ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಹೋಂಡಾ ಸಿಬಿ300ಆರ್ ಬೈಕ್
ಹೋಂಡಾ ಮೋಟಾರ್‌ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ಕಂಪನಿಯು ತನ್ನ ಪ್ರೀಮಿಯಂ ಸಿಬಿ ಸರಣಿಯನ್ನು ಭಾರತದಲ್ಲಿ ವಿಸ್ತರಿಸುತ್ತಿದೆ. ಹೋಂಡಾ ಕಂಪನಿಯು ಭಾರತದಲ್ಲಿ ಸಿಬಿ ಸರಣಿಯ ಹೈನೆಸ್ ಸಿಬಿ350 ಮತ್ತು ಸಿಬಿ 350 ಆರ್‌ಎಸ್ ಬೈಕ್‌ಗಳನ್ನು ಈಗಾಗಲೇ ಬಿಡುಗಡೆಗೊಳಿಸಲಾಗಿದೆ.

ಇದೀಗ ಹೋಂಡಾ ಕಂಪನಿಯು ತನ್ನ ಸಿಬಿ300ಆರ್ ಬೈಕನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಬಹುದೆಂದು ವರದಿಗಳಾಗಿದೆ. ಹೋಂಡಾ ಕಂಪನಿಯು ಸಿಬಿ300ಆರ್ ಬೈಕನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ನಿರ್ಧರಿಸಿದರೆ ಅದನ್ನು ಬ್ರ್ಯಾಂಡ್‌ನ ಪ್ರೀಮಿಯಂ ಬಿಗ್‌ವ್ಹೀಂಗ್ ಡೀಲರುಗಳ ಮೂಲದ ಮಾರಾಟ ಮಾಡುವುದನ್ನು ಮುಂದುವರಿಸಲಾಗುತ್ತದೆ. ಹಿಂದಿನ ಸಿಬಿ300ಆರ್ ಬಿಎಸ್4 ಮಾದರಿಯಲ್ಲಿ ಇದ್ದ ಅದೇ ಎಂಜಿನ್ ಅನ್ನು ಬಿಎಸ್6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿ ಮುಂದುವರೆಸಬಹುದು.

ಬಿಎಸ್-4 ಹೋಂಡಾ ಸಿಬಿ300ಆರ್ ಬೈಕಿನಲ್ಲಿ ಲಿಕ್ವಿಡ್-ಕೂಲ್ಡ್, ಸಿಂಗಲ್ ಸಿಲಿಂಡರ್, 286ಸಿಸಿ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 8000 ಆರ್‌ಪಿಎಂನಲ್ಲಿ ಗರಿಷ್ಠ 31.4 ಬಿಹೆಚ್‌ಪಿ ಮತ್ತು 6500 ಆರ್‌ಪಿಎಂನಲ್ಲಿ 27 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍ಮಾಸ್ಟರ್ ಬೈಕ್

ಈ ಎಂಜಿನ್ ನೊಂದಿಗೆ 6-ಸ್ಪೀಡ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗುತ್ತದೆ. ಇನ್ನು ಹೊಸ ಹೋಂಡಾ ಸಿಬಿ300ಆರ್ ಬೈಕಿನಲ್ಲಿ ನಿರೀಕ್ಷಿಸಬಹುದಾದ ಒಂದು ನವೀಕರಣವೆಂದರೆ ಸ್ಲಿಪ್-ಅಸಿಸ್ಟ್ ಕ್ಲಚ್ ಅನ್ನು ಸೇರಿಸಬಹುದು.

ಇನ್ನು ಟ್ರ್ಯಾಕ್ಷನ್ ಕಂಟ್ರೋಲ್ ಮತ್ತು ಹೋಂಡಾದ ರೋಡ್ ಸಿಂಕ್ ವಾಯ್ಸ್ ಅಸಿಸ್ಟೆಂಟ್ ಮತ್ತು ಕನೆಕ್ಟಿವಿಟಿ ತಂತ್ರಜ್ಞಾನವನ್ನು ಬಿಎಸ್-6 ಹೋಂಡಾ ಸಿಬಿ300ಆರ್ ಬೈಕ್ ಪಡೆದುಕೊಳ್ಳಬಹುದು. ಇನ್ನು ಉಳಿದಂತೆ ಯಾವುದೇ ಪ್ರಮುಖ ಬದಲಾವಣೆಗಳನ್ನು ಹೊಂದಿರುವುದಿಲ್ಲವೆಂದು ನಿರೀಕ್ಷಿಸುತ್ತೇವೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಹೊಸ ಹೋಂಡಾ ಸಿಬಿ300ಆರ್ ಬೈಕಿನಲ್ಲಿ ಓಲ್ಡ್ ಸ್ಕೂಲ್ ವಿನ್ಯಾಸ ವೃತ್ತಾಕಾರದ ಹೆಡ್‌ಲ್ಯಾಂಪ್‌ಗಳು ಮತ್ತು ಆಧುನಿಕ ಎಲ್‌ಇಡಿ ತಂತ್ರಜ್ಞಾನದ ಮಿಶ್ರಣದಿಂದ ವೈವಿಧ್ಯಮಯ ವಿನ್ಯಾಸದಿಂದ ಕೂಡಿರುತ್ತದೆ. ಇದಲ್ಲದೆ ಈ ಬೈಕ್ ಅಪ್-ರೈಟ್ ರೈಡರ್ ಏರೋಗಾಮಿಕ್ ಸರಳ ವಿನ್ಯಾಸವನ್ನು ಸಹ ಹೊಂದಿದೆ.

ಇನ್ನು ಈ ಹೊಸ ಬೈಕಿನಲ್ಲಿ ಮಸ್ಕ್ಲರ್ ಲುಕ್ ಫ್ಯೂಯಲ್ ಟ್ಯಾಂಕ್ ಮತ್ತು ಸಂಪೂರ್ಣ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಒಳಗೊಂಡಿದೆ. ಇನ್ನು ಈ ಬೈಕಿನ ಸಸ್ಪೆಂಕ್ಷನ್ ಸೆಟಪ್ ಗಾಗಿ, ಮುಂಭಾಗದಲ್ಲಿ ಯುಎಸ್ಡಿ ಫ್ರಂಟ್ ಫೋರ್ಕ್ಸ್ ಮತ್ತು ಹಿಂಭಾಗದಲ್ಲಿ ಮೊನೊ-ಶಾಕ್ ಸೆಟಪ್ ಅನ್ನು ಹೊಂದಿದೆ.
MOST READ: ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಎಡಿಷನ್ ಬಿಡುಗಡೆ

ಇನ್ನು ಈ ಹೊಸ ಹೋಂಡಾ ಸಿಬಿ300ಆರ್ ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ ಮತ್ತು ಹಿಂಭಾಗದಲ್ಲಿ ಡಿಸ್ಕ್ ಬ್ರೇಕ್ ಅನ್ನು ಆಳವಡಿಸಲಾಗಿದೆ, ಇದರೊಂದಿಗೆ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ಜೋಡಿಸಲಾಗುತ್ತದೆ.

ಹೊಸ ಹೋಂಡಾ ಸಿಬಿ300ಆರ್ ಬೈಕ್ ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಬಹುದು ಎಂದು ನಿರೀಕ್ಷಿಸುತ್ತೇವೆ, ಈ ಹೊಸ ಹೋಂಡಾ ಸಿಬಿ300ಆರ್ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದರೆ ಮಹೀಂದ್ರಾ ಮೊಜೊ, ಬಿಎಂಡಬ್ಲ್ಯು ಜಿ310ಆರ್ ಮತ್ತು ಟಿವಿಎಸ್ ಅಪಾಚೆ 310 ಆರ್ ಬೈಕ್ ಗಳಿಗೆ ಪೈಪೋಟಿಯನ್ನು ನೀಡುತ್ತದೆ.


Click it and Unblock the Notifications