2021ರ ಕಾಂಟಿನೆಂಟಲ್ ಜಿಟಿ 650 ಬೈಕಿನ ಟಿವಿಸಿ ಬಿಡುಗಡೆಗೊಳಿಸಿದ ರಾಯಲ್ ಎನ್‍ಫೀಲ್ಡ್
ಚೆನ್ನೈ ಮೂಲದ ಜನಪ್ರಿಯ ದ್ವಿಚಕ್ರ ತಯಾರಕ ಕಂಪನಿಯಾದ ರಾಯಲ್ ಎನ್‍ಫೀಲ್ಡ್ ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಇಂಟರ್‍ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ 650 ಬೈಕ್‌ಗಳನ್ನು ಇತ್ತೀಚೆಗೆ ಬಿಡುಗಡೆಗೊಳಿಸಿತು. ಈ ಎರಡು ಟ್ವಿನ್ ಬೈಕ್‌ಗಳು ಹೊಸ ನವೀಕರಣಗಳನ್ನು ಪಡೆದುಕೊಂಡಿದೆ.

ಇದೀಗ ರಾಯಲ್ ಎನ್‍ಫೀಲ್ಡ್ ಕಂಪನಿಯು ತನ್ನ 2021ರ ಕಾಂಟಿನೆಂಟಲ್ ಜಿಟಿ 650 ಬೈಕಿನ ಟಿವಿಸಿ ಬಿಡುಗಡೆಗೊಳಿಸಿದೆ. ಹೊಸ ಟಿವಿಸಿ ವೀಡಿಯೋದಲ್ಲಿ 2021ರ ಕಾಂಟಿನೆಂಟಲ್ ಜಿಟಿ 650 ಬೈಕಿನ ಹೊಸ ನವೀಕರಣಗಳು ಮತ್ತು ಬೈಕಿನ ಯಾಂತ್ರಿಕ ವಿಶೇಷತೆಗಳ ಬಗ್ಗೆ ತಿಳಿಸಿದ್ದಾರೆ. ಈ ಹೊಸ ಟಿಸಿವಿಯು ಆಕರ್ಷಕವಾಗಿದ್ದು, ಹೆಚ್ಚಾಗಿ ಯುವ ರೈಡರ್ ಗಳನ್ನು ಈ ಟಿವಿಸಿ ಸೆಳೆಯುತ್ತದೆ. ಅಲ್ಲದೇ ಲಾಂಗ್ ರೈಡ್ ತೆರಳಲು ಕಾಂಟಿನೆಂಟಲ್ ಜಿಟಿ 650 ಬೈಕ್ ಉತ್ತಮ ಆಯ್ಕೆಯಾಗಿದೆ ಎಂದು ತಿಳಿಸಿದೆ.

2021ರ ಕಾಂಟಿನೆಂಟಲ್ ಜಿಟಿ6 50 ಕೆಫೆ-ರೇಸರ್ ಬೈಕಿನ ಆರಂಭಿಕ ಬೆಲೆಯು ರೂ.2.91 ಲಕ್ಷಗಳಾದರೆ, ಇದರ ಕಸ್ಟಮ್ ಬಣ್ಣದ ಮಾದರಿಗೆ ರೂ.2.99 ಲಕ್ಷಗಳಾಗಿದೆ. ಇನ್ನು ಟಾಪ್-ಸ್ಪೆಕ್ ಮಿಸ್ಟರ್ ಕ್ಲೀನ್ ಬಣ್ಣದ ಮಾದರಿಯ ಬೆಲೆಯು ರೂ.2.99 ಲಕ್ಷಗಳಾಗಿದೆ. ಈ ಎಲ್ಲಾ ಬೆಲೆಗಳು ದೆಹಲಿಯ ಎಕ್ಸ್ ಶೋರೂಂ ಪ್ರಕಾರವಾಗಿದೆ.
MOST READ: ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಎಡಿಷನ್ ಬಿಡುಗಡೆ

ಇತ್ತೀಚೆಗೆ ಬಿಡುಗಡೆಗೊಂಡ ಹೊಸ ರಾಯಲ್ ಎನ್‍ಫೀಲ್ಡ್ ಇಂಟರ್‍ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ 650 ಬೈಕ್‌ಗಳು ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡಿದೆ. ಹೊಸ ಬಣ್ಣಗಳ ಹೊರತಾಗಿ, ಎರಡು ಬೈಕ್‌ಗಳು ಬ್ರ್ಯಾಂಡ್‌ನ ಮೇಕ್-ಇಟ್-ಯುವರ್ಸ್ ಕಸ್ಟಮೈಸ್ ಕಾರ್ಯಕ್ರಮದ ಭಾಗವಾಗಿದೆ. ಫಾಕ್ಟಿರಿಯಿದಲೇ ಗ್ರಾಹಕರು ತಮ್ಮ ಬೈಕಿನಲ್ಲಿ ತಮಗೆ ಇಷ್ಟವಿರುವಂತಹ ಮಾಡಿಫೈ ಅನ್ನು ಮಾಡಿಸಬಹುದು.

ಇದರಲ್ಲಿ ವಿವಿಧ ಸೀಟುಗಳ ಆಕಾರಗಳು, ಟೂರಿಂಗ್ ಮೀರರ್, ಫ್ಲೈಸ್ಕ್ರೀನ್‌ಗಳು ಮತ್ತು ಸಂಪ್ ಗಾರ್ಡ್‌ಗಳು ಮತ್ತು ಇತರ ಉಪಕರಣಗಳನ್ನು ಹೊಂದಿವೆ. ಹೊಸ ರಾಯಲ್ ಎನ್‍ಫೀಲ್ಡ್ ಇಂಟರ್‍ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ650 ಬೈಕ್‌ಗಳಲ್ಲಿ ಹಿಂದಿನ ಮಾದರಿಗಳಲ್ಲಿ ಇದ್ದ ಅದೇ, 649ಸಿಸಿ ಪ್ಯಾರಲಲ್ ಟ್ವಿನ್ ಸಿಲಿಂಡರ್ ಎಂಜಿನ್ ಅನ್ನು ಒಳಗೊಡಿದೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಈ ಎಂಜಿನ್ 7,250 ಆರ್‌ಪಿಎಂನಲ್ಲಿ 47 ಬಿಹೆಚ್‌ಪಿ ಪವರ್ ಮತ್ತು 5,250 ಆರ್‌ಪಿಎಂನಲ್ಲಿ 52 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 6-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ.

ಇನ್ನು ಎರಡು ಟ್ವಿನ್ ಬೈಕ್‌ಗಳ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 41 ಎಂಎಂ ಫೋರ್ಕ್‌ಗಳು ಮತ್ತು ಹಿಂಭಾಗದಲ್ಲಿ ಟ್ವಿನ್-ಗ್ಯಾಸ್ ಚಾರ್ಜ್ಡ್ ಶಾಕ್ ಗಳು 5-ಹಂತದ ಹೊಂದಾಣಿಕೆಯೊಂದಿಗೆ ಪ್ರಿ-ಲೋಡ್ ಡ್ಯಾಂಪಿಂಗ್‌ಗಾಗಿ ನಿರ್ವಹಿಸುತ್ತವೆ.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍ಮಾಸ್ಟರ್ ಬೈಕ್

ಇನ್ನು ಹೊಸ ರಾಯಲ್ ಎನ್‍ಫೀಲ್ಡ್ ಇಂಟರ್‍ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ650 ಬೈಕ್‌ಗಳ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 320 ಎಂಎಂ ಡಿಸ್ಕ್ ಮತ್ತು ಹಿಂಭಾಗದಲ್ಲಿ 240 ಎಂಎಂ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಲಾಗಿದೆ. ಇದರೊಂದಿಗೆ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಿದೆ.

ಈ ಬೈಕ್‌ಗಳಲ್ಲಿ 18 ಇಂಚಿನ ಸ್ಪೋಕ್ಡ್ ವ್ಹೀಲ್ ಗಳನ್ನು ಹೊಂದಿವೆ. ಎರಡು ಬೈಕ್‌ಗಳ ವಿನ್ಯಾಸವು ಬದಲಾಗದೆ ಉಳಿದಿದೆ. ಇದು ಒಂದೇ ಮಾದರಿಯ ಹೆಡ್‌ಲ್ಯಾಂಪ್‌ಗಳು, ಟೈಲ್‌ಲ್ಯಾಂಪ್‌ಗಳು, ಟ್ವಿನ್ ಎಕ್ಸಾಸ್ಟ್ ಸೆಟಪ್, ಸಿಂಗಲ್-ಪೀಸ್ ಫ್ಲಾಟ್ ಸೀಟ್ ಮತ್ತು ಹೆಚ್ಚಿನದನ್ನು ಒಳಗೊಂಡಿದೆ.

ಹೊಸ ಇಂಟರ್‍ಸೆಪ್ಟರ್ 650 ಬೈಕ್ ಉತ್ತಮ ಸೀಟಿಂಗ್ ಪೊಷಿಷನ್ ಅನ್ನು ಹೊಂದಿದೆ. ಇನ್ನು ಕಾಂಟಿನೆಂಟಲ್ ಜಿಟಿ 650 ಅದರ ಉದ್ದವಾದ ಟ್ಯಾಂಕ್ ವಿನ್ಯಾಸ ಮತ್ತು ಕ್ಲಿಪ್-ಆನ್ ಹ್ಯಾಂಡಲ್‌ಬಾರ್‌ಗಳೊಂದಿಗೆ ಹೆಚ್ಚು ಅಗ್ರೇಸಿವ್ ಲುಕ್ ಅನ್ನು ಹೊಂದಿದೆ.
2021ರ ರಾಯಲ್ ಎನ್‍ಫೀಲ್ಡ್ ಇಂಟರ್‍ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ650 ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡಿದೆ. ಆದರೆ ಈ ಟ್ವಿನ್ ಬೈಕಿನಲ್ಲಿ ಟ್ರಿಪ್ಪರ್ ನ್ಯಾವಿಗೇಷನ್ ಫೀಚರ್ ಅನ್ನು ನೀಡಲಾಗಿಲ್ಲ. ಆದರೆ ಕಸ್ಟಮೈಸ್ ಮಾಡಲು ಒಂದು ಆಯ್ಕೆಯನ್ನು ಸಹ ಕಂಪನಿಯು ಒದಗಿಸಿದೆ.

2021ರ ರಾಯಲ್ ಎನ್‍ಫೀಲ್ಡ್ ಇಂಟರ್‍ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ650 ಬೈಕ್‌ಗಳಲ್ಲಿ ಯಾವುದೇ ಪ್ರಮುಖ ಬದಲಾವಣೆಗಳು ಕಂಡು ಬಂದಿಲ್ಲ. ಆದರೆ ರಾಯಲ್ ಎನ್‌ಫೀಲ್ಡ್ ಕೆಲವು ಸಣ್ಣ ಬದಲಾವಣೆಗಳೊಂದಿಗೆ ಇಂಟರ್‍ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ 650 ಬೈಕ್‌ಗಳಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಾಗಿದೆ. ಇದರಲ್ಲಿ ಕಾಂಟಿನೆಂಟಲ್ ಜಿಟಿ 650 ಬೈಕಿನ ಟಿವಿಸಿಯು ಆಕರ್ಷಕವಾಗಿದೆ.


Click it and Unblock the Notifications