Just In
Don't Miss!
- News
ಮತ್ತೊಂದು ದಾಖಲೆಯ ಮಟ್ಟವನ್ನ ತಲುಪಿದ ಪೆಟ್ರೋಲ್, ಡೀಸೆಲ್ ದರ
- Finance
ಹೊಸ ಸಾರ್ವಕಾಲಿಕ ದಾಖಲೆ ಬರೆದ ಪೆಟ್ರೋಲ್- ಡೀಸೆಲ್ ದರ; ಯಾವ ನಗರದಲ್ಲಿ ಎಷ್ಟು?
- Movies
ರೈತರ ಪ್ರತಿಭಟನೆ: ಕೆಂಪುಕೋಟೆ ಮೇಲೆ ಬಾವುಟ ಹಾರಿಸಿದ್ದು ಸಿನಿಮಾ ನಟ ದೀಪ್ ಸಿಧು?
- Lifestyle
ಹೊಟ್ಟೆಯ ಬಲಭಾಗದಲ್ಲಿ ನೋವು, ಈ ತೊಂದರೆಗಳಿರಬಹುದು
- Sports
ವಿರಾಟ್ ಕೊಹ್ಲಿ ಮತ್ತು ನನ್ನ ಮಧ್ಯೆ ಏನೂ ಬದಲಾಗಿಲ್ಲ: ಅಜಿಂಕ್ಯ ರಹಾನೆ
- Education
ECIL Recruitment 2021: 3 ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸ್ಪಾಟ್ ಟೆಸ್ಟ್ ನಡೆಸಿದ ಹೊಸ ಸುಜುಕಿ ಬರ್ಗ್‌ಮನ್ ಸ್ಟ್ರೀಟ್ ಎಲೆಕ್ಟ್ರಿಕ್ ಸ್ಕೂಟರ್
ಜನಪ್ರಿಯ ದ್ವಿಚಕ್ರ ತಯಾರಕ ಕಂಪನಿಯಾದ ಸುಜುಕಿ ಮೋಟಾರ್‍ಸೈಕಲ್ ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಈ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬ್ರ್ಯಾಂಡ್‌ನ ಜನಪ್ರಿಯ ಬರ್ಗ್‌ಮನ್ ಸ್ಟ್ರೀಟ್ 125 ಮ್ಯಾಕ್ಸಿ-ಸ್ಕೂಟರ್ ಆಧರಿಸಿ ಅಭಿವೃದ್ದಿ ಪಡಿಸಲಿದೆ.

ಸುಜುಕಿ ಮೋಟಾರ್‍ಸೈಕಲ್ ಕಂಪನಿಯು ಹೊಸ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಭಾರತದಲ್ಲಿ ಸ್ಫಾಟ್ ಟೆಸ್ಟ್ ನಡೆಸಿದೆ. ಹೊಸ ಸುಜುಕಿ ಬರ್ಗ್‌ಮನ್ ಲೆಕ್ಟ್ರಿಕ್ ಸ್ಕೂಟರ್ ಸ್ಪಾಟ್ ಟೆಸ್ಟ್ ನಡೆಸುತ್ತಿರುವ ಸ್ಪೈ ಚಿತ್ರಗಳು ಬಹಿರಂಗವಾಗಿವೆ. ಸ್ಪೈ ಚಿತ್ರದಲ್ಲಿ ಕಂಡುಬಂದತೆ ಹೊಸ ಸುಜುಕಿ ಬರ್ಗ್‌ಮನ್ ಸ್ಟ್ರೀಟ್ ಎಲೆಕ್ಟ್ರಿಕ್ ಸ್ಕೂಟರ್ ಬಹುತೇಕೆ ತನ್ನ ಪೆಟ್ರೋಲ್ ಮಾದರಿಯ ರೀತಿಯಲ್ಲೇ ವಿನ್ಯಾಸವನ್ನು ಹೊಂದಿರಲಿದೆ.

ಹೊಸ ಸುಜುಕಿ ಬರ್ಗ್‌ಮನ್ ಸ್ಟ್ರೀಟ್ ಎಲೆಕ್ಟ್ರಿಕ್ ಸ್ಕೂಟರ್ ಒಂದೇ ರೀತಿಯ ಹೆಡ್‌ಲ್ಯಾಂಪ್‌ಗಳು, ಫ್ರಂಟ್ ಕೌಲ್, ಇಂಟಿಗ್ರೇಟೆಡ್ ಟರ್ನ್ ಇಂಡಿಕೇಟರ್‌ಗಳೊಂದಿಗೆ ಫ್ರಂಟ್ ಏಪ್ರನ್ ಮತ್ತು ಸೈಡ್ ಮತ್ತು ರಿಯರ್ ಪ್ಯಾನೆಲ್‌ಗಳನ್ನು ಒಳಗೊಂಡಿದೆ.
MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಆದರೆ ಹೊಸ ಸುಜುಕಿ ಬರ್ಗ್‌ಮನ್ ಸ್ಟ್ರೀಟ್ ಎಲೆಕ್ಟ್ರಿಕ್ ಸ್ಕೂಟರ್ ಸೈಡ್ ಪ್ಯಾನೆಲ್‌ಗಳ ಕೆಳಭಾಗದಲ್ಲಿ ಬ್ಲೂ ಬಣ್ಣದ ಅಸೆಂಟ್ಸ್ ಗಳನ್ನು ಕಾಬಹುದಾಗಿದೆ. ಈ ಬ್ಲೂ ಬಣ್ಣವನ್ನು ಹ್ಯಾಂಡಲ್‌ಬಾರ್‌ನ ಹತ್ತಿರವೂ ಕಾಣಬಹುದು, ಇದು ಪೆಟ್ರೋಲ್ ಮತ್ತು ಎಲೆಕ್ಟ್ರಿಕ್ ಸುಜುಕಿ ಬರ್ಗ್‌ಮನ್ ಸ್ಟ್ರೀಟ್ ಸ್ಕೂಟರ್ ಗಳ ನಡುವಿನ ಪ್ರಮುಖ ಕಾಸ್ಮೆಟಿಕ್ ವ್ಯತ್ಯಾಸವಾಗಿದೆ.

ಮತ್ತೊಂದು ವ್ಯತ್ಯಾಸವೆಂದರೆ ಹಿಂದಿನ ಚಕ್ರದ ಬಳಿ ಎಕ್ಸಾಸ್ಟ್ ಪೈಪ್ ಆಗಿದೆ, ಸ್ಕೂಟರ್‌ನ ಬಲಭಾಗವನ್ನು ಈಗ ಸ್ವಿಂಗಾರ್ಮ್-ಮೌಂಟಡ್ ಸಸ್ಪೆಂಕ್ಷನ್ ಸೆಟಪ್ ನೊಂದಿಗೆ ಕಾಣಬಹುದು. ಎಡಭಾಗದಲ್ಲಿ ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಸುಜುಕಿ ಇತ್ತೀಚೆಗೆ ಬರ್ಗ್‌ಮನ್ ಸ್ಟ್ರೀಟ್ 125 ನಲ್ಲಿ ಬ್ಲೂಟೂತ್ ಕನೆಕ್ಟಿವಿಟಿಯೊಂದಿರುವ ಫುಲ್ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಪರಿಚಯಿಸಿತು. ಹೊಸ ಎಲೆಕ್ಟ್ರಿಕ್ ಮಾದರಿಯಲ್ಲಿಯು ಅದೇ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ನೀಡಬಹುದು ಎಂದು ನಿರೀಕ್ಷಿಸುತ್ತೇವೆ.

ಅಪ್ಲಿಕೇಶನ್ ಮೂಲಕ ಸ್ಮಾರ್ಟ್‌ಫೋನ್‌ಗೆ ಕನೆಕ್ಟ್ ಮಾಡಬಹುದಾದ ಹೊಸ ಕ್ಲಸ್ಟರ್ ನಲ್ಲಿ ಟರ್ನ್-ಬೈ-ಟರ್ನ್ ನ್ಯಾವಿಗೇಷನ್, ಮೆಸೇಜ್ & ಕಾಲ್ ಅಲರ್ಟ್‌ಗಳು ಮತ್ತು ಇತರ ವಾಹನ ಅಂಕಿಅಂಶಗಳನ್ನು ಸಹ ಹೊಂದಿರುತ್ತದೆ.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍ಮಾಸ್ಟರ್ ಬೈಕ್

ಹೊಸ ಸುಜುಕಿ ಬರ್ಗ್‌ಮನ್ ಸ್ಟ್ರೀಟ್ ಎಲೆಕ್ಟ್ರಿಕ್ ಸ್ಕೂಟರ್ ಮೋಟಾರ್ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ. ಆದರೆ ಇದರ ಮೋಟಾರ್ ತನ್ನ ಪ್ರತಿಸ್ಪರ್ಧಿಗಳಾದ ಬಜಾಜ್ ಚೇತಕ್ ಎಲೆಕ್ಟ್ರಿಕ್, ಟಿವಿಎಸ್ ಐಕ್ಯೂಬ್ ಎಲೆಕ್ಟ್ರಿಕ್ ಮತ್ತು ಅಥರ್ 450 ಎಕ್ಸ್‌ನಂತೆಯೇ ಇರುತ್ತದೆ ಎಂದು ನಾವು ನಿರೀಕ್ಷಿಸುತ್ತೇವೆ.

ಹೊಸ ಸುಜುಕಿ ಬರ್ಗ್‌ಮನ್ ಸ್ಟ್ರೀಟ್ ಎಲೆಕ್ಟ್ರಿಕ್ ಸ್ಕೂಟರ್ ಸದ್ಯ ಅಭಿವೃದ್ಧಿಯ ಆರಂಭಿಕ ಹಂತದಲ್ಲಿದೆ. ಈ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ಸುಜುಕಿ ಕಂಪನಿಯು ಯಾವುದೇ ಅಧಿಕೃತ ಮಾಹಿತಿಗಳನ್ನು ಬಹಿರಂಗಪಡಿಸಲಾಗಿಲ್ಲ. ಈ ವರ್ಷದ ಕೊನೆಯಲ್ಲಿ ಸುಜುಕಿಯು ಈ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಮಾರುಕಟ್ಟೆಯಲ್ಲಿ ಪರಿಚಯಿಸಬಹುದೆಂದು ಎಂದು ನಾವು ನಿರೀಕ್ಷಿಸುತ್ತೇವೆ.