ಹೊಸ ಟ್ರಯಂಫ್ ಸ್ಪೀಡ್ ಟ್ರಿಪಲ್ 1200 ಆರ್‍ಎಸ್ ಬೈಕ್ ಟೀಸರ್ ಬಿಡುಗಡೆ

ಬ್ರಿಟಿಷ್ ದ್ವಿಚಕ್ರ ತಯಾರಕ ಕಂಪನಿಯಾದ ಟ್ರಯಂಫ್ ಮೋಟರ್‌ಸೈಕಲ್ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತನ್ನ ಹೊಸ ಸ್ಪೀಡ್ ಟ್ರಿಪಲ್ 1200 ಆರ್‍ಎಸ್ ಬೈಕನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಇದೀಗ ಟ್ರಯಂಫ್ ಕಂಪನಿಯು ಈ ಹೊಸ ಸ್ಪೀಡ್ ಟ್ರಿಪಲ್ 1200 ಆರ್‍ಎಸ್ ಬೈಕಿನ ಟೀಸರ್ ಅನ್ನು ಬಿಡುಗಡೆಗೊಳಿಸಿದೆ.

ಹೊಸ ಟ್ರಯಂಫ್ ಸ್ಪೀಡ್ ಟ್ರಿಪಲ್ 1200 ಆರ್‍ಎಸ್ ಬೈಕ್ ಟೀಸರ್ ಬಿಡುಗಡೆ

ಈ ಹೊಸ ಟ್ರಯಂಫ್ ಸ್ಪೀಡ್ ಟ್ರಿಪಲ್ 1200 ಆರ್‍ಎಸ್ ಬೈಕ್ ಇದೇ ತಿಂಗಳ 26ರಂದು ಜಾಗತಿಕವಾಗಿ ಅನಾವರಣಗೊಳಿಸಲಾಗುವುದು ಎಂದು ಬ್ರಿಟಿಷ್ ಬ್ರ್ಯಾಂಡ್ ಬಿಡುಗಡೆಗೊಳಿಸಿದ ಟೀಸರ್ ನಲ್ಲಿ ತಿಳಿಸಿದೆ. ಟೀಸರ್ ಚಿತ್ರದಲ್ಲಿ ನೋಡಿದಂತೆ, ಹೊಸ ಸ್ಪೀಡ್ ಟ್ರಿಪಲ್ 1200 ಆರ್‍ಎಸ್ ತನ್ನ ತನ್ನ ಒಡಹುಟ್ಟಿದವರಾದ ಸ್ಟ್ರೀಟ್ ಟ್ರಿಪಲ್ ಆರ್‍ಎಸ್ ನಲ್ಲಿ ಕಂಡುಬರುವಂತಹ ಎಲ್ಇಡಿ ಡಿಆರ್ಎಲ್ ಗಳೊಂದಿಗೆ ಹೆಡ್ ಲ್ಯಾಂಪ್ ವಿನ್ಯಾಸವನ್ನು ಮಾಡಿರುವಂತೆ ಇದೆ.

ಹೊಸ ಟ್ರಯಂಫ್ ಸ್ಪೀಡ್ ಟ್ರಿಪಲ್ 1200 ಆರ್‍ಎಸ್ ಬೈಕ್ ಟೀಸರ್ ಬಿಡುಗಡೆ

ಇನ್ನು ಟೀಸರ್ ಚಿತ್ರಗಳಲ್ಲಿ ಮುಂಭಾಗದಲ್ಲಿ ಗೋಲ್ಡನ್ ಫೋರ್ಕ್ಸ್ ಮತ್ತು ‘ಟ್ರಯಂಫ್' ಲೋಗೋನೊಂದಿಗೆ ಕಾರ್ಬನ್-ಫೈಬರ್ ಫೆಂಡರ್ ಅನ್ನು ಸಹ ಬಹಿರಂಗಪಡಿಸುತ್ತವೆ. ಇದರೊಂದಿಗೆ ಹೊಸ ಎಂ-ಆಕಾರದ ಎಲ್ಇಡಿ ಟೈಲ್‌ಲೈಟ್‌ಗಳು ಮತ್ತು ಫ್ಯೂಯಲ್ ಟ್ಯಾಂಕ್‌ನಲ್ಲಿ ಕಾಣುವ ‘ಆರ್‍ಎಸ್' ಗ್ರಾಫಿಕ್ಸ್ ಅನ್ನು ಸಹ ಬಹಿರಂಗಪಡಿಸಿದೆ.

MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಹೊಸ ಟ್ರಯಂಫ್ ಸ್ಪೀಡ್ ಟ್ರಿಪಲ್ 1200 ಆರ್‍ಎಸ್ ಬೈಕ್ ಟೀಸರ್ ಬಿಡುಗಡೆ

ಟ್ರಯಂಫ್ ಕಂಪನಿಯು ಹೊಸ ಸ್ಪೀಡ್ ಟ್ರಿಪಲ್ 1200 ಆರ್‍ಎಸ್ ಬೈಕಿನ ಟೀಸರ್ ವೀಡಿಯೋವನ್ನು ಕೂಡ ಬಿಡುಗಡೆಗೊಳಿಸಿದೆ. ಈ ವೀಡಿಯೋದಲ್ಲಿ ಬೈಕಿನ ಶಬ್ದವನ್ನು ಕೇಳಿಸಿದ್ದಾರೆ. ರೇಸಿಂಗ್ ಬೈಕ್ ಮಾದರಿಯ ಶಬ್ದವನ್ನು ಹೊಂದಿದೆ.

ಹೊಸ ಟ್ರಯಂಫ್ ಸ್ಪೀಡ್ ಟ್ರಿಪಲ್ 1200 ಆರ್‍ಎಸ್ ಬೈಕ್ ಟೀಸರ್ ಬಿಡುಗಡೆ

ಎಕ್ಸಾಸ್ಟ್ ನೋಟ್ ಮನಾರ್ಹವಾಗಿ ವಿಭಿನ್ನವಾಗಿದೆ. ಹೊಸ ಸ್ಪೀಡ್ ಟ್ರಿಪಲ್ 1200 ಆರ್‍ಎಸ್ ಬೈಕ್ ಇದು ಇದು ಪ್ರಸ್ತುತ 1050ಸಿಸಿ ಯಿಂದ ಒಂದು ಹಂತವಾಗಿದೆ. ಈ ಹೊಸ ಬೈಕ್ ಹೆಚ್ಚಿನ ಪವರ್ ಮತ್ತು ಟಾರ್ಕ್ ಅಂಕಿಅಂಶಗಳನ್ನು ಹೊಂದಿರುತ್ತದೆ ಎಂದು ನಾವು ನಿರೀಕ್ಷಿಸುತ್ತೇವೆ.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಹೊಸ ಟ್ರಯಂಫ್ ಸ್ಪೀಡ್ ಟ್ರಿಪಲ್ 1200 ಆರ್‍ಎಸ್ ಬೈಕ್ ಟೀಸರ್ ಬಿಡುಗಡೆ

ಹೊಸ ಟ್ರಯಂಫ್ ಸ್ಪೀಡ್ ಟ್ರಿಪಲ್ 1200 ಆರ್‍ಎಸ್ ಬೈಕ್ ಬಗ್ಗೆ ಕಂಪನಿಯು ಹೆಚ್ಚಿನ ಮಾಹಿತಿಗಳನ್ನು ಬಹಿರಂಗಪಡಿಸಲಿಲ್ಲ .ಕಂಪನಿಯು ಕಳೆದ ವರ್ಷ ಸ್ಟ್ರೀಟ್ ಟ್ರಿಪಲ್ ಆರ್‍ಎಸ್ ಅನ್ನು ಪರಿಚಯಿಸಿತು, ಇದು ಭಾರತೀಯ ಮಾರುಕಟ್ಟೆಯಲ್ಲಿಯೂ ಮಾರಾಟದಲ್ಲಿದೆ.

ಹೊಸ ಟ್ರಯಂಫ್ ಸ್ಪೀಡ್ ಟ್ರಿಪಲ್ 1200 ಆರ್‍ಎಸ್ ಬೈಕ್ ಟೀಸರ್ ಬಿಡುಗಡೆ

ಟ್ರಯಂಫ್ ಕಂಪನಿಯು ತನ್ನ 2020ರ ಸ್ಟ್ರೀಟ್ ಟ್ರಿಪಲ್ ಆರ್‍ಎಸ್ ಬೈಕನ್ನು ಈ ವರ್ಷದ ಏಪ್ರಿಲ್ ತಿಂಗಳಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತ್ತು. ಈ ಮಿಡ್ ಸರಣಿಯ ಈ ಸ್ಪೋರ್ಟ್ಸ್ ಬೈಕ್ ರಿವೈಸ್ ಮಾಡಲಾದ ಡಿಸೈನ್ ಆಕ್ಸೆಸರೀಸ್, ಆಫ್ ರ್‍ಯಾಕ್ ಟೆಕ್ನಾಲಜಿ ಹಾಗೂ ಮಿಡ್ ಸರಣಿಯ ಬಿ‍ಎಸ್ 6 ಎಂಜಿನ್‍ ಅನ್ನು ಹೊಂದಿದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಹೊಸ ಟ್ರಯಂಫ್ ಸ್ಪೀಡ್ ಟ್ರಿಪಲ್ 1200 ಆರ್‍ಎಸ್ ಬೈಕ್ ಟೀಸರ್ ಬಿಡುಗಡೆ

ಟ್ರಯಂಫ್ ಮೋಟರ್‌ಸೈಕಲ್ ತನ್ನ ಹೊಸ ಟೈಗರ್ 850 ಸ್ಪೋರ್ಟ್ ಬೈಕನ್ನು ಜಾಗತಿಕವಾಗಿ ಇತ್ತೀಚೆಗೆ ಅನಾವರಣಗೊಳಿಸಿತ್ತು. ಈ ಹೊಸ ಟ್ರಯಂಫ್ ಟೈಗರ್ 850 ಸ್ಪೋರ್ಟ್ ಬೈಕ್ ಬ್ರ್ಯಾಂಡ್‌ನ ಎಂಟ್ರಿ ಲೆವಲ್ ಮಾದರಿಯಾಗಿದೆ. ಈ ಹೊಸ ಟೈಗರ್ 850 ಸ್ಪೋರ್ಟ್ ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಈ ವರ್ಷದ ಮಧ್ಯಂತರ ಅವಧಿಯಲ್ಲಿ ಬಿಡುಗಡೆಗೊಳಿಸಬಹುದು.

ಹೊಸ ಟ್ರಯಂಫ್ ಸ್ಪೀಡ್ ಟ್ರಿಪಲ್ 1200 ಆರ್‍ಎಸ್ ಬೈಕ್ ಟೀಸರ್ ಬಿಡುಗಡೆ

ಹೊಸ ಟ್ರಯಂಫ್ ಸ್ಪೀಡ್ ಟ್ರಿಪಲ್ 1200 ಆರ್‍ಎಸ್ ಬೈಕ್ ಇದೇ ತಿಂಗಳ 26ರಂದು ಜಾಗತಿಕವಾಗಿ ಅನಾವರಣವಾಗಲಿದೆ. ಶೀಘ್ರದಲ್ಲೇ ಈ ಹೊಸ ಟ್ರಯಂಫ್ ಸ್ಪೀಡ್ ಟ್ರಿಪಲ್ 1200 ಆರ್‍ಎಸ್ ಬೈಕ್ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಬಹುದು. ನಂತರದಲ್ಲಿ ಇದು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸುತ್ತೇವೆ.

Most Read Articles

Kannada
English summary
New Triumph Speed Triple 1200 RS Teased Ahead Of Global Unveil. Read In Kannada.
Story first published: Wednesday, January 13, 2021, 14:46 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X