Just In
- 28 min ago
ಅನಾವರಣವಾಯ್ತು 2021ರ ಹ್ಯುಂಡೈ ಸೊನಾಟಾ ಎನ್ ಲೈನ್ ಪರ್ಫಾಮೆನ್ಸ್ ಕಾರು
- 2 hrs ago
ಕಾರುಗಳ ರಫ್ತಿನಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಮಾರುತಿ ಸುಜುಕಿ
- 4 hrs ago
ವಾರದ ಪ್ರಮುಖ ಸುದ್ದಿ: ಹೊಸ ಸಫಾರಿ ಬಿಡುಗಡೆ, ಟೋಲ್ ಸಂಗ್ರಹ ಹೆಚ್ಚಳ, ಇಳಿಕೆಯಾಗುತ್ತಾ ಪೆಟ್ರೋಲ್ ದರ?
- 14 hrs ago
ಬಿಡುಗಡೆಯಾಗಲಿರುವ ಓಲಾ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ವಿಶೇಷತೆಗಳೇನು?
Don't Miss!
- News
ವಿಜಯನಗರ ಜಿಲ್ಲೆ; ಮೇಲುಸ್ತುವಾರಿಗೆ ಐಎಎಸ್ ಅಧಿಕಾರಿ ನೇಮಕ
- Movies
ಉಪೇಂದ್ರ ನಟನೆಯ ಕಬ್ಜ ಚಿತ್ರಕ್ಕೆ ಎಂಟ್ರಿ ಕೊಟ್ಟ 'ಕುರುಕ್ಷೇತ್ರ'ದ ಭೀಮ
- Sports
ಆರು ನಗರಗಳಲ್ಲಿ ಐಪಿಎಲ್ ನಡೆಸಲು ಬಿಸಿಸಿಐ ಸಿದ್ಧತೆ: ಅಹ್ಮದಾಬಾದ್ನಲ್ಲಿ ಫೈನಲ್: ವರದಿ
- Finance
ಭಾರತದಲ್ಲಿ ನೋಕಿಯಾ ಪವರ್ ಈಯರ್ಬಡ್ಸ್ ಲೈಟ್ಸ್ ಮಾರಾಟ
- Lifestyle
ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?
- Education
MCL Recruitment 2021: 8 ಸಾಮಾನ್ಯ ವೈದ್ಯಕೀಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
2021ರ ಸುಜುಕಿ ಹಯಾಬುಸಾ ಬೈಕ್ ಬಿಡುಗಡೆಯ ಮಾಹಿತಿ ಬಹಿರಂಗ
ಜಪಾನ್ ಮೂಲದ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಸುಜುಕಿ ಮೋಟಾರ್‌ಸೈಕಲ್ ತನ್ನ ಹೊಸ ಹಯಾಬುಸಾ ಸೂಪರ್ ಬೈಕನ್ನು ಜಾಗತಿಕವಾಗಿ ಇತ್ತೀಚೆಗೆ ಅನಾವರಣಗೊಳಿಸಿತ್ತು. 2021ರ ಸುಜುಕಿ ಹಯಾಬುಸಾ ಕಾಸ್ಮೆಟಿಕ್ ಬದಲಾವಣೆಗಳ ಜೊತೆಗೆ ಕೆಲವು ಹೊಸ ಫೀಚರ್ ಗಳನ್ನು ಪಡೆದುಕೊಂಡಿದೆ.

ವರದಿಗಳ ಪ್ರಕಾರ, 2021ರ ಸುಜುಕಿ ಹಯಾಬುಸಾ ಬೈಕಿನ ಖರೀದಿಗಾಗಿ ಅನಧಿಕೃತವಾಗಿ ಬುಕ್ಕಿಂಗ್ ಅನ್ನು ಡೀಲರುಗಳು ಪ್ರಾರಂಭಿಸಲಾಗಿದೆ. ಬುಕ್ಕಿಂಗ್ ಮಾಡಲು ಟೋಕನ್ ಮೊತ್ತ ರೂ. 2 ಲಕ್ಷವನ್ನು ನಿಗಧಿಪಡಿಸಿದ್ದಾರೆ. ಅಲ್ಲದೇ ಈ ಹೊಸ ಹಯಾಬುಸಾ ಬೈಕಿನ ಬಿಡುಗಡೆಯ ಬಗ್ಗೆಯು ಮಾಹಿತಿ ಬಹಿರಂಗವಾಗಿದೆ. ಇದರಂತೆ ಹೊಸ ಹಯಾಬುಸಾ ಸೂಪರ್ ಬೈಕ್ 2021ರ ಏಪ್ರಿಲ್ ತಿಂಗಳಿನಲ್ಲಿ ಭಾರತದಲ್ಲಿ ಬಿಡುಗಡೆಯಾಗಲಿದೆ.

ಹೊಸ ಸುಜುಕಿ ಹಯಾಬುಸಾ ಬೈಕಿನ ವಿನ್ಯಾಸವನ್ನು ನವೀಕರಿಸಲಾಗಿದೆ, ಆದರೆ ಸೂಪರ್ ಬೈಕಿನ ಸಾಂಪ್ರದಾಯಿಕ ಶೈಲಿಯನ್ನು ಉಳಿಸಿಕೊಂಡಿದೆ. ಒಟ್ಟಾರೆ ಸಿಲೂಯೆಟ್ ಅನ್ನು ಒಂದೇ ರೀತಿ ಇರಿಸಲಾಗಿದ್ದರೂ, ಸೂಪರ್ ಬೈಕ್ ಹೆಚ್ಚು ಅಗ್ರೇಸಿವ್ ವಿನ್ಯಾಸದೊಂದಿಗೆ ತೀಕ್ಷ್ಣವಾದ ಲೈನ್ ಗಳು ಮತ್ತು ಹೊಸ ಫಾಸಿಕವನ್ನು ಹೊಂದಿದೆ.
MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

2021ರ ಹಯಾಬುಸಾ ಬೈಕ್ ಎಲ್ಇಡಿ ಲೈಟ್ ಗಳನ್ನು ಹೊಂದಿವೆ. ಇದು ಹೆಡ್ ಲ್ಯಾಂಪ್ ಮತ್ತು ಟೈಲ್ ಗಳನ್ನು ಒಳಗೊಂಡಿದೆ. ಮುಂಭಾಗದಲ್ಲಿರುವ ಇಂಡಿಕೇಟರ್ ಸ್ಥಾನ ಲೈಟ್ ಗಳೊಂದಿಗೆ ಸಂಯೋಜಿಸಲಾಗಿದೆ, ಮುಂಭಾಗದ ಏರ್ ಟೆಕ್ ಹೊರಭಾಗದಲ್ಲಿ ಇರಿಸಲಾಗುತ್ತದೆ.

ಹೊಸ ಹಯಾಬುಸಾದಲ್ಲಿ ಬೈಕಿನಲ್ಲಿ ತೀಕ್ಷ್ಣವಾದ ಲೈನ್ ಗಳನ್ನು ನೀಡಲಾಗಿದ್ದು, ಇದು ಹೆಚ್ಚು ಸ್ಪೋರ್ಟಿ ಮತ್ತು ಆಕರ್ಷಕವಾಗಿದೆ. ಸೂಪರ್‌ಬೈಕ್‌ನ 2021 ಆವೃತ್ತಿಯು ದೊಡ್ಡ ಡ್ಯುಯಲ್ ಕ್ರೋಮ್-ಲೇಪಿತ ಎಕ್ಸಾಸ್ಟ್ ಪೈಪ್ಸ್ ಅನ್ನು ಹೊಂದಿದೆ. ಇದು ಹಯಾಬುಸಾದ ಕಮಾಂಡಿಂಗ್ ಸ್ವರೂಪವನ್ನು ಹೆಚ್ಚಿಸುತ್ತದೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಇನ್ನು ಈ ಸೂಪರ್ ಬೈಕ್ ಫೀಚರ್ ಗಳ ಬಗ್ಗೆ ಹೇಳುವುದಾದರೆ, ಹಲವಾರು ಉಪಕರಣಗಳು ಮತ್ತು ಎಲೆಕ್ಟ್ರಾನಿಕ್ ರೈಡರ್ ಅಸಿಸ್ಟ್ ಅನ್ನು ಹೊಂದಿದೆ. ಇನ್ನು ಇದರಲ್ಲಿ ಅನಲಾಗ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್‌ನಲ್ಲಿ ಹೊಸ ಟಿಎಫ್‌ಟಿ ಡಿಸ್ ಪ್ಲೇಯನ್ನು ಅಳವಡಿಸಲಾಗಿದೆ.

ಇದು ಹೊಸ ಸ್ವಿಚ್‌ಗಿಯರ್ ಜೊತೆಗೆ ರೈಡರಿಗೆ ವಿವಿಧ ರೈಡರ್ ಅಸಿಸ್ಟ್ ಆಯ್ಕೆಗಳ ನಡುವೆ ನ್ಯಾವಿಗೇಟ್ ಅನ್ನು ನೀಡಿದೆ. ಇನ್ನು 2021ರ ಸುಜುಕಿ ಹಯಾಬುಸಾದಲ್ಲಿ ಕೆಲವು ಸ್ಟ್ಯಾಂಡರ್ಡ್ ಎಲೆಕ್ಟ್ರಾನಿಕ್ ಏಡ್ಸ್, ಮೂರು ಪವರ್ ಮೋಡ್‌ಗಳು, ಲಾಂಚ್ ಕಂಟ್ರೋಲ್ ಮತ್ತು ಕ್ರೂಸ್ ಕಂಟ್ರೋಲ್ ಅನ್ನು ಒಳಗೊಂಡಿದೆ.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍ಮಾಸ್ಟರ್ ಬೈಕ್

ಇದರೊಂದಿಗೆ ಕಾರ್ನರಿಂಗ್ ಎಬಿಎಸ್, ಹಿಲ್-ಹೋಲ್ಡ್ ಕಂಟ್ರೋಲ್, ಹೊಸ ಸಿಕ್ಸ್-ಆಕ್ಸಿಸ್ ಐಎಂಯು ಮತ್ತು ಮೂರು ಹಂತದ ಎಂಜಿನ್ ಬ್ರೇಕಿಂಗ್, ಟ್ರ್ಯಾಕ್ಷನ್ ಕಂಟ್ರೋಲ್ ಆಂಟಿ ವ್ಹೀಲಿ ಕಂಟ್ರೋಲ್ ಹತ್ತು ಹಂತಗಳನ್ನು ಹೊಂದಿದೆ. ಹಯಾಬುಸಾ ಬ್ರ್ಯಾಂಡ್‌ನ ಎಸ್,ಐ,ಆರ್,ಎಸ್ ತಂತ್ರಜ್ಞಾನವನ್ನು (ಸುಜುಕಿ ಇಂಟೆಲಿಜೆಂಟ್ ರೈಡ್ ಸಿಸ್ಟಂ) ಸಹ ಒಳಗೊಂಡಿದೆ.

2021ರ ಸುಜುಕಿ ಹಯಾಬುಸಾ ಅದೇ 1340 ಸಿಸಿ ಇನ್-ಲೈನ್ ನಾಲ್ಕು ಸಿಲಿಂಡರ್ ಎಂಜಿನ್ ಅನ್ನು ಇದರಲ್ಲಿ ಅಳವಡಿಸಲಾಗಿದೆ. ಈ ಎಂಜಿನ್ 190 ಬಿಹೆಚ್‍ಪಿ ಪವರ್ ಮತ್ತು 150 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು ಆರು-ವೇಗದ ಗೇರ್‌ಬಾಕ್ಸ್‌ನೊಂದಿಗೆ ಜೋಡಿಸಲಾಗಿದೆ. ಇದರೊಂದಿಗೆ ಬೈ-ಡೈರಕ್ಷನಲ್ ಕ್ವಿಕ್-ಶಿಫ್ಟರ್ ಮತ್ತು ರೈಡ್-ಬೈ-ವೈರ್ ತಂತ್ರಜ್ಞಾನಗಳೊಂದಿಗೆ ಸ್ಟ್ಯಾಂಡರ್ಡ್ ಆಗಿ ಅಳವಡಿಸಲಾಗಿದೆ.

2021ರ ಸುಜುಕಿ ಹಯಾಬುಸಾ ಬೈಕ್ 265 ಕೆಕೆ ತೂಕವನ್ನು ಹೊಂದಿದೆ. ಇನ್ನು ಈ ಬೈಕ್ 20-ಲೀಟರ್ ಇಂಧನ ಟ್ಯಾಂಕ್ ಸಾಮರ್ಥ್ಯವನ್ನು ಹೋಂದಿದೆ. ಇನ್ನು ಈ ಬೈಕ್ 125 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹೊಂದಿದೆ. ಸುಜುಕಿ ಹಯಾಬುಸಾ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮತ್ತು ಭಾರತದಲ್ಲಿ ಅತ್ಯಂತ ಜನಪ್ರಿಯ ಸೂಪರ್‌ಬೈಕ್‌ಗಳಲ್ಲಿ ಒಂದಾಗಿದೆ.