿಯಾದ ಹಾರ್ಲೆ ಡೇವಿಡ್ಸನ್ ತನ್ನ ಹೊಸ ಪ್ಯಾನ್ ಅಮೆರಿಕ 1250 ಬೈಕನ್ನು ಇತ್ತೀಚೆಗೆ ಅಧಿಕೃತವಾಗಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪರಿಚಯಿಸಿತು. ಈ ಹೊಸ ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ 1250 ಬೈಕ್ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ 1250 ಬೈಕ್

ಸ್ಟ್ಯಾಂಡರ್ಡ್ ಪ್ಯಾನ್ ಅಮೇರಿಕಾ 1250 ಹಾಗೂ ಪ್ಯಾನ್ ಅಮೇರಿಕಾ 1250 ಸ್ಪೆಷಲ್ ಅನ್ನು ಹಾರ್ಲೆ ಡೇವಿಡ್ಸನ್ ಇಂಡಿಯಾ ವೆಬ್‌ಸೈಟ್‌ನಲ್ಲಿ ಪಟ್ಟಿ ಮಾಡಲಾಗಿದೆ. ಎರಡು ಮಾದರಿಗಳು ವಿಭಿನ್ನ ಬಣ್ಣಗಳನ್ನು ಹೊಂದಿರುತ್ತವೆ ಮತ್ತು ಸ್ವಲ್ಪ ವಿಭಿನ್ನ ವೈಶಿಷ್ಟ್ಯಗಳನ್ನು ಸಹ ಹೊಂದಿವೆ, ಇನ್ನು ಹಾರ್ಲೆ ಡೇವಿಡ್ಸನ್ ಕಂಪನಿಯು ಅಮೆರಿಕದ ಹಾರ್ಲೆಸ್ ಯಾರ್ಕ್, ಪೆನ್ಸಿಲ್ವೇನಿಯಾ ವೆಹಿಕಲ್ ಆಪರೇಶನ್ಸ್ ಘಟಕದಲ್ಲಿ ಹೊಸ ಪ್ಯಾನ್ ಅಮೆರಿಕ ಬೈಕಿನ ಉತ್ಪಾದನೆಯನ್ನು ಆರಂಭಿಸಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ 1250 ಬೈಕ್

ಇನ್ನು ಹಾರ್ಲೆ ಡೇವಿಡ್ಸನ್ ಕಂಪನಿಯು ಪ್ಯಾನ್ ಅಮೆರಿಕ ಬೈಕನ್ನು ಯುರೋಪಿಗೆ ಮಾತ್ರವಲ್ಲ ಭಾರತ ಮತ್ತು ಏಷ್ಯಾದ ಉಳಿದ ಭಾಗಗಳಿಗೂ ಶೀಘ್ರದಲ್ಲಿಯೇ ವಿತರಿಸಲಿದೆ. ಈ ವರ್ಷಾಂತ್ಯದ ಮೊದಲು ಭಾರತಕ್ಕೆ ಈ ಜನಪ್ರಿಯ ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ 1250 ಬೈಕ್ ತಲುಪಬಹುದು.

MOST READ: ಯೂನಿಕಾರ್ನ್ ಬೈಕಿನ ಬೆಲೆ ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ 1250 ಬೈಕ್

ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ 1250 ಬೈಕ್ ಸ್ಟ್ಯಾಂಡರ್ಡ್ ಮತ್ತು ಸ್ಪೆಷಲ್ ಎಂಬ ಎರಡು ರೂಪಾಂತರಗಳಲ್ಲಿ ಲಭ್ಯವಿರುತ್ತದೆ. ಈ ಐಷಾರಾಮಿ ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ ಅಡ್ವೆಂಚರ್ ಬೈಕ್ ಬಿಎಂಡಬ್ಲ್ಯು ಆರ್1250ಜಿಎಸ್ ಮಾದರಿಗೆ ನೇರವಾಗಿ ಪೈಪೋಟಿ ನೀಡುತ್ತದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ 1250 ಬೈಕ್

ಪ್ಯಾನ್ ಅಮೆರಿಕ 1250 ಸಂಪೂರ್ಣವಾಗಿ ಹೊಸ ಬೈಕು ಆಗಿದ್ದು, ಇದನ್ನು ಸಂಪೂರ್ಣವಾಗಿ ಹೊಸದಾಗಿ ವಿನ್ಯಾಸಗೊಳಿಸಲಾಗಿದೆ ಮತ್ತು ಅಭಿವೃದ್ಧಿಪಡಿಸಲಾಗಿದೆ. ಇದರ ವಿನ್ಯಾಸದ ಬಗ್ಗೆ ಹೇಳುವುದಾದರೆ, ಅಡ್ವೆಂಚರ್ ಪ್ರಿಯರಿಗಾಗಿ ಸಂಪೂರ್ಣವಾಗಿ ವಿಶಿಷ್ಟವಾದ ವಿನ್ಯಾಸವನ್ನು ಹೊಂದಿದೆ.

MOST READ: ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಎಡಿಷನ್ ಬಿಡುಗಡೆ

ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ 1250 ಬೈಕ್

ಈ ಹೊಸ ಬೈಕ್ ಫ್ಲಾಟ್ ಎಲ್ಇಡಿ ಹೆಡ್ ಲೈಟ್ ಅನ್ನ್ ನೀಡಿದ್ದು, ಇದು ಹೆಚ್ಚು ಪ್ರಕಾಶಮಾನವಾಗಿದೆ. ಇನ್ನು ಈ ಬೈಕಿನಲ್ಲಿ ಟೂ-ಪೀಸ್ ಸ್ಪ್ಲೀಟ್ ಸೀಟುಗಳು, ಅಪ್‌ಸ್ವೆಪ್ಟ್ ಮಫ್ಲರ್ ಮತ್ತು ಎಕ್ಸಾಸ್ಟ್ ಪೈಪ್ ಗಳು ಮತ್ತು ಇತರ ಆಕರ್ಷಕ ಮುಖ್ಯಾಂಶಗಳನ್ನು ಕೂಡ ಒಳಗೊಂಡಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ 1250 ಬೈಕ್

ಈ ಬೈಕ್ ಮುಖ್ಯವಾಗಿ ಮ್ಯಾಟ್ ಫಿನಿಶಿಂಗ್ ನಿಂದ ಕೂಡಿದೆ. ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ ಅಡ್ವೆಂಚರ್ ಬೈಕ್ ಬೋಲ್ಟ್-ಆನ್ ರಿಯರ್ ಸಬ್‌ಫ್ರೇಮ್ ಮತ್ತು ಕ್ಯಾಸ್ಟ್ ಫ್ರೇಮ್‌ನಿಂದ ಆಧಾರವಾಗಿದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ 1250 ಬೈಕ್

ಪ್ಯಾನ್ ಅಮೆರಿಕ 1250 ಅಡ್ವೆಂಚರ್ ಬೈಕಿನ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಶೋವಾದಿಂದ ಸಂಪೂರ್ಣವಾಗಿ ಹೊಂದಾಣಿಕೆಯಾಗಿದ್ದು, ಮುಂಭಾಗ ಮತ್ತು ಹಿಂಭಾಗದ ತುದಿಗಳಲ್ಲಿ ಪ್ರಿ ಲೋಡ್ ಮತ್ತು ರಿಬೌಂಡ್ ಡ್ಯಾಂಪಿಂಗ್ಗಾಗಿ ಟ್ಯೂನ್ ಮಾಡಲಾಗಿದೆ. ಇದರ ಮುಂಭಾಗದಲ್ಲಿ 47 ಎಂಎಂ ಯುಎಸ್ಡಿ ಫೋರ್ಕ್ ಗಳು ಮತ್ತು ಹಿಂಭಾಗದಲ್ಲಿ ಮೊನೊ ಶಾಕ್ ಸೆಟಪ್ ಅನ್ನು ಒಳಗೊಂಡಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ 1250 ಬೈಕ್

ಇನ್ನು ಪ್ಯಾನ್ ಅಮೆರಿಕ ಅಡ್ವೆಂಚರ್ ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ ಟ್ವಿನ್ 320 ಎಂಎಂ ಡಿಸ್ಕ್ ಮತ್ತು ಹಿಂಭಾಗದಲ್ಲಿ ಸಿಂಗಲ್ 280 ಎಂಎಂ ಡಿಸ್ಕ್ ಬ್ರೇಕ್ ಅನ್ನು ನೀಡಿದೆ. ಇದರಲ್ಲಿ ಮುಂಭಾಗ 17 ಇಂಚಿನ ಮತ್ತು ಹಿಂಭಾಗ 19-ಇಂಚಿನ 5-ಸ್ಪೋಕ್ ಅಲಾಯ್ ವ್ಹೀಲ್ ಗಳನ್ನು ಒಳಗೊಂಡಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ 1250 ಬೈಕ್

ಹೊಸ ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ ಬೈಕ್ 1250 ಸಿಸಿ ವಿ-ಟ್ವಿನ್ ಡಿಒಹೆಚ್‌ಸಿ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 8750 ಆರ್‌ಪಿಎಂನಲ್ಲಿ 150 ಬಿಹೆಚ್‌ಪಿ ಪವರ್ ಮತ್ತು 6750 ಆರ್‌ಪಿಎಂನಲ್ಲಿ 127 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ 1250 ಬೈಕ್

ಹೊಸ ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ 1250 ಅಡ್ವೆಂಚರ್ ಬೈಕಿನ ಆಫ್-ರೋಡ್ ಮತ್ತು ಸವಾರಿ ಸಾಮರ್ಥ್ಯಗಳನ್ನು ಹೆಚ್ಚಿಸಲು ಇದು ಎಲೆಕ್ಟ್ರಾನಿಕ್ ಫೀಚರ್ ಗಳನ್ನು ಒಳಗೊಂಡಿದೆ. ಇವುಗಳಲ್ಲಿ ರೈಡ್-ಬೈ-ವೈರ್, ಕಾರ್ನರಿಂಗ್ ಎಬಿಎಸ್ ಮತ್ತು ಟ್ರ್ಯಾಕ್ಷನ್ ಕಂಟ್ರೋಲ್ ಅನ್ನು ಹೊಂದಿವೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ 1250 ಬೈಕ್

ಇನ್ನು ಈ ಹೊಸ ಅಡ್ವೆಂಚರ್ ಬೈಕ್ ಸ್ಪೋರ್ಟ್ಸ್, ರೈಮ್, ಆಫ್-ರೋಡ್ ಮತ್ತು ಆಫ್-ರೋಡ್ ಪ್ಲಸ್ ಎಂಬ ರೈಡಿಂಗ್ ಮೋಡ್ ಗಳನ್ನು ಒಳಗೊಂಡಿದೆ. ರೈಡರ್ ತಮ್ಮ ಆದ್ಯತೆಯ ಪ್ರಕಾರ ಟಿಸಿಎಸ್, ಎಬಿಎಸ್, ಟಾರ್ಕ್ ಡೆಲಿವರಿ, ಥ್ರೊಟಲ್ ರೆಸ್ಪಾನ್ಸ್ ಮತ್ತು ಸಸ್ಪೆಂಕ್ಷನ್ ಸೆಟ್ಟಿಂಗ್‌ಗಳನ್ನು ಕಾನ್ಫಿಗರ್ ಮಾಡಲು ಆಫ್-ರೋಡ್ ಮೋಡ್ ಅನ್ನು ಕಸ್ಟಮೈಸ್ ಮಾಡುವ ಆಯ್ಕೆಯನ್ನು ಸಹ ಪಡೆಯುತ್ತಾರೆ.

Most Read Articles

Kannada
English summary
Harley-Davidson Pan America 1250 India Launch Details Revealed. Read In Kannada.
Story first published: Wednesday, April 7, 2021, 19:00 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X