Just In
- 2 hrs ago
ಕೊನೆಯ ಆಸೆಯೆಂತೆ ರಾಜಕುಮಾರ ಪ್ರಿನ್ಸ್ ಫಿಲಿಪ್ ಅಂತಿಮ ಯಾತ್ರೆಗೆ ಸಿದ್ದವಾಗಿದೆ ಮಾಡಿಫೈ ಲ್ಯಾಂಡ್ ರೋವರ್
- 3 hrs ago
ಜಪಾನ್ನಲ್ಲಿ ಬಿಡುಗಡೆಯಾಯ್ತು ಮೇಡ್ ಇನ್ ಇಂಡಿಯಾ 2021ರ ಸುಜುಕಿ ಜಿಕ್ಸರ್ 250 ಬೈಕ್
- 4 hrs ago
ಆಕರ್ಷಕ ಬೆಲೆಯಲ್ಲಿ ದೇಶದ ಮೊದಲ ಹೈಬ್ರಿಡ್ ಟ್ರ್ಯಾಕ್ಟರ್ ಬಿಡುಗಡೆ
- 4 hrs ago
ಬೆಲೆ ಏರಿಕೆ ಪಡೆದುಕೊಂಡ ಟಿವಿಎಸ್ ಸ್ಟಾರ್ ಸಿಟಿ ಪ್ಲಸ್ ಬೈಕ್
Don't Miss!
- News
ಬೆಂಗಳೂರಿನಲ್ಲಿ ಭೀತಿ: ಕೊರೊನಾ ಹೆಚ್ಚು ರೆಮ್ಡೆಸಿವಿರ್ ಔಷಧಿ ಕಡಿಮೆ!
- Sports
ಐಪಿಎಲ್ ಇತಿಹಾಸದಲ್ಲಿ ಅಪರೂಪದ ದಾಖಲೆ ಬರೆದ ಆರ್ಸಿಬಿ!
- Finance
ಚಿನ್ನ, ಬೆಳ್ಳಿ ಸ್ವಲ್ಪ ಕುಸಿತ: ಏಪ್ರಿಲ್ 14ರಂದು ಎಲ್ಲೆಡೆ ಬೆಲೆ ಎಷ್ಟಿದೆ?
- Movies
40, 50, 60ರ ಸೀಕ್ರೆಟ್ ಬಿಚ್ಚಿಟ್ಟ ಕ್ರೇಜಿಸ್ಟಾರ್ ರವಿಚಂದ್ರನ್
- Education
SSLC Exams 2021: ಸಿಬಿಎಸ್ಇ ಪರೀಕ್ಷೆ ರದ್ದು ಬೆನ್ನಲ್ಲೇ ಎಸ್ಎಸ್ಎಲ್ಸಿ ಪರೀಕ್ಷೆ ಊಹಾಪೋಹ: ಸುರೇಶ್ ಕುಮಾರ್ ಸ್ಪಷ್ಟನ
- Lifestyle
ನಿಮ್ಮ ಮಗು 10ವರ್ಷ ತಲುಪುವಾಗ ಕಲಿಸಬೇಕಾದ ಜೀವನ ಕೌಶಲ್ಯಗಳಿವು
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಪ್ರಮುಖ ಎಲೆಕ್ಟ್ರಿಕ್ ಸ್ಕೂಟರ್ ಖರೀದಿ ಮೇಲೆ ಆಕರ್ಷಕ ಆಫರ್ ಪ್ರಕಟಿಸಿದ ಒಕಿನಾವ
ಜನಪ್ರಿಯ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ಕಂಪನಿಯಾಗಿರುವ ಒಕಿನಾವ ತನ್ನ ವಿವಿಧ ಮಾದರಿಯ ಎಲೆಕ್ಟ್ರಿಕ್ ಸ್ಕೂಟರ್‌ಗಳ ಖರೀದಿ ಮೇಲೆ ಹಲವಾರು ಆಫರ್‌ಗಳನ್ನು ಘೋಷಣೆ ಮಾಡಿದ್ದು, ಹೊಸ ಆಫರ್‌ಗಳನ್ನು ಈ ತಿಂಗಳಾಂತ್ಯದ ತನಕ ಲಭ್ಯವಿರಲಿವೆ.

ಹೆಚ್ಚುತ್ತಿರುವ ಇಂಧನಗಳ ಬೆಲೆ ಪರಿಣಾಮ ಹೊಸ ವಾಹನ ಖರೀದಿದಾರರು ಎಲೆಕ್ಟ್ರಿಕ್ ವಾಹನಗಳತ್ತ ಮುಖ ಮಾಡಿರುವುದು ಇವಿ ವಾಹನಗಳ ಬೇಡಿಕೆಯಲ್ಲಿ ಸಾಕಷ್ಟು ಹೆಚ್ಚಳವಾಗಿದ್ದು, ವಿವಿಧ ಆಟೋ ಉತ್ಪಾದನಾ ಕಂಪನಿಗಳು ಆಕರ್ಷಕ ಆಫರ್‌ಗಳೊಂದಿಗೆ ಗ್ರಾಹಕರನ್ನು ಸೆಳೆಯುತ್ತಿವೆ. ಇದೀಗ ಒಕಿನಾವ ಕಂಪನಿಯು ಕೂಡಾ ವಿವಿಧ ಸ್ಕೂಟರ್ ಮಾದರಿಗಳ ಖರೀದಿ ಮೇಲೆ ಅತ್ಯುತ್ತಮ ಆಫರ್ ನೀಡುತ್ತಿದ್ದು, ಇವಿ ಸ್ಕೂಟರ್ ಖರೀದಿದಾರರಿಗೆ ಅತ್ಯುತ್ತಮ ಆಫರ್‌ಗಳನ್ನು ನೀಡುತ್ತಿದೆ.

ಒಕಿನಾವ ಇವಿ ಸ್ಕೂಟರ್ ಖರೀದಿ ಮಾಡುವ ಗ್ರಾಹಕರು ಹೊಸ ಎಲೆಕ್ಟ್ರಿಕ್ ಸ್ಕೂಟರ್ ಖರೀದಿ ಮೇಲೆ ಗರಿಷ್ಠ ಉಳಿತಾಯ ಮಾಡಬಹುದಾಗಿದ್ದು, ಉಳಿತಾಯದ ಜೊತೆಗೆ ಗರಿಷ್ಠ ಮೌಲ್ಯ ಹೊಂದಿರುವ ಬಹುಮಾನಗಳನ್ನು ಗೆಲ್ಲುವ ಅವಕಾಶವಿದೆ.

ಲೈಟ್, ರಿಡ್ಜ್ ಪ್ಲಸ್ ಮತ್ತು ಆರ್30 ಎಲೆಕ್ಟ್ರಿಕ್ ಸ್ಕೂಟರ್‌ಗಳ ಖರೀದಿ ಮೇಲೆ ಗರಿಷ್ಠ ಉಳಿತಾಯ ಲಭ್ಯವಾಗಲಿದ್ದು, ಕಂಪನಿಯ ಲಕ್ಕಿ ಡ್ರಾದಲ್ಲಿ ವಿಜಯಶಾಲಿಯಾಗುವ ಮೊದಲ ಗ್ರಾಹಕನಿಗ ರೂ. 1 ಲಕ್ಷ ನಗದು ಬಹುಮಾನ ಘೋಷಿಸಿದೆ.

ಇದರ ಜೊತೆಗೆ ಹೊಸ ಇವಿ ಸ್ಕೂಟರ್ ಖರೀದಿಸುವ ಪ್ರತಿಯೊಬ್ಬ ಗ್ರಾಹಕರಿಗೂ ರೂ.3 ಸಾವಿರ ಮತ್ತು ರೂ.5 ಸಾವಿರ ಮೌಲ್ಯದ ಅಮೇಜಾನ್ ಗಿಫ್ಟ್ ಖಚಿತವಾಗಿ ದೊರೆಯಲಿದ್ದು, ಲಕ್ಕಿ ಡ್ರಾದಲ್ಲಿ ಮೊದಲ ವಿಜೇತರಿಗೆ ರೂ.1 ಲಕ್ಷ ನಗದು ಬಹುಮಾನ ಮತ್ತು ಇನ್ನುಳಿದ ವಿಜೇತ ಸ್ಪರ್ಧಿಗೆ ಅನುಕ್ರಮವಾಗಿ ರೂ. 10 ಸಾವಿರ ಮೌಲ್ಯದ ವಾಷಿಂಗ್ ಮಶಿನ್, ಮೈಕ್ರೊವೇವ್ ಓವನ್, 1 ಗ್ರಾಂ ಚಿನ್ನದ ನಾಣ್ಯ ಮತ್ತು ಸ್ಮಾರ್ಟ್ ಫೋನ್ ಉಡುಗೊರೆಗಳನ್ನು ಘೋಷಣೆ ಮಾಡಿದೆ.

ಹೊಸ ಆಫರ್‌ಗಳು ಲೈಟ್, ರಿಡ್ಜ್ ಪ್ಲಸ್ ಮತ್ತು ಆರ್30 ಎಲೆಕ್ಟ್ರಿಕ್ ಸ್ಕೂಟರ್ ಖರೀದಿ ಮೇಲೆ ಮಾತ್ರ ಅನ್ವಯವಾಗಲಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿ ಲೈಟ್ ಸ್ಕೂಟರ್ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ರೂ. 63,990, ರಿಡ್ಜ್ ಪ್ಲಸ್ ಮಾದರಿಯು ರೂ. 73,417 ಮತ್ತು ಆರ್30 ಮಾದರಿಯು ರೂ. 58,992 ಬೆಲೆ ಹೊಂದಿದೆ.

ಇನ್ನು ಎಲೆಕ್ಟ್ರಿಕ್ ಸ್ಕೂಟರ್ ಮಾದರಿಗಳ ಮಾರಾಟದಲ್ಲಿ ಮುನ್ನಡೆ ಸಾಧಿಸುತ್ತಿರುವ ಒಕಿನಾವ ಕಂಪನಿಯು 2021ರಲ್ಲಿ ಮತ್ತಷ್ಟು ಹೊಸ ಎಲೆಕ್ಟ್ರಿಕ್ ಸ್ಕೂಟರ್ ಮತ್ತು ಇವಿ ಬೈಕ್ ಮಾದರಿಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, ಒಕಿ100 ಇವಿ ಬೈಕ್ ಸೇರಿದಂತೆ ಒಟ್ಟು ನಾಲ್ಕು ಹೊಸ ಇವಿ ವಾಹನಗಳನ್ನು ರಸ್ತೆಗಿಳಿಸುತ್ತಿದೆ.
MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಒಕಿನಾವ ಕಂಪನಿಯು ಸದ್ಯ ಮಾರುಕಟ್ಟೆಯಲ್ಲಿನ ಬೇಡಿಕೆಯೆಂತೆ ವಿವಿಧ ಬ್ಯಾಟರಿ ರೇಂಜ್‌ವುಳ್ಳ ಪ್ರೈಸ್, ಆರ್30, ಲೈಟ್, ರಿಡ್ಜ್ ಪ್ಲಸ್, ಪ್ರೈಸ್ ಪ್ರೊ ಮತ್ತು ಐ-ಪ್ರೈಸ್ ಪ್ರೊ ಪ್ಲಸ್ ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, ಭವಿಷ್ಯ ಯೋಜನೆಗಳಲ್ಲಿ ಒಕಿ100 ಇವಿ ಮೋಟಾರ್‌ಸೈಕಲ್ ಸೇರಿದಂತೆ ಒಂದು ಮ್ಯಾಕ್ಸಿ ಸ್ಕೂಟರ್ ಮತ್ತು ಎರಡು ಹೈ ಸ್ಪೀಡ್ ಎಲೆಕ್ಟ್ರಿಕ್ ಮಾದರಿಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ಹೊಸ ವಾಹನಗಳ ಪೈಕಿ ಶೀಘ್ರದಲ್ಲಲೇ ಒಕಿ100 ಮಾದರಿಯು ಮಾರುಕಟ್ಟೆ ಪ್ರವೇಶಿಸಲು ಸಜ್ಜಾಗುತ್ತಿದ್ದು, ಕಂಪನಿಯು ಹೊಸ ಇವಿ ಬೈಕಿನ ಮೊದಲ ಟೀಸರ್ ಚಿತ್ರವನ್ನು ಪ್ರಕಟಿಸುವ ಮೂಲಕ ಮುಂದಿನ ಕೆಲವೇ ದಿನಗಳಲ್ಲಿ ಬಿಡುಗಡೆ ಮಾಡುವ ಸುಳಿವು ನೀಡಿದೆ.
MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಒಕಿ100 ಇವಿ ಬೈಕಿನ ಟೀಸರ್ ಹೊರತುಪಡಿಸಿ ಯಾವುದೇ ತಾಂತ್ರಿಕ ಅಂಶಗಳನ್ನು ಹಂಚಿಕೊಳ್ಳದ ಒಕಿನಾವ ಕಂಪನಿಯು ಬಜೆಟ್ ಬೆಲೆಯಲ್ಲಿ ಉತ್ತಮ ಬ್ಯಾಟರಿ ಪ್ಯಾಕ್‌ನೊಂದಿಗೆ ಬಿಡುಗಡೆಯ ಸುಳಿವು ನೀಡಿದ್ದು, 125 ಸಿಸಿ ಸಾಮರ್ಥ್ಯದ ಸಾಮಾನ್ಯ ಬೈಕ್‌ಗಳಿಗೆ ಸಮನಾಗಿರುವ ಹೊಸ ಎಲೆಕ್ಟ್ರಿಕ್ ಬೈಕ್ ಮಾದರಿಯು ರಿವೋಲ್ಟ್ ಎಲೆಕ್ಟ್ರಿಕ್ ಬೈಕ್ ಮಾದರಿಗೆ ಪೈಪೋಟಿ ನೀಡಲಿದೆ.