2021ರ ಎರಡನೇ ತ್ರೈಮಾಸಿಕ ಅವಧಿಯಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಒಕಿನಾವ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಪರಿಣಾಮ ಹೊಸ ವಾಹನ ಸವಾರರು ಎಲೆಕ್ಟ್ರಿಕ್ ವಾಹನಗಳ ಬಳಕೆಯತ್ತ ಮುಖ ಮಾಡುತ್ತಿದ್ದು, ಇವಿ ವಾಹನಗಳ ಉತ್ಪಾದನಾ ಕಂಪನಿಗೆ ಭಾರೀ ಬೇಡಿಕೆ ಸಲ್ಲಿಕೆಯಾಗುತ್ತಿದೆ.

2021ರ ಎರಡನೇ ತ್ರೈಮಾಸಿಕ ಅವಧಿಯಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಒಕಿನಾವ

ಕಳೆದ ಎರಡು ತಿಂಗಳ ಅವಧಿಯಲ್ಲಿ ಎಲೆಕ್ಟ್ರಿಕ್ ವಾಹನ ಕಂಪನಿಗಳು ಕಳೆದ ವರ್ಷಕ್ಕಿಂತಲೂ ಹೆಚ್ಚಿನ ಮಟ್ಟದ ಗ್ರಾಹಕರ ವಿಚಾರಣೆ ಮತ್ತು ಖರೀದಿ ಪ್ರಕ್ರಿಯೆಯೂ ಜೋರಾಗಿದ್ದು, ದೇಶದ ಎರಡನೇ ಅತಿದೊಡ್ಡ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರಾಟ ಕಂಪನಿಯಾಗಿರುವ ಒಕಿನಾವ ಕಂಪನಿಯು ಹಿಂದೆಂದಿಗಿಂತಲೂ ಹೆಚ್ಚು ಬೇಡಿಕೆ ಪಡೆದುಕೊಂಡಿದೆ.

2021ರ ಎರಡನೇ ತ್ರೈಮಾಸಿಕ ಅವಧಿಯಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಒಕಿನಾವ

ಇಂಧನಗಳ ಬೆಲೆ ಪರಿಣಾಮ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟವು ಕಳೆದ ಕೆಲತಿಂಗಳಿನಿಂದ ಹೆಚ್ಚಿನ ಮಟ್ಟದಲ್ಲಿ ಏರಿಕೆಯಾಗುತ್ತಿದ್ದು, 2021ರ ಎರಡನೇ ತ್ರೈಮಾಸಿಕ ಅವಧಿಯಲ್ಲಿ ಒಕಿನಾವ ಕಂಪನಿಯು 15 ಸಾವಿರ ಯುನಿಟ್ ಮಾರಾಟ ಮಾಡಿದೆ.

2021ರ ಎರಡನೇ ತ್ರೈಮಾಸಿಕ ಅವಧಿಯಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಒಕಿನಾವ

ಈ ವರ್ಷದ ಎರಡನೇ ತ್ರೈಮಾಸಿಕ ಅವಧಿಯಲ್ಲಿ ಇವಿ ಸ್ಕೂಟರ್ ಮಾರಾಟವು 2020ರ ಅವಧಿನ ಸ್ಕೂಟರ್ ಮಾರಾಟಕ್ಕಿಂತಲೂ ಹೆಚ್ಚಿದ್ದು, ಮುಂಬರುವ ದಿನಗಳಲ್ಲಿ ಒಕಿನಾವ ಸ್ಕೂಟರ್‌ಗಳಿಗೆ ಮತ್ತಷ್ಟು ಬೇಡಿಕೆ ಸಲ್ಲಿಕೆಯಾಗುವ ನೀರಿಕ್ಷೆಯಿದೆ.

2021ರ ಎರಡನೇ ತ್ರೈಮಾಸಿಕ ಅವಧಿಯಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಒಕಿನಾವ

ಎಲೆಕ್ಟ್ರಿಕ್ ವಾಹನ ಮಾದರಿಗಳ ವಿಚಾರಣೆಯು ಕೂಡಾ ಕೆಲ ತಿಂಗಳಿನಿಂದ ಸಾಕಷ್ಟು ಹೆಚ್ಚಳವಾಗಿದ್ದು, ಹೆಚ್ಚಿನ ಮಟ್ಟದ ಮೈಲೇಜ್ ಹೊಂದಿರುವ ಇವಿ ವಾಹನಗಳ ಖರೀದಿಗೆ ಆಸಕ್ತಿ ತೋರುತ್ತಿದ್ದಾರೆ.

2021ರ ಎರಡನೇ ತ್ರೈಮಾಸಿಕ ಅವಧಿಯಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಒಕಿನಾವ

ಹೀಗಾಗಿ ಗ್ರಾಹಕರ ಬೇಡಿಕೆ ಆಧಾರಿಸಿ ಮತ್ತಷ್ಟು ಹೊಸ ಎಲೆಕ್ಟ್ರಿಕ್ ಸ್ಕೂಟರ್ ಮತ್ತು ಇವಿ ಬೈಕ್ ಮಾದರಿಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿರುವ ಒಕಿನಾವ ಕಂಪನಿಯು ಮುಂದಿನ ಕೆಲ ತಿಂಗಳಿನಲ್ಲಿ ತನ್ನ ಬಹುನೀರಿಕ್ಷಿತ ಒಕಿ100 ಇವಿ ಬೈಕ್ ಸೇರಿದಂತೆ ಒಟ್ಟು ನಾಲ್ಕು ಹೊಸ ಇವಿ ವಾಹನಗಳನ್ನು ರಸ್ತೆಗಿಳಿಸುತ್ತಿದೆ.

2021ರ ಎರಡನೇ ತ್ರೈಮಾಸಿಕ ಅವಧಿಯಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಒಕಿನಾವ

ಒಕಿನಾವ ಕಂಪನಿಯು ಸದ್ಯ ಮಾರುಕಟ್ಟೆಯಲ್ಲಿನ ಬೇಡಿಕೆಯೆಂತೆ ವಿವಿಧ ಬ್ಯಾಟರಿ ರೇಂಜ್‌ವುಳ್ಳ ಪ್ರೈಸ್, ಆರ್30, ಲೈಟ್, ರಿಡ್ಜ್ ಪ್ಲಸ್, ಪ್ರೈಸ್ ಪ್ರೊ ಮತ್ತು ಐ-ಪ್ರೈಸ್ ಪ್ರೊ ಪ್ಲಸ್ ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, ಭವಿಷ್ಯ ಯೋಜನೆಗಳಲ್ಲಿ ಒಕಿ100 ಇವಿ ಮೋಟಾರ್‌ಸೈಕಲ್ ಸೇರಿದಂತೆ ಒಂದು ಮ್ಯಾಕ್ಸಿ ಸ್ಕೂಟರ್ ಮತ್ತು ಎರಡು ಹೈ ಸ್ಪೀಡ್ ಎಲೆಕ್ಟ್ರಿಕ್ ಮಾದರಿಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

2021ರ ಎರಡನೇ ತ್ರೈಮಾಸಿಕ ಅವಧಿಯಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಒಕಿನಾವ

ಹೊಸ ವಾಹನಗಳ ಪೈಕಿ ಶೀಘ್ರದಲ್ಲಲೇ ಒಕಿ100 ಮಾದರಿಯು ಮಾರುಕಟ್ಟೆ ಪ್ರವೇಶಿಸಲು ಸಜ್ಜಾಗುತ್ತಿದ್ದು, ಕಂಪನಿಯು ಹೊಸ ಇವಿ ಬೈಕಿನ ಟೀಸರ್ ಚಿತ್ರವನ್ನು ಪ್ರಕಟಿಸುವ ಮೂಲಕ ಮುಂದಿನ ಕೆಲವೇ ದಿನಗಳಲ್ಲಿ ಬಿಡುಗಡೆ ಮಾಡುವ ಸುಳಿವು ನೀಡಿದೆ.

2021ರ ಎರಡನೇ ತ್ರೈಮಾಸಿಕ ಅವಧಿಯಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಒಕಿನಾವ

ಒಕಿ100 ಇವಿ ಬೈಕಿನ ಟೀಸರ್ ಹೊರತುಪಡಿಸಿ ಯಾವುದೇ ತಾಂತ್ರಿಕ ಅಂಶಗಳನ್ನು ಹಂಚಿಕೊಳ್ಳದ ಒಕಿನಾವ ಕಂಪನಿಯು ಬಜೆಟ್ ಬೆಲೆಯಲ್ಲಿ ಉತ್ತಮ ಬ್ಯಾಟರಿ ಪ್ಯಾಕ್‌ನೊಂದಿಗೆ ಬಿಡುಗಡೆಯ ಸುಳಿವು ನೀಡಿದ್ದು, 125 ಸಿಸಿ ಸಾಮರ್ಥ್ಯದ ಸಾಮಾನ್ಯ ಬೈಕ್‌ಗಳಿಗೆ ಸಮನಾಗಿರುವ ಹೊಸ ಎಲೆಕ್ಟ್ರಿಕ್ ಬೈಕ್ ಮಾದರಿಯು ರಿವೋಲ್ಟ್ ಎಲೆಕ್ಟ್ರಿಕ್ ಬೈಕ್‌ ಮಾದರಿಗೆ ಪೈಪೋಟಿ ನೀಡಲಿದೆ.

2021ರ ಎರಡನೇ ತ್ರೈಮಾಸಿಕ ಅವಧಿಯಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಒಕಿನಾವ

ಹೊಸ ಎಲೆಕ್ಟ್ರಿಕ್ ಬೈಕ್ ಮಾದರಿಯು ಪ್ರತಿ ಚಾರ್ಜ್‌ಗೆ ಬ್ಯಾಟರಿ ರೇಂಜ್ ಆಧಾರದ ಮೇಲೆ 120ಕಿ.ಮೀ ನಿಂದ 150 ಕಿ.ಮೀ ಮೈಲೇಜ್ ಹಿಂದಿರುಗಿಸಬಹುದಾಗಿದೆ ಎನ್ನಲಾಗಿದ್ದು, ಹೊಸ ಬೈಕ್ ಬೆಲೆಯನ್ನು ಎಕ್ಸ್‌ಶೋರೂಂ ಪ್ರಕಾರ ರೂ.1 ಲಕ್ಷದಿಂದ ರೂ.1.20 ಲಕ್ಷ ಬೆಲೆ ಅಂತರದೊಳಗೆ ಬಿಡುಗಡೆ ಮಾಡಲಾಗುತ್ತಿದೆ.

2021ರ ಎರಡನೇ ತ್ರೈಮಾಸಿಕ ಅವಧಿಯಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಒಕಿನಾವ

ಈ ಮೂಲಕ ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಹೊಸ ಬದಲಾವಣೆಗೆ ಕಾರಣವಾಗಿರುವ ಒಕಿನಾವ ಕಂಪನಿಯು ಇಂಧನ ಚಾಲಿತ ವಾಹನಗಳಿಂದ ಇವಿ ವಾಹನಗಳತ್ತ ಗ್ರಾಹಕರನ್ನು ಸೆಳೆಯಲಿದ್ದು, ಹೊಸ ವಾಹನಗಳ ಉತ್ಪಾದನೆಗಾಗಿ ಕಂಪನಿಯು ಭಾರೀ ಪ್ರಮಾಣದ ಹೂಡಿಕೆ ಮಾಡುತ್ತಿದೆ.

2021ರ ಎರಡನೇ ತ್ರೈಮಾಸಿಕ ಅವಧಿಯಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಒಕಿನಾವ

ಜೊತೆಗೆ ಹೊಸ ಇವಿ ಬೈಕ್ ಮಾದರಿಯನ್ನು ಸ್ಥಳೀಯವಾಗಿ ಅಭಿವೃದ್ದಿ ಹೊಂದಿರುವ ಗರಿಷ್ಠ ಬಿಡಿಭಾಗಗಳನ್ನು ಪಡೆದುಕೊಂಡಿರುವುದು ಸಹ ಉತ್ತಮ ಬೆಲೆ ನಿರ್ಧಾರಕ್ಕೆ ಸಹಕಾರಿಯಾಗಲಿದ್ದು, ಮುಂಬರುವ ದೀಪಾವಳಿ ಹೊಸ ಇವಿ ಬೈಕ್ ಮಾರುಕಟ್ಟೆ ಪ್ರವೇಶಿಸುವ ಸಾಧ್ಯತೆಗಳಿವೆ.

More from DriveSpark

Article Published On: Monday, August 2, 2021, 8:45 [IST]
English summary
Okinawa Records Sales Growth In Q2 2021.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+