ಹೊಸ ಹೂಡಿಕೆಯೊಂದಿಗೆ ಇವಿ ವಾಹನ ಉತ್ಪಾದನೆ ಹೆಚ್ಚಿಸಲು ನಿರ್ಧರಿಸಿದ ಒಕಿನಾವ
ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟವು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ವಿವಿಧ ವಾಹನ ಉತ್ಪಾದನಾ ಕಂಪನಿಗಳು ಗ್ರಾಹಕರ ಬೇಡಿಕೆ ಪೂರೈಸಲು ಉತ್ಪಾದನಾ ಪ್ರಮಾಣವನ್ನು ದ್ವಿಗುಣಗೊಳಿಸಿದ್ದು, ಒಕಿನಾವ ಕೂಡಾ ತನ್ನ ಪ್ರಮುಖ ಎಲೆಕ್ಟ್ರಿಕ್ ಸ್ಕೂಟರ್‌ಗಳ ಉತ್ಪಾದನಾ ಪ್ರಮಾಣವನ್ನು ಹೆಚ್ಚಿಸಲು ಹೊಸ ಯೋಜನೆಗೆ ಚಾಲನೆ ನೀಡಿದೆ.

ಎಲೆಕ್ಟ್ರಿಕ್ ವಾಹನ ಮಾರಾಟ ಆರಂಭಿಸಿದ 6 ವರ್ಷಗಳ ಅವಧಿಯಲ್ಲಿ ಇದೇ ಮೊದಲ ಬಾರಿಗೆ ಅತಿ ಹೆಚ್ಚು ಬೇಡಿಕೆ ಪಡೆದುಕೊಳ್ಳುತ್ತಿರುವ ಒಕಿನಾವ ಕಂಪನಿಯು ಶೀಘ್ರದಲ್ಲೇ ಮತ್ತಷ್ಟು ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಲಿದ್ದು, ಹೊಸ ಯೋಜನೆಗೆ ಪೂರಕವಾಗಿ ಉತ್ಪಾದನಾ ಪ್ರಮಾಣವನ್ನು ಹೆಚ್ಚಿಸಲು ರಾಜಸ್ತಾನದ ಭಿವಾಡಿಯಲ್ಲಿರುವ ಉತ್ಪಾದನಾ ಘಟಕವನ್ನು ವಿಸ್ತರಿಸಿದೆ.

ವಿಸ್ತರಿತ ವಾಹನ ಉತ್ಪಾದನಾ ಘಟಕದ ಮೂಲಕ ವಾರ್ಷಿಕವಾಗಿ 1 ಮಿಲಿಯನ್(10 ಲಕ್ಷ) ಎಲೆಕ್ಟ್ರಿಕ್ ಸ್ಕೂಟರ್ ಮತ್ತು ಬೈಕ್ ಮಾದರಿಗಳನ್ನು ಉತ್ಪಾದನೆಗೊಳಿಸಲಿರುವ ಒಕಿನಾವ ಕಂಪನಿಯು ಹೊಸ ಘಟಕದ ನಿರ್ಮಾಣಕ್ಕಾಗಿ ಹೊಸದಾಗಿ ರೂ. 150 ಕೋಟಿ ಹೂಡಿಕೆ ಮಾಡಿದೆ.

ಒಕಿನಾವ ಕಂಪನಿಯ ಹೊಸ ಯೋಜನೆಗಾಗಿ ಪ್ರಮುಖ ಕಂಪನಿಗಳು ಭಾರೀ ಪ್ರಮಾಣದ ಬಂಡವಾಳ ಹೂಡಿಕೆ ಮಾಡಿದ್ದು, ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿರುವ ಒಕಿನಾವ ಕಂಪನಿಯು ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಮಾದರಿಯ ಎಲೆಕ್ಟ್ರಿಕ್ ಸ್ಕೂಟರ್ ಮತ್ತು ಬೈಕ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸಲು ಹೊಸ ಬಂಡವಾಳ ಹೂಡಿಕೆ ಸಾಕಷ್ಟು ಸಹಕಾರಿಯಾಗಿದೆ.

ಬಜೆಟ್ ಬೆಲೆಯಲ್ಲಿ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹಲವಾರು ಎಲೆಕ್ಟ್ರಿಕ್ ಸ್ಕೂಟರ್ ಮಾದರಿಗಳನ್ನು ಮಾರಾಟ ಮಾಡುತ್ತಿರುವ ಒಕಿನಾವ ಕಂಪನಿಯು ಶೀಘ್ರದಲ್ಲೇ ಒಕಿ100 ಇವಿ ಬೈಕ್ ಸೇರಿದಂತೆ ಒಟ್ಟು ನಾಲ್ಕು ಹೊಸ ದ್ವಿಚಕ್ರ ವಾಹನಗಳನ್ನು ಬಿಡುಗಡೆ ಮಾಡಲಿದ್ದು, ಹೊಸ ವಾಹನಗಳ ಜೊತೆಗೆ ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾದರಿಗಳನ್ನು ಸಹ ಗ್ರಾಹಕರ ಬೇಡಿಕೆಯೆಂತೆ ಹೊಸ ಫೀಚರ್ಸ್‌ಗಳೊಂದಿಗೆ ಉನ್ನತೀಕರಿಸುತ್ತಿದೆ.

ಒಕಿನಾವ ಕಂಪನಿಯು ಕಂಪನಿಯು ಸದ್ಯ ಗ್ರಾಹಕರ ಬೇಡಿಕೆಯೆಂತೆ ಪ್ರೈಸ್, ಆರ್30, ಲೈಟ್, ರಿಡ್ಜ್ ಪ್ಲಸ್, ಪ್ರೈಸ್ ಪ್ರೊ ಮತ್ತು ಐ-ಪ್ರೈಸ್ ಪ್ರೊ ಪ್ಲಸ್ ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, ಭವಿಷ್ಯ ಯೋಜನೆಗಳಲ್ಲಿ ಒಕಿ100 ಸೇರಿದಂತೆ ಒಂದು ಮ್ಯಾಕ್ಸಿ ಸ್ಕೂಟರ್ ಮತ್ತು ಎರಡು ಹೈ ಸ್ಪೀಡ್ ಎಲೆಕ್ಟ್ರಿಕ್ ಮಾದರಿಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.
MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಕೋವಿಡ್ 19 ಪರಿಣಾಮ ತೀವ್ರ ಸಂಕಷ್ಟದಲ್ಲಿರುವ ಆಟೋ ಉದ್ಯಮವು ಮುಂಬರುವ ಕೆಲ ದಿನಗಳಲ್ಲಿ ಸುಧಾರಿಸುವ ಬಗ್ಗೆ ಅಟೋ ಕಂಪನಿಗಳು ವಿಶ್ವಾಸದಲ್ಲಿದ್ದು, ಕೋವಿಡ್ ಪರಿಣಾಮ ಸ್ವಂತ ಬಳಕೆಯ ವಾಹನ ಖರೀದಿ ಪ್ರಕ್ರಿಯೆ ಹೆಚ್ಚುತ್ತಿರುವುದು ಆಟೋ ಉತ್ಪಾದನಾ ಕಂಪನಿಗಳಿಗೆ ಮತ್ತಷ್ಟು ಬಲಬಂದಿದೆ.

ಕೋವಿಡ್ ಭೀತಿಯಿಂದಗಿ ಬಹುತೇಕರು ಸ್ವಂತ ವಾಹನಗಳ ಬಳಕೆಯನ್ನು ಹೆಚ್ಚಿಕೊಳ್ಳುತ್ತಿರುದು ಹೊಸ ವಾಹನಗಳ ಮಾರಾಟವು ಚೇತರಿಸಿಕೊಳ್ಳುತ್ತಿರುವುದಕ್ಕೆ ಪ್ರಮುಖ ಕಾರಣವಾಗಲಿದ್ದು, ಈ ಅವಕಾಶವನ್ನು ಬಳಸಿಕೊಳ್ಳುತ್ತಿರುವ ಆಟೋ ಕಂಪನಿಗಳು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹಲವಾರು ಹೊಸ ಮಾದರಿಯ ವಾಹನಗಳನ್ನು ಪರಿಚಯಿಸುತ್ತಿವೆ.
MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಒಕಿನಾವ ಕಂಪನಿಯು ಕೂಡಾ ಲಾಕ್‌ಡೌನ್ ಸಡಿಲಿಕೆ ನಂತರ ತಜ್ಞರ ಅಭಿಪ್ರಾಯದ ಮೇಲೆ ಮತ್ತಷ್ಟು ಹೊಸ ಶೋರೂಂಗಳ ಸಂಖ್ಯೆಯನ್ನು ಹೆಚ್ಚಿಸುವುದರ ಜೊತೆಗೆ ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಲಿದ್ದು, ಎಲೆಕ್ಟ್ರಿಕ್ ವಾಹನಗಳ ಜೊತೆಗೆ ಬ್ಯಾಟರಿ ನಿರ್ಮಾಣ ಕೇಂದ್ರದ ಮೇಲೂ ಹೂಡಕೆ ಆಸಕ್ತಿ ಹೊಂದಿದೆ.


Click it and Unblock the Notifications








