ಭಾರತದಲ್ಲಿ ಕೈಗೆಟುಕುವ ದರದಲ್ಲಿ ಹೊಸ Honda CB200X ಅಡ್ವೆಂಚರ್ ಬೈಕ್ ಬಿಡುಗಡೆ

ಜನಪ್ರಿಯ ದ್ವಿಚಕ್ರ ತಯಾರಕ ಕಂಪನಿಯಾದ ಹೋಂಡಾ ಟೂ ವ್ಹೀಲರ್ಸ್ ಇಂಡಿಯಾ ಕಂಪನಿಯು ತನ್ನ ಹೊಸ CB200X ಅಡ್ವೆಂಚರ್ ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ Honda CB200X ಅಡ್ವೆಂಚರ್ ಬೈಕನ್ನು ಎಕ್ಸ್ ಶೋರೂಂ ಪ್ರಕಾರ ರೂ.1.44 ಲಕ್ಷಗಳಾಗಿದೆ.

ಭಾರತದಲ್ಲಿ ಕೈಗೆಟುಕುವ ದರದಲ್ಲಿ ಹೊಸ Honda CB200X ಅಡ್ವೆಂಚರ್ ಬೈಕ್ ಬಿಡುಗಡೆ

ಹೊಸ Honda CB200X ಅಡ್ವೆಂಚರ್ ಬೈಕಿನ ಖರೀದಿಗಾಗಿ ಬುಕ್ಕಿಂಗ್ ಆಗಿ ಪ್ರಾರಂಭಿಸಿದ್ದಾರೆ. ಈ ಅಡ್ವೆಂಚರ್ ಬೈಕಿನ ಖರೀದಿಗಾಗಿ ಆನ್‌ಲೈನ್ ಅಥವಾ ಡೀಲರ್ ಬಳಿ ತೆರಳಿ ಬುಕ್ಕಿಂಗ್ ಮಾಡಿಕೊಳ್ಳಬಹುದು. ಈ CB200X ಬೈಕ್ ಅಡ್ವಂಚರ್-ಟೂರರ್ ವಿಭಾಗದಲ್ಲಿ ಇರಿಸಲಾಗಿದೆ. ಈ ಬೈಕಿನಲ್ಲಿ ಗಾಳಿಯಿಂದ ರಕ್ಷಣೆ ಪಡೆಯಲು ಎತ್ತರದ ವಿಂಡ್‌ಸ್ಕ್ರೀನ್ ಅನ್ನು ನೀಡಿದೆ. ಈ ಬೈಕಿನ ಹೆಚ್ಚಿನ ಗ್ರೌಂಡ್ ಕ್ಲಿಯರೆನ್ಸ್ ಅನ್ನು ಹೊಂದಿದೆ. ಇದರಲ್ಲಿ ಆಫ್-ರೋಡ್ ಕಾರ್ಯಕ್ಷಮತೆಗಾಗಿ ಹಲವಾರು ಫೀಚರ್ಸ್ ಗಳನ್ನು ನೀಡಲಾಗಿದೆ.

ಭಾರತದಲ್ಲಿ ಕೈಗೆಟುಕುವ ದರದಲ್ಲಿ ಹೊಸ Honda CB200X ಅಡ್ವೆಂಚರ್ ಬೈಕ್ ಬಿಡುಗಡೆ

ಈ ಹೊಸ Honda CB200X ಅಡ್ವೆಂಚರ್ ಬೈಕ್ ಎಲ್‌ಇಡಿ ಹೆಡ್‌ಲ್ಯಾಂಪ್‌ಗಳು, ಎಲ್‌ಇಡಿ ಟೈಲ್‌ಲ್ಯಾಂಪ್‌ಗಳು, ನಕಲ್ ಗಾರ್ಡ್‌ಗಳು, ಸ್ಪ್ಲಿಟ್-ಸೀಟ್‌ಗಳು ಮತ್ತು ಹಝರ್ಡ್ ಲೈಟ್ ಅನ್ನು ಹೊಂದಿದೆ. ಇನ್ನು ಈ ಬೈಕಿನಲ್ಲಿ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯನ್ನು ಹೆಚ್ಚಿನ ಮಾಹಿತಿಯನ್ನು ನೀಡುತ್ತದೆ.

ಭಾರತದಲ್ಲಿ ಕೈಗೆಟುಕುವ ದರದಲ್ಲಿ ಹೊಸ Honda CB200X ಅಡ್ವೆಂಚರ್ ಬೈಕ್ ಬಿಡುಗಡೆ

ಇನ್ನು ಈ ಬೈಕಿನ ಎರೋಗಾನಾಮಿಕ್ ಇಗ್ನಿಷನ್ ಕೀಯನ್ನು ಟ್ಯಾಂಕ್ ಮೇಲೆ ಇರಿಸಲಾಗಿದೆ. ಈ Honda CB200X ಬೈಕಿನಲ್ಲಿ ಎಂಜಿನ್ ಅನ್ನು ಹಾರ್ನೆಟ್ 2.0 ನಿಂದ ಎರವಲು ಪಡೆಯಲಾಗಿದೆ. ಈ ಬೈಕಿನಲ್ಲಿ 184 ಸಿಸಿ ಸಿಂಗಲ್ ಸಿಲಿಂಡರ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 17 ಬಿಹೆಚ್‍ಪಿ ಪವರ್ ಮತ್ತು 16 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಭಾರತದಲ್ಲಿ ಕೈಗೆಟುಕುವ ದರದಲ್ಲಿ ಹೊಸ Honda CB200X ಅಡ್ವೆಂಚರ್ ಬೈಕ್ ಬಿಡುಗಡೆ

ಈ ಎಂಜಿನ್ ಅನ್ನು 5-ಸ್ಪೀಡ್ ಗೇರ್‌ಬಾಕ್ಸ್‌ನೊಂದಿಗೆ ಜೋಡಿಸಲಾಗಿದೆ. ಇದರೊಂದಿಗೆ ಈ ಬೈಕಿನಲ್ಲಿ ಎಲೆಕ್ಟ್ರಾನಿಕ್ ರೈಡರ್ ಏಡ್‌ಗಳ ವಿಷಯದಲ್ಲಿ, CB200X ಕೇವಲ ಡ್ಯುಯಲ್-ಚಾನೆಲ್ ABS ಅನ್ನು ಹೊಂದಿದೆ. ಇನ್ನು ಈ ಅಡ್ವೆಂಚರ್ ಬೈಕಿನಲ್ಲಿ ಡೈಮೆಂಡ್ ಟೈಪ್ ಫ್ರೇಮ್ ಅನ್ನು ಹೊಂದಿದೆ. ಇದು ಈ ಅಡ್ವೆಂಚರ್ ಬೈಕನ್ನು ಉತ್ತಮ ನಿಯಂತ್ರಣ ಮತ್ತು ಕಾರ್ನರ್ ಗಳಲ್ಲಿ ಉತ್ತಮ ನಿಯಂತ್ರಣದಲ್ಲಿ ಸಾಗಲು ಸಹಕಾರಿಯಾಗಿರುತ್ತದೆ.

ಭಾರತದಲ್ಲಿ ಕೈಗೆಟುಕುವ ದರದಲ್ಲಿ ಹೊಸ Honda CB200X ಅಡ್ವೆಂಚರ್ ಬೈಕ್ ಬಿಡುಗಡೆ

ಹೊಸ Honda CB200X ಅಡ್ವೆಂಚರ್ ಬೈಬೈಕಿನ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ ಅಪ್ ಸೈಡ್ ಡೌನ್ ಯುಎಸ್ಡಿ ಫೋರ್ಕ್ ಮತ್ತು ಹಿಂಭಾಗದಲ್ಲಿ ಮೊನೊಶಾಕ್ ಸೆಟಪ್ ಅನ್ನು ಹೊಂದಿರಬಹುದು. ಇನ್ನು ಈ ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ 276 ಎಂಎಂ ಪೆಟಲ್ ಡಿಸ್ಕ್ ಬ್ರೇಕ್ ಹಿಂಭಾಗದಲ್ಲಿ 220 ಎಂಎಂ ಪೆಟಲ್ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಲಾಗಿದೆ.

ಭಾರತದಲ್ಲಿ ಕೈಗೆಟುಕುವ ದರದಲ್ಲಿ ಹೊಸ Honda CB200X ಅಡ್ವೆಂಚರ್ ಬೈಕ್ ಬಿಡುಗಡೆ

ಇನ್ನು ಈ ಹೊಸ Honda CB200X ಬೈಕಿನಲ್ಲಿ ಎಂಜಿನ್ ಕೌಲ್ ಮತ್ತು ಡ್ಯುಯಲ್ ಪರ್ಪಸ್ ಟೈರ್‌ಗಳನ್ನು ಹೊಂದಿದೆ ಮತ್ತು ಹಾರ್ನೆಟ್ 2.0 ಯಿಂದ ಬಹುತೇಕ ಸಮತಟ್ಟಾದ ಹ್ಯಾಂಡಲ್‌ಬಾರ್ ಸೆಟಪ್‌ಗಿಂತ ಭಿನ್ನವಾಗಿ, ಹೋಂಡಾ CB200X ನೇರವಾದ ಹ್ಯಾಂಡಲ್‌ಬಾರ್ ಸೆಟಪ್ ಅನ್ನು ಹೊಂದಿದ್ದು ಅದು ಆನ್ ಮತ್ತು ಆಫ್ ರೋಡಿಂಗ್‌ಗೆ ಸಹಾಯ ಮಾಡುತ್ತದೆ.

ಭಾರತದಲ್ಲಿ ಕೈಗೆಟುಕುವ ದರದಲ್ಲಿ ಹೊಸ Honda CB200X ಅಡ್ವೆಂಚರ್ ಬೈಕ್ ಬಿಡುಗಡೆ

ಇನ್ನು ಈ ಬೈಕಿನ ಮುಂಭಾಗದಲ್ಲಿ 110/70 ಟೈರ್ ನೊಂದಿಗೆ 17 ಇಂಚಿನ ಅಲಾಯ್ ವ್ಹೀಲ್ ಗಳನ್ನು ಹೊಂದಿದ್ದರೆ, ಹಿಂಭಾಗದಲ್ಲಿ : 140/70 ಟೈರ್ ನೊಂದಿಗೆ 17 ಇಂಚಿನ ಅಲಾಯ್ ವ್ಹೀಲ್ ಗಳನ್ನು ಹೊಂದಿವೆ.

ಭಾರತದಲ್ಲಿ ಕೈಗೆಟುಕುವ ದರದಲ್ಲಿ ಹೊಸ Honda CB200X ಅಡ್ವೆಂಚರ್ ಬೈಕ್ ಬಿಡುಗಡೆ

ಇನ್ನು ಹೋಂಡಾ ಮೋಟಾರ್‌ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ಕಂಪನಿಯು ತನ್ನ 2021ರ ಜುಲೈ ತಿಂಗಳ ಮಾರಾಟ ವರದಿಯನ್ನು ಇತ್ತೀಚೆಗೆ ಬಹಿರಂಗಪಡಿಸಸಲಾಗಿತ್ತು. ಈ ಮಾರಾಟ ವರದಿಯ ಪ್ರಕಾರ, ಕಳೆದ ತಿಂಗಳು ಹೋಂಡಾ ಕಂಪನಿಯು 3.85 ಲಕ್ಷ ಯೂನಿಟ್ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದೆ. ಕಳೆದ ತಿಂಗಳು ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ 3,40,133 ಯುನಿಟ್ ಗಳನ್ನು ದೇಶಿಯ ಮಾರುಕಟ್ಟೆಯಲ್ಲಿ ಮಾರಾಟಗೊಳಿಸಿದೆ.

ಭಾರತದಲ್ಲಿ ಕೈಗೆಟುಕುವ ದರದಲ್ಲಿ ಹೊಸ Honda CB200X ಅಡ್ವೆಂಚರ್ ಬೈಕ್ ಬಿಡುಗಡೆ

ಉಳಿದ 45,400 ಯುನಿಟ್ ಗಳನ್ನು ರಫ್ತು ಮಾಡಿದೆ. 2021ರ ಜೂನ್ ಇದರ ಮಾರಾಟದ ಹೆಚ್ಚಳವು ಶೇ.66 ರಷ್ಟಿದೆ. ಕಳೆದ ತಿಂಗಳ ಮಾರಾಟದಲ್ಲಿ ಆಕ್ಟಿವಾ 6ಜಿ ಮತ್ತು ಶೈನ್ ಮಾದರಿಗಳು ಹೋಂಡಾ ಕಂಪನಿಗೆ ಹೆಚ್ಚಿನ ಕೊಡುಗೆಯನ್ನು ನೀಡಿದೆ. ಹೋಂಡಾ ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಉತ್ತಮ ಬೆಳವಣಿಗೆಯನ್ನು ಕಂಡಿದೆ. ಇನ್ನು ಈ ಹೊಸ ಹೊಸ ಹೋಂಡಾ ಎನ್‌ಎಕ್ಸ್200 ಅಡ್ವೆಂಚರ್ ಬೈಕ್ ಬಿಡುಗಡೆಯಾದ ಬಳಿಕ ಮಾರಾಟ ಮತ್ತಷ್ಟು ಬೆಳವಣಿಗೆಯನ್ನು ಸಾಧಿಸಲು ನೆರವಾಗುತ್ತದೆ.

ಭಾರತದಲ್ಲಿ ಕೈಗೆಟುಕುವ ದರದಲ್ಲಿ ಹೊಸ Honda CB200X ಅಡ್ವೆಂಚರ್ ಬೈಕ್ ಬಿಡುಗಡೆ

ಕೊನೆಗೂ ಹೋಂಡಾ ತನ್ನ ಎಂಟ್ರಿ ಲೆವೆಲ್ ಅಡ್ವೆಂಚರ್-ಟೂರರ್ CB200X ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ತಂದಿದೆ. ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಇತರ ಅಡ್ವೆಂಚರ್ ಬೈಕ್ ಹೆಚ್ಚಿನ ಸಾಮರ್ಥ್ಯದ ಮಾದರಿಗಳಿಗಿರುವುದರಿಂದ ಇದಕ್ಕೆ ಯಾವುದೇ ನೇರ ಪ್ರತಿಸ್ಪರ್ಧಿಗಳಿಲ್ಲ, Honda CB200X ಭಾರತೀಯ ಮಾರುಕಟ್ಟೆಯಲ್ಲಿ Xpulse 200T ಬೈಕಿಗೆ ಸ್ವಲ್ಪ ಮಟ್ಟಿಗೆ ಪೈಪೋಟಿ ನೀಡುತ್ತದೆ.

Article Published On: Thursday, August 19, 2021, 14:24 [IST]
English summary
New honda cb200x launched in india booking price features engine details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+