ಭಾರತದಲ್ಲಿ ಬಹುನಿರೀಕ್ಷಿತ 2021ರ ಸುಜುಕಿ ಹಯಾಬುಸಾ ಬೈಕ್ ಬಿಡುಗಡೆ
ಜನಪ್ರಿಯ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಸುಜುಕಿ ಮೋಟಾರ್‌ಸೈಕಲ್ ತನ್ನ ಹೊಸ ಹಯಾಬುಸಾ ಬೈಕನ್ನು ಭಾರತದಲ್ಲಿ ಬಿಡುಗಡೆಗೊಳಿಸಿದೆ. 2021ರ ಸುಜುಕಿ ಹಯಾಬುಸಾ ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.16.40 ಲಕ್ಷಗಳಾಗಿದೆ.

2021ರ ಸುಜುಕಿ ಹಯಾಬುಸಾ ಬೈಕಿನ ವಿನ್ಯಾಸವನ್ನು ನವೀಕರಿಸಲಾಗಿದೆ, ಆದರೆ ಸೂಪರ್ ಬೈಕಿನ ಸಾಂಪ್ರದಾಯಿಕ ಶೈಲಿಯನ್ನು ಉಳಿಸಿಕೊಂಡಿದೆ. ಒಟ್ಟಾರೆ ಸಿಲೂಯೆಟ್ ಅನ್ನು ಒಂದೇ ರೀತಿ ಇರಿಸಲಾಗಿದ್ದರೂ, ಸೂಪರ್ ಬೈಕ್ ಹೆಚ್ಚು ಅಗ್ರೇಸಿವ್ ವಿನ್ಯಾಸದೊಂದಿಗೆ ಅಗ್ರೇಸಿವ್ ಲೈನ್ ಗಳು ಮತ್ತು ಹೊಸ ಫಾಸಿಕವನ್ನು ಹೊಂದಿದೆ. ಈ ಸೂಪರ್ ಬೈಕ್ ಒಟ್ಟಾರೆ ಲುಕ್ ಹೆಚ್ಚು ಸ್ಪೋರ್ಟಿ ಮತ್ತು ಅಗ್ರೇಸಿವ್ ಆಗಿದೆ.

ಹಯಾಬುಸಾ ಸೂಪರ್ ಬೈಕ್ ಎಲ್ಇಡಿ ಲೈಟ್ ಗಳನ್ನು ಹೊಂದಿವೆ. ಇದು ಹೆಡ್ ಲ್ಯಾಂಪ್ ಮತ್ತು ಟೈಲ್ ಗಳನ್ನು ಒಳಗೊಂಡಿದೆ. ಮುಂಭಾಗದಲ್ಲಿ ಇಂಡಿಕೇಟರ್ ಸ್ಥಾನ ಲೈಟ್ ಗಳೊಂದಿಗೆ ಸಂಯೋಜಿಸಲಾಗಿದೆ, ಮುಂಭಾಗದ ಏರ್ ಟೆಕ್ ಹೊರಭಾಗದಲ್ಲಿ ಇರಿಸಲಾಗುತ್ತದೆ.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍ಮಾಸ್ಟರ್ ಬೈಕ್

ಸೂಪರ್‌ಬೈಕ್‌ನ 2021 ಆವೃತ್ತಿಯು ದೊಡ್ಡ ಡ್ಯುಯಲ್ ಕ್ರೋಮ್-ಲೇಪಿತ ಎಕ್ಸಾಸ್ಟ್ ಪೈಪ್ಸ್ ಅನ್ನು ಹೊಂದಿದೆ. ಇದು ಹಯಾಬುಸಾದ ಕಮಾಂಡಿಂಗ್ ಸ್ವರೂಪವನ್ನು ಹೆಚ್ಚಿಸುತ್ತದೆ.

ಇನ್ನು ಈ ಸೂಪರ್ ಬೈಕ್ ಫೀಚರ್ ಗಳ ಬಗ್ಗೆ ಹೇಳುವುದಾದರೆ, ಹಲವು ಉಪಕರಣಗಳು ಮತ್ತು ಎಲೆಕ್ಟ್ರಾನಿಕ್ ರೈಡರ್ ಅಸಿಸ್ಟ್ ಅನ್ನು ಹೊಂದಿದೆ. ಇನ್ನು ಇದರಲ್ಲಿ ಅನಲಾಗ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್‌ನಲ್ಲಿ ಹೊಸ ಟಿಎಫ್‌ಟಿ ಡಿಸ್ ಪ್ಲೇಯನ್ನು ಅಳವಡಿಸಲಾಗಿದೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಇದು ಹೊಸ ಸ್ವಿಚ್‌ಗಿಯರ್ ಜೊತೆಗೆ ರೈಡರಿಗೆ ವಿವಿಧ ರೈಡರ್ ಅಸಿಸ್ಟ್ ಆಯ್ಕೆಗಳ ನಡುವೆ ನ್ಯಾವಿಗೇಟ್ ಅನ್ನು ನೀಡಿದೆ. ಇನ್ನು ಹೊಸ ಸುಜುಕಿ ಹಯಾಬುಸಾದಲ್ಲಿ ಕೆಲವು ಸ್ಟ್ಯಾಂಡರ್ಡ್ ಎಲೆಕ್ಟ್ರಾನಿಕ್ ಏಡ್ಸ್, ಮೂರು ಪವರ್ ಮೋಡ್‌ಗಳು, ಲಾಂಚ್ ಕಂಟ್ರೋಲ್ ಮತ್ತು ಕ್ರೂಸ್ ಕಂಟ್ರೋಲ್ ಅನ್ನು ಒಳಗೊಂಡಿದೆ

ಇದರೊಂದಿಗೆ ಕಾರ್ನರಿಂಗ್ ಎಬಿಎಸ್, ಹಿಲ್-ಹೋಲ್ಡ್ ಕಂಟ್ರೋಲ್, ಆಕ್ಟಿವ್ ಸ್ಪೀಡ್ ಲಿಮಿಟರ್, ಲೋ ಆರ್ಪಿಎಂ ಅಸಿಸ್ಟ್, ಕಂಬೈನ್ಡ್ ಬ್ರೇಕ್ ಸಿಸ್ಟಂ, ಹೊಸ ಸಿಕ್ಸ್-ಆಕ್ಸಿಸ್ ಐಎಂಯು ಮತ್ತು ಮೂರು ಹಂತದ ಎಂಜಿನ್ ಬ್ರೇಕಿಂಗ್, 10 ಹಂತದ ಹೊಂದಾಣಿಕೆ ಹೊಂದಿರುವ ಮತ್ತು ಸ್ವಿಚ್ ಮಾಡಬಹುದಾದ ಟ್ರ್ಯಾಕ್ಷನ್ ಕಂಟ್ರೋಲ್ ಅನ್ನು ಹೊಂದಿದೆ.

2021ರ ಸುಜುಕಿ ಹಯಾಬುಸಾ ಅದೇ ಅಲ್ಯೂಮಿನಿಯಂ ಫ್ರೇಮ್ ಅನ್ನು ಮುಂದಕ್ಕೆ ಸಾಗಿಸುತ್ತದೆ, ಇನ್ನು ಈ ಸೂಪರ್ ಬೈಕ್ ಅದರ ಹಿಂದಿನ ಮಾದರಿಗಳಂತೆಯೇ ಆಯಾಮಗಳನ್ನು ಹೊಂದಿದೆ. ಇನ್ನು ಅದೇ 1340 ಸಿಸಿ ಇನ್-ಲೈನ್ ನಾಲ್ಕು ಸಿಲಿಂಡರ್ ಎಂಜಿನ್ ಅನ್ನು ಇದರಲ್ಲಿ ಅಳವಡಿಸಲಾಗಿದೆ.

ಈ ಎಂಜಿನ್ 9,700 ಆರ್‌ಪಿಎಂನಲ್ಲಿ 187.7 ಬಿಹೆಚ್‌ಪಿ ಪವರ್ ಮತ್ತು 7,000 ಆರ್‌ಪಿಎಂನಲ್ಲಿ 150 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಎಂಜಿನ್ ಅನ್ನು 6-ಸ್ಪೀಡ್ ಗೇರ್‌ಬಾಕ್ಸ್‌ಗೆ ಸ್ಲಿಪ್ ಮತ್ತು ಅಸಿಸ್ಟ್ ಕ್ಲಚ್ ಮತ್ತು ಬೈ-ಡೈರಕ್ಷನಲ್ ಕ್ವಿಕ್‌ಶಿಫ್ಟರ್‌ನೊಂದಿಗೆ ಜೋಡಿಸಲಾಗಿದೆ.
MOST READ: ಯೂನಿಕಾರ್ನ್ ಬೈಕಿನ ಬೆಲೆ ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

ಕಂಪನಿಯ ಪ್ರಕಾರ, ಈ ಹೊಸ ಸೂಪರ್‌ಬೈಕ್ 3.2 ಸೆಕೆಂಡುಗಳಲ್ಲಿ 0 ರಿಂದ 100 ಕಿ,ವೀ ವೇಗವನ್ನು ಪಡೆದುಕೊಳ್ಳುತ್ತದೆ ಮತ್ತು 299 ಕಿ.ಮೀ ಟಾಪ್ ಸ್ಪೀಡ್ ಅನ್ನು ಹೊಂದಿದೆ. ಇನ್ನು ಈ 2021ರ ಸುಜುಕಿ ಹಯಾಬುಸಾ ಬೈಕ್ 265 ಕೆಜಿ ತೂಕವನ್ನು ಹೊಂದಿದೆ. ಇನ್ನು ಈ ಬೈಕ್ 20-ಲೀಟರ್ ಇಂಧನ ಟ್ಯಾಂಕ್ ಸಾಮರ್ಥ್ಯವನ್ನು ಹೋಂದಿದೆ. ಇನ್ನು ಈ ಬೈಕ್ 125 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹೊಂದಿದೆ.

2021 ಸುಜುಕಿ ಹಯಾಬುಸಾ ಬೈಕ್ ಗ್ಲೋಸ್ ಸ್ಪಾರ್ಕ್ಲಿ ಬ್ಲ್ಯಾಕ್/ಕ್ಯಾಂಡಿ ಬರ್ನ್ಟ್ ಗೋಲ್ಡ್, ಮೆಟಾಲಿಕ್ ಮ್ಯಾಟ್ ಸ್ವೋರ್ಡ್ ಸಿಲ್ವರ್/ಕ್ಯಾಂಡಿ ಡೇರಿಂಗ್ ರೆಡ್ ಮತ್ತು ಪರ್ಲ್ ಬ್ರಿಲಿಯಂಟ್ ವೈಟ್/ಮೆಟಾಲಿಕ್ ಮ್ಯಾಟ್ ಸ್ಟೆಲ್ಲಾರ್ ಬ್ಲೂ ಎಂಬ ಮೂರು ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಿರುತ್ತದೆ.

ಹಯಾಬುಸಾ ಬೈಕ್ ಸಸ್ಪೆಂಕ್ಷನ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ ಸಂಪೂರ್ಣ ಹೊಂದಾಣಿಕೆ ಮಾಡಬಹುದಾದ ಯುಎಸ್ಡಿ ಫೋರ್ಕ್ ಮತ್ತು ಹಿಂಭಾಗದಲ್ಲಿ ಮೊನೊ-ಶಾಕ್ ಯುನಿಟ್ ಅನ್ನು ಹೊಂದಿದೆ. ಇವೆರಡನ್ನೂ ಕೆವೈಬಿಯಿಂದ ಪಡೆಯಲಾಗಿದೆ.

ಇನ್ನು ಈ ಹೊಸ ಸೂಪರ್‌ಸ್ಪೋರ್ಟ್ ಬೈಕಿನಲ್ಲಿ ಮುಂಭಾಗದಲ್ಲಿ ಬ್ರೆಂಬೊ ಸ್ಟೈಲ್‌ಮಾ 4-ಪಾಟ್ ಕ್ಯಾಲಿಪರ್ ನೊಂದಿಗೆ ಡ್ಯುಯಲ್ 320 ಎಂಎಂ ಫ್ಲೋಟಿಂಗ್ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ ನಿಸ್ಸಿನ್ ಸಿಂಗಲ್-ಪಾಟ್ ಕ್ಯಾಲಿಪರ್‌ನೊಂದಿಗೆ ಒಂದೇ 260 ಎಂಎಂ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಲಾಗಿದೆ.

ಸುಜುಕಿ ಹಯಾಬುಸಾ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮತ್ತು ಭಾರತದಲ್ಲಿ ಅತ್ಯಂತ ಜನಪ್ರಿಯ ಸೂಪರ್‌ಬೈಕ್‌ಗಳಲ್ಲಿ ಒಂದಾಗಿದೆ. ಇದೀಗ ಭಾರತದಲ್ಲಿ ಬಿಡುಗಡೆಗೊಂಡ 2021ರ ಸುಜುಕಿ ಹಯಾಬುಸಾ ಸೂಪರ್‌ಸ್ಪೋರ್ಟ್ ಬೈಕ್ ಹೆಚ್ಚು ಅಗ್ರೇಸಿವ್ ಲುಕ್ ಮತ್ತು ನವೀಕರಿಸಿದ ಎಲೆಕ್ಟ್ರಾನಿಕ್ಸ್ ಪ್ಯಾಕೇಜ್ ಅನ್ನು ಒಳಗೊಂಡಿದೆ.


Click it and Unblock the Notifications








