Just In
- 11 min ago
ವಿನೂತನ ವೈಶಿಷ್ಟ್ಯತೆಯೊಂದಿಗೆ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನವಾದ ರಾಯಲ್ ಎನ್ಫೀಲ್ಡ್ ಮಿಟಿಯೊರ್ 350
- 48 min ago
ಹೊಸ ಜೀಪ್ ರ್ಯಾಂಗ್ಲರ್ ರೂಬಿಕಾನ್ 392 ಲಾಂಚ್ ಎಡಿಷನ್ ಬಿಡುಗಡೆ
- 1 hr ago
ಸ್ಪ್ಲೆಂಡರ್ ಬೈಕುಗಳ ಮೇಲೆ ಭರ್ಜರಿ ಡಿಸ್ಕೌಂಟ್ ನೀಡುತ್ತಿದೆ ಹೀರೋ ಮೋಟೊಕಾರ್ಪ್
- 2 hrs ago
2021ರ ಸ್ವಿಫ್ಟ್ ಕಾರಿನ ಆಕ್ಸೆಸರಿಸ್ ಪ್ಯಾಕೇಜ್ ಬಿಡುಗಡೆ ಮಾಡಿದ ಮಾರುತಿ ಸುಜುಕಿ
Don't Miss!
- News
ಅಂತರರಾಷ್ಟ್ರೀಯ ವಿಮಾನ ಸಂಚಾರದ ಮೇಲಿನ ನಿರ್ಬಂಧ ಮುಂದುವರಿಕೆ
- Movies
ನಿರ್ದೇಶಕನಿಗೆ ಅವಮಾನ: ಸ್ಟಾರ್ ನಟ ಆಗಿದ್ರೆ ಸುಮ್ಮನೆ ಬಿಡುತ್ತಿದ್ರಾ? ಚಂದ್ರಶೇಖರ್ ಅಸಮಾಧಾನ
- Finance
ಮುಂದಿನ 6 ತಿಂಗಳಿನಲ್ಲಿ ದೆಹಲಿಯ ಎಲ್ಲಾ ಸರ್ಕಾರಿ ಕಾರುಗಳು, ಎಲೆಕ್ಟ್ರಿಕ್ ಕಾರುಗಳಾಗಿ ಬದಲಾಗಲಿವೆ!
- Education
MCL Recruitment 2021: 8 ಸಾಮಾನ್ಯ ವೈದ್ಯಕೀಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Sports
ಐಪಿಎಲ್ 2021: ರಾಜಸ್ಥಾನ್ ರಾಯಲ್ಸ್ ಜೊತೆ ಇಶ್ ಸೋಧಿ ಒಪ್ಪಂದ
- Lifestyle
ಅರಿಶಿನದ ಈ ಆರೋಗ್ಯ ಪ್ರಯೋಜನಗಳನ್ನು ಕೇಳಿದರೆ, ನೀವೂ ಶಾಕ್ ಆಗ್ತೀರಾ!
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಅನಾವರಣವಾಯ್ತು 2021ರ ಟ್ರಯಂಫ್ ಸ್ಪೀಡ್ ಟ್ರಿಪಲ್ 1200ಆರ್ಎಸ್ ಬೈಕ್
ಬ್ರಿಟಿಷ್ ದ್ವಿಚಕ್ರ ತಯಾರಕ ಕಂಪನಿಯಾದ ಟ್ರಯಂಫ್ ಮೋಟರ್ಸೈಕಲ್ ತನ್ನ ಹೊಸ ಹೊಸ ಸ್ಪೀಡ್ ಟ್ರಿಪಲ್ 1200ಆರ್ಎಸ್ ಬೈಕನ್ನು ಜಾಗತಿಕವಾಗಿ ಅನಾವರಣಗೊಳಿಸಿದೆ. 2021ರ ಟ್ರಯಂಫ್ ಸ್ಪೀಡ್ ಟ್ರಿಪಲ್ 1200ಆರ್ಎಸ್ ಬೈಕ್ ಕಾಸ್ಮೆಟಿಕ್ ಮತ್ತು ಮೆಕ್ಯಾನಿಕಲ್ ಎರಡೂ ಹೊಸ ನವೀಕರಣಗಳೊಂದಿಗೆ ಬರುತ್ತದೆ.

ಇನ್ನು 2021ರ ಟ್ರಯಂಫ್ ಸ್ಪೀಡ್ ಟ್ರಿಪಲ್ 1200ಆರ್ಎಸ್ ಬೈಕ್ ಹಲವಾರು ಹೆಚ್ಚುವರಿ ಫೀಚರ್ ಗಳನ್ನು ಸಹ ಹೊಂದಿರುತ್ತದೆ. ಇನ್ನು ಭಾರತೀಯ ಮಾರುಕಟ್ಟೆಯಲ್ಲಿ ಈ ಹೊಸ 2021ರ ಟ್ರಯಂಫ್ ಸ್ಪೀಡ್ ಟ್ರಿಪಲ್ 1200ಆರ್ಎಸ್ ಬೈಕ್ ತನ್ನ ಸರಣಿಯ ಟ್ರಿಪಲ್ ಆರ್ಎಸ್ ಮಾದರಿಗಿಂತ ಮೇಲಿನ ಸ್ಥಾನದಲ್ಲಿರುತ್ತದೆ. ಟ್ರಯಂಫ್ ಟ್ರಿಪಲ್ ಆರ್ಎಸ್ ಬೈಕ್ ಭಾರತದಲ್ಲಿ ಕಳೆದ ವರ್ಷ ಬಿಡುಗಡೆಯಾಗಿತ್ತು.

2021ರ ಟ್ರಯಂಫ್ ಸ್ಪೀಡ್ ಟ್ರಿಪಲ್ 1200ಆರ್ಎಸ್ ಬೈಕಿನ ವಿನ್ಯಾಸದ ಬಗ್ಗೆ ಹೇಳುವುದಾದರೆ, ಈ ಬೈಕ್ ಅಗ್ರೇಸಿವ್ ಲುಕ್ ಅನ್ನು ಹೊಂದಿದೆ. ಈ ಬೈಕಿನಲ್ಲಿ ಮಸ್ಕಲರ್ ಫ್ಯೂಯಲ್ ಟ್ಯಾಂಕ್ ಮತ್ತು ಎಲ್ಇಡಿ ಡಿಆರ್ಎಲ್ಗಳೊಂದಿಗೆ ಡ್ಯುಯಲ್ ಹೆಡ್ಲ್ಯಾಂಪ್ ಅನ್ನು ಅಳವಡಿಸಿದ್ದಾರೆ.
MOST READ: ಯೂನಿಕಾರ್ನ್ ಬೈಕಿನ ಬೆಲೆ ಹೆಚ್ಚಿಸಿದ ಹೋಂಡಾ ಮೋಟಾರ್ಸೈಕಲ್

ಇದರೊಂದಿಗೆ ತೀಕ್ಷ್ಣವಾದ ಬೆಲ್ಲಿ ಪ್ಯಾನ್, ಕಾರ್ಬನ್-ಫೈಬರ್ ಫ್ರಂಟ್ ಫೆಂಡರ್, ಹಿಂಭಾಗದ ಸೀಟ್ ಕೌಲ್ ಮತ್ತು ಎಲ್ಇಡಿ ಟೈಲ್ಲೈಟ್ಗಳೊಂದಿಗೆ ಕಾಂಪ್ಯಾಕ್ಟ್ ಟೈಲ್ ವಿಭಾಗದಿಂದ ಈ ಬೈಕಿಗೆ ಹೆಚ್ಚಿನ ಸ್ಪೋರ್ಟಿ ಲುಕ್ ಅನ್ನು ನೀಡಿದೆ.

ಹೊಸ ಬೈಕ್ ಎಲ್ಲಾ ಹೊಸ ಅಲ್ಯೂಮಿನಿಯಂ ಚಾಸಿಸ್ ಬಳಸಿ ನಿರ್ಮಿಸಲಾಗಿದ್ದು, ಹಳೆಯ ಮಾದರಿಗಿಂತ 10 ಕಿಲೋಗ್ರಾಂಗಳಷ್ಟು ಹಗುರವಾಗಿದೆ. 2021ರ ಟ್ರಯಂಫ್ ಸ್ಪೀಡ್ ಟ್ರಿಪಲ್ 1200 ಆರ್ಎಸ್ ಬೈಕ್ ಈಗ ಒಟ್ಟು 198 ಕೆಜಿ ತೂಕವನ್ನು ಹೊಂದಿದೆ.
MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್ಎಕ್ಸ್ ಬೈಕ್

ಫುಲ್ ಎಲ್ಇಡಿ ಲೈಟ್ ಹೊರತಾಗಿ, 2021ರ ಟ್ರಯಂಫ್ ಸ್ಪೀಡ್ ಟ್ರಿಪಲ್ 1200ಆರ್ಎಸ್ ಸಹ ಇತರ ಫೀಚರ್ ಗಳೊಂದಿಗೆ ಬರುತ್ತದೆ. ಇದು 5 ಇಂಚಿನ ಟಿಎಫ್ಟಿ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಹೊಸ ಸ್ವಿಚ್ಗಿಯರ್, ಕೀ ಲೆಸ್ ಇಗ್ನಿಷನ್, ಇಂಟಿಗ್ರೇಟೆಡ್ ಗೋಪ್ರೊ ಕಂಟ್ರೋಲ್ಸ್ ಮತ್ತು ಮೈಟ್ರಿಯಂಫ್ ಕನೆಕ್ಟಿವಿಟಿ ತಂತ್ರಜ್ಞಾನವನ್ನು ಒಳಗೊಂಡಿದೆ.

2021ರ ಟ್ರಯಂಫ್ ಸ್ಪೀಡ್ ಟ್ರಿಪಲ್ 1200ಆರ್ಎಸ್ ಬೈಕಿನಲ್ಲಿ ಹೊಸ 1160 ಸಿಸಿ ಮೂರು ಸಿಲಿಂಡರ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 10,750 ಆರ್ಪಿಎಂನಲ್ಲಿ 178 ಬಿಹೆಚ್ಪಿ ಪವರ್ ಮತ್ತು 9000 ಆರ್ಪಿಎಂನಲ್ಲಿ 125 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಎಂಜಿನ್ ಅನ್ನು ಆರು-ಸ್ಪೀಡ್ ಗೇರ್ಬಾಕ್ಸ್ನೊಂದಿಗೆ ಜೋಡಿಸಲಾಗಿದೆ. ಬೈ-ಡೈರಕ್ಷನಲ್ ಕ್ವಿಕ್-ಶಿಫ್ಟರ್ ಅನ್ನು ಸ್ಟ್ಯಾಂಡರ್ಡ್ನಂತೆ ಹೊಂದಿದೆ. ಹೊಸ ಸ್ಪೀಡ್ ಟ್ರಿಪಲ್ ತನ್ನ ಹಿಂದಿನ ಮಾದರಿಗೆ ಹೋಲಿಸಿದರೆ 30 ಬಿಹೆಚ್ಪಿ ಪವರ್ ಮತ್ತು 8 ಎನ್ಎಂ ಹೆಚ್ಚು ಟಾರ್ಕ್ ಉತ್ಪಾದಿಸುತದೆ. ಹೊಸ ಎಂಜಿನ್ 7 ಕಿಲೋಗ್ರಾಂಗಳಷ್ಟು ಹಗುರವಾಗಿದೆ.

2021ರ ಟ್ರಯಂಫ್ ಸ್ಪೀಡ್ ಟ್ರಿಪಲ್ 1200ಆರ್ಎಸ್ ಬೈಕಿನ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ ಟಾಪ್-ಸ್ಪೆಕ್ ಓಹ್ಲಿನ್ಸ್ ಎನ್ಐಎಕ್ಸ್ 30 ಯುಎಸ್ಡಿ ಫೋರ್ಕ್ ಗಳು ಮತ್ತು ಹಿಂಭಾಗದಲ್ಲಿ ಓಹ್ಲಿನ್ಸ್ ಟಿಟಿಎಕ್ಸ್ 36 ಮೊನೊಶಾಕ್ ಸೆಟಪ್ ಅನ್ನು ನೀಡಿದೆ.ಮುಂಭಾಗ ಮತ್ತು ಹಿಂಭಾಗದ ಸಸ್ಪೆಂಕ್ಷನ್ ಎರಡು ಪ್ರಿ-ಲೋಡ್ ಆಗಿ ಸಂಪೂರ್ಣವಾಗಿ ಹೊಂದಿಸಬಲ್ಲವು.

ಇನ್ನು ಈ ಹೊಸ ಬೈಕಿನಲ್ಲಿ ಡ್ಯುಯಲ್-ಚಾನೆಲ್ ಎಬಿಎಸ್, ಕಾರ್ನರಿಂಗ್ ಎಬಿಎಸ್, 6-ಆಕ್ಸಿಸ್ ಐಎಂಯು, ಟ್ರ್ಯಾಕ್ಷನ್ ಕಂಟ್ರೋಲ್ ಮತ್ತು ಲಾಂಚ್ ಕಂಟ್ರೋಲ್ ಅನ್ನು ಹೊಂದಿದೆ. ಇನ್ನು ಈ ಬೈಕಿನಲ್ಲಿ ರೋಡ್, ರೈನ್, ಸ್ಪೋರ್ಟ್ಸ್,ಟ್ರ್ಯಾಕ್ ಮತ್ತು ರೈಡರ್ ಎಂಬ ರೈಡಿಂಗ್ ಮೋಡ್ ಗಳನ್ನು ಒಳಗೊಂಡಿದೆ.