ಪೂರ್ತಿಯಾಗಿ ಚಾರ್ಜ್ ಆದ ನಂತರ 200 ಕಿ.ಮೀಗಳವರೆಗೆ ಚಲಿಸುತ್ತದೆ ಈ ಎಲೆಕ್ಟ್ರಿಕ್ ಸ್ಕೂಟರ್

ಭಾರತೀಯ ಮೂಲದ ಎಲೆಕ್ಟ್ರಿಕ್ ವಾಹನ ತಯಾರಕ ಸ್ಟಾರ್ಟ್ಅಪ್ ಕಂಪನಿಯಾದ ಒಕಾಯಾ (Okaya) ಎಲೆಕ್ಟ್ರಿಕ್ ವೆಹಿಕಲ್ಸ್, ಗ್ರೇಟರ್ ನೋಯ್ಡಾದಲ್ಲಿ ನಡೆಯುತ್ತಿರುವ 2021ರ ಇವಿ ಎಕ್ಸ್‌ಪೋದಲ್ಲಿ ತನ್ನ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಆದ ಫಾಸ್ಟ್ (Faast) ಅನ್ನು ಬಿಡುಗಡೆಗೊಳಿಸಿದೆ. ಈ ಹೈ ಸ್ಪೀಡ್ ಎಲೆಕ್ಟ್ರಿಕ್ ಸ್ಕೂಟರಿನ ಆರಂಭಿಕ ಬೆಲೆ ರೂ. 90,000 ಗಳಾಗಿದೆ.

ಪೂರ್ತಿಯಾಗಿ ಚಾರ್ಜ್ ಆದ ನಂತರ 200 ಕಿ.ಮೀಗಳವರೆಗೆ ಚಲಿಸುತ್ತದೆ ಈ ಎಲೆಕ್ಟ್ರಿಕ್ ಸ್ಕೂಟರ್

ರೂ. 1,999 ಪಾವತಿಸಿ ಒಕಾಯಾ ಫಾಸ್ಟ್ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬುಕ್ಕಿಂಗ್ ಮಾಡಬಹುದು. ಈ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಒಕಾಯಾ ಎಲೆಕ್ಟ್ರಿಕ್ ವೆಹಿಕಲ್ಸ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ಅಥವಾ ಕಂಪನಿಯ ಡೀಲರ್‌ಶಿಪ್‌ಗಳಲ್ಲಿ ಬುಕ್ಕಿಂಗ್‌ ಮಾಡಬಹುದು. ಒಕಾಯಾ ಫಾಸ್ಟ್ ಕನೆಕ್ಟೆಡ್ ಫೀಚರ್ ಹೊಂದಿರುವ ಎಲೆಕ್ಟ್ರಿಕ್ ಸ್ಕೂಟರ್ ಆಗಿದೆ. ಈ ಎಲೆಕ್ಟ್ರಿಕ್ ಸ್ಕೂಟರ್ 4.4 ಕಿ.ವ್ಯಾ ಲಿಥಿಯಂ ಫಾಸ್ಫೇಟ್ ಬ್ಯಾಟರಿಯಿಂದ ಚಾಲಿತವಾಗಿದೆ.

ಪೂರ್ತಿಯಾಗಿ ಚಾರ್ಜ್ ಆದ ನಂತರ 200 ಕಿ.ಮೀಗಳವರೆಗೆ ಚಲಿಸುತ್ತದೆ ಈ ಎಲೆಕ್ಟ್ರಿಕ್ ಸ್ಕೂಟರ್

ಈ ಎಲೆಕ್ಟ್ರಿಕ್ ಸ್ಕೂಟರ್ ಒಂದು ಬಾರಿ ಪೂರ್ತಿಯಾಗಿ ಚಾರ್ಜ್ ಆದ ನಂತರ ಕನಿಷ್ಠ 150 ಕಿ.ಮೀಗಳವರೆಗೆ ಚಲಿಸುತ್ತದೆ ಎಂದು ಕಂಪನಿ ಹೇಳಿಕೊಂಡಿದೆ. ಬಳಕೆಗೆ ಅನುಗುಣವಾಗಿ ಈ ಎಲೆಕ್ಟ್ರಿಕ್ ಸ್ಕೂಟರ್ ಪೂರ್ತಿಯಾಗಿ ಚಾರ್ಜ್ ಆದ ನಂತರ 200 ಕಿ.ಮೀಗಳವರೆಗೂ ಸಹ ಚಲಿಸುತ್ತದೆ ಎಂದು ಕಂಪನಿ ಹೇಳಿಕೊಂಡಿದೆ. ಒಕಾಯಾ ಫಾಸ್ಟ್ ಎಲೆಕ್ಟ್ರಿಕ್ ಸ್ಕೂಟರ್ ಹಲವಾರು ಫೀಚರ್ ಗಳನ್ನು ಹೊಂದಿದೆ.

ಪೂರ್ತಿಯಾಗಿ ಚಾರ್ಜ್ ಆದ ನಂತರ 200 ಕಿ.ಮೀಗಳವರೆಗೆ ಚಲಿಸುತ್ತದೆ ಈ ಎಲೆಕ್ಟ್ರಿಕ್ ಸ್ಕೂಟರ್

ಒಕಾಯಾ ಫಾಸ್ಟ್‌ ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಎಲ್‌ಇಡಿ ಲೈಟ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಎಲ್‌ಇಡಿ ಡೇಟೈಮ್ ರನ್ನಿಂಗ್ ಲೈಟ್, ಕಾಂಬಿ ಬ್ರೇಕ್ ಸಿಸ್ಟಂನಂತಹ ಹಲವಾರು ಫೀಚರ್ ಗಳನ್ನು ನೀಡಲಾಗಿದೆ. ಈ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಗಂಟೆಗೆ 60 - 70 ಕಿ.ಮೀ ವೇಗದಲ್ಲಿ ಚಾಲನೆ ಮಾಡಿದರು. ಫಾಸ್ಟ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸಿದ ನಂತರ ಒಕಾಯಾ ಪವರ್ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕರಾದ ಅನ್ಶುಲ್ ಗುಪ್ತಾ ಮಾತನಾಡಿದರು.

ಪೂರ್ತಿಯಾಗಿ ಚಾರ್ಜ್ ಆದ ನಂತರ 200 ಕಿ.ಮೀಗಳವರೆಗೆ ಚಲಿಸುತ್ತದೆ ಈ ಎಲೆಕ್ಟ್ರಿಕ್ ಸ್ಕೂಟರ್

ನಮ್ಮ ವಿಶೇಷವಾದ ಒಕಾಯಾ ಫಾಸ್ಟ್ ಎಲೆಕ್ಟ್ರಿಕ್ ಸ್ಕೂಟರ್'ನೊಂದಿಗೆ ನಾವು ಗ್ರಾಹಕರ ಬದಲಾಗುತ್ತಿರುವ ಆದ್ಯತೆಗಳಿಗೆ ಅನುಗುಣವಾಗಿ ಮಾರುಕಟ್ಟೆಯಲ್ಲಿ ಹೆಚ್ಚಿನ ಕಾರ್ಯಕ್ಷಮತೆಯ ಇವಿಗಳನ್ನು ಬಿಡುಗಡೆಗೊಳಿಸುವ ಗುರಿಯನ್ನು ಇಟ್ಟುಕೊಂಡಿದ್ದೇವೆ ಎಂದು ಹೇಳಿದರು. ಒಕಾಯಾ ಪವರ್ ಗ್ರೂಪ್‌ನ ವ್ಯವಸ್ಥಾಪಕ ನಿರ್ದೇಶಕರಾದ ಅನಿಲ್ ಗುಪ್ತಾರವರು ಮಾತನಾಡಿ, ಭಾರತವನ್ನು 100% ನಷ್ಟು ಎಲೆಕ್ಟ್ರಿಕ್ ವಾಹನ ರಾಷ್ಟ್ರವನ್ನಾಗಿ ಮಾಡುವ ದೃಷ್ಟಿಯನ್ನು ಸಾಕಾರಗೊಳಿಸಲು ಒಕಾಯಾ ಸಂಪೂರ್ಣವಾಗಿ ಬದ್ಧವಾಗಿದೆ.

ಪೂರ್ತಿಯಾಗಿ ಚಾರ್ಜ್ ಆದ ನಂತರ 200 ಕಿ.ಮೀಗಳವರೆಗೆ ಚಲಿಸುತ್ತದೆ ಈ ಎಲೆಕ್ಟ್ರಿಕ್ ಸ್ಕೂಟರ್

ಒಕಾಯಾ ಫಾಸ್ಟ್ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬಿಡುಗಡೆಗೊಳಿಸುವುದರೊಂದಿಗೆ ನಾವು ದೇಶದಲ್ಲಿ ಇವಿ ಅಳವಡಿಕೆಯನ್ನು ವೇಗಗೊಳಿಸಿದ್ದೇವೆ. ಕಡಿಮೆ ವೆಚ್ಚದ ಆದರೆ ಹೆಚ್ಚಿನ ಕಾರ್ಯಕ್ಷಮತೆಯ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ನಾವು ಬದ್ಧರಾಗಿದ್ದೇವೆ ಎಂದು ಹೇಳಿದರು. ಫಾಸ್ಟ್ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬಿಡುಗಡೆ ಮಾಡುವುದರ ಜೊತೆಗೆ ಒಕಾಯಾ ಕಂಪನಿಯು ತನ್ನ ಫೆರಾಟೊ ಎಲೆಕ್ಟ್ರಿಕ್ ಬೈಕ್ ಅನ್ನು ಸಹ ಈ ಎಕ್ಸ್‌ಪೋದಲ್ಲಿ ಪ್ರದರ್ಶಿಸಿತು.

ಪೂರ್ತಿಯಾಗಿ ಚಾರ್ಜ್ ಆದ ನಂತರ 200 ಕಿ.ಮೀಗಳವರೆಗೆ ಚಲಿಸುತ್ತದೆ ಈ ಎಲೆಕ್ಟ್ರಿಕ್ ಸ್ಕೂಟರ್

2002ರ ಹಣಕಾಸು ವರ್ಷದ ಎರಡನೇ ತ್ರೈಮಾಸಿಕದಲ್ಲಿ ಫೆರಾಟೊ ಎಲೆಕ್ಟ್ರಿಕ್ ಬೈಕ್ ಬಿಡುಗಡೆಯಾಗುವ ನಿರೀಕ್ಷೆಗಳಿವೆ. ಫೆರಾಟೊ ಎಲೆಕ್ಟ್ರಿಕ್ ಬೈಕ್ 2 ಕಿ.ವ್ಯಾ ಮೋಟಾರ್ ಹಾಗೂ 3 ಕಿ.ವ್ಯಾ ಬ್ಯಾಟರಿಯನ್ನು ಹೊಂದಿದ್ದು, ಗಂಟೆಗೆ 80 - 90 ಕಿ.ಮೀ ವೇಗದಲ್ಲಿ ಚಲಿಸುತ್ತದೆ. ಈ ಬೈಕ್ ಒಂದು ಬಾರಿ ಪೂರ್ತಿಯಾಗಿ ಚಾರ್ಜ್ ಆದ ನಂತರ ಸುಮಾರು 100 ಕಿ.ಮೀಗಳವರೆಗೆ ಚಲಿಸುತ್ತದೆ.

ಪೂರ್ತಿಯಾಗಿ ಚಾರ್ಜ್ ಆದ ನಂತರ 200 ಕಿ.ಮೀಗಳವರೆಗೆ ಚಲಿಸುತ್ತದೆ ಈ ಎಲೆಕ್ಟ್ರಿಕ್ ಸ್ಕೂಟರ್

ಒಕಾಯಾ ಕಂಪನಿಯು ಸುಮಾರು ಆರು ತಿಂಗಳಲ್ಲಿ ಭಾರತದಾದ್ಯಂತ 225 ಡೀಲರ್‌ಗಳನ್ನು ಅಭಿವೃದ್ಧಿಪಡಿಸಿ, ವೇಗವಾಗಿ ಬೆಳೆಯುತ್ತಿರುವ ದೇಶಿಯ ಇವಿ ಮಾರುಕಟ್ಟೆಯಲ್ಲಿ ಬ್ರ್ಯಾಂಡ್ ಆಗುವ ಹಾದಿಯಲ್ಲಿರುವುದಾಗಿ ತಿಳಿಸಿದೆ. ಈ ವರ್ಷದ ಸೆಪ್ಟೆಂಬರ್‌ ತಿಂಗಳಿನಲ್ಲಿ ಒಕಾಯಾ ಕಂಪನಿಯು ಫ್ರೀಡಂ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬಿಡುಗಡೆಗೊಳಿಸಿತ್ತು. ಇದು ಕಡಿಮೆ ವೇಗದ ಎಲೆಕ್ಟ್ರಿಕ್ ಆಗಿದೆ.

ಪೂರ್ತಿಯಾಗಿ ಚಾರ್ಜ್ ಆದ ನಂತರ 200 ಕಿ.ಮೀಗಳವರೆಗೆ ಚಲಿಸುತ್ತದೆ ಈ ಎಲೆಕ್ಟ್ರಿಕ್ ಸ್ಕೂಟರ್

ಅಂದ ಹಾಗೆ ಫ್ರೀಡಂ ಎಲೆಕ್ಟ್ರಿಕ್ ಸ್ಕೂಟರಿನ ಗರಿಷ್ಠ ವೇಗ ಪ್ರತಿ ಗಂಟೆಗೆ 25 ಕಿ.ಮೀಗಳಾಗಿದೆ. ಈ ಎಲೆಕ್ಟ್ರಿಕ್ ಸ್ಕೂಟರ್ ಪೂರ್ತಿಯಾಗಿ ಚಾರ್ಜ್ ಆದ ನಂತರ 80 ಕಿ.ಮೀಗಳವರೆಗೆ ಚಲಿಸುತ್ತದೆ. ಈ ಎಲೆಕ್ಟ್ರಿಕ್ ಸ್ಕೂಟರಿನ ಬೆಲೆ ಎಕ್ಸ್ ಶೋರೂಂ ದರದಂತೆ ರೂ. 69,900ಗಳಾಗಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಹೆಚ್ಚಿನ ವೇಗದ ಬೈಕ್ ಹಾಗೂ ವಿಶೇಷ ಬಿ2ಬಿ ವಾಹನಗಳು ಸೇರಿದಂತೆ 14 ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡುವ ಗುರಿಯನ್ನು ಹೊಂದಿರುವುದಾಗಿ ಒಕಾಯಾ ಕಂಪನಿ ಹೇಳಿದೆ.

ಪೂರ್ತಿಯಾಗಿ ಚಾರ್ಜ್ ಆದ ನಂತರ 200 ಕಿ.ಮೀಗಳವರೆಗೆ ಚಲಿಸುತ್ತದೆ ಈ ಎಲೆಕ್ಟ್ರಿಕ್ ಸ್ಕೂಟರ್

ಮುಂಬರುವ ದಿನಗಳಲ್ಲಿ ಒಕಾಯಾ ಕಂಪನಿಯು 800 ಡೀಲರ್‌ಗಳನ್ನು ತಲುಪಲಿದೆ. ಒಕಾಯಾ ಕಂಪನಿಯು 2016 - 17 ರಿಂದ ಇವಿ ಚಾರ್ಜರ್ ಹಾಗೂ ಚಾರ್ಜಿಂಗ್ ಸ್ಟೇಷನ್ ಹೊಂದಿರುವ ಎಲೆಕ್ಟ್ರಿಕ್ ವಾಹನಗಳಿಗೆ ಬ್ಯಾಟರಿಗಳನ್ನು ಪೂರೈಸುತ್ತಿದೆ. ಒಕಾಯಾ ಗ್ರೂಪ್ ಕಳೆದ 35 ವರ್ಷಗಳಿಂದ ಎಲೆಕ್ಟ್ರಾನಿಕ್ಸ್ ಕ್ಷೇತ್ರದಲ್ಲಿ ಸಕ್ರಿಯವಾಗಿದೆ.

ಪೂರ್ತಿಯಾಗಿ ಚಾರ್ಜ್ ಆದ ನಂತರ 200 ಕಿ.ಮೀಗಳವರೆಗೆ ಚಲಿಸುತ್ತದೆ ಈ ಎಲೆಕ್ಟ್ರಿಕ್ ಸ್ಕೂಟರ್

ಒಕಾಯಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಉತ್ಪಾದನೆ ಹಾಗೂ ಮಾರಾಟದಲ್ಲಿ ಎದುರಾಗುತ್ತಿರುವ ಮೂರು ಪ್ರಮುಖ ಸಮಸ್ಯೆಗಳನ್ನು ಗುರುತಿಸಿದೆ. ಗುಣಮಟ್ಟದ ಬಿಡಿಭಾಗ ಹಾಗೂ ಸರ್ವೀಸ್ ಕೊರತೆ, ಸರಿಯಾದ ಮೂಲಸೌಕರ್ಯಗಳ ಕೊರತೆ ಮತ್ತು ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನಾ ಕಂಪನಿಗಳಿಗೆ ಧನಸಹಾಯ - ಇವು ಒಕಾಯಾ ಕಂಪನಿಯು ಗುರುತಿಸಿರುವ ಮೂರು ಪ್ರಮುಖ ಸಮಸ್ಯೆಗಳಾಗಿವೆ.

ಪೂರ್ತಿಯಾಗಿ ಚಾರ್ಜ್ ಆದ ನಂತರ 200 ಕಿ.ಮೀಗಳವರೆಗೆ ಚಲಿಸುತ್ತದೆ ಈ ಎಲೆಕ್ಟ್ರಿಕ್ ಸ್ಕೂಟರ್

ಒಕಾಯಾ ಕಂಪನಿಯು ತನ್ನ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬ್ಯಾಟರಿ, ಎಲೆಕ್ಟ್ರಾನಿಕ್ಸ್ ಹಾಗೂ ಸಾಫ್ಟ್‌ವೇರ್ ಬಗ್ಗೆ ವಿಶ್ವಾಸ ಹೊಂದಿದೆ. ಒಕಾಯಾ ಕಂಪನಿಯು ಏವಿಯನ್ ಐಕ್ಯೂ ಹಾಗೂ ಕ್ಲಾಸಿಕ್ ಐಕ್ಯೂ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಿಡುಗಡೆಗೊಳಿಸುವ ಮೂಲಕ ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ಎರಡು ಕಸ್ಟಮರ್ ಎಕ್ಸ್ ಪಿರಿಯನ್ಸ್ ಕೇಂದ್ರಗಳನ್ನು ತೆರೆದಿದೆ.

ಗಮನಿಸಿ: ಮೊದಲ ಚಿತ್ರವನ್ನು ಹೊರತುಪಡಿಸಿ ಉಳಿದ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.

Most Read Articles

Kannada
English summary
Okaya launches faast electric scooter which gives 200 kms range details
Story first published: Saturday, December 25, 2021, 15:50 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X