Just In
- 2 hrs ago
ಕೊನೆಯ ಆಸೆಯೆಂತೆ ರಾಜಕುಮಾರ ಪ್ರಿನ್ಸ್ ಫಿಲಿಪ್ ಅಂತಿಮ ಯಾತ್ರೆಗೆ ಸಿದ್ದವಾಗಿದೆ ಮಾಡಿಫೈ ಲ್ಯಾಂಡ್ ರೋವರ್
- 3 hrs ago
ಜಪಾನ್ನಲ್ಲಿ ಬಿಡುಗಡೆಯಾಯ್ತು ಮೇಡ್ ಇನ್ ಇಂಡಿಯಾ 2021ರ ಸುಜುಕಿ ಜಿಕ್ಸರ್ 250 ಬೈಕ್
- 4 hrs ago
ಆಕರ್ಷಕ ಬೆಲೆಯಲ್ಲಿ ದೇಶದ ಮೊದಲ ಹೈಬ್ರಿಡ್ ಟ್ರ್ಯಾಕ್ಟರ್ ಬಿಡುಗಡೆ
- 4 hrs ago
ಬೆಲೆ ಏರಿಕೆ ಪಡೆದುಕೊಂಡ ಟಿವಿಎಸ್ ಸ್ಟಾರ್ ಸಿಟಿ ಪ್ಲಸ್ ಬೈಕ್
Don't Miss!
- News
ಬೆಂಗಳೂರಿನಲ್ಲಿ ಭೀತಿ: ಕೊರೊನಾ ಹೆಚ್ಚು ರೆಮ್ಡೆಸಿವಿರ್ ಔಷಧಿ ಕಡಿಮೆ!
- Sports
ಐಪಿಎಲ್ ಇತಿಹಾಸದಲ್ಲಿ ಅಪರೂಪದ ದಾಖಲೆ ಬರೆದ ಆರ್ಸಿಬಿ!
- Finance
ಚಿನ್ನ, ಬೆಳ್ಳಿ ಸ್ವಲ್ಪ ಕುಸಿತ: ಏಪ್ರಿಲ್ 14ರಂದು ಎಲ್ಲೆಡೆ ಬೆಲೆ ಎಷ್ಟಿದೆ?
- Movies
40, 50, 60ರ ಸೀಕ್ರೆಟ್ ಬಿಚ್ಚಿಟ್ಟ ಕ್ರೇಜಿಸ್ಟಾರ್ ರವಿಚಂದ್ರನ್
- Education
SSLC Exams 2021: ಸಿಬಿಎಸ್ಇ ಪರೀಕ್ಷೆ ರದ್ದು ಬೆನ್ನಲ್ಲೇ ಎಸ್ಎಸ್ಎಲ್ಸಿ ಪರೀಕ್ಷೆ ಊಹಾಪೋಹ: ಸುರೇಶ್ ಕುಮಾರ್ ಸ್ಪಷ್ಟನ
- Lifestyle
ನಿಮ್ಮ ಮಗು 10ವರ್ಷ ತಲುಪುವಾಗ ಕಲಿಸಬೇಕಾದ ಜೀವನ ಕೌಶಲ್ಯಗಳಿವು
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬಿಡುಗಡೆಗೂ ಮುನ್ನ ಭಾರತ ತಲುಪಿದ ಬಹುನಿರೀಕ್ಷಿತ ಟ್ರಯಂಫ್ ಟ್ರೈಡೆಂಟ್ 660 ಬೈಕ್
ಜನಪ್ರಿಯ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಟ್ರಯಂಫ್ ಮೋಟರ್‌ಸೈಕಲ್ ತನ್ನ ಟ್ರೈಡೆಂಟ್ 660 ರೋಡ್‌ಸ್ಟರ್ ಬೈಕನ್ನು ಜಾಗತಿವಾಗಿ ಕಳೆದ ವರ್ಷ ಪರಿಚಯಿಸಿತು. ಈ ಬಹುನಿರೀಕ್ಷಿತ ಟ್ರಯಂಫ್ ಟ್ರೈಡೆಂಟ್ 660 ಬೈಕ್ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲು ಸಜ್ಜಾಗಿದೆ.

ಈ ಹೊಸ ಟ್ರೈಡೆಂಟ್ 660 ಬೈಕಿನ ಅಧಿಕೃತ ಟೀಸರ್ ಅನ್ನು ಇತ್ತೀಚೆಗೆ ಟ್ರಯಂಫ್ ಕಂಪನಿಯು ಬಿಡುಗಡೆಗೊಳಿಸಿತ್ತು. ಟೀಸರ್ ನಲ್ಲಿ ಈ ಹೊಸ ಟ್ರಯಂಫ್ ಟ್ರೈಡೆಂಟ್ 660 ರೋಡ್‌ಸ್ಟರ್ ಬೈಕಿನ ಬಿಡುಗಡೆಯ ದಿನಾಂಕವನ್ನು ಬಹಿರಂಗಪಡಿಸಿದೆ. ಅದರಂತೆ ಈ ಹೊಸ ಟ್ರಯಂಫ್ ಟ್ರೈಡೆಂಟ್ 660 ರೋಡ್‌ಸ್ಟರ್ ಬೈಕ್ ಇದೇ ತಿಂಗಳ 6 ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ. ಟ್ರಯಂಫ್ ಇಂಡಿಯಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ತನ್ನ ಟ್ರಯಂಫ್ ಟ್ರೈಡೆಂಟ್ 660 ಬೈಕಿಗಾಗಿ ಪ್ರಿ ಬುಕ್ಕಿಂಗ್ ಅನ್ನು ಈಗಾಗಲೇ ಆರಂಭಿಸಿದ್ದಾರೆ.

ಇದೀಗ ಪ್ರೀಮಿಯಂ ಬೈಕ್ ತಯಾರಕರಾದ ಟ್ರಯಂಫ್ ಭಾರತದ ತೀರಕ್ಕೆ ಟ್ರೈಡೆಂಟ್ 660 ರೋಡ್‌ಸ್ಟರ್ ಬೈಕ್ ತಲುಪಿರುವ ಚಿತ್ರವನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ. ಆದರೆ ಬೈಕಿನ ಚಿತ್ರವನ್ನು ಪ್ರದರ್ಶಿಸಿಲ್ಲ. ದೊಡ್ಡ ಗಾತ್ರದ ಬಾಕ್ಸ್ ಚಿತ್ರವನ್ನು ಹಂಚಿ ಏನು ಇದು ಊಹಿಸಿ ಎಂದು ಚಿತ್ರದಲ್ಲಿ ಬರೆದಿದ್ದಾರೆ.
MOST READ: ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಎಡಿಷನ್ ಬಿಡುಗಡೆ

ಹೊಸ ಟ್ರಯಂಫ್ ಟ್ರೈಡೆಂಟ್ 660 ರೋಡ್‌ಸ್ಟರ್ ಬೈಕ್ ಹಲವಾರು ಅತ್ಯಾಧುನಿಕ ಫೀಚರ್ ಗಳನ್ನು ಹೊಂದಿದ್ದು, ದೇಶಿಯ ಮಾರುಕಟ್ಟೆಯಲ್ಲಿ ಬಹುನಿರೀಕ್ಷೆಯನ್ನು ಹುಟ್ಟು ಹಾಕಿದ ಬೈಕ್ ಇದಾಗಿದೆ. ಹೊಸ ಟ್ರಯಂಫ್ ಟ್ರೈಡೆಂಟ್ 660 ಬೈಕಿನ ಬೆಲೆಯ ಮಾಹಿತಿಯು ಬಹಿರಂಗವಾಗಿದೆ.

ಈ ಹೊಸ ಟ್ರಯಂಫ್ ಟ್ರೈಡೆಂಟ್ 660 ರೋಡ್‌ಸ್ಟರ್ ಬೈಕ್ ಅತ್ಯಂತ ಸೊಗಸಾದ ವಿನ್ಯಾಸ ಮತ್ತು ನವೀಕರಿಸಿದ ಎಂಜಿನ್ ಅನ್ನು ಹೊಂದಿದೆ. ಟ್ರಯಂಫ್ ಟ್ರೈಡೆಂಟ್ 660 ರೋಡ್‌ಸ್ಟರ್ ಹೊಸ ವಿನ್ಯಾಸ ಶೈಲಿಯನ್ನು ಹೊಂದಿದೆ.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍ಮಾಸ್ಟರ್ ಬೈಕ್

ಈಹೊಸ ಬೈಕ್ ಸ್ಕಪಲ್ಟಡ್ ಫ್ಯೂಯಲ್ ಟ್ಯಾಂಕ್ ನೊಂದಿಗೆ ಮಸ್ಕಲರ್ ಲುಕ್ ಅನ್ನು ಹೊಂದಿದೆ. ಇನ್ನು ಇದು ಸಿಂಗಲ್-ಪೀಸ್ ಸೀಟ್, ಎಕ್ಸ್‌ಪೋಸ್ಡ್ ಫ್ರೇಮ್ ಮತ್ತು ಎಂಜಿನ್ ಮತ್ತು ವೃತ್ತಾಕಾರದ ಅಂಶಗಳೊಂದಿಗೆ ಸಣ್ಣದಾಗಿ ರೆಟ್ರೋ ಶೈಲಿಯಯಲ್ಲಿ ಕಾಣುತ್ತದೆ.

1968 ರಿಂದ 1975 ರವರೆಗೆ ಟ್ರೈಡೆಂಟ್ ಎಂಬ ಹಳೆಯ ಐಕಾನಿಕ್ ಬೈಕಿನ ಉತ್ಪಾದನೆಯಲ್ಲಿತ್ತು. ಅದೇ ಐಕಾನಿಕ್ ಬೈಕಿನ ಹೆಸರಿನಲ್ಲಿ ಟ್ರಯಂಫ್ ಕಂಪನಿಯು ಹೊಸ ಮಾದರಿಯನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಹೊಸ ಟ್ರಯಂಫ್ ಟ್ರೈಡೆಂಟ್ 660 ರೋಡ್‌ಸ್ಟರ್ ಬೈಕ್ ಮ್ಯಾಟ್ ಜೆಟ್ ಬ್ಲಾಕ್/ಮ್ಯಾಟ್ ಸಿಲ್ವರ್ ಐಸ್, ಸಿಲ್ವರ್ ಐಸ್ ಮತ್ತು ಡಯಾಬ್ಲೊ ರೆಡ್, ಕ್ರಿಸ್ಟಲ್ ವೈಟ್ ಮತ್ತು ಸಾಫೈರ್ ಬ್ಲ್ಯಾಕ್ ಎಂಬ ನಾಲ್ಕು ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿರಲಿದೆ.

ಇನ್ನು ಈ ಬೈಕಿನಲ್ಲಿ ರೈಡರ್ ಏಡ್ಸ್ ಮತ್ತು ಎಲೆಕ್ಟ್ರಾನಿಕ್ಸ್ ಅನ್ನು ಸಹ ನೀಡುತ್ತದೆ, ಉದಾಹರಣೆಗೆ ರೈಡ್-ಬೈ-ವೈರ್, ಟ್ರ್ಯಾಕ್ಷನ್ ಕಂಟ್ರೋಲ್, ರೈನ್ ಮತ್ತು ರೋಡ್ ರೈಡರ್ ಮೋಡ್ ಗಳು ಸೇರಿದಂತೆ ಇತರ ಹಲವಾರು ಅತ್ಯಾಧುನಿಕ ಫೀಚರ್ ಗಳನ್ನು ಹೊಂದಿವೆ.

ಹೊಸ ಟ್ರಯಂಫ್ ಟ್ರೈಡೆಂಟ್ 660 ಬೈಕಿನಲ್ಲಿ ಇನ್-ಲೈನ್ ಮೂರು-ಸಿಲಿಂಡರ್ 660 ಸಿಸಿ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 10,250 ಆರ್‌ಪಿಎಂನಲ್ಲಿ 80 ಬಿಹೆಚ್‌ಪಿ ಪವರ್ ಮತ್ತು 6,250 ಆರ್‌ಪಿಎಂನಲ್ಲಿ 64 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ, ಎಂಜಿನ್ ನೊಂದಿಗೆ ಸ್ಲಿಪ್/ಅಸಿಸ್ಟ್ ಕ್ಲಚ್‌ನೊಂದಿಗೆ ಆರು-ಸ್ಪೀಡ್ ಗೇರ್‌ಬಾಕ್ಸ್ ಜೋಡಿಸಲಾಗಿದೆ.

ಈ ಟ್ರೈಡೆಂಟ್ 660 ಬೈಕ್ ಎಲ್ಇಡಿ ಲೈಟಿಂಗ್ ಮತ್ತು ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಗಾಗಿ ಟಿಎಫ್ಟಿ ಡಿಸ್ ಪ್ಲೇಯನ್ನು ಸಹ ಒಳಗೊಂಡಿದೆ. ‘ಮೈ ಟ್ರಯಂಫ್' ಆ್ಯಪ್ ಬಳಸಿ ಡಿಜಿಟಲ್ ಡಿಸ್ಪ್ಲೇಯನ್ನು ರೈಡರ್ ಸ್ಮಾರ್ಟ್‌ಫೋನ್‌ಗೆ ಕನೆಕ್ಟ್ ಮಾಡಬಹುದಾಗಿದೆ.

ಹೊಸ ಟ್ರಯಂಫ್ ಟ್ರೈಡೆಂಟ್ 660 ಬೈಕ್ ಟೂಬುಲರ್ ಸ್ಟೀಲ್ ಚಾಸಿಸ್ ಅನ್ನು ಹೊಂದಿದೆ. ಈ ಹೊಸ ಬೈಕಿನ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 41 ಎಂಎಂ ಶೋವಾ ಯುಎಸ್‌ಡಿ ಫೋರ್ಕ್‌ಗಳು ಮತ್ತು ಹಿಂಭಾಗದಲ್ಲಿ ಶೋವಾ ಮೊನೊ-ಶಾಕ್ ಸೆಟಪ್ ಅನ್ನು ಹೊಂದಿದೆ.

ಟ್ರೈಡೆಂಟ್ 660 ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 310 ಎಂಎಂ ಟ್ವಿನ್ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ ಒಂದೇ ಡಿಸ್ಕ್ ಬ್ರೇಕ್ ಅನ್ನು ಹೊಂದಿದೆ, ಇದರೊಂದಿಗೆ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ನೀಡಲಾಗಿದೆ. ಇನ್ನು ಈ ಟ್ರಯಂಫ್ ಟ್ರೈಡೆಂಟ್ 660 ಮಾದರಿಯು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಕವಾಸಕಿ ಝಡ್ 650 ಬೈಕಿಗೆ ಪೈಪೋಟಿ ನೀಡುತ್ತದೆ.