Royal Enfield 650 ಟ್ವಿನ್ ಬೈಕ್‌ಗಳಿಗೆ ಪೈಪೋಟಿಯಾಗಿ ಬರುತ್ತಿದೆ Kawasaki Z650RS ಬೈಕ್
ಜನಪ್ರಿಯ ದ್ವಿಚಕ್ರ ತಯಾರಕ ಕಂಪನಿಯಾದ ಕವಾಸಕಿ ತನ್ನ ಝಡ್650ಆರ್‌ಎಸ್ ನಿಯೋ-ರೆಟ್ರೊ ಬೈಕನ್ನು ಅನಾವರಣಗೊಳಿಸಿದೆ. ಈ ಹೊಸ ಕವಾಸಕಿ ಝಡ್650ಆರ್‌ಎಸ್ (Kawasaki Z650RS) ಮಿಡ್ ವೈಟ್ ಬೈಕ್ ಮುಂದಿನ ವರ್ಷದಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿದೆ.

ಈ ಹೊಸ ಕವಾಸಕಿ ಝಡ್650ಆರ್‌ಎಸ್ ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದರೆ ರಾಯಲ್ ಎನ್‌ಫೀಲ್ಡ್ ಇಂಟರ್‌ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ 650 ಬೈಕ್ ಗಳಿಗೆ ಪೈಪೋಟಿ ನೀಡುತ್ತದೆ. ಆದರೆ ಇದರ ಬೆಲೆಗಳನ್ನು ಪರಿಗಣಿಸಿ ಹೆಚ್ಚಿನ ಪ್ರೀಮಿಯಂನಲ್ಲಿ ಸ್ಥಾನ ಪಡೆಯುವ ಸಾಧ್ಯತೆಯಿದೆ. ಈ ಹೊಸ ಕವಾಸಕಿ ಝಡ್650ಆರ್‌ಎಸ್ ಬೈಕ್ ಇದರ ಹಿರಿಯ ಸಹೋದರ ಮಾದರಿ ಝಡ್900ಆರ್‌ಎಸ್ ಮಾದರಿಯಿಂದ ವಿನ್ಯಾಸ ಸ್ಫೂರ್ತಿ ಪಡೆಯುತ್ತದೆ ಮತ್ತು ಇದು ಸೊಗಸಾದ ರೆಟ್ರೊ ವಿನ್ಯಾಸವನ್ನು ಹೊಂದಿದೆ.

ಹೊಸ ಕವಾಸಕಿ ಝಡ್650ಆರ್‌ಎಸ್ ಬೈಕ್ ಕ್ರೋಮ್ ಸುತ್ತುವರಿದ ಸುತ್ತಿನ ಆಕಾರದ ಹೆಡ್‌ಲ್ಯಾಂಪ್, ವೃತ್ತಾಕಾರದ ರೇರ್ ಮೀರರ್ಸ್, ಫ್ಲಾಟ್ ಸೀಟ್ ಫಿನಿಶ್, ಅಂಡರ್‌ಬೆಲ್ಲಿ ಎಕ್ಸಾಸ್ಟ್ ಸಿಸ್ಟಂ, ಸ್ಪ್ಲಿಟ್-ಸ್ಪೋಕ್ ವೀಲ್ಸ್, ಡ್ಯುಯಲ್-ಪಾಡ್ ಸೆಮಿ-ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಮಧ್ಯದಲ್ಲಿದೆ.

ಈ ಮಿಡಲ್ ವೈಟ್ ಬೈಕ್ ಟಿಯರ್ ಆಕಾರದ ಫ್ಯೂಯಲ್ ಟ್ಯಾಂಕ್, ಸುತ್ತಲೂ ಎಲ್ ಇಡಿ ಲೈಟಿಂಗ್ ಸಿಸ್ಟಂ ಇತ್ಯಾದಿಗಳನ್ನು ಹೊಂದಿದೆ. ಯುರೋಪಿನ ಮಾರುಕಟ್ಟೆಗಳಲ್ಲಿ ಕವಾಸಕಿ ಝಡ್650ಆರ್‌ಎಸ್ ಕ್ಯಾಂಡಿ ಎಮರಾಲ್ಡ್ ಗ್ರೀನ್, ಮೆಟಾಲಿಕ್ ಮೂಂಡಸ್ಟ್ ಗ್ರೇ/ಎಬೊನಿ ಮತ್ತು ಮೆಟಾಲಿಕ್ ಸ್ಪಾರ್ಕ್ ಬ್ಲಾಕ್ ಎಂಬ ಮೂರು ಬಣ್ಣಗಳ ಆಯ್ಕೆಗಳೊಂದಿಗೆ ಬರುತ್ತದೆ.

ವಿಂಟೇಜ್ ಮಾದರಿಗಳನ್ನು ಕ್ಯಾಂಡಿ ಎಮರಾಲ್ಡ್ ಗ್ರೀನ್ ಬಣ್ಣವು ಗೋಲ್ಡನ್ ಅಲಾಯ್ ವ್ಹೀಲ್ ಗಳನ್ನು ಹೊಂದಿದೆ. ಇತರ ಎರಡು ಪೇಂಟ್ ಸ್ಕೀಮ್‌ಗಳಲ್ಲಿ, ಬ್ಲ್ಯಾಕ್ ಬಣ್ಣದ ಚಕ್ರಗಳನ್ನು ನೀಡಲಾಗಿದೆ ಮತ್ತು ಬಾಡಿ ಗ್ರಾಫಿಕ್ಸ್ ಕೂಡ ಪ್ರತಿ ಬಣ್ಣದ ಆಯ್ಕೆಯಲ್ಲಿ ಸ್ವಲ್ಪ ಭಿನ್ನವಾಗಿರುತ್ತದೆ.

ಇತರ ಮುಖ್ಯಾಂಶಗಳು ಡ್ಯುಯಲ್-ಚಾನೆಲ್ ಎಬಿಎಸ್ ಸಿಸ್ಟಂ, ಜೊತೆಗೆ ಸ್ಲಿಪ್ಪರ್ ಮತ್ತು ಅಸಿಸ್ಟ್ ಕ್ಲಚ್, ಲಂಬವಾದ ಹ್ಯಾಂಡಲ್‌ಬಾರ್ ಪೊಸಿಶನಿಂಗ್ ಮತ್ತು ಸ್ವಲ್ಪ ಹಿಂಭಾಗದಲ್ಲಿ ಸೆಟ್ ಫುಟ್‌ಪೆಗ್‌ಗಳು ಇತ್ಯಾದಿಗಳನ್ನು ಒಳಗೊಂಡಿದೆ,

ಕಾರ್ಯಕ್ಷಮತೆಗೆ ಸಂಬಂಧಿಸಿದಂತೆ, ಹೊಸ ಕವಾಸಕಿ ಝಡ್650ಆರ್‌ಎಸ್ ಬೈಕಿನಲ್ಲಿ ಅದೇ 649 ಸಿಸಿ ಪ್ಯಾರಲಲ್ ಟ್ವಿನ್-ಸಿಲಿಂಡರ್ ಲಿಕ್ವಿಡ್-ಕೂಲ್ಡ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 6,700 ಆರ್‌ಪಿಎಮ್‌ನಲ್ಲಿ 67.3 ಬಿಹೆಚ್‌ಪಿ ಮತ್ತು 8,000 ಆರ್‌ಪಿಎಂನಲ್ಲಿ 64 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ,

ಎಂಜಿನ್ ಅನ್ನು 6-ಸ್ಪೀಡ್ ಗೇರ್ ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ. ಇನ್ನು ರಾಯಲ್ ಎನ್‌ಫೀಲ್ಡ್ 650 ಟ್ವಿನ್ ಬೈಕ್ ಗಳಿಗೆ ಹೋಲಿಸಿದರೆ ಈ ಹೊಸ ಬೈಕ್ 20 ಬಿಹೆಚ್‍ಪಿ ಪವರ್ ಮತ್ತು 12 ಎನ್ಎಂ ಟಾರ್ಕ್ ಕಡಿಮೆ ಉತ್ಪಾದಿಸಲಾಗುತ್ತದೆ,

ಹೊಸ ಕವಾಸಕಿ ಝಡ್650ಆರ್‌ಎಸ್ ಬೈಕ್ ಸಸ್ಪೆಂಕ್ಷನ್ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ 41 ಎಂಎಂ ಟೆಲಿಸ್ಕೋಪಿಕ್ ಫ್ರಂಟ್ ಫೋರ್ಕ್ಸ್ ಮತ್ತು ಹಿಂಭಾಗದಲ್ಲಿ ಬ್ಯಾಕ್‌ಲಿಂಕ್ ಮೊನೊಶಾಕ್ ಸೆಟಪ್ ಅನ್ನು ಒಳಗೊಂಡಿದೆ. ಇನ್ನು ಈ ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಡ್ಯುಯಲ್-ಪಿಸ್ಟನ್ ಫ್ರಂಟ್ ಕ್ಯಾಲಿಪರ್‌ಗಳೊಂದಿಗೆ 300 ಎಂಎಂ ಟ್ವಿನ್ ರೋಟರ್‌ಗಳು ಮತ್ತು ಸಿಂಗಲ್-ಪಿಸ್ಟನ್ ರಿಯರ್ ಕಾಲಿಪರ್ ಹೊಂದಿರುವ 220 ಎಂಎಂ ಸಿಂಗಲ್ ಡಿಸ್ಕ್ ಬ್ರೇಕ್ ಅನ್ನು ನೀಡಲಾಗಿದೆ.

ಕವಾಸಕಿ ತನ್ನ 2022ರ ಝಡ್650 ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಈ ಹೊಸ ಕವಾಸಕಿ ಝಡ್650 ಮಿಡ್ ವೈಟ್ ಸ್ಟ್ರೀಟ್-ನೇಕೆಡ್ ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.6.24 ಲಕ್ಷವಾಗಿದೆ. 2022ರ ಕವಾಸಕಿ ಝಡ್650 ಬೈಕ್ ಹೊಸ ಕ್ಯಾಂಡಿ ಲೈಮ್ ಗ್ರೀನ್ ಟೈಪ್ 3 ಬಣ್ಣಕ್ಕೆ ಸಂಬಂಧಿಸಿದಂತೆ ಬ್ಲ್ಯಾಕ್ ಮತ್ತು ಗ್ರೀನ್ ಬಣ್ಣಗಳ ಸಂಯೋಜನೆಯಾಗಿದೆ. ಬೈಕಿನ ಚಾಸಿಸ್ ಅನ್ನು ಮ್ಯಾಟ್ ಗ್ರೀನ್ ಬಣ್ಣದಲ್ಲಿದೆ.

ಈ ಹೊಸ ಬೈಕಿನ ಉಳಿದ ಬಾಡಿಯ ಭಾಗಗಳು ಬ್ಲ್ಯಾಕ್ ಬಣ್ಣದಲ್ಲಿ ಫ್ಯೂಯೆಲ್ ಟ್ಯಾಂಕ್, ಹೆಡ್ ಲ್ಯಾಂಪ್ ಕೌಲ್ ಮತ್ತು ಹಿಂಬದಿ ಟ್ರಿಮ್ ಮೇಲೆ ಗ್ರೀನ್ ಅಸ್ಸೆಂಟ್ ಗಳನ್ನು ಹೊಂದಿದೆ. ಇದರೊಂದಿಗೆ ಗ್ರೀನ್ ಪಿನ್ ಸ್ಟ್ರಿಪಿಂಗ್ ಅನ್ನು ಹೊಂದಿವೆ.ಈ ಹೊಸ ಬಣ್ಣವನ್ನು ಹೊರತುಪಡಿಸಿ, 2022ರ ಕವಾಸಕಿ ಝಡ್650 ಬೈಕಿನಲ್ಲಿ ಉಳಿದಂತೆ ಯಾವುದೇ ಪ್ರಮುಖ ಬದಲಾವಣೆಗಳನ್ನು ಹೊಂದಿಲ್ಲ, ಈ ಹೊಸ ಬೈಕ್ ಜಪಾನಿನ 'ಸುಗೊಮಿ' ವಿನ್ಯಾಸವನ್ನು ಹೊಂದಿದೆ. ಈ ಬೈಕ್ ನೇರವಾದ ನಿಲುವು, ಅಗ್ರೇಸಿವ್ ಕಾಣುವ ಮುಂಭಾಗ, ಮಸ್ಕಲರ್ ಫ್ಯೂಯಲ್ ಟ್ಯಾಂಕ್ ಅನ್ನು ಹಿಂದಿನ ಮಾದರಿಯಿಂದಲೂ ಸಾಗಿಸಲಾಗಿದೆ.

ಹೊಸ ಕವಾಸಕಿ ಝಡ್650ಆರ್‌ಎಸ್ ಬೈಕ್ 187 ಕಿಲೋಗ್ರಾಂಗಳಷ್ಟು ತೂಕವನ್ನು ಹೊಂದಿದೆ. ಇನ್ನು ಈ ಹೊಸ ಬೈಕ್ 820 ಎಂಎಂ ಸೀಟ್ ಎತ್ತರವನ್ನು ಹೊಂದಿದೆ. ಕವಾಸಕಿ ಈ ಮಾದರಿಗೆ ಹೇಗೆ ಬೆಲೆ ನೀಡುತ್ತದೆ ಎಂಬುದನ್ನು ನೋಡಲು ಆಸಕ್ತಿದಾಯಕವಾಗಿದೆ ಆದರೆ ಇದು ರಾಯಲ್ ಎನ್‌ಫೀಲ್ಡ್ 650 ಟ್ವಿನ್ ಬೈಕ್ ಗಳ ಬೆಲೆಗೆ ಹೋಲಿಸಿದರೆ ಹೆಚ್ಚು ಪ್ರೀಮಿಯಂ ಆಗಿರುತ್ತದೆ ಎಂದು ನಾವು ನಿರೀಕ್ಷಿಸುತ್ತೇವೆ.


Click it and Unblock the Notifications








