ಹೊಸ ರಾಯಲ್ ಎನ್‍ಫೀಲ್ಡ್ ಕ್ಲಾಸಿಕ್ 350 ಬೈಕ್ ಬಿಡುಗಡೆ ದಿನಾಂಕ ಬಹಿರಂಗ

ಜನಪ್ರಿಯ ದ್ವಿಚಕ್ರ ತಯಾರಕ ಕಂಪನಿಯಾದ ರಾಯಲ್ ಎನ್‌ಫೀಲ್ಡ್ ತನ್ನ ಬಹುನಿರೀಕ್ಷಿತ ಹೊಸ ಕ್ಲಾಸಿಕ್ 350 ಬೈಕನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ ಜನಪ್ರಿಯ ರಾಯಲ್ ಎನ್‍ಫೀಲ್ಡ್ ಕ್ಲಾಸಿಕ್ 350 ಬೈಕ್ ಹೊಸ ಬದಲಾಗಳೊಂದಿಗೆ ದೇಶಿಯ ಮಾರುಕಟ್ಟೆ ಪ್ರವೇಶಿಸಲಿದೆ.

ಹೊಸ ರಾಯಲ್ ಎನ್‍ಫೀಲ್ಡ್ ಕ್ಲಾಸಿಕ್ 350 ಬೈಕ್ ಬಿಡುಗಡೆ ದಿನಾಂಕ ಬಹಿರಂಗ

ಈ ಹೊಸ ರಾಯಲ್ ಎನ್‍ಫೀಲ್ಡ್ ಕ್ಲಾಸಿಕ್ 350 ಬೈಕ್ ಇದೇ ತಿಂಗಳ 31 ರಂದು ಬಿಡುಗಡೆಯಾಗಲಿದೆ ಎಂದು ವರದಿಗಳಾಗಿದೆ. ಆದರೆ ರಾಯಲ್ ಎನ್‍ಫೀಲ್ಡ್ ಕಂಪನಿಯು ಅಧಿಕೃತವಾಗಿ ಬಿಡುಗಡೆ ದಿನಾಂಕವನ್ನು ಬಹಿರಂಗಪಡಿಸಿಲ್ಲ.ಈ 2021ರ ರಾಯಲ್ ಎನ್‍ಫೀಲ್ಡ್ ಕ್ಲಾಸಿಕ್ 350 ಬೈಕ್ ಭಾರತದಲ್ಲಿ ಹಲವು ಬಾರಿ ಸ್ಫಾಟ್ ಟೆಸ್ಟ್ ಅನ್ನು ನಡೆಸಿದೆ. 2021ರ ರಾಯಲ್ ಎನ್‍ಫೀಲ್ಡ್ ಕ್ಲಾಸಿಕ್ 350 ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಬೈಕ್ ಗಳಲಲ್ಲಿ ಇದು ಕೂಡ ಒಂದಾಗಿದೆ.

ಹೊಸ ರಾಯಲ್ ಎನ್‍ಫೀಲ್ಡ್ ಕ್ಲಾಸಿಕ್ 350 ಬೈಕ್ ಬಿಡುಗಡೆ ದಿನಾಂಕ ಬಹಿರಂಗ

ರಾಯಲ್ ಎನ್‍ಫೀಲ್ಡ್ ಕ್ಲಾಸಿಕ್ 350 ಬೈಕಿಗೆ ದೊಡ್ಡ ಅಭಿಮಾನಿ ವರ್ಗವಿದೆ. ಈ ಜನಪ್ರಿಯ ಬೈಕ್ ಸಾಕಷ್ಟು ಬದಲಾವಣೆಗಳೊಂದಿಗೆ ಬರುತ್ತಿದೆ. ಇತ್ತೀಚೆಗೆ ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ನಡೆದ ಟಿವಿಸಿ ಚಿತ್ರೀಕರಣದ ವೇಳೆ ಕಾಣಿಸಿಕೊಂಡ 2021ರ ರಾಯಲ್ ಎನ್‍ಫೀಲ್ಡ್ ಕ್ಲಾಸಿಕ್ 350 ಬೈಕ್ ಸ್ಪೈ ಚಿತ್ರಗಳು ಬಹಿರಂಗವಾಗಿದೆ.

ಹೊಸ ರಾಯಲ್ ಎನ್‍ಫೀಲ್ಡ್ ಕ್ಲಾಸಿಕ್ 350 ಬೈಕ್ ಬಿಡುಗಡೆ ದಿನಾಂಕ ಬಹಿರಂಗ

ಇದರಲ್ಲಿ ಹೊಸ ಕ್ಲಾಸಿಕ್ 350 ವೃತ್ತಾಕಾರದ ಹೆಡ್‌ಲ್ಯಾಂಪ್, ಫ್ಲ್ಯಾಟ್ ಫ್ಯೂಯಲ್ ಟ್ಯಾಂಕ್, ದುಂಡಗಿನ ಆಕಾರದ ಹಿಂಭಾಗದ ರೇರ್ ಮೀರರ್ಸ್, ಸಿಂಗಲ್ ಸೀಟ್ ಮತ್ತು ಅಪ್‌ಸ್ವೆಪ್ಟ್ ಕ್ರೋಮ್-ಲೇಪಿತ ಎಕ್ಸಾಸ್ಟ್ ಸೇರಿದಂತೆ ಮೂಲ ರೆಟ್ರೊ ವಿನ್ಯಾಸ ಅಂಶಗಳನ್ನು ಉಳಿಸಿಕೊಂಡಿದೆ.

ಹೊಸ ರಾಯಲ್ ಎನ್‍ಫೀಲ್ಡ್ ಕ್ಲಾಸಿಕ್ 350 ಬೈಕ್ ಬಿಡುಗಡೆ ದಿನಾಂಕ ಬಹಿರಂಗ

ಹೊಸ ಮಾದರಿ ಸಿಂಗಲ್ ಮತ್ತು ಡ್ಯುಯಲ್ ಸೀಟ್ ಆಯ್ಕೆಗಳೊಂದಿಗೆ ಲಭ್ಯವಿರಲಿದೆ. ಫುಟ್ ಪೆಗ್‌ಗಳನ್ನು ಮಧ್ಯದಲ್ಲಿ ಅಳವಡಿಸಲಾಗಿದೆ ಮತ್ತು ಹ್ಯಾಂಡಲ್‌ಬಾರ್‌ಗಳು ಮೊದಲಿಗಿಂತ ಚಿಕ್ಕದಾಗಿರುತ್ತವೆ. ಈ ಬೈಕ್ ಈಗ ಹೊಸದಾಗಿ ವಿನ್ಯಾಸಗೊಳಿಸಲಾದ ಅಲಾಯ್ ವ್ಹೀಲ್ ಗಳನ್ನು ಹೊಂದಿವೆ.

ಹೊಸ ರಾಯಲ್ ಎನ್‍ಫೀಲ್ಡ್ ಕ್ಲಾಸಿಕ್ 350 ಬೈಕ್ ಬಿಡುಗಡೆ ದಿನಾಂಕ ಬಹಿರಂಗ

ಹೊಸ ಬೈಕಿನಲ್ಲಿ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಈಗ ಅನಲಾಗ್ ಸ್ಪೀಡೋಮೀಟರ್ ಕೆಳಗೆ ಸಣ್ಣ ಡಿಜಿಟಲ್ ಡಿಸ್ ಪ್ಲೇಯನ್ನು ಹೊಂದಿರುತ್ತದೆ. ಈ ಡಿಸ್ ಪ್ಲೇಯಲ್ಲಿ ಟ್ರಿಪ್ ಮೀಟರ್, ಫ್ಯೂಯಲ್ ಗೇಜ್, ಓಡೋಮೀಟರ್ ಮತ್ತು ಇತರ ಮಾಹಿತಿಗಳನ್ನು ಪ್ರದರ್ಶಿಸುತ್ತದೆ. ಬದಿಯಲ್ಲಿ ಟ್ರಿಪ್ಪರ್ ನ್ಯಾವಿಗೇಷನ್ ಪಾಡ್ ಇರುವಿಕೆಯು ಅತ್ಯಂತ ಮುಖ್ಯವಾದ ಸೇರ್ಪಡೆಯಾಗಿದೆ. ಟ್ರಿಪ್ಪರ್ ನ್ಯಾವಿಗೇಷನ್ ಫೀಚರ್ ಅನ್ನು ಒಳಗೊಂಡಿರುತ್ತದೆ.

ಹೊಸ ರಾಯಲ್ ಎನ್‍ಫೀಲ್ಡ್ ಕ್ಲಾಸಿಕ್ 350 ಬೈಕ್ ಬಿಡುಗಡೆ ದಿನಾಂಕ ಬಹಿರಂಗ

ಈ ಹೊಸ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕಿನ ಪ್ಲಾಟ್‌ಫಾರ್ಮ್ ಮತ್ತು ಎಂಜಿನ್ ಸೆಟಪ್‌ನಲ್ಲಿ ದೊಡ್ಡ ಬದಲಾವಣೆಗಳನ್ನು ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಹೊಸ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕನ್ನು ಹೊಸ ಮಾಡ್ಯುಲರ್ ಜೆ ಪ್ಲಾಟ್‌ಫಾರ್ಮ್‌ನಲ್ಲಿ ತಯಾರಿಸಲಾಗುತ್ತದೆ.

ಹೊಸ ರಾಯಲ್ ಎನ್‍ಫೀಲ್ಡ್ ಕ್ಲಾಸಿಕ್ 350 ಬೈಕ್ ಬಿಡುಗಡೆ ದಿನಾಂಕ ಬಹಿರಂಗ

ಈ ಮಾಡ್ಯುಲರ್ ಜೆ ಪ್ಲಾಟ್‌ಫಾರ್ಮ್‌ ಅಸ್ತಿತ್ವದಲ್ಲಿರುವ ಪ್ಲಾಟ್‌ಫಾರ್ಮ್‌ಗಿಂತ ಹಗುರವಾಗಿರುತ್ತದೆ, ಇನ್ನು 2021ರ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕಿನಲ್ಲಿ ಹೊಸ 349ಸಿಸಿ, ಸುಧಾರಿತ ಎಸ್‌ಒಹೆಚ್‌ಸಿ ಕಾನ್ಫಿಗರೇಶನ್‌ನೊಂದಿಗೆ ಸಿಂಗಲ್ ಸಿಲಿಂಡರ್ ಫ್ಯೂಯಲ್ ಇಂಜೆಕ್ಟ್ ಎಂಜಿನ್ ಅನ್ನು ಹೊಂದಿರಲಿದೆ.

ಹೊಸ ರಾಯಲ್ ಎನ್‍ಫೀಲ್ಡ್ ಕ್ಲಾಸಿಕ್ 350 ಬೈಕ್ ಬಿಡುಗಡೆ ದಿನಾಂಕ ಬಹಿರಂಗ

ಈ 349ಸಿಸಿ ಎಂಜಿನ್ 20.2 ಬಿಹೆಚ್‌ಪಿ ಪವರ್ ಮತ್ತು 27 ಎನ್ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ. ಈ ಎಂಜಿನ್ ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ ಅನ್ನು ಜೋಡಿಸಲಾಗುತ್ತದೆ.

ಹೊಸ ರಾಯಲ್ ಎನ್‍ಫೀಲ್ಡ್ ಕ್ಲಾಸಿಕ್ 350 ಬೈಕ್ ಬಿಡುಗಡೆ ದಿನಾಂಕ ಬಹಿರಂಗ

ಸದ್ಯ ದೇಶಿಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ, ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್ ಕ್ಲಾಸಿಕ್ ಬೈಕ್ ಬ್ಲ್ಯಾಕ್, ಪ್ಯೂರ್ ಬ್ಲ್ಯಾಕ್, ಮರ್ಕ್ಯುರಿ ಸಿಲ್ವರ್, ಗನ್‌ಮೆಟಲ್ ಗ್ರೇ, ಸ್ಟ್ರೋಮೈಡರ್ ಸ್ಯಾಂಡ್, ಏರ್ ಬೋನ್ ಬ್ಲೂ, ಕ್ರೋಮ್, ಸ್ಟೆಲ್ತ್ ಬ್ಲ್ಯಾಕ್ ಆರೆಂಜ್ ಎಂಬರ್ ಮತ್ತು ಮೆಟಲ್ಲೊ ಸಿಲ್ವರ್ ಸೇರಿದಂತೆ 12 ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಿದೆ.

ಹೊಸ ರಾಯಲ್ ಎನ್‍ಫೀಲ್ಡ್ ಕ್ಲಾಸಿಕ್ 350 ಬೈಕ್ ಬಿಡುಗಡೆ ದಿನಾಂಕ ಬಹಿರಂಗ

2021ರ ರಾಯಲ್ ಎನ್‍ಫೀಲ್ಡ್ ಕ್ಲಾಸಿಕ್ 350 ಬೈಕ್ ಭಾರತದಲ್ಲಿ ಈಗಗಾಲೇ ಹಲವು ಬಾರಿ ಸ್ಫಾಟ್ ಟೆಸ್ಟ್ ಅನ್ನು ನಡೆಸಲಾಗಿದೆ. ಒಟ್ಟಿನಲ್ಲಿ ಬಹುನಿರೀಕ್ಷಿತ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್ ಹೊಸ ಬದಲಾವಣೆಗಳೊಂದಿಗೆ ಬಿಡುಗಡೆಗೆ ಸಜ್ಜಾಗಿದೆ. ಹೊಸ ಬದಲಾವಣಿಗಳೊಂದಿಗೆ ಈ ಜನಪ್ರಿಯ ಬೈಕ್ ಹೆಚ್ಚಿನ ಗ್ರಾಹಕರನ್ನು ಸೆಳೆಯಬಹುದು ಎಂದು ನಿರೀಕ್ಷಿಸುತ್ತೇವೆ.

Article Published On: Saturday, August 7, 2021, 18:05 [IST]
English summary
New royal enfield classic 350 bike india launch date details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+