ಇಂಧನ ಬೆಲೆ ಹೆಚ್ಚಳ ಪರಿಣಾಮ ಒಕಿನಾವ ಇವಿ ಸ್ಕೂಟರ್ ಮಾರಾಟದಲ್ಲಿ ಭಾರೀ ಹೆಚ್ಚಳ
ದೇಶಾದ್ಯಂತ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ನೂರರ ಸನಿಹದಲ್ಲಿದ್ದು, ಬೆಲೆ ಏರಿಕೆಯ ಪರಿಣಾಮ ವಾಹನ ಸವಾರರು ಎಲೆಕ್ಟ್ರಿಕ್ ವಾಹನಗಳ ಬಳಕೆಯತ್ತ ಮುಖ ಮಾಡುತ್ತಿರುವುದು ಇವಿ ವಾಹನಗಳ ಉತ್ಪಾದನಾ ಕಂಪನಿಗೆ ಭಾರೀ ಬೇಡಿಕೆ ಸಲ್ಲಿಕೆಯಾಗುತ್ತಿದೆ.

ಕಳೆದ ಎರಡು ತಿಂಗಳ ಅವಧಿಯಲ್ಲಿ ಎಲೆಕ್ಟ್ರಿಕ್ ವಾಹನ ಕಂಪನಿಗಳು ಕಳೆದ ವರ್ಷಕ್ಕಿಂತಲೂ ಹೆಚ್ಚಿನ ಮಟ್ಟದ ಗ್ರಾಹಕರ ವಿಚಾರಣೆ ಮತ್ತು ಖರೀದಿ ಪ್ರಕ್ರಿಯೆಯೂ ಜೋರಾಗಿದ್ದು, ದೇಶದ ಎರಡನೇ ಅತಿದೊಡ್ಡ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರಾಟ ಕಂಪನಿಯಾಗಿರುವ ಒಕಿನಾವ ಕಂಪನಿಯು ಕೂಡಾ ಕಳೆದ ವರ್ಷಕ್ಕಿಂತಲೂ ಶೇ.30 ಕ್ಕಿಂತಲೂ ಹೆಚ್ಚು ಬೇಡಿಕೆ ಪಡೆದುಕೊಂಡಿದೆ. ಹೊಸ ಎಲೆಕ್ಟ್ರಿಕ್ ವಾಹನ ಮಾದರಿಗಳ ವಿಚಾರಣೆಯು ಹೆಚ್ಚುತ್ತಿದ್ದು, ಹೆಚ್ಚಿನ ಮಟ್ಟದ ಮೈಲೇಜ್ ಹೊಂದಿರುವ ಇವಿ ವಾಹನಗಳ ಖರೀದಿಗೆ ಆಸಕ್ತಿ ತೋರುತ್ತಿದ್ದಾರೆ.

ಫೆಬ್ರವರಿಯಲ್ಲಿ ಒಕಿನಾವ ಕಂಪನಿಯು ಕಳೆದ ವರ್ಷಕ್ಕಿಂತಲೂ ಶೇ.30 ರಷ್ಟು ಹೆಚ್ಚು ಬೇಡಿಕೆ ಪಡೆದುಕೊಂಡಿದ್ದು, ಒಟ್ಟು 1,059 ಯುನಿಟ್ ಮಾರಾಟ ಮಾಡಿದೆ. ಈ ತಿಂಗಳು ಕೂಡಾ ಹೆಚ್ಚಿನ ಮಟ್ಟದ ಬೇಡಿಕೆ ಸಲ್ಲಿಕೆಯಾಗಿದ್ದು, ಶೀಘ್ರದಲ್ಲೇ ಮತ್ತಷ್ಟು ಹೊಸ ಇವಿ ಉತ್ಪನ್ನಗಳನ್ನು ಬಿಡುಗಡೆ ಮಾಡಲು ಸಿದ್ದವಾಗಿದೆ.

ಎಲೆಕ್ಟ್ರಿಕ್ ಸ್ಕೂಟರ್ ಮಾದರಿಗಳ ಮಾರಾಟದಲ್ಲಿ ಮುನ್ನಡೆ ಸಾಧಿಸುತ್ತಿರುವ ಒಕಿನಾವ ಕಂಪನಿಯು 2021ರಲ್ಲಿ ಮತ್ತಷ್ಟು ಹೊಸ ಎಲೆಕ್ಟ್ರಿಕ್ ಸ್ಕೂಟರ್ ಮತ್ತು ಇವಿ ಬೈಕ್ ಮಾದರಿಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, ಒಕಿ100 ಇವಿ ಬೈಕ್ ಸೇರಿದಂತೆ ಒಟ್ಟು ನಾಲ್ಕು ಹೊಸ ಇವಿ ವಾಹನಗಳನ್ನು ರಸ್ತೆಗಿಳಿಸುತ್ತಿದೆ.

ಒಕಿನಾವ ಕಂಪನಿಯು ಸದ್ಯ ಮಾರುಕಟ್ಟೆಯಲ್ಲಿನ ಬೇಡಿಕೆಯೆಂತೆ ವಿವಿಧ ಬ್ಯಾಟರಿ ರೇಂಜ್‌ವುಳ್ಳ ಪ್ರೈಸ್, ಆರ್30, ಲೈಟ್, ರಿಡ್ಜ್ ಪ್ಲಸ್, ಪ್ರೈಸ್ ಪ್ರೊ ಮತ್ತು ಐ-ಪ್ರೈಸ್ ಪ್ರೊ ಪ್ಲಸ್ ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, ಭವಿಷ್ಯ ಯೋಜನೆಗಳಲ್ಲಿ ಒಕಿ100 ಇವಿ ಮೋಟಾರ್‌ಸೈಕಲ್ ಸೇರಿದಂತೆ ಒಂದು ಮ್ಯಾಕ್ಸಿ ಸ್ಕೂಟರ್ ಮತ್ತು ಎರಡು ಹೈ ಸ್ಪೀಡ್ ಎಲೆಕ್ಟ್ರಿಕ್ ಮಾದರಿಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ಹೊಸ ವಾಹನಗಳ ಪೈಕಿ ಶೀಘ್ರದಲ್ಲಲೇ ಒಕಿ100 ಮಾದರಿಯು ಮಾರುಕಟ್ಟೆ ಪ್ರವೇಶಿಸಲು ಸಜ್ಜಾಗುತ್ತಿದ್ದು, ಕಂಪನಿಯು ಹೊಸ ಇವಿ ಬೈಕಿನ ಮೊದಲ ಟೀಸರ್ ಚಿತ್ರವನ್ನು ಪ್ರಕಟಿಸುವ ಮೂಲಕ ಮುಂದಿನ ಕೆಲವೇ ದಿನಗಳಲ್ಲಿ ಬಿಡುಗಡೆ ಮಾಡುವ ಸುಳಿವು ನೀಡಿದೆ.

ಒಕಿ100 ಇವಿ ಬೈಕಿನ ಟೀಸರ್ ಹೊರತುಪಡಿಸಿ ಯಾವುದೇ ತಾಂತ್ರಿಕ ಅಂಶಗಳನ್ನು ಹಂಚಿಕೊಳ್ಳದ ಒಕಿನಾವ ಕಂಪನಿಯು ಬಜೆಟ್ ಬೆಲೆಯಲ್ಲಿ ಉತ್ತಮ ಬ್ಯಾಟರಿ ಪ್ಯಾಕ್‌ನೊಂದಿಗೆ ಬಿಡುಗಡೆಯ ಸುಳಿವು ನೀಡಿದ್ದು, 125 ಸಿಸಿ ಸಾಮರ್ಥ್ಯದ ಸಾಮಾನ್ಯ ಬೈಕ್‌ಗಳಿಗೆ ಸಮನಾಗಿರುವ ಹೊಸ ಎಲೆಕ್ಟ್ರಿಕ್ ಬೈಕ್ ಮಾದರಿಯು ರಿವೋಲ್ಟ್ ಎಲೆಕ್ಟ್ರಿಕ್ ಬೈಕ್ ಮಾದರಿಗೆ ಪೈಪೋಟಿ ನೀಡಲಿದೆ.
MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಹೊಸ ಎಲೆಕ್ಟ್ರಿಕ್ ಬೈಕ್ ಮಾದರಿಯು ಪ್ರತಿ ಚಾರ್ಜ್‌ಗೆ ಬ್ಯಾಟರಿ ರೇಂಜ್ ಆಧಾರದ ಮೇಲೆ 120ಕಿ.ಮೀ ನಿಂದ 150 ಕಿ.ಮೀ ಮೈಲೇಜ್ ಹಿಂದಿರುಗಿಸಬಹುದಾಗಿದೆ ಎನ್ನಲಾಗಿದ್ದು, ಹೊಸ ಬೈಕ್ ಬೆಲೆಯನ್ನು ಎಕ್ಸ್‌ಶೋರೂಂ ಪ್ರಕಾರ ರೂ.1 ಲಕ್ಷದಿಂದ ರೂ.1.20 ಲಕ್ಷ ಬೆಲೆ ಅಂತರದೊಂದಿಗೆ ಬಿಡುಗಡೆ ಮಾಡಲಾಗುತ್ತಿದೆ.

ಈ ಮೂಲಕ ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಹೊಸ ಬದಲಾವಣೆಗೆ ಕಾರಣವಾಗಿರುವ ಒಕಿನಾವ ಕಂಪನಿಯು ಇಂಧನ ಚಾಲಿತ ವಾಹನಗಳಿಂದ ಇವಿ ವಾಹನಗಳತ್ತ ಗ್ರಾಹಕರನ್ನು ಸೆಳೆಯಲಿದ್ದು, ಹೊಸ ವಾಹನಗಳ ಉತ್ಪಾದನೆಗಾಗಿ ಕಂಪನಿಯು ಭಾರೀ ಪ್ರಮಾಣದ ಹೂಡಿಕೆ ಮಾಡುತ್ತಿದೆ.
MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಜೊತೆಗೆ ಹೊಸ ಇವಿ ಬೈಕ್ ಮಾದರಿಯನ್ನು ಸ್ಥಳೀಯವಾಗಿ ಅಭಿವೃದ್ದಿ ಹೊಂದಿರುವ ಗರಿಷ್ಠ ಬಿಡಿಭಾಗಗಳನ್ನು ಪಡೆದುಕೊಂಡಿರುವುದು ಸಹ ಉತ್ತಮ ಬೆಲೆ ನಿರ್ಧಾರಕ್ಕೆ ಸಹಕಾರಿಯಾಗಲಿದ್ದು, ಮುಂಬರುವ ಯುಗಾದಿ ಸಂಭ್ರಮಕ್ಕಾಗಿ ಹೊಸ ಇವಿ ಬೈಕ್ ಮಾರುಕಟ್ಟೆ ಪ್ರವೇಶಿಸಲಿದೆ.


Click it and Unblock the Notifications








