ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಟ್ರಯಂಫ್ ಟ್ರೈಡೆಂಟ್ 660 ರೋಡ್‌ಸ್ಟರ್ ಬೈಕ್

ಜನಪ್ರಿಯ ದ್ವಿಚಕ್ರ ತಯಾರಕ ಕಂಪನಿಯಾದ ಟ್ರಯಂಫ್ ಮೋಟರ್‌ಸೈಕಲ್ ತನ್ನ ಟ್ರೈಡೆಂಟ್ 660 ರೋಡ್‌ಸ್ಟರ್ ಬೈಕನ್ನು ಜಾಗತಿವಾಗಿ ಕಳೆದ ವರ್ಷ ಅನಾವರಣಗೊಳಿಸಿತ್ತು. ಭಾರತದಲ್ಲಿ ಬಿಡುಗಡೆಯಾಗಲಿರುವ ಈ ಹೊಸ ಟ್ರಯಂಫ್ ಟ್ರೈಡೆಂಟ್ 660 ಬ್ರ್ಯಾಂಡ್‌ನ ಎಂಟ್ರಿ ಲೆವೆಲ್ ಮಾದರಿಯಾಗಿದೆ.

ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಟ್ರಯಂಫ್ ಟ್ರೈಡೆಂಟ್ 660 ರೋಡ್‌ಸ್ಟರ್ ಬೈಕ್

ಟ್ರಯಂಫ್ ಇಂಡಿಯಾ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಟ್ರಯಂಫ್ ಟ್ರೈಡೆಂಟ್ 660 ಬೈಕಿಗಾಗಿ ಪ್ರಿ ಬುಕ್ಕಿಂಗ್ ಅನ್ನು ಈಗಾಗಲೇ ಆರಂಭಿಸಿದ್ದಾರೆ. ಹೊಸ ಟ್ರಯಂಫ್ ಟ್ರೈಡೆಂಟ್ 660 ರೋಡ್‌ಸ್ಟರ್ ಬೈಕ್ ಹಲವಾರು ಅತ್ಯಾಧುನಿಕ ಫೀಚರ್ ಗಳನ್ನು ಹೊಂದಿದ್ದು, ಜಾಗತಿಕವಾಗಿ ಬಹುನಿರೀಕ್ಷೆಯನ್ನು ಹುಟ್ಟು ಹಾಕಿದ ಬೈಕ್ ಇದಾಗಿದೆ. ಹೊಸ ಟ್ರಯಂಫ್ ಟ್ರೈಡೆಂಟ್ 660 ಬೈಕಿನ ಬೆಲೆಯ ಮಾಹಿತಿಯು ಬಹಿರಂಗವಾಗಿದೆ.

ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಟ್ರಯಂಫ್ ಟ್ರೈಡೆಂಟ್ 660 ರೋಡ್‌ಸ್ಟರ್ ಬೈಕ್

ಬಹಿರಂಗವಾದ ಮಾಹಿತಿಯ ಪ್ರಕಾರ, ಹೊಸ ಟ್ರಯಂಫ್ ಟ್ರೈಡೆಂಟ್ 660 ಬೈಕಿನ ಆರಂಭಿಕ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.6.95 ಲಕ್ಷಗಳಾಗಿರುತ್ತದೆ. ಟ್ರಯಂಫ್ ಇಂಡಿಯಾ ಇನ್ನೂ ಅಧಿಕೃತವಾಗಿ ಬೆಲೆಗಳನ್ನು ಪ್ರಕಟಿಸದ ಕಾರಣ, ಇದರ ನಿಖರವಾದ ಬೆಲೆಯು ಬಿಡುಗಡೆಯ ಸಂದರ್ಭದಲ್ಲಿ ತಿಳಿಯುತ್ತದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಟ್ರಯಂಫ್ ಟ್ರೈಡೆಂಟ್ 660 ರೋಡ್‌ಸ್ಟರ್ ಬೈಕ್

ಈ ಹೊಸ ಹೊಸ ಟ್ರಯಂಫ್ ಟ್ರೈಡೆಂಟ್ 660 ರೋಡ್‌ಸ್ಟರ್ ಬೈಕ್ ಅತ್ಯಂತ ಸೊಗಸಾದ ವಿನ್ಯಾಸ ಮತ್ತು ನವೀಕರಿಸಿದ ಎಂಜಿನ್ ಅನ್ನು ಹೊಂದಿದೆ. ಟ್ರಯಂಫ್ ಟ್ರೈಡೆಂಟ್ 660 ರೋಡ್‌ಸ್ಟರ್ ಹೊಸ ವಿನ್ಯಾಸ ಶೈಲಿಯನ್ನು ಒಳಗೊಂಡಿದೆ.

ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಟ್ರಯಂಫ್ ಟ್ರೈಡೆಂಟ್ 660 ರೋಡ್‌ಸ್ಟರ್ ಬೈಕ್

ಹೊಸ ಟ್ರೈಡೆಂಟ್ 660 ರೋಡ್‌ಸ್ಟರ್ ಬೈಕ್ ಸ್ಕಪಲ್ಟಡ್ ಫ್ಯೂಯಲ್ ಟ್ಯಾಂಕ್ ನೊಂದಿಗೆ ಮಸ್ಕಲರ್ ಲುಕ್ ಅನ್ನು ಹೊಂದಿದೆ. ಈ ಹೊಸ ಬೈಕ್ ಸಿಂಗಲ್-ಪೀಸ್ ಸೀಟ್, ಎಕ್ಸ್‌ಪೋಸ್ಡ್ ಫ್ರೇಮ್ ಮತ್ತು ಎಂಜಿನ್ ಮತ್ತು ವೃತ್ತಾಕಾರದ ಅಂಶಗಳೊಂದಿಗೆ ಸಣ್ಣದಾಗಿ ರೆಟ್ರೋ ಶೈಲಿಯಯಲಿ ಕಾಣುತ್ತದೆ.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಟ್ರಯಂಫ್ ಟ್ರೈಡೆಂಟ್ 660 ರೋಡ್‌ಸ್ಟರ್ ಬೈಕ್

ಟ್ರೈಡೆಂಟ್ ಎಂಬ ಹೆಸರಿನ ಹಿಂದೆ ಒಂದು ರೋಚಕ ಇತಿಹಾಸವಿದೆ. 1968 ರಿಂದ 1975 ರವರೆಗೆ ಟ್ರೈಡೆಂಟ್ ಎಂಬ ಹಳೆಯ ಐಕಾನಿಕ್ ಬೈಕಿನ ಉತ್ಪಾದನೆಯಲ್ಲಿತ್ತು. ಅದೇ ಐಕಾನಿಕ್ ಬೈಕಿನ ಹೆಸರಿನಲ್ಲಿ ಟ್ರಯಂಫ್ ಕಂಪನಿಯು ಹೊಸ ಮಾದರಿಯನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ

ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಟ್ರಯಂಫ್ ಟ್ರೈಡೆಂಟ್ 660 ರೋಡ್‌ಸ್ಟರ್ ಬೈಕ್

ಟ್ರಯಂಫ್ ಟ್ರೈಡೆಂಟ್ 660 ರೋಡ್‌ಸ್ಟರ್ ಮ್ಯಾಟ್ ಜೆಟ್ ಬ್ಲಾಕ್/ಮ್ಯಾಟ್ ಸಿಲ್ವರ್ ಐಸ್, ಸಿಲ್ವರ್ ಐಸ್ ಮತ್ತು ಡಯಾಬ್ಲೊ ರೆಡ್, ಕ್ರಿಸ್ಟಲ್ ವೈಟ್ ಮತ್ತು ಸಾಫೈರ್ ಬ್ಲ್ಯಾಕ್ ಎಂಬ ನಾಲ್ಕು ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿರಲಿದೆ.

MOST READ: ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಎಡಿಷನ್ ಬಿಡುಗಡೆ

ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಟ್ರಯಂಫ್ ಟ್ರೈಡೆಂಟ್ 660 ರೋಡ್‌ಸ್ಟರ್ ಬೈಕ್

ಹೊಸ ಟ್ರಯಂಫ್ ಟ್ರೈಡೆಂಟ್ 660 ಬೈಕ್ ಎಲ್ಇಡಿ ಲೈಟಿಂಗ್ ಮತ್ತು ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಗಾಗಿ ಟಿಎಫ್ಟಿ ಡಿಸ್ ಪ್ಲೇಯನ್ನು ಸಹ ಒಳಗೊಂಡಿದೆ. 'ಮೈ ಟ್ರಯಂಫ್' ಆ್ಯಪ್ ಬಳಸಿ ಡಿಜಿಟಲ್ ಡಿಸ್ಪ್ಲೇಯನ್ನು ರೈಡರ್ ಸ್ಮಾರ್ಟ್‌ಫೋನ್‌ಗೆ ಕನೆಕ್ಟ್ ಮಾದಬಹುದಾಗಿದೆ.

ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಟ್ರಯಂಫ್ ಟ್ರೈಡೆಂಟ್ 660 ರೋಡ್‌ಸ್ಟರ್ ಬೈಕ್

ಇನ್ನು ಈ ಹೊಸ ಬೈಕಿನಲ್ಲಿ ರೈಡರ್ ಏಡ್ಸ್ ಮತ್ತು ಎಲೆಕ್ಟ್ರಾನಿಕ್ಸ್ ಅನ್ನು ಸಹ ನೀಡುತ್ತದೆ, ಉದಾಹರಣೆಗೆ ರೈಡ್-ಬೈ-ವೈರ್, ಟ್ರ್ಯಾಕ್ಷನ್ ಕಂಟ್ರೋಲ್, ರೈನ್ ಮತ್ತು ರೋಡ್ ರೈಡರ್ ಮೋಡ್ ಗಳು ಸೇರಿದಂತೆ ಇತರ ಹಲವಾರು ಫೀಚರ್ ಗಳನ್ನು ಹೊಂದಿದೆ.

ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಟ್ರಯಂಫ್ ಟ್ರೈಡೆಂಟ್ 660 ರೋಡ್‌ಸ್ಟರ್ ಬೈಕ್

ಹೊಸ ಟ್ರಯಂಫ್ ಟ್ರೈಡೆಂಟ್ 660 ಬೈಕಿನಲ್ಲಿ ಇನ್-ಲೈನ್ ಮೂರು-ಸಿಲಿಂಡರ್ 660 ಸಿಸಿ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 10,250 ಆರ್‌ಪಿಎಂನಲ್ಲಿ 80 ಬಿಹೆಚ್‌ಪಿ ಪವರ್ ಮತ್ತು 6,250 ಆರ್‌ಪಿಎಂನಲ್ಲಿ 64 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ, ಎಂಜಿನ್ ನೊಂದಿಗೆ ಸ್ಲಿಪ್/ಅಸಿಸ್ಟ್ ಕ್ಲಚ್‌ನೊಂದಿಗೆ ಆರು-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ.

ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಟ್ರಯಂಫ್ ಟ್ರೈಡೆಂಟ್ 660 ರೋಡ್‌ಸ್ಟರ್ ಬೈಕ್

ಹೊಸ ಟ್ರಯಂಫ್ ಟ್ರೈಡೆಂಟ್ 660 ಬೈಕ್ ಟೂಬುಲರ್ ಸ್ಟೀಲ್ ಚಾಸಿಸ್ ಅನ್ನು ಹೊಂದಿದೆ. ಈ ಹೊಸ ಬೈಕಿನ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 41 ಎಂಎಂ ಶೋವಾ ಯುಎಸ್‌ಡಿ ಫೋರ್ಕ್‌ಗಳು ಮತ್ತು ಹಿಂಭಾಗದಲ್ಲಿ ಶೋವಾ ಮೊನೊ-ಶಾಕ್ ಅನ್ನು ಒಳಗೊಂಡಿದೆ

ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಟ್ರಯಂಫ್ ಟ್ರೈಡೆಂಟ್ 660 ರೋಡ್‌ಸ್ಟರ್ ಬೈಕ್

ಇನ್ನು ಈ ಟ್ರಯಂಫ್ ಟ್ರೈಡೆಂಟ್ 660 ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 310 ಎಂಎಂ ಟ್ವಿನ್ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ ಒಂದೇ ಡಿಸ್ಕ್ ಬ್ರೇಕ್ ಅನ್ನು ಹೊಂದಿದೆ, ಇದರೊಂದಿಗೆ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ನೀಡಲಾಗಿದೆ. ಈ ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಕವಾಸಕಿ ಝಡ್ 650 ಬೈಕಿಗೆ ಪೈಪೋಟಿ ನೀಡುತ್ತದೆ.

Most Read Articles

Kannada
English summary
New Triumph Trident 660 To Be Launched. Read In Kananda.
Story first published: Friday, March 19, 2021, 19:40 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X