ಇ ಕಾಮರ್ಸ್ ಸೇವಾ ಕಂಪನಿಗೆ ಎಲೆಕ್ಟ್ರಿಕ್ ಸ್ಕೂಟರ್ ಒದಗಿಸಲಿದೆ ಒಕಿನಾವ
ದೇಶಾದ್ಯಂತ ಇಂಧನಗಳ ಬೆಲೆ ಏರಿಕೆಯ ಪರಿಣಾಮ ವಾಹನ ಸವಾರರು ಎಲೆಕ್ಟ್ರಿಕ್ ವಾಹನಗಳ ಬಳಕೆಯತ್ತ ಮುಖ ಮಾಡುತ್ತಿರುವುದು ಇವಿ ವಾಹನಗಳ ಉತ್ಪಾದನಾ ಕಂಪನಿಗೆ ಭಾರೀ ಬೇಡಿಕೆ ಸಲ್ಲಿಕೆಯಾಗುತ್ತಿದ್ದು, ಒಕಿನಾವ ಕಂಪನಿಯು ಕೂಡಾ ಕಳೆದ ಕೆಲ ತಿಂಗಳಿನಿಂದ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುತ್ತಿದೆ.

ವ್ಯಯಕ್ತಿಕ ಬಳಕೆಗೆ ಮಾತ್ರವಲ್ಲ ವಾಣಿಜ್ಯ ಸೇವಾ ಕಂಪನಿಗಳು ಕೂಡಾ ನಿರ್ವಹಣಾ ವೆಚ್ಚ ತಗ್ಗಿಸಲು ಎಲೆಕ್ಟ್ರಿಕ್ ವಾಹನಗಳ ಬಳಕೆಯತ್ತ ಗಮನಹರಿಸುತ್ತಿದ್ದು, ಇ ಕಾಮರ್ಸ್ ಸೇವೆಗಳನ್ನು ಒದಗಿಸುವಲ್ಲಿ ಮುಂಚೂಣಿಯಲ್ಲಿ ವಿಎಲೆಕ್ಟ್ರಿಕ್ ಕಂಪನಿಯು ಒಕಿನಾವ ಕಂಪನಿ ನಿರ್ಮಾಣದ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಳಕೆ ಮಾಡಲು ನಿರ್ಧರಿಸಿದೆ. ಇದಕ್ಕಾಗಿ ಹೊಸ ಒಪ್ಪಂದಕ್ಕೆ ಸಹಿ ಹಾಕಿರುವ ಒಕಿನಾವ ಮತ್ತು ವಿಎಲೆಕ್ಟ್ರಿಕ್ ಕಂಪನಿಗಳು ವಾಣಿಜ್ಯ ಬಳಕೆಗೆ ಅಗತ್ಯತೆಗೆ ತಕ್ಕಂತೆ ಹೊಸ ಮಾದರಿಯ ಎಲೆಕ್ಟ್ರಿಕ್ ಸ್ಕೂಟರ್ ನಿರ್ಮಾಣ ಮಾಡಿಕೊಡಲಿದೆ.

ಹೊಸ ಒಪ್ಪಂದದ ಭಾಗವಾಗಿ ವಿಎಲೆಕ್ಟ್ರಿಕ್ ಕಂಪನಿಯ ಬಳಿ ಎಲೆಕ್ಟ್ರಿಕ್ ಸ್ಕೂಟರ್‌ಗಳಿಗೆ ಅಗತ್ಯ ಫಾಸ್ಟ್ ಚಾರ್ಜಿಂಗ್ ನಿಲ್ದಾಣವನ್ನು ಸಹ ನಿರ್ಮಾಣ ಮಾಡಲಿದ್ದು, ಕಂಪನಿಯ ಅಗತ್ಯತೆಗೆ ತಕ್ಕಂತೆ ಹೆಚ್ಚಿನ ಮಟ್ಟದ ಬ್ಯಾಟರಿ ರೇಂಜ್ ಅಳವಡಿಸಲಿದೆ.

ಇ-ಕಾಮರ್ಸ್ ಸೇವೆಗಳನ್ನು ಒದಗಿಸಲು ನಗರಪ್ರದೇಶಗಳಲ್ಲಿ ಸಂಚಾರಕ್ಕೆ ಅನುಕೂಲಕರವಾಗುವಂತೆ ಹೊಸ ಎಲೆಕ್ಟ್ರಿಕ್ ಸ್ಕೂಟರ್ ನಿರ್ಮಾಣ ಮಾಡಿದ್ದು, ಬ್ಯುಸಿನೆಸ್ ಟು ಬ್ಯುಸಿನೆಟ್(ಬಿಟುಬಿ) ಉದ್ದೇಶಕ್ಕಾಗಿ ಒಕಿನಾವ ಕಂಪನಿಯುು ಪ್ರತ್ಯೇಕ ಇವಿ ಸ್ಕೂಟರ್ ಮಾದರಿಗಳನ್ನು ಸಿದ್ದಪಡಿಸುತ್ತಿದೆ.

ಇನ್ನು ಇಂಧನ ದರ ಹೆಚ್ಚಳ ಪರಿಣಾಮ ಕಳೆದ ನಾಲ್ಕು ತಿಂಗಳ ಅವಧಿಯಲ್ಲಿ ಎಲೆಕ್ಟ್ರಿಕ್ ವಾಹನ ಕಂಪನಿಗಳು ಕಳೆದ ವರ್ಷಕ್ಕಿಂತಲೂ ಹೆಚ್ಚಿನ ಮಟ್ಟದ ಗ್ರಾಹಕರ ವಿಚಾರಣೆ ಮತ್ತು ಖರೀದಿ ಪ್ರಕ್ರಿಯೆಯೂ ಜೋರಾಗಿದ್ದು, ದೇಶದ ಎರಡನೇ ಅತಿದೊಡ್ಡ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರಾಟ ಕಂಪನಿಯಾಗಿರುವ ಒಕಿನಾವ ಕಂಪನಿಯು ಕೂಡಾ ಕಳೆದ ವರ್ಷಕ್ಕಿಂತಲೂ ಶೇ.30 ಕ್ಕಿಂತಲೂ ಹೆಚ್ಚು ಬೇಡಿಕೆ ಪಡೆದುಕೊಂಡಿದೆ.

ಹೊಸ ಎಲೆಕ್ಟ್ರಿಕ್ ವಾಹನ ಮಾದರಿಗಳ ವಿಚಾರಣೆಯು ಹೆಚ್ಚುತ್ತಿದ್ದು, ಹೆಚ್ಚಿನ ಮಟ್ಟದ ಮೈಲೇಜ್ ಹೊಂದಿರುವ ಇವಿ ವಾಹನಗಳ ಖರೀದಿಗೆ ಆಸಕ್ತಿ ತೋರುತ್ತಿದ್ದಾರೆ. ಫೆಬ್ರವರಿಯಲ್ಲಿ ಒಕಿನಾವ ಕಂಪನಿಯು ಕಳೆದ ವರ್ಷಕ್ಕಿಂತಲೂ ಶೇ.30 ರಷ್ಟು ಹೆಚ್ಚು ಬೇಡಿಕೆ ಪಡೆದುಕೊಂಡಿದ್ದು, ಒಟ್ಟು 1,059 ಯುನಿಟ್ ಮಾರಾಟ ಮಾಡಿದೆ. ಈ ತಿಂಗಳು ಕೂಡಾ ಹೆಚ್ಚಿನ ಮಟ್ಟದ ಬೇಡಿಕೆ ಸಲ್ಲಿಕೆಯಾಗಿದ್ದು, ಶೀಘ್ರದಲ್ಲೇ ಮತ್ತಷ್ಟು ಹೊಸ ಇವಿ ಉತ್ಪನ್ನಗಳನ್ನು ಬಿಡುಗಡೆ ಮಾಡಲು ಸಿದ್ದವಾಗಿದೆ.

ಎಲೆಕ್ಟ್ರಿಕ್ ಸ್ಕೂಟರ್ ಮಾದರಿಗಳ ಮಾರಾಟದಲ್ಲಿ ಮುನ್ನಡೆ ಸಾಧಿಸುತ್ತಿರುವ ಒಕಿನಾವ ಕಂಪನಿಯು 2021ರಲ್ಲಿ ಮತ್ತಷ್ಟು ಹೊಸ ಎಲೆಕ್ಟ್ರಿಕ್ ಸ್ಕೂಟರ್ ಮತ್ತು ಇವಿ ಬೈಕ್ ಮಾದರಿಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, ಒಕಿ100 ಇವಿ ಬೈಕ್ ಸೇರಿದಂತೆ ಒಟ್ಟು ನಾಲ್ಕು ಹೊಸ ಇವಿ ವಾಹನಗಳನ್ನು ರಸ್ತೆಗಿಳಿಸುತ್ತಿದೆ.

ಒಕಿನಾವ ಕಂಪನಿಯು ಸದ್ಯ ಮಾರುಕಟ್ಟೆಯಲ್ಲಿನ ಬೇಡಿಕೆಯೆಂತೆ ವಿವಿಧ ಬ್ಯಾಟರಿ ರೇಂಜ್‌ವುಳ್ಳ ಪ್ರೈಸ್, ಆರ್30, ಲೈಟ್, ರಿಡ್ಜ್ ಪ್ಲಸ್, ಪ್ರೈಸ್ ಪ್ರೊ ಮತ್ತು ಐ-ಪ್ರೈಸ್ ಪ್ರೊ ಪ್ಲಸ್ ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, ಭವಿಷ್ಯ ಯೋಜನೆಗಳಲ್ಲಿ ಒಕಿ100 ಇವಿ ಮೋಟಾರ್‌ಸೈಕಲ್ ಸೇರಿದಂತೆ ಒಂದು ಮ್ಯಾಕ್ಸಿ ಸ್ಕೂಟರ್ ಮತ್ತು ಎರಡು ಹೈ ಸ್ಪೀಡ್ ಎಲೆಕ್ಟ್ರಿಕ್ ಮಾದರಿಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.
MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಹೊಸ ವಾಹನಗಳ ಪೈಕಿ ಶೀಘ್ರದಲ್ಲಲೇ ಒಕಿ100 ಮಾದರಿಯು ಮಾರುಕಟ್ಟೆ ಪ್ರವೇಶಿಸಲು ಸಜ್ಜಾಗುತ್ತಿದ್ದು, ಕಂಪನಿಯು ಹೊಸ ಇವಿ ಬೈಕಿನ ಮೊದಲ ಟೀಸರ್ ಚಿತ್ರವನ್ನು ಪ್ರಕಟಿಸುವ ಮೂಲಕ ಮುಂದಿನ ಕೆಲವೇ ದಿನಗಳಲ್ಲಿ ಬಿಡುಗಡೆ ಮಾಡುವ ಸುಳಿವು ನೀಡಿದೆ.

ಒಕಿ100 ಇವಿ ಬೈಕಿನ ಟೀಸರ್ ಹೊರತುಪಡಿಸಿ ಯಾವುದೇ ತಾಂತ್ರಿಕ ಅಂಶಗಳನ್ನು ಹಂಚಿಕೊಳ್ಳದ ಒಕಿನಾವ ಕಂಪನಿಯು ಬಜೆಟ್ ಬೆಲೆಯಲ್ಲಿ ಉತ್ತಮ ಬ್ಯಾಟರಿ ಪ್ಯಾಕ್‌ನೊಂದಿಗೆ ಬಿಡುಗಡೆಯ ಸುಳಿವು ನೀಡಿದ್ದು, 125 ಸಿಸಿ ಸಾಮರ್ಥ್ಯದ ಸಾಮಾನ್ಯ ಬೈಕ್‌ಗಳಿಗೆ ಸಮನಾಗಿರುವ ಹೊಸ ಎಲೆಕ್ಟ್ರಿಕ್ ಬೈಕ್ ಮಾದರಿಯು ರಿವೋಲ್ಟ್ ಎಲೆಕ್ಟ್ರಿಕ್ ಬೈಕ್ ಮಾದರಿಗೆ ಪೈಪೋಟಿ ನೀಡಲಿದೆ.
MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಹೊಸ ಎಲೆಕ್ಟ್ರಿಕ್ ಬೈಕ್ ಮಾದರಿಯು ಪ್ರತಿ ಚಾರ್ಜ್‌ಗೆ ಬ್ಯಾಟರಿ ರೇಂಜ್ ಆಧಾರದ ಮೇಲೆ 120ಕಿ.ಮೀ ನಿಂದ 150 ಕಿ.ಮೀ ಮೈಲೇಜ್ ಹಿಂದಿರುಗಿಸಬಹುದಾಗಿದೆ ಎನ್ನಲಾಗಿದ್ದು, ಹೊಸ ಬೈಕ್ ಬೆಲೆಯನ್ನು ಎಕ್ಸ್‌ಶೋರೂಂ ಪ್ರಕಾರ ರೂ.1 ಲಕ್ಷದಿಂದ ರೂ.1.20 ಲಕ್ಷ ಬೆಲೆ ಅಂತರದೊಂದಿಗೆ ಬಿಡುಗಡೆ ಮಾಡಲಾಗುತ್ತಿದೆ.


Click it and Unblock the Notifications








