ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಹೊಸ ಯಮಹಾ ಎಫ್‍ಝಡ್-ಎಕ್ಸ್ ಬೈಕ್
ಯಮಹಾ ಮೋಟಾರ್ ಇಂಡಿಯಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಎಫ್‍ಝಡ್-ಎಕ್ಸ್ ಎಂಬ ಹೊಸ ಬೈಕನ್ನು ಬಿಡುಗಡೆಗೊಳಿಸಲು ಸಜ್ಜಾಗಿದೆ. ಇದೀಗ ಈ ಹೊಸ ಯಮಹಾ ಎಫ್‍ಝಡ್-ಎಕ್ಸ್ ಬೈಕ್ ಭಾರತದಲ್ಲಿ ಬಿಡುಗಡೆಯಾಗುವ ದಿನಾಂಕ ಬಹಿರಂಗವಾಗಿದೆ.

ವರದಿಗಳ ಪ್ರಕಾರ ಹೊಸ ಯಮಹಾ ಎಫ್‍ಝಡ್-ಎಕ್ಸ್ ಜೂನ್ 18 ರಂದು ಬೆಳಿಗ್ಗೆ 11:00 ಗಂಟೆಗೆ ವರ್ಚುವಲ್ ಈವೆಂಟ್ ಮೂಲಕ ಬಿಡುಗಡೆಗೊಳಿಸಲಾಗುತ್ತದೆ. ಈ ಹೊಸ ಯಮಹಾ ಎಫ್‍ಝಡ್-ಎಕ್ಸ್ ಬೈಕಿನ ಟಿವಿಸಿ ಚಿತ್ರೀಕರಣ ನಡೆಸುವಾಗ ಇದರ ಸ್ಪೈ ಚಿತ್ರಗಳು ಬಹಿರಂಗವಾಗಿವೆ. ಈ ಹೊಸ ಯಮಹಾ ಎಫ್‍ಝಡ್-ಎಕ್ಸ್ ಬೈಕ್ ಭಾರತದಲ್ಲಿ ಹಲವು ಬಾರಿ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ. ಹೊಸ ಎಫ್‍ಝಡ್-ಎಕ್ಸ್ ಬೈಕ್ ವಿನ್ಯಾಸದ ಬಗ್ಗೆ ಹೇಳುವುದಾದರೆ, ಇದು ಟಿಯರ್ ಐ ಆಕಾರದ ಫ್ಯೂಯಲ್ ಟ್ಯಾಂಕ್‌ನೊಂದಿಗೆ ಆಧುನಿಕ-ರೆಟ್ರೊ ಲುಕ್ ಅನ್ನು ಹೊಂದಿದೆ.

ಹೊಸ ಯಮಹಾ ಎಫ್‍ಝಡ್-ಎಕ್ಸ್ ಬೈಕ್ ರೋಡ್ಸ್ಟರ್ ವಿನ್ಯಾಸದಿಂದಾಗಿ ಟ್ಯಾಂಕ್ ಯಾವುದೇ ಫೇರಿಂಗ್ ಅಥವಾ ಟ್ರಿಮ್ ಅನ್ನು ಹೊಂದಿಲ್ಲ ಎಂಬುದನ್ನು ಗಮನಿಸಬಹುದು. ಬದಲಾಗಿ ಇದು ಡ್ಯುಯಲ್-ಟೋನ್ ಫ್ಯೂಯಲ್ ಟ್ಯಾಂಕ್ ಅನ್ನು ಬ್ಲ್ಯಾಕ್ ಔಟ್ ಸ್ಟ್ರಿಪ್ನೊಂದಿಗೆ ಮಧ್ಯದಲ್ಲಿ ಇರಿಸಲಾಗಿದೆ.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍ಮಾಸ್ಟರ್ ಬೈಕ್

ಇನ್ನು ಈ ಹೊಸ ಬೈಕಿನಲ್ಲಿ ಇಂಟಿಗ್ರೇಟೆಡ್ ಡಿಆರ್‌ಎಲ್‌ಗಳೊಂದಿಗೆ ದುಂಡಗಿನ ಆಕಾರದ ಹೆಡ್‌ಲ್ಯಾಂಪ್, ಬ್ಲ್ಯಾಕ್ ಔಟ್ ಫೆಂಡರ್‌ಗಳು, ಎಕ್ಸಾಸ್ಟ್, ರಿಬ್ಬಡ್ ಸಿಂಗಲ್-ಪೀಸ್ ಸೀಟ್, ರಿಯರ್ ಗ್ರ್ಯಾಬ್ ರೈಲ್, ಟೈರ್ ಹಗ್ಗರ್, ಸಿಂಗಲ್ ಪಾಡ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಕೂಡ ಹೊಂದಿದೆ.

ಇದರ ಕ್ಲಸ್ಟರ್ ಸ್ಟ್ಯಾಂಡರ್ಡ್ ಮಾದರಿಯಿಂದ ಎರವಲು ಪಡೆದುಕೊಂಡಿದೆ. ಉತ್ತಮ ಸವಾರಿ ಅನುಭವ ನೀಡುವಂತಹ ಸೀಟಿಂಗ್ ಪೋಸಿಶನ್ ಅನ್ನು ಹೊಂದಿದೆ. ವಿಶಾಲವಾದ ಹ್ಯಾಂಡಲ್‌ಬಾರ್ ಅನ್ನು ಹೊಂದಿದ್ದು, ಇದರೊಂದಿಗೆ ಫುಟ್‌ಪೆಗ್ ಅನ್ನು ಹೊಂದಿದೆ.
MOST READ: ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಎಡಿಷನ್ ಬಿಡುಗಡೆ

ಈ ಎಫ್‍ಝಡ್-ಎಕ್ಸ್ ಬೈಕ್ 2020 ಎಂಎಂ ಉದ್ದ, 785 ಎಂಎಂ ಅಗಲ ಮತ್ತು 1115 ಎಂಎಂ ಎತ್ತರವನ್ನು ಹೊಂದಿರುತ್ತದೆ. ಇನ್ನು ಈ ಯಮಹಾ ಎಫ್‍ಝಡ್-ಎಕ್ಸ್ ಬೈಕ್ 1330 ಎಂಎಂ ವ್ಹೀಲ್‌ಬೇಸ್ ಅನ್ನು ಹೊಂದಿದೆ. ಇದೇ ಸರಣಿಯ ಎಫ್‌ಜೆಡ್ -150 ಬೈಕ್ ಕೂಡ ಇದೇ ರೀತಿಯ ವ್ಹೀಲ್‌ಬೇಸ್ ಅನ್ನು ಹೊಂದಿದೆ.

ಹೊಸ ಯಮಹಾ ಎಫ್‍ಝಡ್-ಎಕ್ಸ್ ಬೈಕಿನ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗದಲ್ಲಿ ಮೊನೊ-ಶಾಕ್ ಸೆಟಪ್ ನೊಂದಿಗೆ ಪ್ರಿ-ಲೋಡ್ ಹೊಂದಾಣಿಕೆಯನ್ನು ಒಳಗೊಂಡಿದೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಇನ್ನು ಇದರ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 282 ಎಂಎಂ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ 220 ಎಂಎಂ ಡಿಸ್ಕ್ ಬ್ರೇಕ್ ಅನ್ನು ನೀಡಲಾಗುತ್ತದೆ. ಇದರೊಂದಿಗೆ ಸಿಂಗಲ್-ಚಾನೆಲ್ ಎಬಿಎಸ್ ಅನ್ನು ಕೂಡ ನೀಡಲಿದೆ

ಯಮಹಾ ಎಫ್‍ಝಡ್-ಎಕ್ಸ್ ಭಾರತೀಯ ಮಾರುಕಟ್ಟೆಯಲ್ಲಿ ಬ್ರ್ಯಾಂಡ್‌ನಿಂದ ವಿಶಿಷ್ಟ ಕೊಡುಗೆಯಾಗಿದೆ. ಈ ಬೈಕ್ ಸರಳವಾದ ವಿನ್ಯಾಸವನ್ನು ಹೊಂದಿದೆ. ಈ ಯಮಹಾ ಎಫ್‍ಝಡ್-ಎಕ್ಸ್ ಬೈಕ್ ಭಾರತದಲ್ಲಿ ಬಿಡುಗಡೆಯಾಗಲಿರುವ ಕವಾಸಕಿ ಡಬ್ಲ್ಯು 175 ಬೈಕಿಗೆ ಪ್ಪ್ರತಿಸ್ಪರ್ಧಿಯಾಗಬಹುದು.


Click it and Unblock the Notifications








