2021ರ ಸುಜುಕಿ ಹಯಾಬುಸಾ ಬೈಕ್ ಬಿಡುಗಡೆ ದಿನಾಂಕ ಬಹಿರಂಗ
ಜನಪ್ರಿಯ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಸುಜುಕಿ ಮೋಟಾರ್‌ಸೈಕಲ್ ತನ್ನ ಹೊಸ ಹಯಾಬುಸಾ ಸೂಪರ್ ಬೈಕನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಇದೀಗ ಸುಜುಕಿ ತನ್ನ ಹೊಸ ಹಯಾಬುಸಾ ಸೂಪರ್ ಬೈಕಿನ ಬಿಡುಗಡೆ ದಿನಾಂಕವನ್ನು ಬಹಿರಂಗಪಡಿಸಿದೆ.

2021ರ ಸುಜುಕಿ ಹಯಾಬುಸಾ ಬೈಕ್ ಇದೇ ತಿಂಗಳ 26 ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ. ಇನ್ನು ಸುಜುಕಿ ಮೋಟಾರ್‌ಸೈಕಲ್ ಈ ಹೊಸ ಹಯಾಬುಸಾ ಸೂಪರ್ ಬೈಕಿನ ಹೆಸರನ್ನು ವೆಬ್‌ಸೈಟ್‌ನಲ್ಲಿ ಪಟ್ಟಿ ಮಾಡಲಾಗಿದೆ. ಈ 2021ರ ಸುಜುಕಿ ಹಯಾಬುಸಾ ಕಾಸ್ಮೆಟಿಕ್ ಬದಲಾವಣೆಗಳ ಜೊತೆಗೆ ಕೆಲವು ಹೊಸ ಫೀಚರ್ ಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಡಲಿದೆ. ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಬೈಕ್ ಗಳಲ್ಲಿ ಇದು ಕೂಡ ಒಂದಾಗಿದೆ.

ಹೊಸ ಸುಜುಕಿ ಹಯಾಬುಸಾ ಬೈಕಿನ ಬಗ್ಗೆ ಹೇಳುವುದಾದರೆ, ಇದರ ವಿನ್ಯಾಸವನ್ನು ನವೀಕರಿಸಲಾಗಿದೆ, ಆದರೆ ಸೂಪರ್ ಬೈಕಿನ ಸಾಂಪ್ರದಾಯಿಕ ಶೈಲಿಯನ್ನು ಉಳಿಸಿಕೊಂಡಿದೆ. ಒಟ್ಟಾರೆ ಸಿಲೂಯೆಟ್ ಅನ್ನು ಒಂದೇ ರೀತಿ ಇರಿಸಲಾಗಿದ್ದರೂ, ಸೂಪರ್ ಬೈಕ್ ಹೆಚ್ಚು ಅಗ್ರೇಸಿವ್ ವಿನ್ಯಾಸದೊಂದಿಗೆ ತೀಕ್ಷ್ಣವಾದ ಲೈನ್ ಗಳನ್ನು ಒಳಗೊಂಡಿದೆ.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍ಮಾಸ್ಟರ್ ಬೈಕ್

ಈ ಹೊಸ ಹಯಾಬುಸಾ ಬೈಕ್ ಎಲ್ಇಡಿ ಲೈಟ್ ಗಳನ್ನು ಹೊಂದಿವೆ. ಇದು ಹೆಡ್ ಲ್ಯಾಂಪ್ ಮತ್ತು ಟೈಲ್ ಗಳನ್ನು ಒಳಗೊಂಡಿದೆ. ಮುಂಭಾಗದಲ್ಲಿರುವ ಇಂಡಿಕೇಟರ್ ಸ್ಥಾನ ಲೈಟ್ ಗಳೊಂದಿಗೆ ಸಂಯೋಜಿಸಲಾಗಿದೆ. ಮುಂಭಾಗದ ಏರ್ ಟೆಕ್ ಹೊರಭಾಗದಲ್ಲಿ ಇರಿಸಲಾಗಿದೆ.

ಹೊಸ ಹಯಾಬುಸಾದಲ್ಲಿ ಬೈಕಿನಲ್ಲಿ ಅಗ್ರೇಸಿವ್ ಬಾಡಿ ಲೈನ್ ಗಳನ್ನು ನೀಡಲಾಗಿದ್ದು, ಇದು ಹೆಚ್ಚು ಸ್ಪೋರ್ಟಿ ಮತ್ತು ಆಕರ್ಷಕವಾಗಿ ಕಾಣುತ್ತದೆ. ಸೂಪರ್‌ಬೈಕ್‌ನ ಆವೃತ್ತಿಯು ದೊಡ್ಡ ಡ್ಯುಯಲ್ ಕ್ರೋಮ್-ಲೇಪಿತ ಎಕ್ಸಾಸ್ಟ್ ಪೈಪ್ಸ್ ಅನ್ನು ಹೊಂದಿದೆ. ಇದು ಹಯಾಬುಸಾದ ಕಮಾಂಡಿಂಗ್ ಸ್ವರೂಪವನ್ನು ಹೆಚ್ಚಿಸುತ್ತದೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಈ ಸೂಪರ್ ಬೈಕ್ ಫೀಚರ್ ಗಳ ಬಗ್ಗೆ ಹೇಳುವುದಾದರೆ, ಹಲವಾರು ಉಪಕರಣಗಳು ಮತ್ತು ಎಲೆಕ್ಟ್ರಾನಿಕ್ ರೈಡರ್ ಅಸಿಸ್ಟ್ ಅನ್ನು ಹೊಂದಿದೆ. ಇನ್ನು ಇದರಲ್ಲಿ ಅನಲಾಗ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್‌ನಲ್ಲಿ ಹೊಸ ಟಿಎಫ್‌ಟಿ ಡಿಸ್ ಪ್ಲೇಯನ್ನು ಅಳವಡಿಸಲಾಗಿದೆ.

ಹೊಸ ಸ್ವಿಚ್‌ಗಿಯರ್ ಜೊತೆಗೆ ರೈಡರಿಗೆ ವಿವಿಧ ರೈಡರ್ ಅಸಿಸ್ಟ್ ಆಯ್ಕೆಗಳ ನಡುವೆ ನ್ಯಾವಿಗೇಟ್ ಅನ್ನು ನೀಡಿದೆ. ಇನ್ನು 2021ರ ಸುಜುಕಿ ಹಯಾಬುಸಾದಲ್ಲಿ ಕೆಲವು ಸ್ಟ್ಯಾಂಡರ್ಡ್ ಎಲೆಕ್ಟ್ರಾನಿಕ್ ಏಡ್ಸ್, ಮೂರು ಪವರ್ ಮೋಡ್‌ಗಳು, ಲಾಂಚ್ ಕಂಟ್ರೋಲ್ ಮತ್ತು ಕ್ರೂಸ್ ಕಂಟ್ರೋಲ್ ಅನ್ನು ಹೊಂದಿದೆ.
MOST READ: ಯೂನಿಕಾರ್ನ್ ಬೈಕಿನ ಬೆಲೆ ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

ಇದರೊಂದಿಗೆ ಕಾರ್ನರಿಂಗ್ ಎಬಿಎಸ್, ಹಿಲ್-ಹೋಲ್ಡ್ ಕಂಟ್ರೋಲ್, ಹೊಸ ಸಿಕ್ಸ್-ಆಕ್ಸಿಸ್ ಐಎಂಯು ಮತ್ತು ಮೂರು ಹಂತದ ಎಂಜಿನ್ ಬ್ರೇಕಿಂಗ್, ಟ್ರ್ಯಾಕ್ಷನ್ ಕಂಟ್ರೋಲ್ ಆಂಟಿ ವ್ಹೀಲಿ ಕಂಟ್ರೋಲ್ ಹತ್ತು ಹಂತಗಳನ್ನು ಹೊಂದಿದೆ. ಹಯಾಬುಸಾ ಬ್ರ್ಯಾಂಡ್‌ನ ಎಸ್,ಐ,ಆರ್,ಎಸ್ ತಂತ್ರಜ್ಞಾನವನ್ನು (ಸುಜುಕಿ ಇಂಟೆಲಿಜೆಂಟ್ ರೈಡ್ ಸಿಸ್ಟಂ) ಕೂಡ ಹೊಂದಿದೆ.

ಹೊಸ ಸುಜುಕಿ ಹಯಾಬುಸಾ ಅದೇ 1340 ಸಿಸಿ ಇನ್-ಲೈನ್ ನಾಲ್ಕು ಸಿಲಿಂಡರ್ ಎಂಜಿನ್ ಅನ್ನು ಇದರಲ್ಲಿ ಅಳವಡಿಸಲಾಗಿದೆ. ಈ ಎಂಜಿನ್ 190 ಬಿಹೆಚ್‍ಪಿ ಪವರ್ ಮತ್ತು 150 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಈ ಎಂಜಿನ್ ಅನ್ನು 6-ಸ್ಪೀಡ್ ಗೇರ್‌ಬಾಕ್ಸ್‌ನೊಂದಿಗೆ ಜೋಡಿಸಲಾಗಿದೆ. ಇನ್ನು ಇದರೊಂದಿಗೆ ಬೈ-ಡೈರಕ್ಷನಲ್ ಕ್ವಿಕ್-ಶಿಫ್ಟರ್ ಮತ್ತು ರೈಡ್-ಬೈ-ವೈರ್ ತಂತ್ರಜ್ಞಾನಗಳೊಂದಿಗೆ ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.

ಈ ಹೊಸ ಸುಜುಕಿ ಹಯಾಬುಸಾ ಬೈಕ್ 265 ಕೆಕೆ ತೂಕವನ್ನು ಹೊಂದಿದ್ದು, ಜೊತೆಗೆ 20-ಲೀಟರ್ ಸಾಮರ್ಥ್ಯದ ಇಂಧನ ಟ್ಯಾಂಕ್ ಅನ್ನು ಹೊಂದಿದೆ. ಇನ್ನು ಈ ಬೈಕ್ 125 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹೊಂದಿದೆ. ಈ ಸುಜುಕಿ ಹಯಾಬುಸಾ ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಅತ್ಯಂತ ಜನಪ್ರಿಯ ಸೂಪರ್‌ಬೈಕ್‌ಗಳಲ್ಲಿ ಒಂದಾಗಿದೆ.


Click it and Unblock the Notifications








