ಭಾರತದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ ಬಹುನಿರೀಕ್ಷಿತ ರಾಯಲ್ ಎನ್‌ಫೀಲ್ಡ್ ಹಂಟರ್ ಬೈಕ್

ಚೆನ್ನೈ ಮೂಲದ ಜನಪ್ರಿಯ ದ್ವಿಚಕ್ರ ತಯಾರಕ ಕಂಪನಿಯಾದ ರಾಯಲ್ ಎನ್‍ಫೀಲ್ಡ್ ತನ್ನ ಹೊಸ ಹಂಟರ್ 350 ಎಂಬ ಹೆಸರಿನ ಕ್ಲಾಸಿಕ್-ರೋಡ್‌ಸ್ಟರ್ ಬೈಕನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ ಹೊಸ ರಾಯಲ್ ಎನ್‌ಫೀಲ್ಡ್ ಹಂಟರ್ 350 ಬೈಕ್ ಬ್ರ್ಯಾಂಡ್‌ನ 350ಸಿಸಿ ವಿಭಾಗದಲ್ಲಿ ಇರಿಸಲಾಗುತ್ತದೆ ಎಂದು ನಿರೀಕ್ಷಿಸುತ್ತೇವೆ.

ಭಾರತದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ ಬಹುನಿರೀಕ್ಷಿತ ರಾಯಲ್ ಎನ್‌ಫೀಲ್ಡ್ ಹಂಟರ್ ಬೈಕ್

ಹೊಸ ರಾಯಲ್ ಎನ್‌ಫೀಲ್ಡ್ ಹಂಟರ್ 350 ಬೈಕನ್ನು ಬ್ರ್ಯಾಂಡ್‌ನ ಹೊಸ ಜೆ-ಪ್ಲಾಟ್‌ಫಾರ್ಮ್ ಅಡಿಯಲ್ಲಿ ಅಭಿವೃದ್ಧಿ ಪಡಿಸಬಹುದು. ಈ ಹೊಸ ಹಂಟರ್ 350 ಬೈಕ್ ಭಾರತದಲ್ಲಿ ಮತ್ತೊಮ್ಮೆ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ. ಈ ಬೈಕ್ ಸ್ಫಾಟ್ ಟೆಸ್ಟ್ ಟೆಸ್ಟ್ ನಡೆಸುತ್ತಿರುವ ಸ್ಪೈ ಚಿತ್ರಗಳು ಬಹಿರಂಗಪಡಿಸಿವೆ. ಈ ಹೊಸ ರಾಯಲ್ ಎನ್‌ಫೀಲ್ಡ್ ಹಂಟರ್ 350 ಬೈಕಿನ ವಿನ್ಯಾಸ, ಫೀಚರ್ ಮತ್ತು ಹೆಚ್ಚಿನ ಮಾಹಿತಿಗಳು ಬಹಿರಂಗವಾಗಿವೆ.

ಭಾರತದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ ಬಹುನಿರೀಕ್ಷಿತ ರಾಯಲ್ ಎನ್‌ಫೀಲ್ಡ್ ಹಂಟರ್ ಬೈಕ್

ಸ್ಪೈ ಚಿತ್ರಗಳ ಕಂಡುಬಂದಂತೆ, ಹೊಸ ರಾಯಲ್ ಎನ್‌ಫೀಲ್ಡ್ ಹಂಟರ್ 350 ಬೈಕಿನ ವಿನ್ಯಾಸದ ಬಗ್ಗೆ ಹೇಳುವುದಾದರೆ, ಈ ಮಾದರಿಯು ಕ್ಲಾಸಿಕ್-ರೋಡ್‌ಸ್ಟರ್ ಲುಕ್ ಅನ್ನು ಹೊಂದಿದೆ. ಈ ಬೈಕಿನ ವೃತಕಾರದ ಹೆಡ್‌ಲ್ಯಾಂಪ್, ಟೈಲ್‌ಲ್ಯಾಂಪ್ ಮತ್ತು ಟರ್ನ್ ಸಿಗ್ನಲ್ ಇಂಡಿಗೇಟರ್ ಗಳನ್ನು ಒಳಗೊಂಡಿವೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಭಾರತದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ ಬಹುನಿರೀಕ್ಷಿತ ರಾಯಲ್ ಎನ್‌ಫೀಲ್ಡ್ ಹಂಟರ್ ಬೈಕ್

ಇದರ ವೃತ್ತಾಕಾರದ ಹೆಡ್‌ಲ್ಯಾಂಪ್ ಕ್ಲಸ್ಟರ್ ಸಂಯೋಜಿತ ಎಲ್ಇಡಿ ಡೇಟೈಮ್ ರನ್ನಿಂಗ್ ಲೈಟ್ ಅನ್ನು ಹೊಂದಿರುತ್ತದೆ. ಇನ್ನು ಈ ಹೊಸ ಹಂಟರ್ ಬೈಕ್ ಸ್ಕಲಪಡಡ್ ಫ್ಯೂಯಲ್ ಟ್ಯಾಂಕ್, ಮೆತ್ತನೆಯ ಸ್ಪ್ಲಿಟ್-ಸೀಟುಗಳು, ಅಪ್-ಸ್ವಿಪ್ಟ್ ಎಕ್ಸಾಸ್ಟ್ ಮತ್ತು ಸೈಡ್ ಕವರ್‌ಗಳನ್ನು ಮಿಟಿಯೊರ್ 350 ಬೈಕಿನಲ್ಲಿರುವಂತೆ ಇದೆ.

ಭಾರತದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ ಬಹುನಿರೀಕ್ಷಿತ ರಾಯಲ್ ಎನ್‌ಫೀಲ್ಡ್ ಹಂಟರ್ ಬೈಕ್

ಇನ್ನು ಈ ಬೈಕಿನ ಸಣ್ಣ-ಸಿಂಗಲ್-ಪಾಡ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ನಾವು ಗಮನಿಸಬಹುದು. ಇನ್ನು ಈ ಹೊಸ ಬೈಕಿನಲ್ಲಿ ಟ್ರಿಪ್ಪರ್ ನ್ಯಾವಿಗೇಷನ್ ಫೀಚರ್ ಅನ್ನು ಒಳಗೊಂಡಿರುತ್ತದೆ ಅನ್ನು ಕೂಡ ನೀಡುತ್ತದೆ.

MOST READ: ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಎಡಿಷನ್ ಬಿಡುಗಡೆ

ಭಾರತದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ ಬಹುನಿರೀಕ್ಷಿತ ರಾಯಲ್ ಎನ್‌ಫೀಲ್ಡ್ ಹಂಟರ್ ಬೈಕ್

ಮೊಬೈಲ್ ಅಪ್ಲಿಕೇಶನ್‌ ಮೂಲಕ ಸ್ಮಾರ್ಟ್‌ಫೋನ್‌ನೊಂದಿಗೆ ಒಮ್ಮೆ ಜೋಡಿಸಿದಾಗ ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಒದಗಿಸಲು ಇದು ಸಣ್ಣ ಟಿಎಫ್‌ಟಿ ಡಿಸ್ ಪ್ಲೇಯನ್ನು ಹೊಂದಿರುತ್ತದೆ. ಇದು ವೇಗ, ಒಡೋಮೀಟರ್, ಟ್ರಿಪ್ ಮೀಟರ್, ಫ್ಯೂಯಲ್ ಗೇಜ್ ಮತ್ತು ಇತರ ಟೆಲ್ಟೇಲ್ ಚಿಹ್ನೆಗಳಂತಹ ಉಳಿದ ವಿವರಗಳನ್ನು ಒದಗಿಸಲು ಮುಖ್ಯ ಕ್ಲಸ್ಟರ್ ಯುನಿಟ್ ಅನ್ನು ಕಾಯ್ದಿರಿಸಲಾಗುತ್ತದೆ.

ಭಾರತದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ ಬಹುನಿರೀಕ್ಷಿತ ರಾಯಲ್ ಎನ್‌ಫೀಲ್ಡ್ ಹಂಟರ್ ಬೈಕ್

ಇನ್ನು ಹೊಸ ರಾಯಲ್ ಎನ್‌ಫೀಲ್ಡ್ ಹಂಟರ್ 350 ಬೈಕಿನಲ್ಲಿ ಮಿಟಿಯೊರ್ 350 ಮಾದರಿಯಲ್ಲಿರುವ ಅದೇ ಎಂಜಿನ್ ಅನ್ನು ಅಳವಡಿಸಬಹುದು, ಇದು ಹೊಸ ಎಸ್‌ಒಹೆಚ್‌ಸಿ 349ಸಿಸಿ ಸಿಂಗಲ್ ಸಿಲಿಂಡರ್ ಏರ್-ಆಯಿಲ್ ಕೂಲ್ಡ್ ಎಸ್‌ಒಹೆಚ್‌ಸಿ ಎಂಜಿನ್ ಆಗಿದೆ.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಈ ಎಂಜಿನ್ 6100 ಆರ್‌ಪಿಎಂನಲ್ಲಿ 20.2 ಬಿಹೆಚ್‍ಪಿ ಪವರ್ ಮತ್ತು 4000 ಆರ್‌ಪಿಎಂನಲ್ಲಿ 27 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ. ಈ ಎಂಜಿನ್ ಅನ್ನು 5-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗುತ್ತದೆ. ಇನ್ನು ಈ ಬೈಕಿನ ಎಕ್ಸಾಸ್ಟ್ ನಿಂದ ಬರುವ ಸೌಂಡ್ ಆಕರ್ಷಕವಾಗಿದೆ.

ಭಾರತದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ ಬಹುನಿರೀಕ್ಷಿತ ರಾಯಲ್ ಎನ್‌ಫೀಲ್ಡ್ ಹಂಟರ್ ಬೈಕ್

ಹೊಸ ರಾಯಲ್ ಎನ್‌ಫೀಲ್ಡ್ ಹಂಟರ್ 350 ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್ ಹಿಂಭಾಗದಲ್ಲಿ ಟ್ವಿನ್-ಶಾಕ್ ಸೆಟಪ್ ಅನ್ನು ಹೊಂದಿದೆ. ಇನ್ನು ಎರಡು ಕಡೆಯಲ್ಲಿ ಡಿಸ್ಕ್ ಬ್ರೇಕ್ ಅನ್ನು ನೀಡಿ, ಇದರೊಂದಿಗೆ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಬಹುದು.

ಭಾರತದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ ಬಹುನಿರೀಕ್ಷಿತ ರಾಯಲ್ ಎನ್‌ಫೀಲ್ಡ್ ಹಂಟರ್ ಬೈಕ್

ರಾಯಲ್ ಎನ್‌ಫೀಲ್ಡ್ ಕಂಪನಿಯ 350ಸಿಸಿ ವಿಭಾಗದ ಹಂಟರ್ ಬೈಕ್ ಹೊಸ ಮಾದರಿಯಾಗಿದೆ. ಈ ಹೊಸ ರಾಯಲ್ ಎನ್‌ಫೀಲ್ಡ್ ಹಂಟರ್ ಬೈಕ್ ಈ ವರ್ಷದಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ. ಈ ಹೊಸ ಮಾದರಿಯು ಭಾರತದಲ್ಲಿ ಹೋಂಡಾ ಹೈನೆಸ್ ಸಿಬಿ 350 ಮತ್ತು ಜಾವಾ 300 ಬೈಕುಗಳಿಗೆ ಪೈಪೋಟಿ ನೀಡುತ್ತದೆ.

Image Courtesy: Motoholic Tamil

Most Read Articles

Kannada
English summary
Royal Enfield Hunter 350 Spotted Again. Read In Kannada.
Story first published: Tuesday, April 13, 2021, 9:56 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X