ಡೀಲರ್ ಬಳಿ ತಲುಪಿದ ಹೊಸ ಕವಾಸಕಿ ನಿಂಜಾ 300 ಬೈಕ್

ಜನಪ್ರಿಯ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಕವಾಸಕಿ ಕೊನೆಗೂ ತನ್ನ ಬಿಎಸ್6 ನಿಂಜಾ 300 ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಈ ಹೊಸ ಕವಾಸಕಿ ನಿಂಜಾ 300 ಬೈಕಿನ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.3.18 ಲಕ್ಷಗಳಾಗಿದೆ.

ಡೀಲರ್ ಬಳಿ ತಲುಪಿದ ಹೊಸ ಕವಾಸಕಿ ನಿಂಜಾ 300 ಬೈಕ್

ಈ ಕವಾಸಕಿ ನಿಂಜಾ 300 ಬೈಕನ್ನು ಬಿಎಸ್6 ಮಾಲಿನ್ಯ ನಿಯಮ ಜಾರಿಯಾಗುವ ಮುನ್ನವೇ 2019ರ ಡಿಸೆಂಬರ್‌ನಲ್ಲಿ ಸ್ಥಗಿತಗೊಳಿಸಿತ್ತು ಇದೀಗ ಬಿಎಸ್6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ಹೊಸ ಕವಾಸಕಿ ನಿಂಜಾ 300 ಬೈಕನ್ನು ನವೀಕರಿಸಿ ಬಿಡುಗಡೆಗೊಳಿಸಲಾಗಿದೆ. ಹಿಂದಿನ ಬಿಎಸ್-4 ಮಾದರಿಗೆ ಹೋಲಿಸಿದರೆ ಹೊಸ ಮಾದರಿಗೆ ರೂ.20 ಸಾವಿರ ಹೆಚ್ಚಿಸಲಾಗಿದೆ. ಇನ್ನು ಈ ಹೊಸ ಕವಾಸಕಿ ನಿಂಜಾ 300 ಬೈಕ್ ಡೀಲರುಗಳ ಬಳಿ ತಲುಪಲು ಪ್ರಾರಂಭವಾಗಿದೆ.

ಡೀಲರ್ ಬಳಿ ತಲುಪಿದ ಹೊಸ ಕವಾಸಕಿ ನಿಂಜಾ 300 ಬೈಕ್

ಕವಾಸಕಿ ನಿಂಜಾ 300 ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಬ್ರ್ಯಾಂಡ್‌ನ ಅತ್ಯಂತ ಒಳ್ಳೆಯ ಮಾದರಿಯಾಗಿದೆ. ಬಿಎಸ್6 ಕವಾಸಕಿ ನಿಂಜಾ 300 ಬೈಕಿನಲ್ಲಿ ಎಂಜಿನ್ ಅನ್ನು ಬದಲಾಯಿಸಲಾಗಿಲ್ಲ. ಅದೇ ಎಂಜಿನ್ ಅನ್ನು ನವೀಕರಿಸಲಾಗಿದೆ. ಇದು 296ಸಿಸಿ ಪ್ಯಾರೆಲಲ್-ಟ್ವಿನ್, ಲಿಕ್ವಿಡ್-ಕೂಲ್ಡ್ ಎಂಜಿನ್‌ ಆಗಿದೆ.

MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಡೀಲರ್ ಬಳಿ ತಲುಪಿದ ಹೊಸ ಕವಾಸಕಿ ನಿಂಜಾ 300 ಬೈಕ್

ಈ ಎಂಜಿನ್ 38.4 ಬಿಹೆಚ್‌ಪಿ ಪವರ್ ಮತ್ತು 27 ಎನ್‌ಎಂ ಪೀಕ್ ಟಾರ್ಕ್ ಅಭಿವೃದ್ಧಿಪಡಿಸುತ್ತದೆ. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಗೇರ್‌ಬಾಕ್ಸ್‌ನೊಂದಿಗೆ ಜೋಡಿಸಲಾಗಿದ್ದು, ಇದರೊಂದಿಗೆ ಅಸಿಸ್ಟ್ ಸ್ಲಿಪ್ಪರ್ ಕ್ಲಚ್ ಅನ್ನು ಪಡೆಯುತ್ತದೆ.

ಡೀಲರ್ ಬಳಿ ತಲುಪಿದ ಹೊಸ ಕವಾಸಕಿ ನಿಂಜಾ 300 ಬೈಕ್

2021ರ ಕವಾಸಕಿ ನಿಂಜಾ 300 ಬೈಕಿನ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಹಿಂದಿನ ಮಾದರಿಗೆ ಹೋಲಿಸಿದರೆ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ. ಇದರ ಮುಂಭಾಗದಲ್ಲಿ 37ಎಂಎಂ ಟೆಲಿಸ್ಕೋಪಿಕ್ ಫೋರ್ಕ್‌ಗಳು ಮತ್ತು ಹಿಂಭಾಗದಲ್ಲಿ ಮೊನೊಶಾಕ್ ಸೆಟಪ್ ಅನ್ನು ಹೊಂದಿದೆ.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಡೀಲರ್ ಬಳಿ ತಲುಪಿದ ಹೊಸ ಕವಾಸಕಿ ನಿಂಜಾ 300 ಬೈಕ್

ಇನ್ನು ಸುರಕ್ಷತಾ ವಿಭಾಗದಲ್ಲಿ ಪ್ರಮುಖ ಪಾತ್ರವಹಿಸುವ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಈ ಹೊಸ ಕವಾಸಕಿ ನಿಂಜಾ 300 ಬೈಕಿನ ಮುಂಭಾಗ 290 ಎಂಎಂ ಪೆಟಲ್ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗ 220 ಎಂಎಂ ಪೆಟಲ್ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಿದ್ದಾರೆ. ಇದರೊಂದಿಗೆ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ಕೂಡ ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.

ಡೀಲರ್ ಬಳಿ ತಲುಪಿದ ಹೊಸ ಕವಾಸಕಿ ನಿಂಜಾ 300 ಬೈಕ್

ಇನ್ನು ಇದರ ಸೆಮಿ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಕೂಡ ಬದಲಾಯಿಸಲಾಗಿಲ್ಲ. ಎಂಆರ್ಎಫ್ ನೈಲೋಗ್ರಿಪ್ ಟಯರ್ ಗಳನ್ನು ಇದರಲ್ಲಿ ನೀಡಲಾಗಿದೆ. 2021ರ ಕವಾಸಕಿ ನಿಂಜಾ 300 ಬೈಕಿನ ವಿನ್ಯಾಸದಲ್ಲಿ ಯಾವುದೇ ಪ್ರಮಖ ಬದಲಾವಣೆಗಳನ್ನು ಮಾಡಲಾಗಿಲ್ಲ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಡೀಲರ್ ಬಳಿ ತಲುಪಿದ ಹೊಸ ಕವಾಸಕಿ ನಿಂಜಾ 300 ಬೈಕ್

ಆದರೆ ನಿಂಜಾ ಸರಣಿಯ ದೊಡ್ಡ ಬೈಕ್‌ಗಳಿಂದ ಪ್ರೇರಿತವಾದ ಹೊಸ ಡೆಕಲ್‌ಗಳೊಂದಿಗೆ ಹೊಸ ಮೂರು ಬಣ್ಣಗಳ ಆಯ್ಕೆಗಳನ್ನು ಕೂಡ ಪಡೆದುಕೊಂಡಿದೆ. ಈ 2021ರ ಕವಾಸಕಿ ನಿಂಜಾ 300 ಬೈಕ್ ಗ್ರೀನ್, ಕ್ಯಾಂಡಿ ಲೈಮ್ ಗ್ರೀನ್ ಮತ್ತು ಎಬೊನಿ ಎಂಬ ಹೊಸ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ.

ಡೀಲರ್ ಬಳಿ ತಲುಪಿದ ಹೊಸ ಕವಾಸಕಿ ನಿಂಜಾ 300 ಬೈಕ್

ಹೊಸ ಕವಾಸಕಿ ನಿಂಜಾ 300 ಬೆಲೆಯನ್ನು ಅದೇ ಸರಣಿಯ ಬೈಕುಗಳಿಗೆ ಹೋಲಿಸಿದರೆ ತುಸು ದುಬಾರಿಯಾಗಿದೆ. 2021ರ ಕವಾಸಕಿ ನಿಂಜಾ 300 ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಟಿವಿಎಸ್ ಅಪಾಚೆ ಆರ್​ಆರ್310 ಮತ್ತು ಕೆಟಿಎಂ ಆರ್ಸಿ 390 ಬೈಕುಗಳಿಗೆ ಪೈಪೋಟಿ ನೀಡುತ್ತದೆ. ಇನ್ನು ಈ ಹೊಸ ಕವಾಸಕಿ ನಿಂಜಾ 300 ಬೈಕ್ ಡೀಲರುಗಳ ಬಳಿ ತಲುಪಲು ಪ್ರಾರಂಭವಾಗಿರುವುದರಿಂದ ಶೀಘ್ರದಲ್ಲೇ ವಿತರಣೆಯನ್ನು ಪ್ರಾರಂಭಿಸಬಹುದು ಎಂದು ನಿರೀಕ್ಷಿಸುತ್ತೇವೆ.

Image Courtesy: Vinod Nareshan

Article Published On: Saturday, March 6, 2021, 20:22 [IST]
English summary
Kawasaki Ninja 300 Arrives At Dealer Showroom. Read In Kananda.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+