2021ರ ಕವಾಸಕಿ ನಿಂಜಾ 300 ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಜನಪ್ರಿಯ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಕವಾಸಕಿ ತನ್ನ ಬಹುನಿರೀಕ್ಷಿತ ಬಿಎಸ್-6 ನಿಂಜಾ 300 ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಕವಾಸಕಿ ತನ್ನ ಹೊಸ ನಿಂಜಾ 300 ಬೈಕನ್ನು ಇತ್ತೀಚೆಗೆ ಅನಾವರಣಗೊಳಿಸಿತ್ತು.

2021ರ ಕವಾಸಕಿ ನಿಂಜಾ 300 ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಬಿಎಸ್-6 ಕವಾಸಕಿ ನಿಂಜಾ 300 ಬೈಕಿನ ಖರೀದಿಗಾಗಿ ಬುಕ್ಕಿಂಗ್ ಆರಂಭವಾಗಿದೆ ಎಂದು ವರದಿಗಳಾಗಿದೆ. ಬಿಎಸ್-6 ಕವಾಸಕಿ ನಿಂಜಾ 300 ಬೈಕ್ ಇದರ ಹಿಂದಿನ ಬಿಎಸ್ 4 ಮಾದರಿಯನ್ನು ಹೋಲುತ್ತದೆ. ಆದರೆ ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡಿದೆ. ದೊಡ್ಡ ಸಾಮರ್ಥ್ಯದ ಮಾದರಿಗಳಲ್ಲಿ ಲಭ್ಯವಿರುವ ಕೆಆರ್‌ಟಿ ಆವೃತ್ತಿಯಿಂದ ಇದು ಸ್ಫೂರ್ತಿ ಪಡೆದಿದೆ. ಹೊಸ ಬೈಕಿನಲ್ಲಿ ಅದೇ ಲಿಕ್ವೀಡ್ ಕೋಲ್ಡ್ ಪ್ಯಾರಲಲ್-ಟ್ವಿನ್ 296ಸಿ ಎಂಜಿನ್ ಅನ್ನು ಹೊಂದಿರುತ್ತದೆ. ಆದರೆ ಈ ಎಂಜಿನ್ ಅನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗುತ್ತದೆ.

2021ರ ಕವಾಸಕಿ ನಿಂಜಾ 300 ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಈ ಎಂಜಿನ್ 11,000 ಆರ್‌ಪಿಎಂನಲ್ಲಿ ಗರಿಷ್ಠ 38.5 ಬಿಹೆಚ್‌ಪಿ ಪವರ್ ಮತ್ತು 10,000 ಆರ್‌ಪಿಎಂನಲ್ಲಿ 27 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು 6-ಸ್ಪೀಡ್ ಗೇರ್‌ಬಾಕ್ಸ್‌ಗೆ ಸ್ಲಿಪ್-ಅಸಿಸ್ಟ್ ಕ್ಲಚ್‌ನೊಂದಿಗೆ ಜೋಡಿಸಲಾಗಿದೆ.

MOST READ: ಭಾರತದಲ್ಲಿ ಕೈಗೆಟುಕುವ ದರದಲ್ಲಿ ಸಿಗುವ ಸ್ಕೂಟರ್‌ಗಳಿವು

2021ರ ಕವಾಸಕಿ ನಿಂಜಾ 300 ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಬಿಎಸ್-6 ಕವಾಸಕಿ ನಿಂಜಾ 300 ಬೈಕ್ ಒಟ್ಟಾರೆ ವಿನ್ಯಾಸವು ಅದರ ಬಿಎಸ್-4 ಮಾದರಿಯಂತೆ ಬದಲಾಗದೆ ಉಳಿಯುವ ನಿರೀಕ್ಷೆಯಿದೆ.. ಅಗ್ರೇಸಿವ್ ಕಾಣುವ ಫ್ರಂಟ್ ಎಂಡ್ ವಿನ್ಯಾಸಕ್ಕಾಗಿ ಇದು ಟ್ವಿನ್-ಹೆಡ್‌ಲ್ಯಾಂಪ್ ವಿನ್ಯಾಸವನ್ನು ಮುಂದುವರಿಸಲಿದೆ.

2021ರ ಕವಾಸಕಿ ನಿಂಜಾ 300 ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಇನ್ನು ಈ ಹೊಸ ಕವಾಸಕಿ ಬೈಕಿನಲ್ಲಿ ಕ್ಲಿಪ್-ಆನ್ ಹ್ಯಾಂಡಲ್‌ಬಾರ್‌ಗಳು, ವಿಂಡ್‌ಸ್ಕ್ರೀನ್, ಮೌಂಟಡ್ ಫ್ರಂಟ್ ಟರ್ನ್-ಸಿಗ್ನಲ್ ಇಂಡೀಕೆಟರ್ ಪೂರ್ಣ-ಫೇರಿಂಗ್, ಪೈಲಟ್ ಲ್ಯಾಂಪ್‌ಗಳು, ಸ್ಪ್ಲಿಟ್-ಸೀಟುಗಳು, ಎಲ್ಇಡಿ ಟೈಲ್‌ಲ್ಯಾಂಪ್‌ಗಳು ಮತ್ತು ಅಲಾಯ್ ವೀಲ್‌ಗಳನ್ನು ಹೊಂದಿವೆ.

MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

2021ರ ಕವಾಸಕಿ ನಿಂಜಾ 300 ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಬಿಎಸ್-6 ಕವಾಸಕಿ ನಿಂಜಾ 300 ಬೈಕಿನ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 37 ಎಂಎಂ ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗದಲ್ಲಿ ಮೊನೊ-ಶಾಕ್ ಸೆಟಪ್ ಅನ್ನು ಹೊಂದಿರುತ್ತದೆ.

2021ರ ಕವಾಸಕಿ ನಿಂಜಾ 300 ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಇನ್ನು ಸುರಕ್ಷತಾ ವಿಭಾಗದಲ್ಲಿ ಪ್ರಮುಖ ಪಾತ್ರವಹಿಸುವ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಹೊಸ ಕವಾಸಕಿ ನಿಂಜಾ 300 ಬೈಕಿನ ಮುಂಭಾಗ 290 ಎಂಎಂ ಪೆಟಲ್ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗ 220 ಎಂಎಂ ಪೆಟಲ್ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಿದ್ದಾರೆ. ಇದರೊಂದಿಗೆ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗುವುದು.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

2021ರ ಕವಾಸಕಿ ನಿಂಜಾ 300 ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಇನ್ನು ಹೊಸ ಕವಾಸಕಿ ನಿಂಜಾ 300 ಬೈಕಿನಲ್ಲಿ ಮಸ್ಕಲರ್ ಲುಕ್ ಹೊಂದಿರುವ ಎಕ್ಸಾಸ್ಟ್ ಅನ್ನು ಹೊಂದಿದೆ. ಇನ್ನು ಈ ಹೊಸ ನಿಂಜಾ 300 ಬೈಕಿನಲ್ಲಿ ಅದೇ ಸೆಮಿ-ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ವಿನ್ಯಾಸವನ್ನು ಹೊಂದಿರುತ್ತದೆ ಎಂದು ನಿರೀಕ್ಷಿಸಲಾಗಿದೆ.

2021ರ ಕವಾಸಕಿ ನಿಂಜಾ 300 ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಈ ಬಿಎಸ್-6 ಕವಾಸಕಿ ನಿಂಜಾ 300 ಬೈಕ್ ಶೀಘ್ರದಲ್ಲೇ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ. ಈ ಹೊಸ ಕವಾಸಕಿ ಸೂಪರ್ ಬೈಕ್ ಭಾರತದಲ್ಲಿ ಬಿಡುಗಡೆಯಾದ ಬಳಿಕ ಟಿವಿಎಸ್ ಅಪಾಚೆ ಆರ್​ಆರ್310 ಬೈಕಿಗೆ ನೇರವಾಗಿ ಪೈಪೋಟಿ ನೀಡುತ್ತದೆ.

Article Published On: Thursday, February 25, 2021, 20:54 [IST]
English summary
Kawasaki Ninja 300 BS6 bookings open. Read In Kananda.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+