ಅನಾವರಣವಾಯ್ತು ಹೊಸ ಹಾರ್ಲೆ ಡೇವಿಡ್ಸನ್ ಸ್ಪೋರ್ಟ್‌ಸ್ಟರ್ ಎಸ್ ಕ್ರೂಸರ್ ಬೈಕ್

ಅಮೆರಿಕ ಮೂಲದ ಐಷಾರಾಮಿ ದ್ವಿಚಕ್ರ ತಯಾರಕ ಕಂಪನಿಯಾದ ಹಾರ್ಲೆ ಡೇವಿಡ್ಸನ್ ತನ್ನ ಹೊಸ ಸ್ಪೋರ್ಟ್‌ಸ್ಟರ್ ಎಸ್ ಕ್ರೂಸರ್ ಬೈಕನ್ನು ಜಾಗತಿಕವಾಗಿ ಅನಾವರಣಗೊಳಿಸಿದೆ. ಈ ಹೊಸ ಹಾರ್ಲೆ ಡೇವಿಡ್ಸನ್ ಸ್ಪೋರ್ಟ್‌ಸ್ಟರ್ ಎಸ್ ಸುಧಾರಿತ ತಂತ್ರಜ್ಙಾನವನ್ನು ಹೊಂದಿರುವ ಪ್ರೀಮಿಯಂ ಕ್ರೂಸರ್ ಬೈಕ್ ಆಗಿದೆ.

ಅನಾವರಣವಾಯ್ತು ಹೊಸ ಹಾರ್ಲೆ ಡೇವಿಡ್ಸನ್ ಸ್ಪೋರ್ಟ್‌ಸ್ಟರ್ ಎಸ್ ಕ್ರೂಸರ್ ಬೈಕ್

ಯುಎಸ್ ಮಾರುಕಟ್ಟೆಯಲ್ಲಿ ಹಾರ್ಲೆ ಡೇವಿಡ್ಸನ್ ಸ್ಪೋರ್ಟ್‌ಸ್ಟರ್ ಎಸ್ ಬೈಕಿನ ಬೆಲೆಯು 14,999 ಡಾಲರ್ ಆಗಿದೆ. ಇನ್ನು ಈ ಕ್ರೂಸರ್ ಬೈಕನ್ನು ಭಾರತದಲ್ಲಿ ಸುಮಾರು ರೂ,15 ಲಕ್ಷಗಳಿಗೆ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ, ಈ ಹೊಸ ಕ್ರೂಸರ್ ಬೈಕ್ ಹಾರ್ಲಿಯ ರೆವಲ್ಯೂಷನ್ ಮ್ಯಾಕ್ಸ್ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದೆ. ಹಾರ್ಲೆ ಡೇವಿಡ್ಸನ್ ಸ್ಪೋರ್ಟ್‌ಸ್ಟರ್ ಎಸ್ ಬೈಕ್ 227.7 ಕೆಜಿ ತೂಕವನ್ನು ಹೊಂದಿದೆ.

ಅನಾವರಣವಾಯ್ತು ಹೊಸ ಹಾರ್ಲೆ ಡೇವಿಡ್ಸನ್ ಸ್ಪೋರ್ಟ್‌ಸ್ಟರ್ ಎಸ್ ಕ್ರೂಸರ್ ಬೈಕ್

ಹೊಸ ಹಾರ್ಲೆ ಡೇವಿಡ್ಸನ್ ಸ್ಪೋರ್ಟ್‌ಸ್ಟರ್ ಎಸ್ ಬೈಕಿನಲ್ಲಿ 250 ಸಿಸಿ ರೆವಲ್ಯೂಷನ್ ಮ್ಯಾಕ್ಸ್ 1250 ಟಿ ವಿ-ಟ್ವಿನ್ ಎಂಜಿನ್‌ ಅನ್ನು ಹೊಂದಿದೆ. ಈ ಎಂಜಿನ್ 121 ಬಿಹೆಚ್‍ಪಿ ಪವರ್ ಮತ್ತು 127 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಅನಾವರಣವಾಯ್ತು ಹೊಸ ಹಾರ್ಲೆ ಡೇವಿಡ್ಸನ್ ಸ್ಪೋರ್ಟ್‌ಸ್ಟರ್ ಎಸ್ ಕ್ರೂಸರ್ ಬೈಕ್

ಈ ಎಂಜಿನ್ ಅನ್ನು 6-ಸ್ಪೀಡ್ ಗೇರ್‌ಬಾಕ್ಸ್‌ಗೆ ಸ್ಲಿಪ್ಪರ್ ಕ್ಲಚ್‌ನೊಂದಿಗೆ ಜೋಡಿಸಲಾಗಿದೆ. ಇನ್ನು ಈ ಬೈಕಿನಲ್ಲಿ ರೋಡ್, ಸ್ಪೋರ್ಟ್ಸ್ ಮತ್ತು ರೈನ್ ಎಂಬ ಮೂರು ರೈಡಿಂಗ್ ಮೋಡ್ ಗಳನ್ನು ಒಳಗೊಂಡಿದೆ.

ಅನಾವರಣವಾಯ್ತು ಹೊಸ ಹಾರ್ಲೆ ಡೇವಿಡ್ಸನ್ ಸ್ಪೋರ್ಟ್‌ಸ್ಟರ್ ಎಸ್ ಕ್ರೂಸರ್ ಬೈಕ್

ಹೊಸ ಹಾರ್ಲೆ ಡೇವಿಡ್ಸನ್ ಸ್ಪೋರ್ಟ್‌ಸ್ಟರ್ ಎಸ್ ಬೈಕಿನ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ 43 ಎಂಎಂ ಸಂಪೂರ್ಣ ಹೊಂದಾಣಿಕೆ ಮಾಡಬಹುದಾದ ಶೋವಾ ಫೋರ್ಕ್ ಮತ್ತು ಹಿಂಭಾಗದಲ್ಲಿ ಶೋವಾ ಪಿಗ್ಗಿಬ್ಯಾಕ್ ಪ್ರಿ ಲೊಡ್ ಸೆಟಪ್ ಅನ್ನು ಹೊಂದಿದೆ.

ಅನಾವರಣವಾಯ್ತು ಹೊಸ ಹಾರ್ಲೆ ಡೇವಿಡ್ಸನ್ ಸ್ಪೋರ್ಟ್‌ಸ್ಟರ್ ಎಸ್ ಕ್ರೂಸರ್ ಬೈಕ್

ಈ ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ 320 ಎಂಎಂ ಡಿಸ್ಕ್ ಬ್ರೇಕ್‌ನಿಂದ ಬ್ರೆಂಬೊ ರೇಡಿಯಲ್ 4-ಪಿಸ್ಟನ್ ಕ್ಯಾಲಿಪರ್ ಮತ್ತು ಹಿಂಭಾಗದಲ್ಲಿ 2-ಪಿಸ್ಟನ್ ಬ್ರೆಂಬೊ ಕ್ಯಾಲಿಪರ್‌ನೊಂದಿಗೆ 260 ಎಂಎಂ ಡಿಸ್ಕ್ ಬ್ರೇಕ್ ಅನ್ನು ಹೊಂದಿದೆ.

ಅನಾವರಣವಾಯ್ತು ಹೊಸ ಹಾರ್ಲೆ ಡೇವಿಡ್ಸನ್ ಸ್ಪೋರ್ಟ್‌ಸ್ಟರ್ ಎಸ್ ಕ್ರೂಸರ್ ಬೈಕ್

ಈ ಬೈಕಿನಲ್ಲಿ ಕಾರ್ನೆರಿಂಗ್ ವರ್ಧಿತ ಡ್ರ್ಯಾಗ್-ಟಾರ್ಕ್ ಸ್ಲಿಪ್ ಕಂಟ್ರೋಲ್ ಸಿಸ್ಟಂ, ವರ್ಧಿತ ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್ (ಸಿ-ಎಬಿಎಸ್), ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಂ ( ಫ್ರಂಟ್-ವೀಲ್ ಲಿಫ್ಟ್ ತಗ್ಗಿಸುವಿಕೆ (ಎಫ್‌ಎಲ್‌ಎಂ) ಯೊಂದಿಗೆ ಟಿಪಿಎಂಎಸ್) ಮತ್ತು ಕಾರ್ನರಿಂಗ್ ವರ್ಧಿತ ಟ್ರ್ಯಾಕ್ಷನ್ ಕಂಟ್ರೋಲ್ (ಸಿ-ಟಿಸಿಎಸ್) ಅನ್ನು ಹೊಂದಿದೆ.

ಅನಾವರಣವಾಯ್ತು ಹೊಸ ಹಾರ್ಲೆ ಡೇವಿಡ್ಸನ್ ಸ್ಪೋರ್ಟ್‌ಸ್ಟರ್ ಎಸ್ ಕ್ರೂಸರ್ ಬೈಕ್

ಹಾರ್ಲೆ ಡೇವಿಡ್ಸನ್ ಸ್ಪೋರ್ಟ್‌ಸ್ಟರ್ ಎಸ್ ಕ್ರೂಸರ್ ಬೈಕ್ ಸ್ಟೋನ್ ವಾಶ್ಡ್ ವೈಟ್ ಪರ್ಲ್, ಮಿಡ್ನೈಟ್ ಕ್ರಿಮ್ಸನ್ ಮತ್ತು ವಿವಿದ್ ಬ್ಲ್ಯಾಕ್ ಎಂಬ ಮೂರು ಬಣ್ಣಗಳ ಆಯ್ಜೆಗಳನ್ನು ಒಳಗೊಂಡಿದೆ.

ಅನಾವರಣವಾಯ್ತು ಹೊಸ ಹಾರ್ಲೆ ಡೇವಿಡ್ಸನ್ ಸ್ಪೋರ್ಟ್‌ಸ್ಟರ್ ಎಸ್ ಕ್ರೂಸರ್ ಬೈಕ್

ಈ ಬೈಕಿನಲ್ಲಿ ಯತಾಕಾರದ ಎಲ್‌ಇಡಿ ಹೆಡ್‌ಲ್ಯಾಂಪ್, ಟಿಯರ್‌ಡ್ರಾಪ್ ಇಂಧನ ಟ್ಯಾಂಕ್, ವಿಶಾಲ ಹ್ಯಾಂಡಲ್‌ಬಾರ್‌ಗಳು ಮತ್ತು ಫ್ಲಾಟ್ ಸೀಟ್. ಕಂಚಿನ ಎಂಜಿನ್ ಹೆಡ್, ಬಾಬ್ ಕಟ್ ಫೆಂಡರ್‌ಗಳು ಮತ್ತು ಟೈಲ್-ಪೈಪ್ ಅನ್ನು ಹೊಂದಿದೆ. ಈ ಬೈಕ್ ಸ್ಪೋರ್ಟಿ ಲುಕ್ ಅನ್ನು ಹೊಂದಿದೆ.

Most Read Articles

Kannada
English summary
Harley Davidson Sportster S Revealed. Read In Kannada.
Story first published: Wednesday, July 14, 2021, 20:23 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X