2021ರ ರಾಯಲ್ ಎನ್‍ಫೀಲ್ಡ್ ಇಂಟರ್‍‍ಸೆಪ್ಟರ್ 650, ಕಾಂಟಿನೆಂಟಲ್ ಜಿ‍ಟಿ 650 ಬೈಕ್‌ಗಳು ಬಿಡುಗಡೆ

ಚೆನ್ನೈ ಮೂಲದ ಜನಪ್ರಿಯ ದ್ವಿಚಕ್ರ ತಯಾರಕ ಕಂಪನಿಯಾದ ರಾಯಲ್ ಎನ್‍ಫೀಲ್ಡ್ ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಇಂಟರ್‍‍ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿ‍ಟಿ650 ಬೈಕ್‌ಗಳನ್ನು ಬಿಡುಗಡೆಗೊಳಿಸಿವೆ. ಈ ಎರಡು ಟ್ವಿನ್ ಬೈಕ್‌ಗಳನ್ನು ನವೀಕರಿಸಿ 2021ರ ಮಾದರಿಯಾಗಿ ಬಿಡುಗಡೆಗೊಳಿಸಲಾಗಿದೆ.

2021ರ ರಾಯಲ್ ಎನ್‍ಫೀಲ್ಡ್ ಇಂಟರ್‍‍ಸೆಪ್ಟರ್ 650, ಕಾಂಟಿನೆಂಟಲ್ ಜಿ‍ಟಿ650 ಬೈಕ್‌ಗಳು ಬಿಡುಗಡೆ

ಹೊಸ ರಾಯಲ್ ಎನ್‍ಫೀಲ್ಡ್ ಇಂಟರ್‍‍ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿ‍ಟಿ650 ಬೈಕ್‌ಗಳು ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡಿದೆ. ಇನ್ನು 2021ರ ಇಂಟರ್‍‍ಸೆಪ್ಟರ್ 650 ಬೈಕಿನ ಬೆಲೆಯು ರೂ.2.75 ಲಕ್ಷಗಳಾಗಿದ್ದರೆ, ಇದರ ಕಸ್ಟಮ್ ಬಣ್ಣದ ಆಯ್ಜೆಯ ಮಾದರಿಯ ಬೆಲೆಯು ರೂ.2.83 ಲಕ್ಷಗಳಾಗಿದೆ. ಇನ್ನು ಇಂಟರ್‍‍ಸೆಪ್ಟರ್ 650 ಟಾಪ್-ಸ್ಪೆಕ್ ಕ್ರೋಮ್ ಬಣ್ಣದ ಮಾದರಿಯ ಬೆಲೆಯು ರೂ.2.97 ಲಕ್ಷಗಳಾಗಿದೆ. ಎಲ್ಲಾ ಬೆಲೆಗಳು ದೆಹಲಿ ಎಕ್ಸ್ ಶೋರೂಂ ಪ್ರಕಾರವಾಗಿದೆ.

2021ರ ರಾಯಲ್ ಎನ್‍ಫೀಲ್ಡ್ ಇಂಟರ್‍‍ಸೆಪ್ಟರ್ 650, ಕಾಂಟಿನೆಂಟಲ್ ಜಿ‍ಟಿ650 ಬೈಕ್‌ಗಳು ಬಿಡುಗಡೆ

2021ರ ಕಾಂಟಿನೆಂಟಲ್ ಜಿ‍ಟಿ650 ಕೆಫೆ-ರೇಸರ್ ಬೈಕಿನ ಆರಂಭಿಕ ಬೆಲೆಯು ರೂ.2.91 ಲಕ್ಷಗಳಾದರೆ, ಇದರ ಕಸ್ಟಮ್ ಬಣ್ಣದ ಮಾದರಿಗೆ ರೂ.2.99 ಲಕ್ಷಗಳಾಗಿದೆ. ಇನ್ನು ಟಾಪ್-ಸ್ಪೆಕ್ ಮಿಸ್ಟರ್ ಕ್ಲೀನ್ ಬಣ್ಣದ ಮಾದರಿಯ ಬೆಲೆಯು ರೂ.2.99 ಲಕ್ಷಗಳಾಗಿದೆ. ಈ ಎಲ್ಲಾ ಬೆಲೆಗಳು ದೆಹಲಿಯ ಎಕ್ಸ್ ಶೋರೂಂ ಪ್ರಕಾರವಾಗಿದೆ.

MOST READ: ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಎಡಿಷನ್ ಬಿಡುಗಡೆ

2021ರ ರಾಯಲ್ ಎನ್‍ಫೀಲ್ಡ್ ಇಂಟರ್‍‍ಸೆಪ್ಟರ್ 650, ಕಾಂಟಿನೆಂಟಲ್ ಜಿ‍ಟಿ650 ಬೈಕ್‌ಗಳು ಬಿಡುಗಡೆ

ಹೊಸ ಬಣ್ಣಗಳ ಹೊರತಾಗಿ, ಎರಡು ಬೈಕ್‌ಗಳು ಬ್ರ್ಯಾಂಡ್‌ನ ಮೇಕ್-ಇಟ್-ಯುವರ್ಸ್ ಕಸ್ಟಮೈಸ್ ಕಾರ್ಯಕ್ರಮದ ಭಾಗವಾಗಿದೆ. ಫಾಕ್ಟಿರಿಯಿದಲೇ ಗ್ರಾಹಕರು ತಮ್ಮ ಬೈಕಿನಲ್ಲಿ ತಮಗೆ ಇಷ್ಟವಿರುವಂತಹ ಮಾಡಿಫೈ ಅನ್ನು ಮಾಡಿಸಬಹುದು. ಇದರಲ್ಲಿ ವಿವಿಧ ಸೀಟುಗಳ ಆಕಾರಗಳು, ಟೂರಿಂಗ್ ಮೀರರ್, ಫ್ಲೈಸ್ಕ್ರೀನ್‌ಗಳು ಮತ್ತು ಸಂಪ್ ಗಾರ್ಡ್‌ಗಳು ಮತ್ತು ಇತರ ಉಪಕರಣಗಳನ್ನು ಒಳಗೊಂಡಿವೆ.

2021ರ ರಾಯಲ್ ಎನ್‍ಫೀಲ್ಡ್ ಇಂಟರ್‍‍ಸೆಪ್ಟರ್ 650, ಕಾಂಟಿನೆಂಟಲ್ ಜಿ‍ಟಿ650 ಬೈಕ್‌ಗಳು ಬಿಡುಗಡೆ

ಹೊಸ ರಾಯಲ್ ಎನ್‍ಫೀಲ್ಡ್ ಇಂಟರ್‍‍ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿ‍ಟಿ650 ಬೈಕ್‌ಗಳಲ್ಲಿ ಹಿಂದಿನ ಮಾದರಿಗಳಲ್ಲಿ ಇದ್ದ ಅದೇ, 649ಸಿಸಿ ಪ್ಯಾರಲಲ್ ಟ್ವಿನ್ ಸಿಲಿಂಡರ್ ಎಂಜಿನ್ ಅನ್ನು ಹೊಂದಿದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

2021ರ ರಾಯಲ್ ಎನ್‍ಫೀಲ್ಡ್ ಇಂಟರ್‍‍ಸೆಪ್ಟರ್ 650, ಕಾಂಟಿನೆಂಟಲ್ ಜಿ‍ಟಿ650 ಬೈಕ್‌ಗಳು ಬಿಡುಗಡೆ

ಈ ಎಂಜಿನ್ 7,250 ಆರ್‌ಪಿಎಂನಲ್ಲಿ 47 ಬಿಹೆಚ್‌ಪಿ ಪವರ್ ಮತ್ತು 5,250 ಆರ್‌ಪಿಎಂನಲ್ಲಿ 52 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು 6-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ.

2021ರ ರಾಯಲ್ ಎನ್‍ಫೀಲ್ಡ್ ಇಂಟರ್‍‍ಸೆಪ್ಟರ್ 650, ಕಾಂಟಿನೆಂಟಲ್ ಜಿ‍ಟಿ650 ಬೈಕ್‌ಗಳು ಬಿಡುಗಡೆ

ಇನ್ನು ಎರಡು ಟ್ವಿನ್ ಬೈಕ್‌ಗಳ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 41 ಎಂಎಂ ಫೋರ್ಕ್‌ಗಳು ಮತ್ತು ಹಿಂಭಾಗದಲ್ಲಿ ಟ್ವಿನ್-ಗ್ಯಾಸ್ ಚಾರ್ಜ್ಡ್ ಶಾಕ್ ಗಳು 5-ಹಂತದ ಹೊಂದಾಣಿಕೆಯೊಂದಿಗೆ ಪ್ರಿ-ಲೋಡ್ ಡ್ಯಾಂಪಿಂಗ್‌ಗಾಗಿ ನಿರ್ವಹಿಸುತ್ತವೆ.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

2021ರ ರಾಯಲ್ ಎನ್‍ಫೀಲ್ಡ್ ಇಂಟರ್‍‍ಸೆಪ್ಟರ್ 650, ಕಾಂಟಿನೆಂಟಲ್ ಜಿ‍ಟಿ650 ಬೈಕ್‌ಗಳು ಬಿಡುಗಡೆ

ಇನ್ನು ಹೊಸ ರಾಯಲ್ ಎನ್‍ಫೀಲ್ಡ್ ಇಂಟರ್‍‍ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿ‍ಟಿ650 ಬೈಕ್‌ಗಳ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 320 ಎಂಎಂ ಡಿಸ್ಕ್ ಮತ್ತು ಹಿಂಭಾಗದಲ್ಲಿ 240 ಎಂಎಂ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಲಾಗಿದೆ. ಇದರೊಂದಿಗೆ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಿದೆ.

2021ರ ರಾಯಲ್ ಎನ್‍ಫೀಲ್ಡ್ ಇಂಟರ್‍‍ಸೆಪ್ಟರ್ 650, ಕಾಂಟಿನೆಂಟಲ್ ಜಿ‍ಟಿ650 ಬೈಕ್‌ಗಳು ಬಿಡುಗಡೆ

ಇನ್ನು ಈ ಬೈಕ್‌ಗಳಲ್ಲಿ 18 ಇಂಚಿನ ಸ್ಪೋಕ್ಡ್ ವ್ಹೀಲ್ ಗಳನ್ನು ಹೊಂದಿವೆ. ಎರಡು ಬೈಕ್‌ಗಳ ವಿನ್ಯಾಸವು ಬದಲಾಗದೆ ಉಳಿದಿದೆ. ಇದು ಒಂದೇ ಮಾದರಿಯ ಹೆಡ್‌ಲ್ಯಾಂಪ್‌ಗಳು, ಟೈಲ್‌ಲ್ಯಾಂಪ್‌ಗಳು, ಟ್ವಿನ್ ಎಕ್ಸಾಸ್ಟ್ ಸೆಟಪ್, ಸಿಂಗಲ್-ಪೀಸ್ ಫ್ಲಾಟ್ ಸೀಟ್ ಮತ್ತು ಹೆಚ್ಚಿನದನ್ನು ಒಳಗೊಂಡಿದೆ.

2021ರ ರಾಯಲ್ ಎನ್‍ಫೀಲ್ಡ್ ಇಂಟರ್‍‍ಸೆಪ್ಟರ್ 650, ಕಾಂಟಿನೆಂಟಲ್ ಜಿ‍ಟಿ650 ಬೈಕ್‌ಗಳು ಬಿಡುಗಡೆ

ಹೊಸ ಇಂಟರ್‍‍ಸೆಪ್ಟರ್ 650 ಬೈಕ್ ಉತ್ತಮ ಸೀಟಿಂಗ್ ಪೊಷಿಷನ್ ಅನ್ನು ಹೊಂದಿದೆ. ಇನ್ನು ಕಾಂಟಿನೆಂಟಲ್ ಜಿಟಿ 650 ಅದರ ಉದ್ದವಾದ ಟ್ಯಾಂಕ್ ವಿನ್ಯಾಸ ಮತ್ತು ಕ್ಲಿಪ್-ಆನ್ ಹ್ಯಾಂಡಲ್‌ಬಾರ್‌ಗಳೊಂದಿಗೆ ಹೆಚ್ಚು ಅಗ್ರೇಸಿವ್ ಲುಕ್ ಅನ್ನು ಹೊಂದಿದೆ.

2021ರ ರಾಯಲ್ ಎನ್‍ಫೀಲ್ಡ್ ಇಂಟರ್‍‍ಸೆಪ್ಟರ್ 650, ಕಾಂಟಿನೆಂಟಲ್ ಜಿ‍ಟಿ650 ಬೈಕ್‌ಗಳು ಬಿಡುಗಡೆ

2021ರ ರಾಯಲ್ ಎನ್‍ಫೀಲ್ಡ್ ಇಂಟರ್‍‍ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿ‍ಟಿ650 ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡಿದೆ. ಆದರೆ ಈ ಟ್ವಿನ್ ಬೈಕಿನಲ್ಲಿ ಟ್ರಿಪ್ಪರ್ ನ್ಯಾವಿಗೇಷನ್ ಫೀಚರ್ ಅನ್ನು ನೀಡಲಾಗಿಲ್ಲ. ಆದರೆ ಕಸ್ಟಮೈಸ್ ಮಾಡಲು ಒಂದು ಆಯ್ಕೆಯನ್ನು ಸಹ ಕಂಪನಿಯು ಒದಗಿಸಿದೆ.

2021ರ ರಾಯಲ್ ಎನ್‍ಫೀಲ್ಡ್ ಇಂಟರ್‍‍ಸೆಪ್ಟರ್ 650, ಕಾಂಟಿನೆಂಟಲ್ ಜಿ‍ಟಿ650 ಬೈಕ್‌ಗಳು ಬಿಡುಗಡೆ

2021ರ ರಾಯಲ್ ಎನ್‍ಫೀಲ್ಡ್ ಇಂಟರ್‍‍ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿ‍ಟಿ650 ಬೈಕ್‌ಗಳಲ್ಲಿ ಯಾವುದೇ ಪ್ರಮುಖ ಬದಲಾವಣೆಗಳು ಕಂಡು ಬಂದಿಲ್ಲ. ಆದರೆ ರಾಯಲ್ ಎನ್‌ಫೀಲ್ಡ್ ಕೆಲವು ಸಣ್ಣ ಬದಲಾವಣೆಗಳೊಂದಿಗೆ ಇಂಟರ್‍‍ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿ‍ಟಿ 650 ಬೈಕ್‌ಗಳಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಾಗಿದೆ.

Article Published On: Tuesday, March 23, 2021, 15:48 [IST]
English summary
2021 Royal Enfield Interceptor 650 & Continental GT 650 Launched. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+