2021ರ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಬೈಕ್ ಮಾಹಿತಿ ಬಹಿರಂಗ

ಜನಪ್ರಿಯ ದ್ವಿಚಕ್ರ ತಯಾರಕ ಕಂಪನಿಯಾದ ರಾಯಲ್ ಎನ್‌ಫೀಲ್ಡ್ ತನ್ನ 2021ರ ಹಿಮಾಲಯನ್ ಬೈಕನ್ನು ಹೊಸ ನವೀಕರಣದೊಂದಿಗೆ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ ಹೊಸ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಬೈಕಿನ ಹೊಸ ಬಣ್ಣಗಳ ಆಯ್ಕೆ ಮತ್ತು ಫೀಚರ್ ಗಳನ್ನು ಪಡೆಯಲಿದೆ.

2021ರ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಬೈಕ್ ಮಾಹಿತಿ ಬಹಿರಂಗ

ಬಿಡುಗಡೆಗೂ ಮುನ್ನ ಹೊಸ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಬೈಕಿನ ಮಾಹಿತಿಯು ಈಗ ಅಧಿಕೃತ ಆರ್‌ಇ ವೆಬ್‌ಸೈಟ್ ಮೂಲಕ ಸೋರಿಕೆಯಾಗಿದೆ. ವ್ಲಾಗ್ಗರ್ ಬುಲೆಟ್ ಗುರು ತಮ್ಮ ಯುಟ್ಯೂಬ್ ಚಾನೆಲ್ ನಲ್ಲಿ 2021ರ ಹಿಮಾಲಯನ್ ಬೈಕಿನ ಮಾಹಿತಿಯನ್ನು ಬಹಿರಂಗಪಡಿಸಿದೆ. ಸೋರಿಕೆಯಾದ ಮಾಹಿತಿಯ ಪ್ರಕಾರ ಹೊಸ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಬೈಕಿನ ಬೆಲೆಯು ರೂ.2,51,565 ಲಕ್ಷಗಳಾಗಿದೆ.

2021ರ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಬೈಕ್ ಮಾಹಿತಿ ಬಹಿರಂಗ

2021 ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ವಿನ್ಯಾಸದ ವಿಷಯದಲ್ಲಿ ಇದು ಮೊದಲಿನಂತೆಯೇ ಇರುತ್ತದೆ. ಆದರೆ ಪೈನ್ ಗ್ರೀನ್, ಮಿರಾಜ್ ಸಿಲ್ವರ್ ಮತ್ತು ಗ್ರಾನೈಟ್ ಬ್ಲ್ಯಾಕ್ ಎಂಬ ಹೊಸ ಬಣ್ಣಗಳ ಆಯ್ಕೆಯನ್ನು ಪಡೆದುಕೊಂಡಿದೆ.

MOST READ: ಯೂನಿಕಾರ್ನ್ ಬೈಕಿನ ಬೆಲೆ ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

2021ರ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಬೈಕ್ ಮಾಹಿತಿ ಬಹಿರಂಗ

ಇನ್ನು ಹೊಸ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಮತ್ತೊಂದು ಅಪ್‌ಡೇಟ್‌ ಎಂದರೆ ಎತ್ತರದ ವಿಂಡ್‌ಶೀಲ್ಡ್, ಇದು ಗಾಳಿಯ ವಿರುದ್ಧ ಸುಧಾರಿತ ರಕ್ಷಣೆ ನೀಡುತ್ತದೆ. ಇನ್ನು ರೌಂಡ್ ಹೆಡ್‌ಲ್ಯಾಂಪ್ ಮತ್ತು ರಿಯರ್ ವ್ಯೂ ಮಿರರ್‌ಗಳು, ಮಸ್ಕಲರ್ ಫ್ಯೂಯಲ್ ಟ್ಯಾಂಕ್, ನಯವಾದ ಟರ್ನ್ ಇಂಡಿಕೇಟರ್, ಅಪ್‌ಸ್ವೆಪ್ಟ್ ಎಕ್ಸಾಸ್ಟ್ ತ್ತು ಸ್ಲಿಮ್ ಟೈಲ್ ವಿಭಾಗದಂತಹ ಇತರ ವಿನ್ಯಾಸ ಅಂಶಗಳು ಮೊದಲಿನಂತೆಯೇ ಇರುತ್ತವೆ.

2021ರ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಬೈಕ್ ಮಾಹಿತಿ ಬಹಿರಂಗ

ನವೀಕರಿಸಿದ ಹಿಮಾಲಯನ್ ಬೈಕ್ ಟಿಪ್ಪರ್ ನ್ಯಾವಿಗೇಷನ್ ಸಿಸ್ಟಮ್ ಎಂಬ ಗೂಗಲ್-ಚಾಲಿತ ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಸಿಸ್ಟಂನೊಂದಿಗೆ ಬರಲಿದೆ. ಇತ್ತೀಚೆಗೆ ಬಿಡುಗಡೆಗೊಂಡ ರಾಯಲ್ ಎನ್‌ಫೀಲ್ಡ್ ಮಿಟಿಯೋರ್ 350 ಬೈಕಿನಲ್ಲಿ ಟ್ರಿಪ್ಪರ್ ನ್ಯಾವಿಗೇಷನ್ ಫೀಚರ್ ಅನ್ನು ಮೊದಲು ಪರಿಚಯಿಸಿದ್ದರು.

MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

2021ರ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಬೈಕ್ ಮಾಹಿತಿ ಬಹಿರಂಗ

ಹೊಸ ಟ್ರಿಪ್ಪರ್ ನ್ಯಾವಿಗೇಷನ್ ಫೀಚರ್ ಬೈಕ್ ರೈಡಿಂಗ್ ವೇಳೆ ಸಾಕಷ್ಟು ಸಹಕಾರಿಯಾಗಿರಲಿದೆ. ರಾಯಲ್ ಎನ್‌ಫೀಲ್ಡ್ ಎಕ್ಸ್‌ಪ್ಲೊರ್ ಆ್ಯಂಡ್ ಪ್ಲ್ಯಾನ್ ರೈಡರ್ ಆ್ಯಪ್ ಮೂಲಕ ಟ್ರಿಪ್ರರ್ ಮೀಟರ್‌ಗೆ ಕನೆಕ್ಟ್ ಮಾಡಬಹುದಾಗಿದೆ. ಇದು ಟರ್ನ್ ಬೈ ಟರ್ನ್ ನ್ಯಾವಿಗೇಷನ್ ಸೇವೆ ಒದಗಿಸಲಿದೆ.

2021ರ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಬೈಕ್ ಮಾಹಿತಿ ಬಹಿರಂಗ

ಇನ್ನು ಮಿಟಿಯೊರ್ 350 ಮಾದರಿಯಲ್ಲಿರುವಂತಹ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ನಲ್ಲಿ ಹೆಚ್ಚುವರಿ ಪಾಡ್ ನೊಂದಿಗೆ ಹಿಮಾಲಯನ್ ಬೈಕಿನಲ್ಲಿ ಅಳವಡಿಸಲಾಗುತ್ತದೆ. ಉಳಿದಂತೆ ಯಾವುದೇ ಬದಲಾವಣೆಗಳು ಇರುವುದಿಲ್ಲವೆಂದು ನಿರೀಕ್ಷಿಸುತ್ತೇವೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

2021ರ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಬೈಕ್ ಮಾಹಿತಿ ಬಹಿರಂಗ

2021ರ ರಾಯಲ್ ಎನ್‍‍ಫೀಲ್ಡ್ ಹಿಮಾಲಯನ್ ಮಾದರಿಯಲ್ಲಿ 411 ಸಿಸಿಯ ಸಿಂಗಲ್ ಸಿಲಿಂಡರ್ ಏರ್ ಕೂಲ್ಡ್ ಎಂಜಿನ್ ಅನ್ನು ಅಳವಡಿಸಲಾಗುತ್ತದೆ. ಈ ಎಂಜಿನ್ 23.9 ಬಿ‍‍ಹೆಚ್‍‍ಪಿ ಪವರ್ ಮತ್ತು 32 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಬೈಕಿನಲ್ಲಿ 5 ಸ್ಪೀಡ್ ಗೇರ್‌ಬಾಕ್ಸ್ ನೀಡಲಾಗಿದೆ.

2021ರ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಬೈಕ್ ಮಾಹಿತಿ ಬಹಿರಂಗ

2021ರ ರಾಯಲ್ ಎನ್‍‍ಫೀಲ್ಡ್ ಹಿಮಾಲಯನ್ ಬೈಕ್ ಭಾರತದಲ್ಲಿ ಈ ವರ್ಷದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ. ರಾಯಲ್ ಎನ್‍‍ಫೀಲ್ಡ್ ಹಿಮಾಲಯನ್ ಮಾರುಕಟ್ಟೆಯಲ್ಲಿ ಬಿಎಂಡಬ್ಲ್ಯು ಜಿ 310 ಜಿಎಸ್ ಹಾಗೂ ಕವಾಸಕಿ ವರ್ಸಿಸ್-ಎಕ್ಸ್ 300, ಕೆಟಿ‍ಎಂ 390 ಬೈಕುಗಳಿಗೆ ಪೈಪೋಟಿ ನೀಡುತ್ತದೆ.

Most Read Articles

Kannada
English summary
New Royal Enfield Himalayan Leaks Via Official Website. Read In Kananda.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X