Just In
- 8 min ago ಮೇಡ್ ಇನ್ ಇಂಡಿಯಾ ಈ ಕಾರಿಗೆ ಜಪಾನ್ನಲ್ಲಿ ಭಾರೀ ಬೇಡಿಕೆ: ವಿಶ್ವಗುರು ಭಾರತಕ್ಕೆ ಎಲ್ಲವೂ ಸಾಧ್ಯ!
- 1 hr ago ಭೂಮಿಯ ಸ್ವರ್ಗ: 1.50 ಕೋಟಿಯ ಟೊಯೊಟಾ ವೆಲ್ಫೈರ್ಗೆ ಮನಸೋತ ಖ್ಯಾತ ನಟ.. ಈ ಕಾರಿನಲ್ಲಿ ಏನಿದೆ?
- 1 hr ago ಬರಲಿದೆ ಮತ್ತೊಂದು ಫ್ಯಾಮಿಲಿ ಎಲೆಕ್ಟ್ರಿಕ್ ಸ್ಕೂಟರ್: ಕಡಿಮೆ ಖರ್ಚಿನಲ್ಲಿ ಓಡಾಡಬಹುದು!
- 1 hr ago ಮಾರುತಿ ಸ್ವಿಫ್ಟ್ ಖರೀದಿಸುತ್ತಿದ್ದೀರಾ? ಸ್ವಲ್ಪ ಕಾಯಿರಿ... ಹೊಸ ಸ್ವಿಫ್ಟ್ ಬರುತ್ತಿದೆ! 35 ಕಿ.ಮೀ ಮೈಲೇಜ್
Don't Miss!
- Sports T20 World Cup 2024: ವೀರೇಂದ್ರ ಸೆಹ್ವಾಗ್ ಆಯ್ಕೆಯ ಭಾರತ ತಂಡದಲ್ಲಿ ಪ್ರಮುಖ ಆಟಗಾರರಿಗೆ ಸ್ಥಾನವಿಲ್ಲ!
- Technology Realme: ರಿಯಲ್ಮಿ ನಾರ್ಜೋ 70 5G, ನಾರ್ಜೋ 70x 5G ಸ್ಮಾರ್ಟ್ಫೋನ್ ಲಾಂಚ್! ಸಖತ್ ಫೀಚರ್ಸ್... ಬೆಲೆ ಎಷ್ಟು?
- Movies "ಸದಾ ನನ್ನ ಹಿಂಭಾಗವನ್ನೇ ಜೂಮ್ ಮಾಡ್ತಾರೆ"; ನೋರಾ ಫತೇಹಿ ಆಕ್ರೋಶ
- Lifestyle ವಿಕಲಚೇತನರಿಗೆ ಸ್ಕೂಟಿ ಗಿಫ್ಟ್..! ಮನೆ ಕಟ್ಟಿಕೊಡುವ ಭರವಸೆ ನೀಡಿದ ನಟ ಲಾರೆನ್ಸ್..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- News Mangalsutra Row: ಸಾಧನೆ ಹೇಳಿ ಮತ ಕೇಳಲು ಮುಖವಿಲ್ಲದ ಪ್ರಧಾನಿ: ಕಾಂಗ್ರೆಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಡುಗಡೆಗೆ ಸಜ್ಜಾಗುತ್ತಿದೆ ಸುಜುಕಿ ಬರ್ಗ್ಮನ್ ಎಲೆಕ್ಟ್ರಿಕ್ ಸ್ಕೂಟರ್
ಜನಪ್ರಿಯ ದ್ವಿಚಕ್ರ ತಯಾರಕ ಕಂಪನಿಯಾದ ಸುಜುಕಿ ಮೋಟಾರ್ಸೈಕಲ್ ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಈ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬ್ರ್ಯಾಂಡ್ನ ಜನಪ್ರಿಯ ಬರ್ಗ್ಮನ್ ಸ್ಟ್ರೀಟ್ 125 ಮ್ಯಾಕ್ಸಿ-ಸ್ಕೂಟರ್ ಆಧರಿಸಿ ಅಭಿವೃದ್ದಿ ಪಡಿಸಲಿದೆ.
ಸುಜುಕಿ ಮೋಟಾರ್ಸೈಕಲ್ ಕಂಪನಿಯು ಹೊಸ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಭಾರತದಲ್ಲಿ ಮತ್ತೊಮ್ಮೆ ಸ್ಫಾಟ್ ಟೆಸ್ಟ್ ನಡೆಸಿದೆ. ಹೊಸ ಸುಜುಕಿ ಬರ್ಗ್ಮನ್ ಎಲೆಕ್ಟ್ರಿಕ್ ಸ್ಕೂಟರ್ ಸ್ಪಾಟ್ ಟೆಸ್ಟ್ ನಡೆಸುತ್ತಿರುವ ಸ್ಪೈ ಚಿತ್ರಗಳು ಬಹಿರಂಗವಾಗಿವೆ. ಸ್ಪೈ ಚಿತ್ರದಲ್ಲಿ ಕಂಡುಬಂದತೆ ಹೊಸ ಸುಜುಕಿ ಬರ್ಗ್ಮನ್ ಎಲೆಕ್ಟ್ರಿಕ್ ಸ್ಕೂಟರ್ ಬಹುತೇಕೆ ತನ್ನ ಪೆಟ್ರೋಲ್ ಮಾದರಿಯ ರೀತಿಯಲ್ಲೇ ವಿನ್ಯಾಸವನ್ನು ಹೊಂದಿರಲಿದೆ.
ಹೊಸ ಸುಜುಕಿ ಬರ್ಗ್ಮನ್ ಎಲೆಕ್ಟ್ರಿಕ್ ಸ್ಕೂಟರ್ ಒಂದೇ ರೀತಿಯ ಹೆಡ್ಲ್ಯಾಂಪ್ಗಳು, ಫ್ರಂಟ್ ಕೌಲ್, ಇಂಟಿಗ್ರೇಟೆಡ್ ಟರ್ನ್ ಇಂಡಿಕೇಟರ್ಗಳೊಂದಿಗೆ ಫ್ರಂಟ್ ಏಪ್ರನ್ ಮತ್ತು ಸೈಡ್ ಮತ್ತು ರಿಯರ್ ಪ್ಯಾನೆಲ್ಗಳನ್ನು ಒಳಗೊಂಡಿದೆ.
MOST READ: ಭಾರತದಲ್ಲಿ ಕೈಗೆಟುಕುವ ದರದಲ್ಲಿ ಸಿಗುವ ಸ್ಕೂಟರ್ಗಳಿವು
ಆದರೆ ಹೊಸ ಸುಜುಕಿ ಬರ್ಗ್ಮನ್ ಎಲೆಕ್ಟ್ರಿಕ್ ಸ್ಕೂಟರ್ ಸೈಡ್ ಪ್ಯಾನೆಲ್ಗಳ ಕೆಳಭಾಗದಲ್ಲಿ ಬ್ಲೂ ಬಣ್ಣದ ಅಸೆಂಟ್ಸ್ ಗಳನ್ನು ಕಾಬಹುದಾಗಿದೆ. ಈ ಬ್ಲೂ ಬಣ್ಣವನ್ನು ಹ್ಯಾಂಡಲ್ಬಾರ್ನ ಹತ್ತಿರವೂ ಕಾಣಬಹುದು, ಇದು ಪೆಟ್ರೋಲ್ ಮತ್ತು ಎಲೆಕ್ಟ್ರಿಕ್ ಸುಜುಕಿ ಬರ್ಗ್ಮನ್ ಸ್ಟ್ರೀಟ್ ಸ್ಕೂಟರ್ ಗಳ ನಡುವಿನ ಪ್ರಮುಖ ಕಾಸ್ಮೆಟಿಕ್ ವ್ಯತ್ಯಾಸವಾಗಿದೆ.
ಮತ್ತೊಂದು ವ್ಯತ್ಯಾಸವೆಂದರೆ ಹಿಂದಿನ ಚಕ್ರದ ಬಳಿ ಎಕ್ಸಾಸ್ಟ್ ಪೈಪ್ ಆಗಿದೆ, ಸ್ಕೂಟರ್ನ ಬಲಭಾಗವನ್ನು ಈಗ ಸ್ವಿಂಗಾರ್ಮ್-ಮೌಂಟಡ್ ಸಸ್ಪೆಂಕ್ಷನ್ ಸೆಟಪ್ ನೊಂದಿಗೆ ಕಾಣಬಹುದು. ಎಡಭಾಗದಲ್ಲಿ ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.
MOST READ: ದುಬಾರಿಯಾಯ್ತು ಬಿಎಸ್-6 ಟಿವಿಎಸ್ ಎನ್ಟಾರ್ಕ್ 125 ಸ್ಕೂಟರ್
ಸುಜುಕಿ ಇತ್ತೀಚೆಗೆ ಬರ್ಗ್ಮನ್ ಸ್ಟ್ರೀಟ್ 125 ನಲ್ಲಿ ಬ್ಲೂಟೂತ್ ಕನೆಕ್ಟಿವಿಟಿಯೊಂದಿರುವ ಫುಲ್ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಪರಿಚಯಿಸಿತು. ಹೊಸ ಎಲೆಕ್ಟ್ರಿಕ್ ಮಾದರಿಯಲ್ಲಿಯು ಅದೇ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ನೀಡಬಹುದು ಎಂದು ನಿರೀಕ್ಷಿಸುತ್ತೇವೆ.
ಅಪ್ಲಿಕೇಶನ್ ಮೂಲಕ ಸ್ಮಾರ್ಟ್ಫೋನ್ಗೆ ಕನೆಕ್ಟ್ ಮಾಡಬಹುದಾದ ಹೊಸ ಕ್ಲಸ್ಟರ್ ನಲ್ಲಿ ಟರ್ನ್-ಬೈ-ಟರ್ನ್ ನ್ಯಾವಿಗೇಷನ್, ಮೆಸೇಜ್ & ಕಾಲ್ ಅಲರ್ಟ್ಗಳು ಮತ್ತು ಇತರ ವಾಹನ ಅಂಕಿಅಂಶಗಳನ್ನು ಸಹ ಹೊಂದಿರುತ್ತದೆ.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್ಮಾಸ್ಟರ್ ಬೈಕ್
ಹೊಸ ಸುಜುಕಿ ಬರ್ಗ್ಮನ್ ಎಲೆಕ್ಟ್ರಿಕ್ ಸ್ಕೂಟರ್ ಮೋಟಾರ್ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ. ಆದರೆ ಇದರ ಮೋಟಾರ್ ತನ್ನ ಪ್ರತಿಸ್ಪರ್ಧಿಗಳಾದ ಬಜಾಜ್ ಚೇತಕ್ ಎಲೆಕ್ಟ್ರಿಕ್, ಟಿವಿಎಸ್ ಐಕ್ಯೂಬ್ ಎಲೆಕ್ಟ್ರಿಕ್ ಮತ್ತು ಅಥರ್ 450 ಎಕ್ಸ್ನಂತೆಯೇ ಇರುತ್ತದೆ ಎಂದು ನಿರೀಕ್ಷಿಸುತ್ತೇವೆ.
ಈ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ಸುಜುಕಿ ಕಂಪನಿಯು ಯಾವುದೇ ಅಧಿಕೃತ ಮಾಹಿತಿಗಳನ್ನು ಬಹಿರಂಗಪಡಿಸಲಾಗಿಲ್ಲ. ಈ ವರ್ಷದ ಕೊನೆಯಲ್ಲಿ ಸುಜುಕಿಯು ಈ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಬಹುದು ಎಂದು ನಾವು ನಿರೀಕ್ಷಿಸುತ್ತೇವೆ.