ಹೊಸ ಎಂಜಿನ್‌ನೊಂದಿಗೆ ಬಿಡುಗಡೆಯಾಗಿರುವ Royal Enfield Classic 350 ರಿವ್ಯೂ ವಿಡಿಯೋ

Royal Enfield ತನ್ನ ಜನಪ್ರಿಯ Classic ಬೈಕ್ ಆವೃತ್ತಿಯಾದ Classic 350 ನ್ಯೂ ಜನರೇಷನ್ ಮಾದರಿಯನ್ನು ಹಲವಾರು ಹೊಸ ಬದಲಾವಣೆಗಳೊಂದಿಗೆ ಬಿಡುಗಡೆ ಮಾಡಿದ್ದು, ನವೀಕೃತ ಮಾದರಿಯು ಹೊಸ ವಿನ್ಯಾಸ ಮತ್ತು ಸುಧಾರಿತ ತಂತ್ರಜ್ಞಾನ ಪ್ರೇರಿತ ಎಂಜಿನ್ ಮತ್ತು ಚಾರ್ಸಿಸ್‌ನೊಂದಿಗೆ ಮಾರುಕಟ್ಟೆ ಪ್ರವೇಶಿಸಿದೆ.

ಹೊಸ Classic 350 ಮಾದರಿಯನ್ನು Royal Enfield ಕಂಪನಿಯು ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಬಿಡುಗಡೆ ಮಾಡಿದ್ದು, ಹೊಸ ಬೈಕ್ ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 1.84 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 2.15 ಲಕ್ಷ ಬೆಲೆ ಹೊಂದಿದೆ. ಹೊಸ ಬೈಕ್ ಮಾದರಿಯು ಈ ಮಾದರಿಗಿಂತಲೂ ತುಸು ದುಬಾರಿ ಎನ್ನಿಸಲಿದ್ದು, ಬೆಲೆ ಹೆಚ್ಚಳಕ್ಕೆ ಅನುಗುಣವಾಗಿ ಹೊಸ ಬೈಕಿನಲ್ಲಿ ಹಲವಾರು ಸುಧಾರಿತ ತಂತ್ರಜ್ಞಾನ ಪ್ರೇರಿತ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.

Royal Enfield ಕಂಪನಿಯು ಹೊಸ Classic 350 ಬೈಕಿನ ಪ್ರತಿಯೊಂದು ತಾಂತ್ರಿಕ ಅಂಶಗಳನ್ನು ಸುಧಾರಿತ ತಂತ್ರಜ್ಞಾನ ಪ್ರೇರಣೆಯೊಂದಿಗೆ ಅಭಿವೃದ್ದಿಗೊಳಿಸಿದ್ದು, Meteor 350 ಮಾದರಿಯಿಂದಲೂ ಹಲವಾರು ತಾಂತ್ರಿಕ ಅಂಶಗಳನ್ನು ಎರವಲು ಪಡೆದುಕೊಳ್ಳಲಾಗಿದೆ.

2021ರ Classic 350 ಮಾದರಿಯಲ್ಲಿ ಮಹತ್ವದ ಬದಲಾವಣೆ ಅಂದರೆ ಅದು ಸಸ್ಷೆಂಷನ್ ಮತ್ತು ಬ್ರೇಕಿಂಗ್ ಸೌಲಭ್ಯವನ್ನು ಸಂಪೂರ್ಣವಾಗಿ ಬದಲಾವಣೆಗೊಳಿಸಿದ್ದು, ಹೊಸ ಬೈಕಿನಲ್ಲಿ ಇದೀಗ ಫ್ಯೂಲ್ ಗೇಜ್ ಮತ್ತು ಟ್ರಿಪ್ಪರ್ ನ್ಯಾವಿಗೇಷನ್ ಸೌಲಭ್ಯವು ಪ್ರಮುಖ ಆಕರ್ಷಣೆಯಾಗಿದೆ.

Royal Enfield Classic 350 ರಿವ್ಯೂ ವಿಡಿಯೋ

349 ಸಿಸಿ SOHC ಎಂಜಿನ್ ಜೋಡಣೆ ಹೊಂದಿರುವ ಹೊಸ Classic 350 ಮಾದರಿಯು 5-ಸ್ಪೀಡ್ ಗೇರ್‌ಬಾಕ್ಸ್‌ನೊಂದಿಗೆ 19.1 ಬಿಎಚ್‌ಪಿ ಮತ್ತು 28 ಎನ್ಎಂ ಟಾರ್ಕ್ ಉತ್ಪಾದನಾ ವೈಶಿಷ್ಟ್ಯತೆ ಹೊಂದಿದ್ದು, ಹೊಸ ಬೈಕಿನಲ್ಲಿ ಸಿಂಗಲ್ ಕ್ರೆಡಲ್ ಫ್ರೆಮ್ ಬದಲಾಗಿ ಡ್ಯುಯಲ್ ಡೌನ್ ಟ್ಯೂಬ್ ಚಾರ್ಸಿ ಬಳಕೆ ಮಾಡಿರುವುದು ಹೊಸ ಬೈಕಿನ ರೈಡಿಂಗ್ ಕಂಫರ್ಟ್ ಕ್ಲಾಸಿಕ್ ಬೈಕ್ ಪ್ರಿಯರನ್ನು ಸೆಳೆಯಲಿದೆ.

More from DriveSpark

Article Published On: Thursday, September 2, 2021, 9:35 [IST]
English summary
New royal enfield classic 350 first ride review video
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+