ಭಾರತದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ ಯಮಹಾ ಎಫ್‍‍ಝಡ್-ಎಕ್ಸ್ ಬೈಕ್

ಯಮಹಾ ಮೋಟಾರ್ ಇಂಡಿಯಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಹೊಸ ಬೈಕನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಭಾರತದಲ್ಲಿ ಎಫ್‍‍ಝಡ್-ಎಕ್ಸ್ ಎಂಬ ಹೊಸ ಹೆಸರಿನ ಟ್ರೇಡ್‌ಮಾರ್ಕ್ ಅನ್ನು ಯಮಹಾ ಕಂಪನಿಯು ಕಳೆದ ವರ್ಷದ ಡಿಸೆಂಬರ್ ತಿಂಗಳಿನಲ್ಲಿ ನೋಂದಾಯಿಸಿಕೊಂಡಿದ್ದರು.

ಮತ್ತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ಯಮಹಾ ಎಫ್‍‍ಝಡ್-ಎಕ್ಸ್ ಬೈಕ್

ಈ ಹೊಸ ಯಮಹಾ ಎಫ್‍‍ಝಡ್-ಎಕ್ಸ್ ಬೈಕ್ ಅಡ್ವೆಂಚರ್ ಟೂರರ್ ಮಾದರಿಯಾಗಿರಬಹುದು ಎಂದು ನಿರೀಕ್ಷಿಸುತ್ತೇವೆ. ಈ ಹೊಸ ಯಮಹಾ ಎಫ್‍‍ಝಡ್-ಎಕ್ಸ್ ಬೈಕ್ ದೇಶಿಯ ಮಾರುಕಟ್ಟೆಯಲ್ಲಿ ಈ ವರ್ಷದ ಅಂತ್ಯದಲ್ಲಿ ಅಥವಾ ಮುಂದಿನ ವರ್ಷದ ಆರಂಭದಲ್ಲಿ ಬಿಡುಗಡೆಯಾಗಬಹುದು ಎಂದು ಹೇಳಲಾಗುತ್ತಿದೆ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ಯಮಹಾ ಎಫ್‍‍ಝಡ್-ಎಕ್ಸ್ ಬೈಕ್

ಈ ಹೊಸ ಯಮಹಾ ಎಫ್‍‍ಝಡ್-ಎಕ್ಸ್ ಬೈಕಿನ ಸ್ಪೈ ಚಿತ್ರ ಬಹಿರಂಗವಾಗಿದೆ. ಯಮಹಾ ಎಫ್‍‍ಝಡ್-ಎಕ್ಸ್ ಬೈಕ್ 2020 ಎಂಎಂ ಉದ್ದ, 785 ಎಂಎಂ ಅಗಲ ಮತ್ತು 1115 ಎಂಎಂ ಎತ್ತರವನ್ನು ಹೊಂದಿರುತ್ತದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಮತ್ತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ಯಮಹಾ ಎಫ್‍‍ಝಡ್-ಎಕ್ಸ್ ಬೈಕ್

ಇನ್ನು ಈ ಯಮಹಾ ಎಫ್‍‍ಝಡ್-ಎಕ್ಸ್ ಬೈಕ್ 1330 ಎಂಎಂ ವ್ಹೀಲ್‌ಬೇಸ್ ಅನ್ನು ಹೊಂದಿದೆ. ಇದೇ ಸರಣಿಯ ಎಫ್‌ಜೆಡ್ -150 ಬೈಕ್ ಕೂಡ ಒಂದೇ ರೀತಿಯ ವ್ಹೀಲ್‌ಬೇಸ್ ಅನ್ನು ಹೊಂದಿದೆ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ಯಮಹಾ ಎಫ್‍‍ಝಡ್-ಎಕ್ಸ್ ಬೈಕ್

ಹೊಸ ಯಮಹಾ ಎಫ್‍‍ಝಡ್-ಎಕ್ಸ್ ಬೈಕಿನಲ್ಲಿ 149ಸಿಸಿ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 7,250 ಆರ್‌ಪಿಎಂನಲ್ಲಿ 12.2 ಬಿಹೆಚ್‌ಪಿ ಪವರ್ ಮತ್ತು 5,500 ಆರ್‌ಪಿಎಂನಲ್ಲಿ 13.3 ಎನ್ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. ಈ ಎಂಜಿನ್ ನೊಂದಿಗೆ 5-ಸ್ಪೀಡ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಮತ್ತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ಯಮಹಾ ಎಫ್‍‍ಝಡ್-ಎಕ್ಸ್ ಬೈಕ್

ಹೊಸ ಯಮಹಾ ಎಫ್‍‍ಝಡ್-ಎಕ್ಸ್ ಬೈಕಿನ ವಿನ್ಯಾಸದ ಬಗ್ಗೆ ಹೇಳುವುದಾದರೆ, ಈ ಬೈಕ್ ಅಗ್ರೇಸಿವ್ ಲುಕ್ ಅನ್ನು ಹೊಂದಿದೆ. ಈ ಬೈಕಿನಲ್ಲಿ ಎಲ್‌ಇಡಿ ಹೆಡ್‌ಲ್ಯಾಂಪ್‌ಗಳು ಮತ್ತು ಎಲ್‌ಇಡಿ ಟೈಲ್ ಲೈಟ್‌ಗಳನ್ನು ಅಳವಡಿಸಲಾಗಿದೆ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ಯಮಹಾ ಎಫ್‍‍ಝಡ್-ಎಕ್ಸ್ ಬೈಕ್

ಇನ್ನು ಇದರಲ್ಲಿ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಗಾಗಿ ಎಲ್‌ಸಿಡಿ ಡಿಸ್ ಪ್ಲೇಯನ್ನು ಅಳವಡಿಸಲಾಗಿದೆ. ಇದರೊಂದಿಗೆ ಇತ್ತೀಚೆಗೆ ಪರಿಚಯಿಸಲಾದ ಬ್ಲೂಟೂತ್ ಕನೆಕ್ಟಿವಿಟಿ ತಂತ್ರಜ್ಞಾನವು ಸ್ಟ್ಯಾಂಡರ್ಡ್ ಆಗಿ ಇದರಲ್ಲಿ ನೀಡಬಹುದು.

MOST READ: ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಎಡಿಷನ್ ಬಿಡುಗಡೆ

ಮತ್ತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ಯಮಹಾ ಎಫ್‍‍ಝಡ್-ಎಕ್ಸ್ ಬೈಕ್

ಯಮಹಾ ಎಫ್‍‍ಝಡ್-ಎಕ್ಸ್ ಬೈಕಿನ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗದಲ್ಲಿ ಮೊನೊ-ಶಾಕ್ ಸೆಟಪ್ ನೊಂದಿಗೆ ಪ್ರಿ-ಲೋಡ್ಗೆ ಹೊಂದಾಣಿಕೆಯೊಂದಿಗೆ ಒಂದೇ ಆಗಿರುತ್ತದೆ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ಯಮಹಾ ಎಫ್‍‍ಝಡ್-ಎಕ್ಸ್ ಬೈಕ್

ಇನ್ನು ಇದರ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 282 ಎಂಎಂ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ 220 ಎಂಎಂ ಡಿಸ್ಕ್ ಬ್ರೇಕ್ ಅನ್ನು ನೀಡಲಾಗಿದೆ. ಇದರೊಂದಿಗೆ ಸಿಂಗಲ್-ಚಾನೆಲ್ ಎಬಿಎಸ್ ಅನ್ನು ಕೂಡ ನೀಡಬಹುದು.

ಮತ್ತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ಯಮಹಾ ಎಫ್‍‍ಝಡ್-ಎಕ್ಸ್ ಬೈಕ್

ಈ ಯಮಹಾ ಎಫ್‍‍ಝಡ್-ಎಕ್ಸ್ ಬೈಕ್ ಸ್ಟ್ಯಾಂಡರ್ಡ್ ಮಾದರಿಯ ಹೊಸ ರೂಪಾಂತರವಾಗಿರಬಹುದೆಂದು ಹೇಳಲಾಗುತ್ತಿದೆ. ದೇಶದಲ್ಲಿ ಕೈಗೆಟುಕುವ ಅಡ್ವೆಂಚರ್ ಬೈಕ್ ಗಳ ಹೆಚ್ಚುತ್ತಿರುವ ಬೇಡಿಕೆಯಿಂದಾಗಿ, ಯಮಹಾ ಎಫ್‍‍ಝಡ್ ಆವೃತ್ತಿಯಂತೆ ಕಾಣುವ ಹೊಸ ಮಾದರಿಯನ್ನು ಬಿಡುಗಡೆಗೊಳಿಸಲು ಮುಂದಾಗಿರಬಹುದು ಎಂದು ನಿರೀಕ್ಷಿಸುತ್ತೇವೆ.

Article Published On: Wednesday, April 21, 2021, 16:59 [IST]
English summary
Upcoming Yamaha FZ-X Spied Once Again. Read In Kananda.
Read more on ಯಮಹಾ yamaha
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+