ಡೀಲರ್ ಬಳಿ ತಲುಪಿದ ಹೊಸ ಯಮಹಾ ಎಫ್‍‌ಜೆಡ್-ಎಕ್ಸ್ ಬೈಕ್

ಯಮಹಾ ಮೋಟಾರ್ ಇಂಡಿಯಾ ಕಂಪನಿಯು ತನ್ನ ಹೊಸ ಎಫ್‍‌ಜೆಡ್-ಎಕ್ಸ್ ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಕಳೆದ ವಾರ ಬಿಡುಗಡೆಗೊಳಿಸಿತ್ತು. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟವಾಗುವ ಎಕ್ಸ್‌ಎಸ್‌ಆರ್ ಮಾದರಿಯಿಂದ ಸ್ಫೂರ್ತಿ ಪಡೆದ ಹೊಸ ಎಫ್‍‌ಜೆಡ್-ಎಕ್ಸ್ ಬೈಕ್ ಬೈಕ್ ರೆಟ್ರೊ ಶೈಲಿಯ ವಿನ್ಯಾಸವನ್ನು ಹೊಂದಿದೆ.

ಡೀಲರ್ ಬಳಿ ತಲುಪಿದ ಹೊಸ ಯಮಹಾ ಎಫ್‍‌ಜೆಡ್-ಎಕ್ಸ್ ಬೈಕ್

ಹೊಸ ಯಮಹಾ ಎಫ್‍‌ಜೆಡ್-ಎಕ್ಸ್ ಬೈಕ್ ಅದೇ ಸರಣಿಯ ಎಫ್‍‌ಜೆಡ್ ವಿ3 ಹಾಗೂ ಎಫ್‌ಝಡ್‌ಎಸ್‌ ವಿ3 ಮಾದರಿಗಳಿಗಿಂತ ಮೇಲಿನ ಸ್ಥಾನದಲ್ಲಿರುತ್ತದೆ. ಈ ಹೊಸ ಹೊಸ ಯಮಹಾ ಎಫ್‌ಜೆಡ್-ಎಕ್ಸ್ ಬೈಕ್ ಈಗ ಡೀಲರ್ ಶೋ ರೂಂಗಳಿಗೆ ತಲುಪಲು ಪ್ರಾರಂಭವಾಗಿದೆ. ಈ ಬೈಕಿನ ವಿತರಣೆಯನ್ನು ಈ ತಿಂಗಳಿನಲ್ಲೇ ಪ್ರಾರಂಭಿಸುವ ಸಾಧ್ಯತೆಗಳಿದೆ. ಎಫ್‍‌ಜೆಡ್ ವಿ3 ಕಮ್ಯೂಟರ್ ಬೈಕಿನ ಅದೇ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದೆ.

ಡೀಲರ್ ಬಳಿ ತಲುಪಿದ ಹೊಸ ಯಮಹಾ ಎಫ್‍‌ಜೆಡ್-ಎಕ್ಸ್ ಬೈಕ್

ಹೊಸ ಯಮಹಾ ಎಫ್‍‍ಝಡ್-ಎಕ್ಸ್ ಬೈಕ್ ಎರಡು ರೂಪಾಂತರಗಳಲ್ಲಿ ಲಭ್ಯವಿದೆ. ಇದರ ಸ್ಟ್ಯಾಂಡರ್ಡ್ ರೂಪಾಂತರದ ಬೆಲೆಯು ರೂ.1,16,800 ಗಳಾದರೆ, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಹೊಂದಿರುವ ರೂಪಾಂತರದ ಬೆಲೆಯು ರೂ.1,19,800 ಗಳಾಗಿದೆ.

ಡೀಲರ್ ಬಳಿ ತಲುಪಿದ ಹೊಸ ಯಮಹಾ ಎಫ್‍‌ಜೆಡ್-ಎಕ್ಸ್ ಬೈಕ್

ಹೊಸ ಯಮಹಾ ಎಫ್‌ಜೆಡ್-ಎಕ್ಸ್ ಮಾದರಿಯು ಖಂಡಿತವಾಗಿಯೂ ತನ್ನ ಸ್ಟೈಲಿಂಗ್ ಅನ್ನು ಎಕ್ಸ್‌ಎಸ್‌ಆರ್ 155 ಬೈಕಿನಿಂದ ಎರವಲು ಪಡೆದುಕೊಂಡಿದೆ, ಎಲ್‌ಇಡಿ ಡೇಟೈಮ್ ರನ್ನಿಂಗ್ ಲೈಟ್ ಮತ್ತು ಅನನ್ಯ ಅಲ್ಯೂಮಿನಿಯಂ ಬ್ರಾಕೆಟ್‌ಗಳೊಂದಿಗೆ ವೃತ್ತಾಕಾರದ ಎಲ್ಇಡಿ ಹೆಡ್‌ಲ್ಯಾಂಪ್ ಅನ್ನು ಹೊಂದಿದೆ.

ಡೀಲರ್ ಬಳಿ ತಲುಪಿದ ಹೊಸ ಯಮಹಾ ಎಫ್‍‌ಜೆಡ್-ಎಕ್ಸ್ ಬೈಕ್

ಇದರೊಂದಿಗೆ ಟಿಯರ್ ಡ್ರಾಪ್ ಆಕಾರದ ಫ್ಯೂಯಲ್ ಟ್ಯಾಂಕ್, ಸಿಂಗಲ್-ಪೀಸ್ ಟಕ್ ಮತ್ತು ರೋಲ್ ಸೀಟ್, ಅಂಡರ್ಬೆಲ್ಲಿ ಕೌಲ್ ಮತ್ತು ಕಪ್ಪಾದ ಬಾಡಿ ಪ್ಯಾನೆಲ್‌ಗಳನ್ನು ಸಹ ಒಳಗೊಂಡಿದೆ. ಹಿಂಭಾಗದಲ್ಲಿ ಗ್ರ್ಯಾಬ್ ರೈಲ್ ಮತ್ತು ಎಲ್ಇಡಿ ಟೈಲ್ ಲ್ಯಾಂಪ್ ಹೊಂದಿದೆ.

ಡೀಲರ್ ಬಳಿ ತಲುಪಿದ ಹೊಸ ಯಮಹಾ ಎಫ್‍‌ಜೆಡ್-ಎಕ್ಸ್ ಬೈಕ್

ಹೊಸ ಎಫ್‍‍ಜೆಡ್-ಎಕ್ಸ್ ಬೈಕ್ 2020 ಎಂಎಂ ಉದ್ದ, 785 ಎಂಎಂ ಅಗಲ ಮತ್ತು 1115 ಎಂಎಂ ಎತ್ತರವನ್ನು ಹೊಂದಿದೆ. ಇನ್ನು ಈ ಯಮಹಾ ಎಫ್‍‍ಝಡ್-ಎಕ್ಸ್ ಬೈಕ್ 1330 ಎಂಎಂ ವ್ಹೀಲ್‌ಬೇಸ್ ಅನ್ನು ಹೊಂದಿರಲಿದೆ. ಇದೇ ಸರಣಿಯ ಎಫ್‌ಜೆಡ್ -150 ಬೈಕ್ ಕೂಡ ಇದೇ ರೀತಿಯ ವ್ಹೀಲ್‌ಬೇಸ್ ಅನ್ನು ಹೊಂದಿದೆ.

ಡೀಲರ್ ಬಳಿ ತಲುಪಿದ ಹೊಸ ಯಮಹಾ ಎಫ್‍‌ಜೆಡ್-ಎಕ್ಸ್ ಬೈಕ್

ಯಮಹಾ ಎಫ್‍‍ಜೆಡ್-ಎಕ್ಸ್ ಬೈಕಿನ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗದಲ್ಲಿ ಮೊನೊ-ಶಾಕ್ ಸೆಟಪ್ ನೊಂದಿಗೆ ಪ್ರಿ-ಲೋಡ್ ಹೊಂದಾಣಿಕೆಯನ್ನು ಕೂಡ ಒಳಗೊಂಡಿದೆ.

ಡೀಲರ್ ಬಳಿ ತಲುಪಿದ ಹೊಸ ಯಮಹಾ ಎಫ್‍‌ಜೆಡ್-ಎಕ್ಸ್ ಬೈಕ್

ಇನ್ನು ಪ್ರಮುಖವಾಗಿ ಈ ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 282 ಎಂಎಂ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ 220 ಎಂಎಂ ಡಿಸ್ಕ್ ಬ್ರೇಕ್ ಅನ್ನು ನೀಡಲಾಗುತ್ತದೆ. ಇದರೊಂದಿಗೆ ಸಿಂಗಲ್-ಚಾನೆಲ್ ಎಬಿಎಸ್ ಅನ್ನು ನೀಡಲಾಗಿದೆ.

ಡೀಲರ್ ಬಳಿ ತಲುಪಿದ ಹೊಸ ಯಮಹಾ ಎಫ್‍‌ಜೆಡ್-ಎಕ್ಸ್ ಬೈಕ್

ಈ ಹೊಸ ಯಮಹಾ ಬೈಕಿನಲ್ಲಿ ಎಲ್ಸಿಡಿ ಕ್ಲಸ್ಟರ್ ಅನ್ನು ಹೊಂದಿದೆ. ಇದರಲ್ಲಿ ಸ್ಪೀಡೋ, ಓಡೊ ಮತ್ತು ಟ್ರಿಪ್ ಮೀಟರ್‌ಗಾಗಿ ದೊಡ್ಡ ಫಾಂಟ್‌ಗಳಂತಹ ವಿವಿಧ ಮಾಹಿತಿಯನ್ನು ತೋರಿಸುತ್ತದೆ. ಬ್ಲೂಟೂತ್ ಕನೆಕ್ಟಿವಿಟಿಯನ್ನು ಹೊಂದಿದ್ದು, ಸ್ಮಾಟ್ ಫೋನ್ ಅನ್ನು ಕನೆಕ್ಟ್ ಮಾಡಬಹುದಾಗಿದೆ. ಯಮಹಾ ಕನೆಕ್ಟ್ ಅಪ್ಲಿಕೇಶನ್ ಫೀಚರ್ ಕೂಡ ಹೊಂದಿದೆ.

ಡೀಲರ್ ಬಳಿ ತಲುಪಿದ ಹೊಸ ಯಮಹಾ ಎಫ್‍‌ಜೆಡ್-ಎಕ್ಸ್ ಬೈಕ್

ಹೊಸ ಯಮಹಾ ಎಫ್‍‍ಝಡ್-ಎಕ್ ಬೈಕ್ 149 ಸಿಸಿ ಸಿಂಗಲ್-ಸಿಲಿಂಡರ್ ಏರ್-ಕೂಲ್ಡ್ ಎಂಜಿನ್‌ ಅನ್ನು ಹೊಂದಿದೆ. ಈ ಎಂಜಿನ್ 12.2 ಬಿಹೆಚ್‌ಪಿ ಮತ್ತು 13.3 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ನೊಂದಿಗೆ ಐದು-ಸ್ಪೀಡ್ ಟ್ರಾನ್ಸ್‌ಮಿಷನ್‌ ಅನ್ನು ಜೋಡಿಸಲಾಗಿದೆ.

ಡೀಲರ್ ಬಳಿ ತಲುಪಿದ ಹೊಸ ಯಮಹಾ ಎಫ್‍‌ಜೆಡ್-ಎಕ್ಸ್ ಬೈಕ್

ಹೊಸ ಯಮಹಾ ಎಫ್‍‍ಜೆಡ್-ಎಕ್ಸ್ ಬೈಕ್ ಮ್ಯಾಟ್ ಬ್ಲೂ, ಮ್ಯಾಟ್ ಬ್ಲ್ಯಾಕ್ ಮತ್ತು ಮ್ಯಾಟ್ ಕೂಪರ್ ಎಂಬ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಿರುತ್ತದೆ. ರೋಡ್ಸ್ಟರ್ ವಿನ್ಯಾಸದಿಂದಾಗಿ ಫ್ಯೂಯಲ್ ಟ್ಯಾಂಕ್ ಮಧ್ಯದಲ್ಲಿ ಬ್ಲ್ಯಾಕ್ ಮೆಟಲ್ ಸ್ಟ್ರಿಪ್ ಅನ್ನು ಹೊಂದಿದೆ.ಡೀಲರ್ ಗಳ ಬಳಿ ಹೊಸ ಎಫ್‍‌ಜೆಡ್-ಎಕ್ಸ್ ಬೈಕ್ ತಲುಪಲು ಪ್ರಾರಂಭವಾಗಿರುವುದರಿಂದ ಶೀಘ್ರದಲ್ಲೇ ಇದರ ವಿತರಣೆಯನ್ನು ಪ್ರಾರಂಭಿಸಬಹುದು ಎಂದು ನಿರೀಕ್ಷಿಸುತ್ತೇವೆ.

Image Courtesy: MRD Vlogs

Article Published On: Thursday, June 24, 2021, 12:27 [IST]
English summary
Yamaha FZ-X First Batch Arrives At Dealer Showroom. Read In Kananda.
Read more on ಯಮಹಾ yamaha
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+