ಬಿಡುಗಡೆಯಾಯ್ತು 58.3 ಕಿ.ಮೀ ಮೈಲೇಜ್ ನೀಡುವ ಹೋಂಡಾ ಡಿಯೋ ಸ್ಕೂಟರ್

ಜಪಾನ್ ಮೂಲದ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಹೋಂಡಾ ಡಿಯೋ ಸ್ಕೂಟರ್ ಅನ್ ಫಿಲಿಪೈನ್ಸ್‌ನ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ಡಿಯೋ ಸ್ಕೂಟರ್‌ನಲ್ಲಿ ಆಕರ್ಷಕ ಗ್ರಾಫಿಕ್ಸ್ ನೊಂದಿಗೆ ಸ್ಫೋರ್ಟಿ ಲುಕ್ ಅನ್ನು ಹೊಂದಿದೆ.

ಬಿಡುಗಡೆಯಾಯ್ತು 58.3 ಕಿ.ಮೀ ಮೈಲೇಜ್ ನೀಡುವ ಹೋಂಡಾ ಡಿಯೋ ಸ್ಕೂಟರ್

ಹೊಸ ಹೋಂಡಾ ಡಿಯೋ ಸ್ಕೂಟರ್ ಆಕರ್ಷಕ ವಿನ್ಯಾಸವನ್ನು ಹೊಂದಿರುವುದರಿಂದ ಹೆಚ್ಚಾಗಿ ಯುವ ಖರೀದಿದಾರರನ್ನು ಆಕರ್ಷಿಸುತ್ತದೆ. ಇದು ಲ್‌ಇಡಿ ಹೆಡ್‌ಲ್ಯಾಂಪ್ ಮತ್ತು ಟರ್ನ್ ಸಿಗ್ನಲ್‌ ಮತ್ತು ಎಲ್ಇಡಿ ಪೊಸಿಷನ್ ಲ್ಯಾಂಪ್ ಸಹ ಹೊಂದಿದೆ. ಇನ್ನು ಈ ಸ್ಕೂಟರ್‌ನಲ್ಲಿ ಆಕರ್ಷಕ ಗ್ರಾಫಿಕ್ಸ್ ಮತ್ತು ಸ್ಪೋರ್ಟಿ ಲೈನ್ ಗಳನ್ನು ಒಳಗೊಂಡಿದೆ. ಇನ್ನು ಈ ಹೊಸ ಹೋಂಡಾ ಡಿಯೋ ಸ್ಕೂಟರ್‌ನಲ್ಲಿ ಅಂಡರ್-ಸೀಟ್ 14.4 ಲೀಟರ್ ಸ್ಟೋರೆಂಜ್ ಸ್ಪೇಸ್ ಅನ್ನು ಹೊಂದಿದೆ.

ಬಿಡುಗಡೆಯಾಯ್ತು 58.3 ಕಿ.ಮೀ ಮೈಲೇಜ್ ನೀಡುವ ಹೋಂಡಾ ಡಿಯೋ ಸ್ಕೂಟರ್

ಹೋಂಡಾ ಡಿಯೋ ಸ್ಕೂಟರ್‍‍ನಲ್ಲಿ ಫುಲ್ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿದೆ. ಇದರಲ್ಲಿ ರೇಂಜ್, ಸರಾಸರಿ ಇಂಧನ ದಕ್ಷತೆ ಮತ್ತು ರಿಯಲ್ ಟೈಮ್ ಇಂಧನ ದಕ್ಷತೆಯ ವಿವರದ ಮಾಹಿತಿಯನ್ನು ಪ್ರದರ್ಶಿಸುತ್ತದೆ. ಇದಲ್ಲದೆ ಇದು ಟ್ರಿಪ್ ಮೀಟರ್, ಕ್ಲಾಕ್ ಮತ್ತು ಸರ್ವಿಸ್ ಇಂಡಿಕೇಟರ್ ಅನ್ನು ಕೂಡ ಪ್ರದರ್ಶಿಸುತ್ತದೆ.

MOST READ: ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಎಡಿಷನ್ ಬಿಡುಗಡೆ

ಬಿಡುಗಡೆಯಾಯ್ತು 58.3 ಕಿ.ಮೀ ಮೈಲೇಜ್ ನೀಡುವ ಹೋಂಡಾ ಡಿಯೋ ಸ್ಕೂಟರ್

ಬಿಡುಗಡೆಯ ಸಂದರ್ಭದಲ್ಲಿ ಹೆಚ್‌ಪಿಐ ಸಂಸ್ಥೆಯ ಅಧ್ಯಕ್ಷರಾದ ಸುಸುಮು ಮಿತ್ಸುಯಿಶಿ ಮಾತನಾಡಿ, ಈ ಹೊಸ ಡಿಯೋ ಸ್ಕೂಟರ್ ದೈನಂದಿನ ಬಳಕೆಗೆ ಅತ್ಯುತ್ತಮ ಆಯ್ಕೆಯಾಗಿದೆ. ಹೆಚ್ಚಿನ ಗ್ರಾಹಕರನ್ನು ಈ ಹೊಸ ಡಿಯೋ ಸ್ಕೂಟರ್ ಆಕರ್ಷಿಸುತ್ತದೆ ಎಂದು ವಿಶ್ವಾಸವಿದೆ ಎಂದು ಹೇಳಿದರು.

ಬಿಡುಗಡೆಯಾಯ್ತು 58.3 ಕಿ.ಮೀ ಮೈಲೇಜ್ ನೀಡುವ ಹೋಂಡಾ ಡಿಯೋ ಸ್ಕೂಟರ್

ಹೋಂಡಾ ಡಿಯೋ ಸ್ಕೂಟರ್ ಕಾರ್ಯಕ್ಷಮತೆಯ ಬಗ್ಗೆ ಹೇಳುವುದಾದರೆ, ಇದರಲ್ಲಿ 109 ಸಿಸಿ ಸಿಂಗಲ್ ಸಿಲಿಂಡರ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಇದು ಕಾರ್ಬ್ಯುರೆಟೆಡ್ ಮೋಟರ್ ಆಗಿದ್ದು ಅದು ಎಸ್‌ಒಹೆಚ್‌ಸಿಯೊಂದಿಗೆ ಬರುತ್ತದೆ.

MOST READ: ಭಾರತದಲ್ಲಿ ಕೈಗೆಟುಕುವ ದರದಲ್ಲಿ ಸಿಗುವ ಸ್ಕೂಟರ್‌ಗಳಿವು

ಬಿಡುಗಡೆಯಾಯ್ತು 58.3 ಕಿ.ಮೀ ಮೈಲೇಜ್ ನೀಡುವ ಹೋಂಡಾ ಡಿಯೋ ಸ್ಕೂಟರ್

ಈ ಎಂಜಿನ್ 7500 ಆರ್‌ಪಿಎಂನಲ್ಲಿ 8 ಬಿಹೆಚ್‍ಪಿ ಪವರ್ ಮತ್ತು 5000 ಆರ್‌ಪಿಎಂನಲ್ಲಿ 8.9 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು ಹೊಸ ಹೋಂಡಾ ಡಿಯೋ ಸ್ಕೂಟರ್ 58.3 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ.

ಬಿಡುಗಡೆಯಾಯ್ತು 58.3 ಕಿ.ಮೀ ಮೈಲೇಜ್ ನೀಡುವ ಹೋಂಡಾ ಡಿಯೋ ಸ್ಕೂಟರ್

ಹೊಸ ಹೋಂಡಾ ಡಿಯೋ ಸ್ಕೂಟರ್ ಕ್ಯಾಂಡಿ ಜಾಝ್ ಬ್ಲೂ, ಸ್ಪೋರ್ಟ್ಸ್ ರೆಡ್ ಮತ್ತು ವೈಬ್ರಂಟ್ ಆರೆಂಜ್ ಎಂಬ ಮೂರು ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಿದೆ. ಇದೇ ತಿಂಗಳಿನಲ್ಲಿ ಫಿಲಿಪೈನ್ಸ್‌ನ ಡೀಲರುಗಳ ಬಳಿ ಹೊಸ ಹೋಂಡಾ ಡಿಯೋ ಸ್ಕೂಟರ್ ತಲುಪಲಿದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಬಿಡುಗಡೆಯಾಯ್ತು 58.3 ಕಿ.ಮೀ ಮೈಲೇಜ್ ನೀಡುವ ಹೋಂಡಾ ಡಿಯೋ ಸ್ಕೂಟರ್

ಇನ್ನು ಭಾರತದಲ್ಲಿ ಹೋಂಡಾ ಡಿಯೋ ಸ್ಕೂಟರ್ ಅನ್ನು 2002ರಲ್ಲಿ ಮೊದಲ ಬಾರಿಗೆ ಬಿಡುಗಡೆಗೊಳಿಸಲಾಗಿತ್ತು. ಡಿಯೋ ಸ್ಕೂಟರ್‍ ಇಲ್ಲಿಯವರೆಗೆ 33 ಲಕ್ಷ ಹೆಚ್ಚು ಗ್ರಾಹಕರನ್ನು ಹೊಂದಿದೆ. ಹೋಂಡಾ ಡಿಯೋ ಭಾರತದಿಂದ ಅತಿ ಹೆಚ್ಚು ರಫ್ತು ಮಾಡುವ ಸ್ಕೂಟರ್ ಆಗಿದೆ.

ಬಿಡುಗಡೆಯಾಯ್ತು 58.3 ಕಿ.ಮೀ ಮೈಲೇಜ್ ನೀಡುವ ಹೋಂಡಾ ಡಿಯೋ ಸ್ಕೂಟರ್

ದೇಶದಲ್ಲಿ ಮಾರಾಟವಾಗುವ ಟಾಪ್ 10 ಸ್ಕೂಟರ್‍‍ಗಳಲ್ಲಿ ಡಿಯೋ ಕೂಡ ಒಂದಾಗಿದೆ. ಹೋಂಡಾ ಡಿಯೋ ಸ್ಕೂಟರ್ ದೇಶಿಯ ಮಾರುಕಟ್ಟೆಯಲ್ಲಿ ಯಮಹಾ ರೇ-ಝಡ್ ಮತ್ತು ಹೀರೋ ಮೆಸ್ಟ್ರೋ ಎಡ್ಜ್ ಸ್ಕೂಟರ್‍‍ಗಳಿಗೆ ಪೈಪೋಟಿ ನೀಡುತ್ತದೆ.

Article Published On: Saturday, May 8, 2021, 19:34 [IST]
English summary
New Honda Dio Launched In Philippines. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+