Freedum ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸಿದ Okaya ಗ್ರೂಪ್

ಭಾರತದ ಪ್ರಮುಖ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ Okaya ಗ್ರೂಪ್ ತನ್ನ ಹೊಸ ಎಲೆಕ್ಟ್ರಿಕ್ ಸ್ಕೂಟರ್ Freedum ಅನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ Okaya Freedum ಎಲೆಕ್ಟ್ರಿಕ್ ಸ್ಕೂಟರಿನ ಬೆಲೆ ಎಕ್ಸ್ ಶೋರೂಂ ದರದಂತೆ ರೂ. 69,900 ಗಳಾಗಿದೆ. ಒಕಯಾ ಗ್ರೂಪ್ ಈಗಾಗಲೇ ತನ್ನ AvionIQ ಹಾಗೂ ClassicIQ ಸರಣಿಯ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ದೇಶಿಯ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದೆ.

Freedum ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸಿದ Okaya ಗ್ರೂಪ್

Freedum ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಲಿಥಿಯಂ ಐಯಾನ್ ಹಾಗೂ ಲೆಡ್ ಆಸಿಡ್ ಬ್ಯಾಟರಿ ಆಯ್ಕೆಗಳೊಂದಿಗೆ ಮಾರಾಟ ಮಾಡಲಾಗುತ್ತದೆ. Okaya ಕಂಪನಿಯು ಹಿಮಾಚಲ ಪ್ರದೇಶದಲ್ಲಿರುವ ತನ್ನ ಉತ್ಪಾದನಾ ಘಟಕದಲ್ಲಿ Freedum ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಉತ್ಪಾದಿಸುತ್ತದೆ. Okaya Freedum ಎಲೆಕ್ಟ್ರಿಕ್ ಸ್ಕೂಟರಿನಲ್ಲಿ 250 ವ್ಯಾಟ್ ನ ಬಿ‌ಎಲ್‌ಡಿ‌ಸಿ ಎಲೆಕ್ಟ್ರಿಕ್ ಮೋಟಾರ್ ಅನ್ನು ಅಳವಡಿಸಲಾಗಿದೆ.

Freedum ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸಿದ Okaya ಗ್ರೂಪ್

ಈ ಸ್ಕೂಟರ್ ಅನ್ನು ಪ್ರತಿ ಗಂಟೆಗೆ ಗರಿಷ್ಠ 25 ಕಿ.ಮೀ ವೇಗದಲ್ಲಿ ಚಾಲನೆ ಮಾಡಬಹುದು. ಇದರಿಂದ ಈ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ರಿಜಿಸ್ಟರ್ ಮಾಡುವಂತಿಲ್ಲ. ಜೊತೆಗೆ ಈ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಚಾಲನೆ ಮಾಡಲು ಡ್ರೈವಿಂಗ್ ಲೈಸೆನ್ಸ್'ನ ಅಗತ್ಯವೂ ಇಲ್ಲ. ಈ ಎಲೆಕ್ಟ್ರಿಕ್ ಸ್ಕೂಟರ್ ಲಿಥಿಯಂ ಐಯಾನ್ ಹಾಗೂ ಲೆಡ್ ಆಸಿಡ್ ಬ್ಯಾಟರಿ ಆಯ್ಕೆಗಳನ್ನು ಹೊಂದಿದೆ.

Freedum ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸಿದ Okaya ಗ್ರೂಪ್

ಲಿಥಿಯಂ ಐಯಾನ್ ಬ್ಯಾಟರಿಯನ್ನು 4 - 5 ಗಂಟೆಗಳಲ್ಲಿ ಪೂರ್ತಿಯಾಗಿ ಚಾರ್ಜ್ ಚಾರ್ಜ್ ಮಾಡಬಹುದು. ಆದರೆ ಲೆಡ್ ಆಸಿಡ್ ಬ್ಯಾಟರಿಯನ್ನು ಪೂರ್ತಿಯಾಗಿ ಚಾರ್ಜ್ ಮಾಡಲು 8 - 10 ಗಂಟೆಗಳು ಬೇಕಾಗುತ್ತವೆ. Freedum ಎಲೆಕ್ಟ್ರಿಕ್ ಸ್ಕೂಟರ್‌ನ ಹೈ ಸ್ಪೀಡ್ ಮಾಡೆಲ್ ಅನ್ನು ಈ ವರ್ಷದ ಅಂತ್ಯದ ವೇಳೆಗೆ ಬಿಡುಗಡೆ ಮಾಡಲಾಗುವುದು ಎಂದು Okaya ಕಂಪನಿ ಹೇಳಿದೆ.

Freedum ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸಿದ Okaya ಗ್ರೂಪ್

ಈ ಸ್ಕೂಟರ್ ಒಂದು ಬಾರಿ ಪೂರ್ತಿಯಾಗಿ ಚಾರ್ಜ್ ಆದ ನಂತರ 250 ಕಿ.ಮೀಗಳವರೆಗೆ ಚಲಿಸುತ್ತದೆ. ಈ ಎಲೆಕ್ಟ್ರಿಕ್ ಸ್ಕೂಟರಿನಲ್ಲಿರುವ ಫೀಚರ್ ಗಳ ಬಗ್ಗೆ ಹೇಳುವುದಾದರೆ Freedum ಎಲೆಕ್ಟ್ರಿಕ್ ಸ್ಕೂಟರ್ ಡಿಜಿಟಲ್ ಕನ್ಸೋಲ್, ಡಿಆರ್‌ಎಲ್‌ ಹೊಂದಿರುವ ಎಲ್‌ಇಡಿ ಹೆಡ್‌ಲ್ಯಾಂಪ್, ರಿಮೋಟ್ ಲಾಕ್ / ಅನ್‌ಲಾಕ್, ವ್ಹೀಲ್ ಲಾಕ್, ಆ್ಯಂಟಿ ಥೆಫ್ಟ್ ಅಲಾರಂ, ರಿಜನರೇಟಿವ್ ಬ್ರೇಕಿಂಗ್, ಫಾರ್ವರ್ಡ್ / ರಿವರ್ಸ್ ಮೋಡ್ ಸೇರಿದಂತೆ ಹಲವು ಫೀಚರ್ ಗಳನ್ನು ಹೊಂದಿದೆ.

Freedum ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸಿದ Okaya ಗ್ರೂಪ್

ಸಸ್ಪೆಂಷನ್ ಗಳಿಗಾಗಿ Freedum ಎಲೆಕ್ಟ್ರಿಕ್ ಸ್ಕೂಟರಿನ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಹಾಗೂ ಹಿಂಭಾಗದಲ್ಲಿ ಸಿಂಗಲ್ ಶಾಕ್ ಅಬ್ಸಾರ್ಬರ್ ಗಳನ್ನು ನೀಡಲಾಗಿದೆ. ಇನ್ನು ಬ್ರೇಕಿಂಗ್ ಗಳಿಗಾಗಿ ಈ ಸ್ಕೂಟರಿನ ಮುಂಭಾಗದಲ್ಲಿ ಡಿಸ್ಕ್ ಬ್ರೇಕ್ ಹಾಗೂ ಹಿಂಭಾಗದಲ್ಲಿ ಡ್ರಮ್ ಬ್ರೇಕ್ ಅಳವಡಿಸಲಾಗಿದೆ.

Freedum ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸಿದ Okaya ಗ್ರೂಪ್

ಈ ಹಣಕಾಸು ವರ್ಷದಲ್ಲಿ ಹೈ ಸ್ಪೀಡ್ ಬೈಕ್ ಹಾಗೂ ವಿಶೇಷ ಬಿ 2 ಬಿ ವಾಹನಗಳನ್ನು ಒಳಗೊಂಡಂತೆ 14 ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡುವ ಗುರಿಯನ್ನು ಹೊಂದಲಾಗಿದೆ ಎಂದು Okaya ಕಂಪನಿ ಹೇಳಿದೆ. ಕಂಪನಿಯು ಈಗ 120 ಡೀಲರ್‌ಗಳನ್ನು ಹೊಂದಿದ್ದು, ಮುಂಬರುವ ದಿನಗಳಲ್ಲಿ ಇನ್ನೂ 800 ಡೀಲರ್ ಗಳನ್ನು ಹೊಸದಾಗಿ ಸೇರ್ಪಡೆಗೊಳಿಸಲು ನಿರ್ಧರಿಸಿದೆ.

Freedum ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸಿದ Okaya ಗ್ರೂಪ್

Okaya ಕಂಪನಿಯು 2016 - 17 ರಿಂದ ಎಲೆಕ್ಟ್ರಿಕ್ ವಾಹನಗಳಿಗೆ ಚಾರ್ಜರ್ ಹಾಗೂ ಚಾರ್ಜಿಂಗ್ ಸ್ಟೇಷನ್‌ಗಳನ್ನು ಒದಗಿಸುತ್ತಿದೆ. Okaya ಗ್ರೂಪ್ 35 ವರ್ಷಗಳಿಂದ ಎಲೆಕ್ಟ್ರಾನಿಕ್ಸ್ ಕ್ಷೇತ್ರದಲ್ಲಿ ಸಕ್ರಿಯವಾಗಿದೆ. ಕಂಪನಿಯು ದೇಶಾದ್ಯಂತ ಎಲೆಕ್ಟ್ರಿಕ್ ವಾಹನಗಳ ಖರೀದಿ ಹಾಗೂ ಮಾರಾಟವನ್ನು ಹೆಚ್ಚಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ.

Freedum ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸಿದ Okaya ಗ್ರೂಪ್

ಈಗ ದೇಶದೆಲ್ಲೆಡೆ ಎಲೆಕ್ಟ್ರಿಕ್ ವಾಹನಗಳ ಮಾರಾಟವು ಜೋರಾಗಿದೆ. ಅದರಲ್ಲೂ ಎಲೆಕ್ಟ್ರಿಕ್ ಸ್ಕೂಟರ್ ಗಳಿಗೆ ಹೆಚ್ಚು ಬೇಡಿಕೆ ಇದೆ. ವಾಹನ ಸವಾರರು ನಿರ್ವಹಣಾ ವೆಚ್ಚ ಕಡಿಮೆ ವೆಚ್ಚ ಎಂಬ ಕಾರಣಕ್ಕೆ ಹಾಗೂ ಎಲೆಕ್ಟ್ರಿಕ್ ವಾಹನಗಳ ಚಾಲನಾ ವೆಚ್ಚ ಕಡಿಮೆ ಎಂಬ ಕಾರಣಕ್ಕೆ ಎಲೆಕ್ಟ್ರಿಕ್ ವಾಹನಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಖರೀದಿಸುತ್ತಿದ್ದಾರೆ.

Freedum ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸಿದ Okaya ಗ್ರೂಪ್

ಕಳೆದ ಕೆಲವು ವರ್ಷಗಳಿಂದಿಚಿಗೆ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಪೂರಕ ವಾತಾವರಣ ಹಾಗೂ ಮೂಲ ಸೌಕರ್ಯಗಳನ್ನು ಕಲ್ಪಿಸಲು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಹಲವು ಕ್ರಮಗಳನ್ನು ಕೈಗೊಳ್ಳುತ್ತಿವೆ. ಸರ್ಕಾರಗಳು ಇವಿಗಳಿಗೆ ಮೂಲ ಸೌಕರ್ಯ ಒದಗಿಸುವ ಸಲುವಾಗಿ ಖಾಸಗಿ ಕಂಪನಿಗಳು ಹಾಗೂ ವಾಹನ ತಯಾರಕ ಕಂಪನಿಗಳೊಂದಿಗೆ ಕೈ ಜೋಡಿಸಿವೆ.

Freedum ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸಿದ Okaya ಗ್ರೂಪ್

ಕೇಂದ್ರ ಸರ್ಕಾರವು ತನ್ನ ಫೇಮ್ 2 ಯೋಜನೆಯಡಿಯಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವವರಿಗೆ ಸಬ್ಸಿಡಿಯನ್ನು ನೀಡುತ್ತಿದೆ. ಇದರ ಜೊತೆಗೆ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವವರಿಗೆ ರಸ್ತೆ ತೆರಿಗೆ ಹಾಗೂ ನೋಂದಣಿ ಶುಲ್ಕದಲ್ಲಿಯೂ ವಿನಾಯಿತಿ ನೀಡಲಾಗುತ್ತದೆ.

Freedum ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸಿದ Okaya ಗ್ರೂಪ್

ಇವುಗಳ ಜೊತೆಗೆ ಎಲೆಕ್ಟ್ರಿಕ್ ವಾಹನ ತಯಾರಕ ಕಂಪನಿಗಳಿಗೆ ಪ್ರೋತ್ಸಾಹ ನೀಡಲು ಎಲ್ಲಾ ಬ್ಯಾಟರಿ ಚಾಲಿತ ವಾಹನಗಳ ಜಿಎಸ್‌ಟಿ ದರವನ್ನು 12% ನಿಂದ 5% ಗಳಿಗೆ ಇಳಿಸಲಾಗಿದೆ. ಇದರ ಹೊರತಾಗಿ ಹಲವು ರಾಜ್ಯ ಸರ್ಕಾರಗಳು ಸಬ್ಸಿಡಿ ಹಾಗೂ ರಿಯಾಯಿತಿಗಳನ್ನು ನೀಡುವ ಮೂಲಕ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಹಾಗೂ ಮಾರಾಟಕ್ಕೆ ಪ್ರೋತ್ಸಾಹ ನೀಡುತ್ತಿವೆ.

ಗಮನಿಸಿ: ಈ ಲೇಖನದಲ್ಲಿ ಮೊದಲ ಎರಡು ಚಿತ್ರಗಳನ್ನು ಹೊರತುಪಡಿಸಿ ಉಳಿದ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.

Most Read Articles

Kannada
English summary
Okaya launches freedum electric scooter in indian market details
Story first published: Friday, September 17, 2021, 13:04 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X