Just In
- 1 hr ago
ಫೋಕ್ಸ್ವ್ಯಾಗನ್ ಐಡಿ.4 ಜಿಟಿಎಕ್ಸ್ ಪರ್ಫಾಮೆನ್ಸ್ ಎಲೆಕ್ಟ್ರಿಕ್ ಕಾರಿನ ಟೀಸರ್ ಬಿಡುಗಡೆ
- 1 hr ago
ಕೇವಲ 48 ನಿಮಿಷಗಳಲ್ಲಿ ಸೋಲ್ಡ್ ಔಟ್ ಆದ ಕೆಟಿಎಂ 1290 ಸೂಪರ್ ಡ್ಯೂಕ್ ಆರ್ಆರ್
- 2 hrs ago
ಹೆರ್ಮೆಸ್ 75 ವಾಣಿಜ್ಯ ಬಳಕೆಯ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಿದ ಕಬೀರಾ ಮೊಬಿಲಿಟಿ
- 3 hrs ago
ದುಬಾರಿ ಬೆಲೆಯ ಲ್ಯಾಂಡ್ ರೋವರ್ ಡಿಫೆಂಡರ್ ಎಸ್ಯುವಿ ಖರೀದಿಸಿದ ನಟ ಅರ್ಜುನ್ ಕಪೂರ್
Don't Miss!
- Movies
'ನೀವು ಬಸ್ ಡ್ರೈವರ್ ಮಗನೇ, ನಮ್ಮ ಮುಷ್ಕರ ಬೆಂಬಲಿಸಿ': ಯಶ್ಗೆ ಪತ್ರ ಬರೆದ ಸಾರಿಗೆ ನೌಕರರು?
- News
ಸರ್ಕಾರ v/s ಸಾರಿಗೆ ನೌಕರರು: 8ನೇ ದಿನಕ್ಕೆ ಕಾಲಿಟ್ಟ ಮುಷ್ಕರ
- Sports
ಸ್ವಿಗ್ಗಿಯಿಂದ ರೋಹಿತ್ ಶರ್ಮಾಗೆ ಅವಮಾನ ; ಕಿಡಿಕಾರಿದ ಫ್ಯಾನ್ಸ್
- Lifestyle
ರಕ್ತದಲ್ಲಿ ಕಬ್ಬಿಣದಂಶ ಹೆಚ್ಚಾದರೆ ಆಯುಸ್ಸು ಕಡಿಮೆಯಾಗುವುದು
- Education
NEET PG Admit Card 2021: ನೀಟ್ ಪಿಜಿ ಪ್ರವೇಶ ಪತ್ರ ಡೌನ್ಲೋಡ್ ಮಾಡುವುದು ಹೇಗೆ ?
- Finance
ಸುಮಾರು 5,550 ಕೋಟಿ ರು ಡಿವಿಡೆಂಡ್ ಘೋಷಿಸಿದ ಟಿಸಿಎಸ್
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮಿಟಿಯೊರ್ 350 ಕ್ರೂಸರ್ ಬೈಕ್ ಬೆಲೆ ಹೆಚ್ಚಿಸಿದ ರಾಯಲ್ ಎನ್‌ಫೀಲ್ಡ್
ಹೊಸ ಹಣಕಾಸಿನ ವರ್ಷದಲ್ಲಿ ಹಲವಾರು ವಾಹನ ಉತ್ಪಾದನಾ ಕಂಪನಿಗಳು ಬೆಲೆ ಏರಿಕೆ ಮಾಡಿದೆ. ಅದರಂತೆ ಜನಪ್ರಿಯ ದ್ವಿಚಕ್ತ್ರ ಕಂಪನಿಯಾದ ರಾಯಲ್ ಎನ್‌ಫೀಲ್ಡ್ ಕೂಡ ತನ್ನ ಸರಣಿಯಲ್ಲಿರುವ ಬೈಕ್‌ಗಳ ಬೆಲೆಯನ್ನು ಹೆಚ್ಚಿಸಿದೆ. ಇದೀಗ ರಾಯಲ್ ಎನ್ಫೀಲ್ಡ್ ಮಿಟಿಯೊರ್ 350 ಬೈಕಿನ ಹೊಸ ದರವನ್ನು ಬಹಿರಂಗಪಡಿಸಿದೆ.

ಭಾರತದಲ್ಲಿ ರಾಯಲ್ ಎನ್ಫೀಲ್ಡ್ ಮಿಟಿಯೊರ್ 350 ಬೈಕ್ ದುಬಾರಿಯಾಗಿದೆ. ಈ ಹೊಸ ರಾಯಲ್ ಎನ್ಫೀಲ್ಡ್ ಮಿಟಿಯೊರ್ 350 ಬೈಕಿನ ಬೆಲೆಯನ್ನು ಸುಮಾರು ರೂ.6,000 ವರೆಗೆ ಹೆಚ್ಚಿಸಲಾಗಿದೆ. ಬೆಲೆ ಏರಿಕೆಯ ಬಳಿಕ, ಎಂಟ್ರಿ ಲೆವೆಲ್ ಆರ್‌ಇ ಮಿಟಿಯೊರ್ 350 ಫೈರ್‌ಬಾಲ್ ರೂಪಾಂತರದ ಬೆಲೆಯು ರೂ.1.84 ಲಕ್ಷಗಳಾದರೆ, ಟಾಪ್ ಎಂಡ್ ಸೂಪರ್ ನೋವಾ ರೂಪಾಂತರದ ಬೆಲೆಯು ರೂ.1.99 ಲಕ್ಷಗಳಾಗಿದೆ. ಈ ಎಲ್ಲಾ ಬೆಲೆಗಳು ಎಕ್ಸ್ ಶೋರೂಂ ಪ್ರಕಾರವಾಗಿದೆ.

ರಾಯಲ್ ಎನ್ಫೀಲ್ಡ್ ಮಿಟಿಯೊರ್ 350 ಬೈಕನ್ನು ತಮಿಳುನಾಡು ಮತ್ತು ಯುಕೆ ಮೂಲದ ಆರ್‌ಇ ತಂಡವು ವಿನ್ಯಾಸಗೊಳಿಸಿದೆ. ಹಿಂದಿನ ಥಂಡರ್‌ಬರ್ಡ್ ಎಕ್ಸ್ ಮಾದರಿಯನ್ನು ಆಧರಿಸಿ ನಿರ್ಮಾಣಗೊಂಡಿರುವ ಮಿಟಿಯೊರ್ 350 ಬೈಕ್ ಮಾದರಿಯು ಥಂಡರ್‌ಬರ್ಡ್ ಬೈಕಿಗಿಂತಲೂ ಸಾಕಷ್ಟು ವಿಭಿನ್ನವಾಗಿ ಮತ್ತು ಆಕರ್ಷಕವಾಗಿದೆ.
MOST READ: ಯೂನಿಕಾರ್ನ್ ಬೈಕಿನ ಬೆಲೆ ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

ಈ ಹೊಸ ರಾಯಲ್ ಎನ್ಫೀಲ್ಡ್ ಮಿಟಿಯೊರ್ 350 ಬೈಕಿನಲ್ಲಿ 349 ಸಿಸಿ, ಏರ್/ಆಯಿಲ್-ಕೂಲ್ಡ್, ಸಿಂಗಲ್ ಸಿಲಿಂಡರ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಇದರಲ್ಲಿ ಫ್ಯೂಯಲ್ ಇಂಜೆಕ್ಷನ್ ಸಿಸ್ಟಂ ಅನ್ನು ಕೂಡ ಪಡೆಯುತ್ತದೆ.

ಇನ್ನು ಈ ಎಂಜಿನ್ 20.2 ಬಿಹೆಚ್‍ಪಿ ಪವರ್ ಮತ್ತು 27 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 5-ಸ್ಪೀಡ್ ಗೇರ್‌ಬಾಕ್ಸ್ ಅನ್ನು ಜೋಡಿಸಲಾಗಿದೆ.
MOST READ: ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಎಡಿಷನ್ ಬಿಡುಗಡೆ

ಈ ರಾಯಲ್ ಎನ್ಫೀಲ್ಡ್ ಮಿಟಿಯೊರ್ 350 ಬೈಕನ್ನು ಹೊಸ ಜೆ ಪ್ಲಾಟ್‌ಫಾರ್ಮ್‌ನಲ್ಲಿ ವಿನ್ಯಾಸಗೊಳಿಸಲಾಗಿದ್ದು ಅದು ಹೊಸ ತಲೆಮಾರಿನ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಅನ್ನು ಸಹ ಆಧಾರಗೊಳಿಸುತ್ತದೆ.

ಡಬಲ್ ಡೌನ್‌ಟ್ಯೂಬ್ ಕ್ರೆಡಲ್ ಫ್ರೇಮ್ ಮೇಲೆ ಅಭಿವೃದ್ದಿಗೊಂಡಿರುವ ಹೊಸ ಬೈಕ್ ಮಾದರಿಯು ಥಂಡರ್‌ಬರ್ಡ್ ಮಾದರಿಗಿಂತಲೂ ಹೆಚ್ಚು ಅರಾಮದಾಯಕ ರೈಡಿಂಗ್ ಅನುಭವ ನೀಡುತ್ತದೆ. ಈ ಬೈಕಿನ ಸಸ್ಪೆಂಕ್ಷನ್ ಗಾಗಿ ಮುಂಭಾಗದಲ್ಲಿ 41-ಎಂಎಂ ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗದಲ್ಲಿ 6 ಹಂತಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಟ್ವಿನ್ ಶಾಕ್ ಅಬ್ಸಾರ್ಬರ್ ನೀಡಲಾಗಿದೆ.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍ಮಾಸ್ಟರ್ ಬೈಕ್

ರಾಯಲ್ ಎನ್ಫೀಲ್ಡ್ ಮಿಟಿಯೊರ್ 350 ಬೈಕಿನ ಮುಂಭಾಗ 19-ಇಂಚಿನ ಮತ್ತು ಹಿಂಭಾಗದಲ್ಲಿ 17-ಇಂಚಿನ ಅಲಾಯ್ ವ್ಹೀಲ್ ಗಳನ್ನು ಜೋಡಿಸಲಾಗಿದೆ. ಇದು ಕ್ರಮವಾಗಿ 100 / 90-19 57 ಪಿ ಮತ್ತು 140 / 70-17 66 ಪಿ ಸಿಯೆಟ್ ಟ್ಯೂಬ್‌ಲೆಸ್ ಟೈರ್ ಅನ್ನು ಒಳಗೊಂಡಿದೆ.

ಇದರೊಂದಿಗೆ ರಾಯಲ್ ಎನ್ಫೀಲ್ಡ್ ಮಿಟಿಯೊರ್ 350 ಬೈಕಿನಲ್ಲಿ ಟಿಪ್ಪರ್ ಪಾಡ್ ಒಳಗೊಂಡಿರುವ ಟರ್ನ್-ಬೈ-ಟರ್ನ್ ಗೂಗಲ್ ನ್ಯಾವಿಗೇಷನ್, ಬ್ಲೂಟೂತ್ ಮೂಲಕ ಕನೆಕ್ಟ್ ಮಾಡಬಹುದಾದ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಅಳವಡಿಸಲಾಗಿದೆ. ಇನ್ನು ಇದರೊಂದಿಗೆ ಹಲವಾರು ಫೀಚರ್ ಗಳನ್ನು ಒಳಗೊಂಡಿದೆ.

ಮೆಟಿಯೊರ್ 350 ಬೈಕ್ ಅನ್ನು ಸಹ ವಿಶ್ವದ ಹಲವು ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಮಾರಾಟ ಮಾಡಲಾಗುತ್ತದೆ. ರಾಯಲ್ ಎನ್‌ಫೀಲ್ಡ್ ಕಂಪನಿಯ ಬೈಕ್‌ಗಳನ್ನು ಥೈಲ್ಯಾಂಡ್, ಯುರೋಪ್ ಸೇರಿದಂತೆ ಹಲವು ದೇಶಗಳಲ್ಲಿ ಮಾರಾಟ ಮಾಡಲಾಗುತ್ತದೆ. ಇನ್ನು ದೇಶಿಯ ಮಾರುಕಟ್ಟೆಯಲ್ಲಿ ಉತ್ತಮವಾಗಿ ಮಾರಾಟವಾಗುತ್ತಿದೆ.