ಮತ್ತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ರಾಯಲ್ ಎನ್‍ಫೀಲ್ಡ್ 650ಸಿಸಿ ಕ್ರೂಸರ್

ಜನಪ್ರಿಯ ದ್ವಿಚಕ್ರ ತಯಾರಕ ಕಂಪನಿಯಾದ ರಾಯಲ್ ಎನ್‍ಫೀಲ್ಡ್ ಭಾರತೀಯ ಮಾರುಕಟ್ಟೆಯಲ್ಲಿ ಹೊಸ 650ಸಿಸಿ ಕ್ರೂಸರ್ ಬೈಕನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಹೊಸ ರಾಯಲ್ ಎನ್‍ಫೀಲ್ಡ್ 650ಸಿಸಿ ಕ್ರೂಸರ್ ಬೈಕ್ 2018ರ ಇಐಸಿಎಂಎ ನಲ್ಲಿ ಪ್ರದರ್ಶಿಸಲಾದ ಕೆಎಕ್ಸ್ ಬಾಬರ್ ಕಾನ್ಸೆಪ್ಟ್‌ಗೆ ಹೋಲುತ್ತದೆ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ರಾಯಲ್ ಎನ್‍ಫೀಲ್ಡ್ 650ಸಿಸಿ ಕ್ರೂಸರ್

ಹೊಸ ಹೊಸ ರಾಯಲ್ ಎನ್‍ಫೀಲ್ಡ್ 650ಸಿಸಿ ಕ್ರೂಸರ್ ಬೈಕ್ ಭಾರತದಲ್ಲಿ ಮತ್ತೊಮ್ಮೆ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ. ಈ ಹೊಸ 650ಸಿಸಿ ಕ್ರೂಸರ್ ಬೈಕ್ ಸ್ಪಾಟ್ ಟೆಸ್ಟ್ ನಡೆಸುತ್ತಿರುವ ಸ್ಪೈ ಚಿತ್ರಗಳು ಬಹಿರಂಗವಾಗಿವೆ. ಸ್ಪೈ ಚಿತ್ರದಲ್ಲಿ ಈ ಹೊಸ ರಾಯಲ್ ಎನ್‍ಫೀಲ್ಡ್ 650ಸಿಸಿ ಕ್ರೂಸರ್ ಬೈಕಿನಲ್ಲಿ ದುಂಡಗಿನ ಆಕಾರದ ಹೆಡ್‌ಲ್ಯಾಂಪ್‌ಗಳಿಂದ ಅದರ ಪಕ್ಕದಲ್ಲಿ ಇರಿಸಲಾಗಿರುವ ಬ್ರ್ಯಾಂಡ್‌ನ ಟಿಪ್ಪರ್ ನ್ಯಾವಿಗೇಷನ್ ಯುನಿಟ್ ನೊಂದಿಗೆ ಸಿಂಗಲ್-ಪಾಡ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಒಳಗೊಂಡಿದೆ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ರಾಯಲ್ ಎನ್‍ಫೀಲ್ಡ್ 650ಸಿಸಿ ಕ್ರೂಸರ್

ಈ ಹೊಸ ರಾಯಲ್ ಎನ್‍ಫೀಲ್ಡ್ 650ಸಿಸಿ ಕ್ರೂಸರ್ ಬೈಕ್ ಎರಡೂ ಬದಿಗಳಲ್ಲಿ ಟ್ವಿನ್-ಕ್ರೋಮ್ ಫಿನಿಶಿಂಗ್ ಎಕ್ಸಾಸ್ಟ್ ಅನ್ನು ಒಳಗೊಂಡಿರುತ್ತದೆ. ಫ್ಯೂಯಲ್ ಟ್ಯಾಂಕ್‌ನ ಕೆಳಗೆ ಇರಿಸಲಾಗಿರುವ ಹೀಟ್-ಗಾರ್ಡ್ ಪ್ಲೇಟ್, ಎರಡು ವಿಭಿನ್ನ ಅಲಾಯ್ ವ್ಹೀಲ್ ಗಳನ್ನು ಬಳಸುತ್ತಿದೆ.

MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಮತ್ತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ರಾಯಲ್ ಎನ್‍ಫೀಲ್ಡ್ 650ಸಿಸಿ ಕ್ರೂಸರ್

ಈ 650ಸಿಸಿ ಕ್ರೂಸರ್ ಬೈಕಿನ ಮುಂಭಾಗ ಮತ್ತು ಹಿಂಭಾಗದ ಅಲಾಯ್ ವ್ಹೀಲ್ ಗಳು ಕ್ರಮವಾಗಿ 17-ಇಂಚು ಮತ್ತು 16-ಇಂಚುಗಳಾಗಿರಬಹುದು. ಹೊಸ ಕ್ರೂಸರ್ ಬೈಕಿನ ಎರಡೂ ತುದಿಗಳಲ್ಲಿ ದುಂಡಾದ-ಫೆಂಡರ್‌ಗಳನ್ನು ಹೊಂದಿದ್ದು, ಹಿಂಭಾಗದಲ್ಲಿ ಕಡಿಮೆ-ಸೆಟ್ ಟರ್ನ್-ಸಿಗ್ನಲ್ ಇಂಡಿಕೇಟರ್ ಗಳೊಂದಿಗೆ ದುಂಡಗಿನ ಆಕಾರದ ಎಲ್ಇಡಿ ಟೈಲ್ ಲ್ಯಾಂಪ್ ಹೊಂದಿದೆ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ರಾಯಲ್ ಎನ್‍ಫೀಲ್ಡ್ 650ಸಿಸಿ ಕ್ರೂಸರ್

ಈ ಬೈಕ್ ರೆಟ್ರೊ-ಬಾಬರ್ ವಿನ್ಯಾಸವನ್ನು ಕೂಡಿದ್ದು, ಸುಮಾರು 17 ಲೀಟರ್ ಸಾಮರ್ಥ್ಯದ ದೊಡ್ಡ ಫ್ಯೂಯಲ್ ಟ್ಯಾಂಕ್ ಹೊಂದಿದೆ, ಇದು ಪ್ರಸ್ತುತ ದೇಶದಲ್ಲಿ ಮಾರಾಟವಾಗುತ್ತಿರುವ ಇತರ 650ಸಿಸಿ ಬೈಕುಗಳಿಗೆ ಹೋಲಿಸಿದರೆ ಉತ್ತಮ ಬೈಕ್ ಆಗಿರಲಿದೆ.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಮತ್ತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ರಾಯಲ್ ಎನ್‍ಫೀಲ್ಡ್ 650ಸಿಸಿ ಕ್ರೂಸರ್

ಈ ಬೈಕ್ ವಿಶಾಲ ಹ್ಯಾಂಡಲ್‌ಬಾರ್ ಅನ್ನು ಹೊಂದಿದ್ದು, ಸ್ವಲ್ಪ ಮುಂದಕ್ಕೆ ಹೊಂದಿಸಲಾದ ಫುಟ್‌ಪೆಗ್‌ಗಳನ್ನು ಹೊಂದಿದ್ದು, ಆರಾಮವಾಗಿರುವ ಸವಾರಿ ಮಾಡಬಹುದಾಗಿದೆ. ಬೈಕ್ ಕಡಿಮೆ ರೈಡರ್ ಸೀಟ್ ಹೊಂದಿರುವುದರಿಂದ ಟ್ರಾಫಿಕ್ ನಲ್ಲಿ ಸುಲಭವಾಗಿ ಚಲಿಸಲು ಸಹಕಾರಿಯಾಗಿರುತ್ತದೆ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ರಾಯಲ್ ಎನ್‍ಫೀಲ್ಡ್ 650ಸಿಸಿ ಕ್ರೂಸರ್

ಇನ್ನು ಹೃದಯ ಭಾಗ ಎಂದು ಕರೆಯುವ ಎಂಜಿನ್ ಬಗ್ಗೆ ಹೇಳುವುದಾದರೆ, 650 ಟ್ವಿನ್ ಬೈಕುಗಳಲ್ಲಿರುವ ಅದೇ ಎಂಜಿನ್ ಅನ್ನು ಹೊಂದಿರುತ್ತದೆ. ಹೊಸ ಕ್ರೂಸರ್ ಬೈಕಿನಲ್ಲಿ 649 ಸಿಸಿ ಏರ್ ಮತ್ತು ಆಯಿಲ್-ಕೂಲ್ಡ್, ಪ್ಯಾರೆಲಲ್-ಟ್ವಿನ್-ಸಿಲಿಂಡರ್ ಎಂಜಿನ್ ಅನ್ನು ಹೊಂದಿದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಹೊಸ 650ಸಿಸಿ ಕ್ರೂಸರ್ ಬೈಕ್ ಬ್ರ್ಯಾಂಡ್‌ನಿಂದ ಪ್ರೀಮಿಯಂ ಕ್ರೂಸರ್ ಬೈಕ್ ಆಗಿರಲಿದೆ. ಈ ಹೊಸ ರಾಯಲ್ ಎನ್‍ಫೀಲ್ಡ್ 650ಸಿಸಿ ಕ್ರೂಸರ್ ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಬಹುದೆಂದು ನಿರೀಕ್ಷಿಸುತ್ತೇವೆ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ರಾಯಲ್ ಎನ್‍ಫೀಲ್ಡ್ 650ಸಿಸಿ ಕ್ರೂಸರ್

ರಾಯಲ್ ಎನ್‌ಫೀಲ್ಡ್ ತನ್ನ ಮೂರನೇ 650ಸಿಸಿ ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಈ ಹೊಸ ರಾಯಲ್ ಎನ್‍ಫೀಲ್ಡ್ 650ಸಿಸಿ ಕ್ರೂಸರ್ ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ.

Image Courtesy: Masked Moto

Most Read Articles

Kannada
English summary
650cc Royal Enfield Cruiser Spied Again. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X