2021ರ ಹೋಂಡಾ ಸಿಬಿ350 ಆರ್‌ಎಸ್ ಬೈಕ್ ಬಿಡುಗಡೆ

ಹೋಂಡಾ ಮೋಟಾರ್‌ಸೈಕಲ್ ಇಂಡಿಯಾ ಕಂಪನಿಯು ತನ್ನ ಹೊಚ್ಚ ಹೊಸ ಹೈನೆಸ್ ಸಿಬಿ350 ಬೈಕ್ ಮಾದರಿಯನ್ನು ಆಧರಿಸಿ ಹೊಸ ಆರ್‌ಎಸ್ ವರ್ಷನ್ ಬಿಡುಗಡೆ ಮಾಡಿದ್ದು, ಕೆಫೆ ರೇಸರ್ ವೈಶಿಷ್ಟ್ಯತೆ ಹೊಂದಿರುವ ಹೊಸ ಸಿಬಿ350 ಆರ್‌‌ಎಸ್ ಮಾದರಿಯು ಗ್ರಾಹಕರ ಪ್ರಮುಖ ಆಕರ್ಷಣೆಯಾಗಲಿದೆ.

2021ರ ಹೋಂಡಾ ಸಿಬಿ350 ಆರ್‌ಎಸ್ ಬೈಕ್ ಬಿಡುಗಡೆ

ಈ ಹೊಸ ಹೋಂಡಾ ಸಿಬಿ350 ಆರ್‌‌ಎಸ್ ಬೈಕಿನ ಬೆಲೆಯು ರೂ.1.96 ಲಕ್ಷಗಳಾಗಿದೆ. ಈ ಹೊಸ ಬೈಕನ್ನು ಬಿಗ್‌ವ್ಹೀಂಗ್ ಪ್ರೀಮಿಯಂ ಡೀಲರ್‌ಶಿಪ್ ನೆಟ್‌ವರ್ಕ್ ಮೂಲಕ ಮಾರಾಟ ಮಾಡಲಾಗುತ್ತದೆ. ಸದ್ಯ ಭಾರತೀಯ ಮಾರುಕಟ್ಟೆಯಲ್ಲಿ 350ಸಿಸಿ ವಿಭಾಗದಲ್ಲಿ ರಾಯಲ್ ಎನ್‌ಫೀಲ್ಡ್ ಪ್ರಾಬಲ್ಯ ಹೊಂದಿದೆ. ಇದರಿಂದ ಹೋಂಡಾ ರಾಯಲ್ ಎನ್‌ಫೀಲ್ಡ್ ಬೈಕಿಗೆ ಪ್ರಬಲ ಪೈಪೋಟಿಯನ್ನು ನೀಡಲು ಹೈನೆಸ್ ಸಿಬಿ350 ಬಳಿಕ ಅದೇ ವಿಭಾಗದಲ್ಲಿ ಮತ್ತೊಂದು ಬೈಕನ್ನು ಬಿಡುಗಡೆಗೊಳಿಸಿದೆ.

2021ರ ಹೋಂಡಾ ಸಿಬಿ350 ಆರ್‌ಎಸ್ ಬೈಕ್ ಬಿಡುಗಡೆ

2021ರ ಹೋಂಡಾ ಸಿಬಿ350 ಆರ್‌ಎಸ್ ಬೈಕಿನ ವಿನ್ಯಾಸದ ಬಗ್ಗೆ ಹೇಳುವುದಾದರೆ, ಬೃಹತ್ ಇಂಧನ ಟ್ಯಾಂಕ್ 7-ವೈ ಆಕಾರದ ಅಲಾಯ್ ವ್ಹೀಲ್ ಗಳ ಮೇಲೆ ದಪ್ಪ ಹೋಂಡಾ ಬ್ಯಾಡ್ಜ್ ಅನ್ನು ಹೊಂದಿದೆ, ಇದು ವಿಶಿಷ್ಟವಾದ ಆಧುನಿಕ ರೋಡ್ಸ್ಟರ್ ಲುಕ್ ಅನ್ನು ಹೊಂದಿದೆ.

MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

2021ರ ಹೋಂಡಾ ಸಿಬಿ350 ಆರ್‌ಎಸ್ ಬೈಕ್ ಬಿಡುಗಡೆ

ಇದರೊಂದಿಗೆ ದುಂಡಗಿನ ಆಕಾರದ ಎಲ್‌ಇಡಿ ಹೆಡ್‌ಲ್ಯಾಂಪ್, ಕಣ್ಣಿನ ಆಕಾರದ ಎಲ್‌ಇಡಿ ವಿಂಕರ್‌ಗಳು ಮತ್ತು ಅಂಡರ್ ಸೀಟ್ ನಯವಾದ ಎಲ್‌ಇಡಿ ಟೈಲ್ ಲ್ಯಾಂಪ್ ಅನ್ನು ಸಹ ಪಡೆಯುತ್ತದೆ. ಇನ್ನು ಹೊಸ ಬೈಕ್ ಮುಂಭಾಗ ಮತ್ತು ಹಿಂಭಾಗದಲ್ಲಿ ಹಗುರವಾದ ಬ್ಲ್ಯಾಕ್ ಫೆಂಡರ್ ಅನ್ನು ಸಹ ಪಡೆಯುತ್ತದೆ, ಇದು ಒಟ್ಟಾರೆ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇನ್ನು ಸ್ಪೋರ್ಟಿ ಲುಕಿಂಗ್ ಗ್ರಾಬ್ ರೈಲ್ ಅನ್ನು ಹೊಂದಿದೆ.

2021ರ ಹೋಂಡಾ ಸಿಬಿ350 ಆರ್‌ಎಸ್ ಬೈಕ್ ಬಿಡುಗಡೆ

2021ರ ಹೋಂಡಾ ಸಿಬಿ350 ಆರ್‌ಎಸ್ ಬೈಕಿನಲ್ಲಿ ಸಿಂಗಲ್-ಪಾಡ್ ಇನ್ಸ್ ಟ್ರೂಮೆಂಟ್ ಕನ್ಸೋಲ್ ಅನ್ನು ಅನಲಾಗ್ ಕೌಂಟರ್ ಮತ್ತು ಸಣ್ಣ ಡಿಜಿಟಲ್ ಡಿಸ್ ಪ್ಲೇಯನ್ನು ಅಳವಡಿಸಲಾಗಿದೆ. ಇದು ಕನ್ಸೋಲ್ ಎಚ್‌ಎಸ್‌ಟಿಸಿ, ಎಬಿಎಸ್, ಸೈಡ್ ಸ್ಟ್ಯಾಂಡ್ ಇಂಡಿಕೇಟರ್, ಇಕೋ ಇಂಡಿಕೇಟರ್, ರಿಯಲ್-ಟೈಮ್ ಮೈಲೇಜ್, ಸರಾಸರಿ ಮೈಲೇಜ್ ಮತ್ತು ಗೇರ್ ಪೋಷಿಸನ್ ವಿವರಗಳನ್ನು ನೀಡುತ್ತದೆ. ಇದು ಎಚ್‌ಎಸ್‌ವಿಸಿಎಸ್ (ಸ್ಮಾರ್ಟ್‌ಫೋನ್ ವಾಯ್ಸ್ ಕಂಟ್ರೋಲ್ ಸಿಸ್ಟಮ್) ಅನ್ನು ಒಳಗೊಂಡಿದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

2021ರ ಹೋಂಡಾ ಸಿಬಿ350 ಆರ್‌ಎಸ್ ಬೈಕ್ ಬಿಡುಗಡೆ

ಹೈನೆಸ್ ಸಿಬಿ350 ಬೈಕಿನಲ್ಲಿ ಇರುವ ಅದೇ 348.6ಸಿಸಿ, ಸಿಂಗಲ್-ಸಿಲಿಂಡರ್ ಏರ್-ಕೂಲ್ಡ್ ಎಂಜಿನ್ ಅನ್ನು ಈ ಹೊಸ ಬೈಕಿನಲ್ಲಿ ಅಳವಡಿಸಲಾಗಿದೆ. ಈ ಸಿಂಗಲ್ ಸಿಲಿಂಡರ್ ಎಂಜಿನ್ 5,500 ಆರ್‌ಪಿಎಂನಲ್ಲಿ 20.78 ಬಿಹೆಚ್‌ಪಿ ಪವರ್ ಮತ್ತು 3,000 ಆರ್‌ಪಿಎಂನಲ್ಲಿ 30 ಎನ್ಎಂ ಗರಿಷ್ಠ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

2021ರ ಹೋಂಡಾ ಸಿಬಿ350 ಆರ್‌ಎಸ್ ಬೈಕ್ ಬಿಡುಗಡೆ

ಈ ಎಂಜಿನ್ ಅನ್ನು 5-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದ್ದು. ಇದರೊಂದಿಗೆ ಸ್ಲಿಪ್ಪರ್ ಕ್ಲಚ್ ಅನ್ನು ಪಡೆಯುತ್ತದೆ, ಇದು ಕ್ಲಚ್ ಲಿವರ್ ಕಾರ್ಯಾಚರಣೆಯ ಹೊರೆ ಕಡಿಮೆಮಾಡಿ ಗೇರ್ ವರ್ಗಾವಣೆಯನ್ನು ಸುಗಮಗೊಳಿಸುತ್ತದೆ.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

2021ರ ಹೋಂಡಾ ಸಿಬಿ350 ಆರ್‌ಎಸ್ ಬೈಕ್ ಬಿಡುಗಡೆ

ಹೊಸ ಹೋಂಡಾ ಸಿಬಿ350 ಆರ್‌‌ಎಸ್ ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 310ಎಂಎಂ ಡಿಸ್ಕ್ ಬ್ರೇಕ್ ಅನ್ನು ನೀಡಿದರೆ, ಹಿಂಭಾಗದಲ್ಲಿ 240ಎಂಎಂ ಡಿಸ್ಕ್ ಬ್ರೇಕ್ ಅನ್ನು ನೀಡಿದೆ. ಇದರೊಂದಿಗೆ ಎಬಿಎಸ್(ಆಂಟಿ-ಲಾಕ್ ಬ್ರೇಕಿಂಗ್ ಸಿಸ್ಟಂ) ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.

2021ರ ಹೋಂಡಾ ಸಿಬಿ350 ಆರ್‌ಎಸ್ ಬೈಕ್ ಬಿಡುಗಡೆ

ಇನ್ನು ಹೊಸ ಹೋಂಡಾ ಸಿಬಿ350 ಆರ್‌ಎಸ್ ಬೈಕ್ ಹಾಫ್ ಡ್ಯುಪ್ಲೆಕ್ಸ್ ಕ್ರೆಡಲ್ ಚಾಸಿಸ್ ಅನ್ನು ಆಧರಿಸಿದೆ. ಇನ್ನು ಇದರ ಸಸ್ಪೆಂಕ್ಷನ್ ಸೆಟಪ್ ಗಾಗಿ, ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್ಸ್ ಮತ್ತು ಹಿಂಭಾಗದಲ್ಲಿ ಟ್ವಿನ್--ಹೈಡ್ರಾಲಿಕ್ ಅನ್ನು ಪಡೆಯುತ್ತದೆ.

2021ರ ಹೋಂಡಾ ಸಿಬಿ350 ಆರ್‌ಎಸ್ ಬೈಕ್ ಬಿಡುಗಡೆ

2021ರ ಹೋಂಡಾ ಸಿಬಿ350 ಆರ್‌ಎಸ್ ಬೈಕ್ ಬ್ಲ್ಯಾಕ್ ಜೊತೆ ಪರ್ಲ್ ಸ್ಪೋರ್ಟ್ಸ್ ಯೆಲ್ಲೋ ಮತ್ತು ರೆಡಿಯೆಂಟ್ ರೆಡ್ ಮೆಟಾಲಿಕ್ ಎಂಬ ಎರಡು ಬಣ್ಣಗಳನ್ನು ಒಳಗೊಂಡಿದೆ. ಹೋಂಡಾ ಸಿಬಿ350 ಆರ್‌ಎಸ್ ರೆಟ್ರೊ ಕ್ಲಾಸಿಕ್ ಬೈಕ್ ಆಗಿದ್ದು, ಮಾರ್ಡನ್ ತಂತ್ರಜ್ಞಾನವನ್ನು ಒಳಗೊಂಡಿದೆ

Most Read Articles

Kannada
English summary
Honda CB350RS Launched In Indian At Rs 1.96 Lakh. Read In Kananda.
Story first published: Tuesday, February 16, 2021, 14:08 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X