2021ರ Classic 350 ಬೈಕ್ ವಿತರಣೆಯನ್ನು ಆರಂಭಿಸಿದ Royal Enfield
ಬಹುನೀರಿಕ್ಷಿತ ರಾಯಲ್ ಎನ್‌ಫೀಲ್ಡ್(Royal Enfield) ಕ್ಲಾಸಿಕ್ 350(Classic 350) ಮಾದರಿಯ 2021ರ ಆವೃತ್ತಿಯು ಭಾರತದಲ್ಲಿ ಬಿಡುಗಡೆಯಾಗಿದ್ದು, ಹೊಸ ಬೈಕ್ ವಿತರಣೆಗೆ ಕಂಪನಿಯು ಅಧಿಕೃತ ಚಾಲನೆ ನೀಡಿದೆ.

ಹೊಸ ಬೈಕ್ ಬಿಡುಗಡೆಗೂ ಮುನ್ನ ಬುಕ್ಕಿಂಗ್ ಆರಂಭಿಸಿದ್ದ ರಾಯಲ್ ಎನ್‌ಫೀಲ್ಡ್(Royal Enfield) ಕಂಪನಿಯು ಬುಕ್ಕಿಂಗ್ ಆಧರಿಸಿ ದೇಶಾದ್ಯಂತ ಪ್ರಮುಖ ನಗರಗಳಲ್ಲಿರುವ ತನ್ನ ಅಧಿಕೃತ ಮಾರಾಟ ಮಳಿಗೆಗಳಲ್ಲಿ ವಿತರಣೆಯನ್ನು ಆರಂಭಿಸಿದೆ. ಹೊಸ ಕ್ಲಾಸಿಕ್ 350 (Classic 350) ಮಾದರಿಯು ಹಳೆಯ ಆವೃತ್ತಿಗಳಿಂತಲೂ ಸಾಕಷ್ಟು ಬದಲಾವಣೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಿದ್ದು, ಹೊಸ ಬೈಕ್ ಬೆಲೆಯನ್ನು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 1.84 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 2.15 ಲಕ್ಷ ಬೆಲೆ ಹೊಂದಿದೆ.

ಹೊಸ ಬೈಕ್ ಬೆಲೆಯು ಆನ್ ರೋಡ್ ಪ್ರಕಾರ ವಿವಿಧ ನಗರಗಳಿಗೆ ಅನುಗುಣವಾಗಿ ಆರಂಭಿಕವಾಗಿ ರೂ. 2.07 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 2.40 ಲಕ್ಷ ಬೆಲೆ ಹೊಂದಿದ್ದು, ಆಕ್ಸೆಸರಿಸ್‌ಗಳಿಗೆ ಪ್ರತ್ಯೇಕ ದರ ವಿಧಿಸಲಾಗುತ್ತದೆ.

ತಾಂತ್ರಿಕ ಅಂಶಗಳಿಗೆ ಅನುಗುಣವಾಗಿ ಹೊಸ ಬೈಕ್ ಮಾದರಿಯು ಒಟ್ಟು ಐದು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಬೆಲೆ ಹೆಚ್ಚಳಕ್ಕೆ ಅನುಗುಣವಾಗಿ ಹೊಸ ಬೈಕಿನಲ್ಲಿ ಹಲವಾರು ಸುಧಾರಿತ ತಂತ್ರಜ್ಞಾನ ಪ್ರೇರಿತ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.

ನ್ಯೂ ಜನರೇಷನ್ ಮಾದರಿಯನ್ನು ಮಾರ್ಡನ್ ರೆಟ್ರೊ ವಿನ್ಯಾಸದೊಂದಿಗೆ ಅಭಿವೃದ್ದಿಗೊಳಿಸಿರುವ ರಾಯಲ್ ಎನ್‌ಫೀಲ್ಡ್ ಕಂಪನಿಯು ಹೊಸ ಬೈಕಿ ಪ್ರತಿಯೊಂದು ತಾಂತ್ರಿಕ ಅಂಶಗಳನ್ನು ಸುಧಾರಿತ ತಂತ್ರಜ್ಞಾನ ಪ್ರೇರಣೆಯೊಂದಿಗೆ ಉನ್ನತೀಕರಿಸಿದೆ.

ಹೊಸ ಬೈಕ್ ಮಾದರಿಯು ರೆಡ್‌ಡಿಚ್, ಹಾಲ್ಕೈನ್, ಸಿಗ್ನಲ್ಸ್, ಡಾರ್ಕ್ ಮತ್ತು ಕ್ರೋಮ್ ಎಂಬ ಐದು ವೆರಿಯೆಂಟ್ ಮತ್ತು ಹನ್ನೊಂದು ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದ್ದು, ಹೊಸ ಬೈಕ್ ಮಾದರಿಯು ಇತ್ತೀಚೆಗೆ ಬಿಡುಗಡೆಯಾಗಿರುವ ಮಿಟಿಯೊರ್ 350(Meteor 350) ಮಾದರಿಯಿಂದಲೂ ಕೆಲವು ತಾಂತ್ರಿಕ ಅಂಶಗಳನ್ನು ಎರವಲು ಪಡೆದುಕೊಳ್ಳಲಾಗಿದೆ.

2021ರ ಕ್ಲಾಸಿಕ್ 350 ಬೈಕ್ ಮಾದರಿಯಲ್ಲಿ ಸಸ್ಷೆಂಷನ್ ಮತ್ತು ಬ್ರೇಕಿಂಗ್ ಸೌಲಭ್ಯವನ್ನು ಸಂಪೂರ್ಣವಾಗಿ ಬದಲಾವಣೆಗೊಳಿಸಲಾಗಿದ್ದು, ಹೊಸ ಬೈಕಿನಲ್ಲಿ ಇದೀಗ ಫ್ಯೂಲ್ ಗೇಜ್ ಮತ್ತು ಟ್ರಿಪ್ಪರ್ ನ್ಯಾವಿಗೇಷನ್ ಸೌಲಭ್ಯವು ಪ್ರಮುಖ ಆಕರ್ಷಣೆಯಾಗಿದೆ.

ರಾಯಲ್ ಎನ್‌ಫೀಲ್ಡ್ ಕಂಪನಿಯು ಹೊಸ ಬೈಕ್ ಮಾದರಿಯಲ್ಲಿ ಮಿಟಿಯೊರ್ 350 ಮಾದರಿಗಾಗಿ ಪರಿಚಯಿಸಿರುವ 349 ಸಿಸಿ SOHC ಎಂಜಿನ್ ಬಳಕೆ ಮಾಡಿದ್ದು, 5-ಸ್ಪೀಡ್ ಗೇರ್‌ಬಾಕ್ಸ್‌ನೊಂದಿಗೆ 19.1 ಬಿಎಚ್‌ಪಿ ಮತ್ತು 28 ಎನ್ಎಂ ಟಾರ್ಕ್ ಉತ್ಪಾದನಾ ವೈಶಿಷ್ಟ್ಯತೆಯೊಂದಿಗೆ ಅತ್ಯುತ್ತಮ ಹ್ಯಾಂಡ್ಲಿಂಗ್ ಹೊಂದಿದೆ.

ಕ್ಲಾಸಿಕ್ 350 ಬೈಕಿನಲ್ಲಿ ಈ ಹಿಂದೆ ಬಳಕೆ ಮಾಡಲಾಗುತ್ತಿದ್ದ 346 ಸಿಸಿ UCE ಎಂಜಿನ್ ತೆಗೆದುಹಾಕಿರುವ ಕಂಪನಿಯು ಸುಧಾರಿತ ತಂತ್ರಜ್ಞಾನ ಪ್ರೇರಿತ 349 ಸಿಸಿ SOHC ಎಂಜಿನ್ ಜೋಡಣೆ ಮಾಡಿದ್ದು, ಈ ಹಿಂದಿನ ಮಾದರಿಗಳಲ್ಲಿ ಇದ್ದ ವೈಬ್ರೆಷನ್ ಪ್ರಮಾಣವು ಗಣನೀಯವಾಗಿ ಸುಧಾರಣೆಯಾಗಿದೆ.

ಜೊತೆಗೆ ಎಲೆಕ್ಟ್ರಾನಿಕ್ಸ್ ಸೌಲಭ್ಯಗಳು ಬೈಕ್ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸಲಿದ್ದು, ಹೊಸ ಮಾದರಿಯ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಸೌಲಭ್ಯವನ್ನು ಜೋಡಣೆ ಮಾಡಲಾಗಿದೆ. ಎಲ್‌ಸಿಡಿ ಜೊತೆಗೆ ಪ್ರತ್ಯೇಕವಾದ ಫ್ಯೂಲ್ ಗೇಜ್ ಮತ್ತು ಟ್ರಿಪ್ಲರ್ ಮೀಟರ್ ನೀಡಲಾಗಿದ್ದು, ಮಿಟಿಯೊರ್ ಮಾದರಿಯಲ್ಲಿರುವಂತೆ ಪ್ರತ್ಯೇಕವಾದ ಟ್ವಿನ್ ಪಾಡ್ ನೀಡದೆ ಇಂಟ್ರಾಗ್ರೆಟೆಡ್ ಮಾಡಲಾಗಿದೆ.

ಟಾಪ್ ಎಂಡ್ ಮಾದರಿಗಳಿಗಾಗಿ ಮಾತ್ರವೇ ಕಂಪನಿಯು ಟ್ರಿಪ್ಪರ್ ಮೀಟರ್ ಅನ್ನು ಜೋಡಣೆ ಮಾಡಿದ್ದು, ಈ ಸ್ಮಾರ್ಟ್ ಫೋನ್ ಕನೆಕ್ಟಿವಿಟಿ ಮೂಲಕ ಟರ್ನ್ ಬೈ ಟರ್ನ್ ನ್ಯಾವಿಗೇಷನ್ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ.

ಆದರೆ ಹೊಸ ಬೈಕಿನಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯು ಎಲ್ಇಡಿ ಹೆಡ್‌ಲ್ಯಾಂಪ್‌ಗಳ ಬದಲಾಗಿ ಹಾಲೊಜೆನ್ ಬಲ್ಬ್ ಬಳಕೆ ಮಾಡಿದ್ದು, ಹೆಡ್‌ಲ್ಯಾಂಪ್ ಮಾತ್ರವಲ್ಲ ಟೈಲ್ ಲ್ಯಾಂಪ್, ಟರ್ನ್ ಇಂಡಿಕೇಟರ್ ಸಹ ಹಾಲೊಜೆನ್ ಬಲ್ಬ್ ಹೊಂದಿವೆ.

ಹೊಸ ಬೈಕಿನಲ್ಲಿರುವ ಸ್ವಿಚ್ ಗೇರ್ ಸೌಲಭ್ಯವನ್ನು ಮಿಟಿಯೊರ್ 350 ಮಾದರಿಯಿಂದ ಎರವಲು ಪಡೆದುಕೊಳ್ಳಲಾಗಿದ್ದು, ಕಂಪನಿಯು ಹೊಸ ಬೈಕ್ ಮಾದರಿಯನ್ನು ಸಿಂಗಲ್ ಕ್ರೆಡಲ್ ಫ್ರೆಮ್ ಬದಲಾಗಿ ಡ್ಯುಯಲ್ ಡೌನ್ ಟ್ಯೂಬ್ ಚಾರ್ಸಿಯೊಂದಿಗೆ ಅಭಿವೃದ್ದಿಗೊಳಿಸಿದೆ.

ಡಬಲ್ ಕ್ರೆಡ್ ಚಾರ್ಸಿಸ್ ಬದಲಾವಣೆಯಿಂದಾಗಿ ಬೈಕ್ ರೈಡಿಂಗ್ ದೂರದ ಪ್ರಯಾಣದಲ್ಲೂ ಸ್ಮೂಥ್ ಎನ್ನಿಸಲಿದ್ದು, 41 ಎಂಎಂ ಟೆಲಿಸ್ಕೊಪಿಕ್ ಫೋರ್ಕ್‌ನೊಂದಿಗೆ 170 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದೆ. ಹಾಗೆಯೇ ಹಲವಾರು ಸ್ಟ್ಯಾಂಡರ್ಡ್ ಸೇಫ್ಟಿ ಫೀಚರ್ಸ್ ಜೋಡಣೆ ಮಾಡಿದ್ದು, ಡ್ಯುಯಲ್ ಚಾನೆಲ್ ಎಬಿಎಸ್, ಎರಡು ಬದಿಯಲ್ಲೂ ಡಿಸ್ಕ್ ಬ್ರೇಕ್ ಸೌಲಭ್ಯಗಳನ್ನು ನೀಡಲಾಗಿದೆ.


Click it and Unblock the Notifications