ಡೀಲರ್ ಬಳಿ ತಲುಪಿದ ಹೊಸ ಸುಜುಕಿ ಹಯಾಬುಸಾ ಸೂಪರ್ ಬೈಕ್ ಬಿಡುಗಡೆ

ಜಪಾನ್ ಮೂಲದ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಸುಜುಕಿ ಮೋಟಾರ್‌ಸೈಕಲ್‌ ತನ್ನ ಹೊಸ ಹಯಾಬುಸಾ ಬೈಕನ್ನು ಭಾರತದಲ್ಲಿ ಕಳೆದ ತಿಂಗಳು ಬಿಡುಗಡೆಗೊಳಿಸಿತ್ತು. ಸುಜುಕಿ ಹಯಾಬುಸಾ ಭಾರತೀಯ ಮಾರುಕಟ್ಟೆಯಲ್ಲಿ ಅತ್ಯಂತ ಗುರುತಿಸಬಹುದಾದ ಸೂಪರ್ ಬೈಕ್‌ಗಳಲ್ಲಿ ಒಂದಾಗಿದೆ.

ಡೀಲರ್ ಬಳಿ ತಲುಪಿದ ಹೊಸ ಸುಜುಕಿ ಹಯಾಬುಸಾ ಬೈಕ್

ಸುಜುಕಿ ಕಂಪನಿಯು ಹೊಸ ಹಯಾಬುಸಾದ ಮೊದಲ ಬ್ಯಾಚ್ ಆಗಿ 101 ಯುನಿಟ್ ಗಳನ್ನು ಬಿಡುಗಡೆಗೊಳಿಸಿತ್ತು. ವೆಲ್ಲವೂ ಒಂದೆರಡು ದಿನಗಳಲ್ಲಿ ಮಾರಾಟವಾದವು. ಈ 2021ರ ಸುಜುಕಿ ಹಯಾಬುಸಾ ಬೈಕ್ ಡೀಲರುಗಳ ಬಳಿ ತಲುಪಿದ. ಹೊಸ ಹಯಾಬುಸಾ ಬೈಕ್ ಅನ್ ಬಾಕ್ಸ್ ಮಾಡುವ ವಿಡಿಯೋವೊಂದು ಬಹಿರಂಗವಾಗಿದೆ. ಸುಜುಕಿ ಹಯಾಬುಸಾ ಹಲವಾರು ಸೆಲೆಬ್ರಿಟಿಗಳ ಬಳಿ ಇದೆ.

ಡೀಲರ್ ಬಳಿ ತಲುಪಿದ ಹೊಸ ಸುಜುಕಿ ಹಯಾಬುಸಾ ಬೈಕ್

ಹೊಸ ಸುಜುಕಿ ಹಯಾಬುಸಾ ಬೈಕಿನ ಬಗ್ಗೆ ಹೇಳುವುದಾದರೆ, ಈ ಸೂಪರ್ ಬೈಕ್ ತನ್ನ ಸಾಂಪ್ರದಾಯಿಕ ಶೈಲಿಯನ್ನು ಉಳಿಸಿಕೊಂಡಿದೆ. ಒಟ್ಟಾರೆ ಸಿಲೂಯೆಟ್ ಅನ್ನು ಒಂದೇ ರೀತಿ ಇರಿಸಲಾಗಿದ್ದರೂ, ಸೂಪರ್ ಬೈಕ್ ಹೆಚ್ಚು ಅಗ್ರೇಸಿವ್ ವಿನ್ಯಾಸದೊಂದಿಗೆ ಅಗ್ರೇಸಿವ್ ಲೈನ್ ಗಳು ಮತ್ತು ಹೊಸ ಫಾಸಿಕವನ್ನು ಒಳಗೊಂಡಿದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಡೀಲರ್ ಬಳಿ ತಲುಪಿದ ಹೊಸ ಸುಜುಕಿ ಹಯಾಬುಸಾ ಬೈಕ್

ಈ ಸೂಪರ್ ಬೈಕ್ ಎಲ್ಇಡಿ ಲೈಟ್ ಗಳನ್ನು ಹೊಂದಿವೆ. ಇದು ಹೆಡ್ ಲ್ಯಾಂಪ್ ಮತ್ತು ಟೈಲ್ ಗಳನ್ನು ಒಳಗೊಂಡಿದೆ. ಮುಂಭಾಗದಲ್ಲಿ ಇಂಡಿಕೇಟರ್ ಸ್ಥಾನ ಲೈಟ್ ಗಳೊಂದಿಗೆ ಸಂಯೋಜಿಸಲಾಗಿದೆ, ಮುಂಭಾಗದ ಏರ್ ಟೆಕ್ ಹೊರಭಾಗದಲ್ಲಿ ಇರಿಸಲಾಗುತ್ತದೆ.

ಡೀಲರ್ ಬಳಿ ತಲುಪಿದ ಹೊಸ ಸುಜುಕಿ ಹಯಾಬುಸಾ ಬೈಕ್

ಇನ್ನು ಈ ಸೂಪರ್ ಬೈಕ್ ಫೀಚರ್ ಗಳ ಬಗ್ಗೆ ಹೇಳುವುದಾದರೆ, ಹಲವು ಎಲೆಕ್ಟ್ರಾನಿಕ್ ರೈಡರ್ ಅಸಿಸ್ಟ್ ಅನ್ನು ಹೊಂದಿದೆ. ಇನ್ನು ಇದರಲ್ಲಿ ಅನಲಾಗ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್‌ನಲ್ಲಿ ಹೊಸ ಟಿಎಫ್‌ಟಿ ಡಿಸ್ ಪ್ಲೇಯನ್ನು ಹೊಂದಿದೆ. ಇದು ಹೊಸ ಸ್ವಿಚ್‌ಗಿಯರ್ ಜೊತೆಗೆ ರೈಡರಿಗೆ ವಿವಿಧ ರೈಡರ್ ಅಸಿಸ್ಟ್ ಆಯ್ಕೆಗಳ ನಡುವೆ ನ್ಯಾವಿಗೇಟ್ ಅನ್ನು ನೀಡಿದೆ.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಡೀಲರ್ ಬಳಿ ತಲುಪಿದ ಹೊಸ ಸುಜುಕಿ ಹಯಾಬುಸಾ ಬೈಕ್

ಇನ್ನು ಹೊಸ ಸುಜುಕಿ ಹಯಾಬುಸಾದಲ್ಲಿ ಕೆಲವು ಸ್ಟ್ಯಾಂಡರ್ಡ್ ಎಲೆಕ್ಟ್ರಾನಿಕ್ ಏಡ್ಸ್, ಮೂರು ಪವರ್ ಮೋಡ್‌ಗಳು, ಲಾಂಚ್ ಕಂಟ್ರೋಲ್ ಮತ್ತು ಕ್ರೂಸ್ ಕಂಟ್ರೋಲ್ ಅನ್ನು ಕೂಡ ಒಳಗೊಂಡಿದೆ

ಡೀಲರ್ ಬಳಿ ತಲುಪಿದ ಹೊಸ ಸುಜುಕಿ ಹಯಾಬುಸಾ ಬೈಕ್

ಇದರೊಂದಿಗೆ ಕಾರ್ನರಿಂಗ್ ಎಬಿಎಸ್, ಹಿಲ್-ಹೋಲ್ಡ್ ಕಂಟ್ರೋಲ್, ಆಕ್ಟಿವ್ ಸ್ಪೀಡ್ ಲಿಮಿಟರ್, ಲೋ ಆರ್ಪಿಎಂ ಅಸಿಸ್ಟ್, ಕಂಬೈನ್ಡ್ ಬ್ರೇಕ್ ಸಿಸ್ಟಂ, ಹೊಸ ಸಿಕ್ಸ್-ಆಕ್ಸಿಸ್ ಐಎಂಯು ಮತ್ತು ಮೂರು ಹಂತದ ಎಂಜಿನ್ ಬ್ರೇಕಿಂಗ್, 10 ಹಂತದ ಹೊಂದಾಣಿಕೆ ಹೊಂದಿರುವ ಮತ್ತು ಸ್ವಿಚ್ ಮಾಡಬಹುದಾದ ಟ್ರ್ಯಾಕ್ಷನ್ ಕಂಟ್ರೋಲ್ ಅನ್ನು ಒಳಗೊಂಡಿದೆ.

MOST READ: ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಎಡಿಷನ್ ಬಿಡುಗಡೆ

ಡೀಲರ್ ಬಳಿ ತಲುಪಿದ ಹೊಸ ಸುಜುಕಿ ಹಯಾಬುಸಾ ಬೈಕ್

2021ರ ಸುಜುಕಿ ಹಯಾಬುಸಾ ಬೈಕಿನಲ್ಲಿ 1340 ಸಿಸಿ ಇನ್-ಲೈನ್ ನಾಲ್ಕು ಸಿಲಿಂಡರ್ ಎಂಜಿನ್ ಅನ್ನು ಇದರಲ್ಲಿ ಅಳವಡಿಸಲಾಗಿದೆ. ಈ ಎಂಜಿನ್ 9,700 ಆರ್‌ಪಿಎಂನಲ್ಲಿ 187.7 ಬಿಹೆಚ್‌ಪಿ ಪವರ್ ಮತ್ತು 7,000 ಆರ್‌ಪಿಎಂನಲ್ಲಿ 150 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಎಂಜಿನ್ ಅನ್ನು 6-ಸ್ಪೀಡ್ ಗೇರ್‌ಬಾಕ್ಸ್‌ಗೆ ಸ್ಲಿಪ್ ಮತ್ತು ಅಸಿಸ್ಟ್ ಕ್ಲಚ್ ಮತ್ತು ಬೈ-ಡೈರಕ್ಷನಲ್ ಕ್ವಿಕ್‌ಶಿಫ್ಟರ್‌ನೊಂದಿಗೆ ಜೋಡಿಸಲಾಗಿದೆ.

ಕಂಪನಿಯ ಪ್ರಕಾರ, ಈ ಹೊಸ ಸೂಪರ್‌ಬೈಕ್ 3.2 ಸೆಕೆಂಡುಗಳಲ್ಲಿ 0 ರಿಂದ 100 ಕಿ,ವೀ ವೇಗವನ್ನು ಪಡೆದುಕೊಳ್ಳುತ್ತದೆ ಮತ್ತು 299 ಕಿ.ಮೀ ಟಾಪ್ ಸ್ಪೀಡ್ ಅನ್ನು ಹೊಂದಿದೆ. ಇನ್ನು ಈ 2021ರ ಸುಜುಕಿ ಹಯಾಬುಸಾ ಬೈಕ್ 265 ಕೆಜಿ ತೂಕವನ್ನು ಹೊಂದಿದೆ. ಇನ್ನು ಈ ಬೈಕ್ 20-ಲೀಟರ್ ಇಂಧನ ಟ್ಯಾಂಕ್ ಸಾಮರ್ಥ್ಯವನ್ನು ಹೋಂದಿದೆ.

ಡೀಲರ್ ಬಳಿ ತಲುಪಿದ ಹೊಸ ಸುಜುಕಿ ಹಯಾಬುಸಾ ಬೈಕ್

ಹೊಸ ಸುಜುಕಿ ಹಯಾಬುಸಾ ಬೈಕ್ ಗ್ಲೋಸ್ ಸ್ಪಾರ್ಕ್ಲಿ ಬ್ಲ್ಯಾಕ್/ಕ್ಯಾಂಡಿ ಬರ್ನ್ಟ್ ಗೋಲ್ಡ್, ಮೆಟಾಲಿಕ್ ಮ್ಯಾಟ್ ಸ್ವೋರ್ಡ್ ಸಿಲ್ವರ್/ಕ್ಯಾಂಡಿ ಡೇರಿಂಗ್ ರೆಡ್ ಮತ್ತು ಪರ್ಲ್ ಬ್ರಿಲಿಯಂಟ್ ವೈಟ್/ಮೆಟಾಲಿಕ್ ಮ್ಯಾಟ್ ಸ್ಟೆಲ್ಲಾರ್ ಬ್ಲೂ ಎಂಬ ಮೂರು ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಿದೆ.

Image Courtesy: Lokesh Swami

Most Read Articles

Kannada
English summary
India’s First All-new 2021 Suzuki Hayabusa Superbike Unboxed On Video. Read In Kannada.
Story first published: Friday, May 28, 2021, 20:34 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X