ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಹೋಂಡಾ ಸಿಬಿ500ಎಕ್ಸ್ ಅಡ್ವೆಂಚರ್ ಬೈಕ್

ಜಪಾನಿನ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಹೋಂಡಾ ಮೋಟಾರ್‌ಸೈಕಲ್ ಇತ್ತೀಚೆಗೆ ಸಿಬಿ350 ಆರ್‌‌ಎಸ್ ಸ್ಕ್ರ್ಯಾಂಬ್ಲರ್ ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತ್ತು. ಇದೀಗ ಹೊಸ ಅಡ್ವೆಂಚರ್ ಟೂರರ್ ಮಾದರಿಯನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಹೋಂಡಾ ಸಿಬಿ500ಎಕ್ಸ್ ಅಡ್ವೆಂಚರ್ ಬೈಕ್

ಹೋಂಡಾ ಕಂಪನಿಯು ಭಾರತೀಯ ಹೊಸ ಸಿಬಿ500ಎಕ್ಸ್ ಅಡ್ವೆಂಚರ್ ಬೈಕನ್ನು ಬಿಡುಗಡೆಗೊಳಿಸಲಿದೆ ಎಂದು ವರದಿಯಾಗಿದೆ. ಈ ಬೈಕಿನಲ್ಲಿ 500ಸಿಸಿ ಪ್ಯಾರಲಲ್-ಟ್ವಿನ್ ಎಂಜಿನ್ ಅನ್ನು ಹೊಂದಿರುತ್ತದೆ. ಈ ಎಂಜಿನ್ 47 ಬಿಹೆಚ್‍ಪಿ ಪವರ್ ಮತ್ತು 43 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯ ಹೊಂದಿರಲಿದೆ. ಇದು ಸ್ಲಿಪ್ಪರ್ ಕ್ಲಚ್ ನೊಂದಿಗೆ 6-ಸ್ಪೀಡ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗುತ್ತದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಹೋಂಡಾ ಸಿಬಿ500ಎಕ್ಸ್ ಅಡ್ವೆಂಚರ್ ಬೈಕ್

ಹೊಸ ಹೋಂಡಾ ಸಿಬಿ500ಎಕ್ಸ್ ಅಡ್ವೆಂಚರ್ ಬೈಕಿನ ಬೆಲೆಯು ಸುಮಾರು ರೂ.6 ಲಕ್ಷಗಳಾಗಿರಬಹುದು ಎಂದು ನಿರೀಕ್ಷಿಸುತ್ತೇವೆ. ಈ ಹೊಸ ಅಡ್ವೆಂಚರ್ ಬೈಕ್ ಪ್ಲಾಟ್‌ಫಾರ್ಮ್ ಮತ್ತು ಎಂಜಿನ್ ಅನ್ನು ಸಿಬಿ500ಎಫ್ ಪ್ಲಾಟ್‌ಫಾರ್ಮ್ ಮತ್ತು ಎಂಜಿನ್ ಅನ್ನು ಸಿಬಿ500ಎಫ್ ನೊಂದಿಗೆ ಹಂಚಿಕೊಳ್ಳುತ್ತದೆ.

MOST READ: ಯೂನಿಕಾರ್ನ್ ಬೈಕಿನ ಬೆಲೆ ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಹೋಂಡಾ ಸಿಬಿ500ಎಕ್ಸ್ ಅಡ್ವೆಂಚರ್ ಬೈಕ್

ಹೊಸ ಹೋಂಡಾ ಸಿಬಿ500ಎಕ್ಸ್ ಅಡ್ವೆಂಚರ್ ಬೈಕನ್ನು ಗ್ರ್ಯಾಂಡ್ ಪ್ರಿಕ್ಸ್ ರೆಡ್, ಮ್ಯಾಟ್ ಗನ್‌ಪೌಡರ್ ಬ್ಲ್ಯಾಕ್ ಮೆಟಾಲಿಕ್ ಮತ್ತು ಪರ್ಲ್ ಮೆಟಾಲಾಯ್ಡ್ ವೈಟ್ ಎಂಬ ಮೂರು ಬಣ್ಣಗಳ ಆಯ್ಕೆಯಲ್ಲಿ ಭಾತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಾಗುತ್ತದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಹೋಂಡಾ ಸಿಬಿ500ಎಕ್ಸ್ ಅಡ್ವೆಂಚರ್ ಬೈಕ್

ಇನ್ನು ಈ ಹೊಸ ಅಡ್ವೆಂಚರ್ ಬೈಕಿನ ಗೇರ್ ಬಾಕ್ಸ್ ಪೊಸಿಷನ್ ಮತ್ತು ಗೇರ್ ಶಿಫ್ಟ್ ಅಪ್ ಇಂಡಿಕೇಟರ್, ಎಲ್ಲಾ ಎಲ್ಇಡಿ ಲೈಟಿಂಗ್ ಸಿಸ್ಟಮ್, ದೊಡ್ಡ ಫೇರಿಂಗ್, ಡ್ಯುಯಲ್-ಚಾನೆಲ್ ಎಬಿಎಸ್, ಲಾಂಗ್ ಟ್ರಾವೆಲ್ ಫ್ರಂಟ್ ಸಸ್ಪೆಂಕ್ಷನ್ ಮತ್ತು ಇತ್ಯಾಧಿಗಳ ಮಾಹಿತಿ ಈ ಬೈಕಿನ ಇನ್ಸ್ ಟ್ರೂಮೆಂಟ್ ಕನ್ಸೋಲ್ ನಲ್ಲಿ ಪ್ರದರ್ಶೀಸುತ್ತದೆ.

MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಹೋಂಡಾ ಸಿಬಿ500ಎಕ್ಸ್ ಅಡ್ವೆಂಚರ್ ಬೈಕ್

ಇನ್ನು ಈ ಹೋಂಡಾ ಸಿಬಿ500ಎಕ್ಸ್ ಅಡ್ವೆಂಚರ್ ಬೈಕಿನ ಸೀಟ್ 830 ಎಂಎಂ ಎತ್ತರವನ್ನು ಹೊಂದಿದೆ. ಮುಂಭಾಗ ಮತ್ತು ಹಿಂಭಾಗದಲ್ಲಿ ಕ್ರಮವಾಗಿ 110 ಮತ್ತು 160 ವಿಭಾಗದ ಟೈರ್‌ಗಳೊಂದಿಗೆ 19 ಇಂಚು ಮತ್ತು 17 ಇಂಚಿನ ಅಲ್ಯೂಮಿನಿಯಂ ವ್ಹೀಲ್ ಗಳನ್ನು ಒಳಗೊಂಡಿರುತ್ತದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಹೋಂಡಾ ಸಿಬಿ500ಎಕ್ಸ್ ಅಡ್ವೆಂಚರ್ ಬೈಕ್

ಇನ್ನು ಈ ಹೊಸ ಹೋಂಡಾ ಅಡ್ವೆಂಚರ್ ಬೈಕಿನ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ ಪ್ರಿ-ಲೋಡ್ ಮಾಡಬಹುದಾದ ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗದಲ್ಲಿ 5-ಹಂತದ ಪ್ರಿ-ಲೋಡ್ ಹೊಂದಾಣಿಕೆ ಮಾಡಬಹುದಾದ ಮೊನೊಶಾಕ್ ಅನ್ನು ಒಳಗೊಂಡಿದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಹೋಂಡಾ ಸಿಬಿ500ಎಕ್ಸ್ ಅಡ್ವೆಂಚರ್ ಬೈಕ್

ಭಾರತೀಯ ಮಾರುಕಟ್ಟೆಯಲ್ಲಿ ಹೋಂಡಾ ರಾಯಲ್ ಎನ್‌ಫೀಲ್ಡ್ ಬೈಕಿಗೆ ಪ್ರಬಲ ಪೈಪೋಟಿಯನ್ನು ನೀಡಲು ಹೈನೆಸ್ ಸಿಬಿ350 ಬಳಿಕ ಅದೇ ವಿಭಾಗದಲ್ಲಿ ಮತ್ತೊಂದು ಬೈಕನ್ನು ಬಿಡುಗಡೆಗೊಳಿಸಿದೆ. ಈ ಹೊಸ ಸಿಬಿ350 ಆರ್‌‌ಎಸ್ ಸ್ಕ್ರ್ಯಾಂಬ್ಲರ್ ಬೈಕ್ ಹೈನೆಸ್ ಸಿಬಿ350 ಮಾದರಿಯನ್ನು ಆಧರಿಸಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಹೋಂಡಾ ಸಿಬಿ500ಎಕ್ಸ್ ಅಡ್ವೆಂಚರ್ ಬೈಕ್

ಇನ್ನು ಭಾರತೀಯ ಮಾರುಕಟ್ಟೆಯಲ್ಲಿ ಅಡ್ವೆಂಚರ್ ಬೈಕುಗಳಿಗೆ ಬೇಡಿಕೆ ಹೆಚ್ಚಾಗುತ್ತಿರುವುದಕ್ಕೆ ಹೋಂಡಾ ಹೊಸ ಅಡ್ವೆಂಚರ್ ಬೈಕನ್ನು ಬಿಡುಗಡೆಗೊಳಿಸಲು ಮುಂದಾಗಿದೆ. ಈ ಹೊಸ ಹೋಂಡಾ ಸಿಬಿ500ಎಕ್ಸ್ ಅಡ್ವೆಂಚರ್ ಬೈಕ್ ಈ ವರ್ಷದ ಏಪ್ರಿಲ್ ತಿಂಗಳಲ್ಲಿ ಬಿಡುಗಡೆಯಾಗಬಹುದೆಂದು ನಿರೀಕ್ಷಿಸುತ್ತೇವೆ.

Article Published On: Friday, February 19, 2021, 15:39 [IST]
English summary
Honda CB500X ADV India Launch. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+