ಭಾರತದಲ್ಲಿ ಬಹುನಿರೀಕ್ಷಿತ ಯಮಹಾ ಎಫ್‍‌ಜೆಡ್-ಎಕ್ಸ್ ಬೈಕ್ ಬಿಡುಗಡೆ

ಯಮಹಾ ಮೋಟಾರ್ ಇಂಡಿಯಾ ಕಂಪನಿಯು ಹೊಸ ಎಫ್‍‌ಜೆಡ್-ಎಕ್ಸ್ ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ಯಮಹಾ ಎಫ್‍ಜೆ ಡ್-ಎಕ್ಸ್ ಬೈಕಿನ ಬೆಲೆಯು ಭಾರತದ ಎಕ್ಸ್ ಶೊರೂಂ ಪ್ರಕಾರ ರೂ.1.16 ಲಕ್ಷಗಳಾಗಿದೆ.

ಭಾರತದಲ್ಲಿ ಬಹುನಿರೀಕ್ಷಿತ ಯಮಹಾ ಎಫ್‍‍ಝಡ್-ಎಕ್ಸ್ ಬೈಕ್ ಬಿಡುಗಡೆ

ಹೊಸ ಯಮಹಾ ಎಫ್‌ಜೆಡ್-ಎಕ್ಸ್ ಸ್ಮಾರ್ಟ್‌ಫೋನ್ ಕನೆಕ್ಟಿವಿಟಿಯೊಂದಿಗೆ ವೈ-ಕನೆಕ್ಟ್ ಅಪ್ಲಿಕೇಶನ್‌ನಂತಹ ಹೊಸ ಫೀಚರ್ಸ್ ಗಳನ್ನು ಪಡೆದುಕೊಂಡಿದೆ. ಹೊಸ ಯಮಹಾ ಎಫ್‍‍ಝಡ್-ಎಕ್ಸ್ ಎರಡು ರೂಪಾಂತರಗಳಲ್ಲಿ ಲಭ್ಯವಿದೆ. ಇದರ ಸ್ಟ್ಯಾಂಡರ್ಡ್ ರೂಪಾಂತರದ ಬೆಲೆಯು ರೂ.1,16,800 ಗಳಾದರೆ, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಹೊಂದಿರುವ ರೂಪಾಂತರದ ಬೆಲೆಯು ರೂ.1,19,800 ಗಳಾಗಿದೆ.

ಭಾರತದಲ್ಲಿ ಬಹುನಿರೀಕ್ಷಿತ ಯಮಹಾ ಎಫ್‍‍ಝಡ್-ಎಕ್ಸ್ ಬೈಕ್ ಬಿಡುಗಡೆ

ಹೊಸ ಯಮಹಾ ಎಫ್‍‍ಜೆಡ್-ಎಕ್ಸ್ ಬೈಕ್ ವೃತ್ತಕಾರದ ಡ್‌ಲ್ಯಾಂಪ್‌ಗಳು ಮತ್ತು ಟಿಯರ್-ಡ್ರಾಪ್ ಫ್ಯೂಯಲ್ ಟ್ಯಾಂಕ್‌ನೊಂದಿಗೆ ರೆಟ್ರೊ-ರೋಡ್ಸ್ಟರ್ ಅನ್ನು ಹೊಂದಿದೆ. ರೋಡ್ಸ್ಟರ್ ವಿನ್ಯಾಸದಿಂದಾಗಿ ಫ್ಯೂಯಲ್ ಟ್ಯಾಂಕ್ ಮಧ್ಯದಲ್ಲಿ ಬ್ಲ್ಯಾಕ್ ಮೆಟಲ್ ಸ್ಟ್ರಿಪ್ ಅನ್ನು ಹೊಂದಿದೆ. ಇನ್ನು ಈ ಬೈಕ್ ಮ್ಯಾಟ್ ಬ್ಲೂ, ಮ್ಯಾಟ್ ಬ್ಲ್ಯಾಕ್ ಮತ್ತು ಮ್ಯಾಟ್ ಕೂಪರ್ ಎಂಬ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯ

ಭಾರತದಲ್ಲಿ ಬಹುನಿರೀಕ್ಷಿತ ಯಮಹಾ ಎಫ್‍‍ಝಡ್-ಎಕ್ಸ್ ಬೈಕ್ ಬಿಡುಗಡೆ

ಈ ಹೊಸ ಬೈಕಿನಲ್ಲಿ ಇಂಟಿಗ್ರೇಟೆಡ್ ಡಿಆರ್‌ಎಲ್‌ಗಳೊಂದಿಗಿನ ಎಲ್‌ಇಡಿ ಹೆಡ್‌ಲ್ಯಾಂಪ್‌ಗಳು, ಎಲ್‌ಇಡಿ ಟೈಲ್‌ಲ್ಯಾಂಪ್, ಪೂರ್ಣ ಪ್ರಮಾಣದ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಬ್ಲೂಟೂತ್ ಕನೆಕ್ಟಿವಿಟಿ, ಸೈಡ್-ಸ್ಟ್ಯಾಂಡ್ ಎಂಜಿನ್ ಸ್ವಿಚ್ ಕಿಲ್,ಅಪ್‌ಸ್ಪೆಪ್ಟ್ ಎಕ್ಸಾಸ್ಟ್, ಮೊಬೈಲ್ ಚಾರ್ಜಿಂಗ್ ಸಾಕೆಟ್ ಮತ್ತು ಇತರ ಫೀಚರ್ಸ್ ಗಳನ್ನು ಹೊಂದಿವೆ.

ಭಾರತದಲ್ಲಿ ಬಹುನಿರೀಕ್ಷಿತ ಯಮಹಾ ಎಫ್‍‍ಝಡ್-ಎಕ್ಸ್ ಬೈಕ್ ಬಿಡುಗಡೆ

ಈ ಹೊಸ ಯಮಹಾ ಎಫ್‍‍ಝಡ್-ಎಕ್ ಬೈಕ್ 149 ಸಿಸಿ ಸಿಂಗಲ್-ಸಿಲಿಂಡರ್ ಏರ್-ಕೂಲ್ಡ್ ಎಂಜಿನ್‌ ಅನ್ನು ಹೊಂದಿದೆ. ಈ ಎಂಜಿನ್ 12.2 ಬಿಹೆಚ್‌ಪಿ ಮತ್ತು 13.3 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ನೊಂದಿಗೆ ಐದು-ಸ್ಪೀಡ್ ಟ್ರಾನ್ಸ್‌ಮಿಷನ್‌ ಅನ್ನು ಜೋಡಿಸಲಾಗಿದೆ.

ಭಾರತದಲ್ಲಿ ಬಹುನಿರೀಕ್ಷಿತ ಯಮಹಾ ಎಫ್‍‍ಝಡ್-ಎಕ್ಸ್ ಬೈಕ್ ಬಿಡುಗಡೆ

ಈ ಎಫ್‍‍ಜೆಡ್-ಎಕ್ಸ್ ಬೈಕ್ 2020 ಎಂಎಂ ಉದ್ದ, 785 ಎಂಎಂ ಅಗಲ ಮತ್ತು 1115 ಎಂಎಂ ಎತ್ತರವನ್ನು ಹೊಂದಿರುತ್ತದೆ. ಇನ್ನು ಈ ಯಮಹಾ ಎಫ್‍‍ಝಡ್-ಎಕ್ಸ್ ಬೈಕ್ 1330 ಎಂಎಂ ವ್ಹೀಲ್‌ಬೇಸ್ ಅನ್ನು ಹೊಂದಿರಲಿದೆ. ಇದೇ ಸರಣಿಯ ಎಫ್‌ಜೆಡ್ -150 ಬೈಕ್ ಕೂಡ ಇದೇ ರೀತಿಯ ವ್ಹೀಲ್‌ಬೇಸ್ ಅನ್ನು ಹೊಂದಿದೆ.

ಭಾರತದಲ್ಲಿ ಬಹುನಿರೀಕ್ಷಿತ ಯಮಹಾ ಎಫ್‍‍ಝಡ್-ಎಕ್ಸ್ ಬೈಕ್ ಬಿಡುಗಡೆ

ಈ ಯಮಹಾ ಎಫ್‍‍ಜೆಡ್-ಎಕ್ಸ್ ಬೈಕಿನ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗದಲ್ಲಿ ಮೊನೊ-ಶಾಕ್ ಸೆಟಪ್ ನೊಂದಿಗೆ ಪ್ರಿ-ಲೋಡ್ ಹೊಂದಾಣಿಕೆಯನ್ನು ಒಳಗೊಂಡಿದೆ.

ಭಾರತದಲ್ಲಿ ಬಹುನಿರೀಕ್ಷಿತ ಯಮಹಾ ಎಫ್‍‍ಝಡ್-ಎಕ್ಸ್ ಬೈಕ್ ಬಿಡುಗಡೆ

ಇನ್ನು ಪ್ರಮುಖವಾಗಿ ಈ ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 282 ಎಂಎಂ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ 220 ಎಂಎಂ ಡಿಸ್ಕ್ ಬ್ರೇಕ್ ಅನ್ನು ನೀಡಲಾಗುತ್ತದೆ. ಇದರೊಂದಿಗೆ ಸಿಂಗಲ್-ಚಾನೆಲ್ ಎಬಿಎಸ್ ಅನ್ನು ಕೂಡ ಹೊಂದಿರಲಿದೆ.

ಭಾರತದಲ್ಲಿ ಬಹುನಿರೀಕ್ಷಿತ ಯಮಹಾ ಎಫ್‍‍ಝಡ್-ಎಕ್ಸ್ ಬೈಕ್ ಬಿಡುಗಡೆ

ಯಮಹಾ ಎಫ್‍‍ಜೆಡ್-ಎಕ್ಸ್ ಬೈಕ್ ಭಾರತದಲ್ಲಿ ಬಿಡುಗಡೆಯಾಗಲಿರುವ ಕವಾಸಕಿ ಡಬ್ಲ್ಯು 175 ಬೈಕಿಗೆ ಪ್ರತಿಸ್ಪರ್ಧಿಯಾಗಲಿದೆ. ಈ ಯಮಹಾ ಎಫ್‍‍ಝಡ್-ಎಕ್ಸ್ ಭಾರತೀಯ ಮಾರುಕಟ್ಟೆಯಲ್ಲಿ ಬ್ರ್ಯಾಂಡ್‌ನಿಂದ ವಿಶಿಷ್ಟವಾದ ಕೊಡುಗೆಯಾಗಿದೆ. ಈ ಬೈಕ್ ಸರಳವಾದ ರೆಟ್ರೊ-ರೋಸ್ಟರ್ ವಿನ್ಯಾಸವನ್ನು ಹೊಂದಿದೆ.

Most Read Articles

Kannada
Read more on ಯಮಹಾ yamaha
English summary
Yamaha FZ-X Launched In India. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X