ಭಾರೀ ಪ್ರಮಾಣದಲ್ಲಿ ಇಳಿಕೆಯಾಯ್ತು ಒಕಿನಾವಾ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬೆಲೆ

ಫೇಮ್ 2 ಅಡಿಯಲ್ಲಿ ನೀಡಲಾಗುವ ಸಬ್ಸಿಡಿ ದರವನ್ನು ಹೆಚ್ಚಿಸಿದ ನಂತರ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಒಕಿನಾವಾ ಆಟೊಟೆಕ್ ತನ್ನ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬೆಲೆಯನ್ನು ರೂ.17,900ಗಳಷ್ಟು ಕಡಿಮೆ ಮಾಡಿದೆ.

ಭಾರೀ ಪ್ರಮಾಣದಲ್ಲಿ ಇಳಿಕೆಯಾಯ್ತು ಒಕಿನಾವಾ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬೆಲೆ

ಬೆಲೆ ಇಳಿಕೆಯ ನಂತರ ಕಂಪನಿಯ ಪ್ರಮುಖ ಸ್ಕೂಟರ್ ಮಾದರಿಯಾದ ಒಕಿನಾವಾ ಐಪ್ರೈಸ್ ಪ್ಲಸ್ ಬೆಲೆ ಈಗ ಎಕ್ಸ್ ಶೋರೂಂ ದರದಂತೆ ರೂ.99,708ಗಳಾಗಿದೆ. ಮಾದರಿಗಳ ಆಧಾರದ ಮೇಲೆ ಒಕಿನಾವಾ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬೆಲೆ ರೂ.7,200ರಿಂದ ರೂ.17,900ಗಳಷ್ಟು ಕಡಿಮೆಯಾಗಿದೆ.

ಭಾರೀ ಪ್ರಮಾಣದಲ್ಲಿ ಇಳಿಕೆಯಾಯ್ತು ಒಕಿನಾವಾ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬೆಲೆ

ಐಪ್ರೈಸ್ ಪ್ಲಸ್, ಒಕಿನಾವಾ ಕಂಪನಿಯ ಹೆಚ್ಚು ಮಾರಾಟವಾಗುವ ಎಲೆಕ್ಟ್ರಿಕ್ ಸ್ಕೂಟರ್ ಆಗಿದೆ. ಕಂಪನಿಯ ಪ್ರಕಾರ ಕಳೆದ ಕೆಲವು ತಿಂಗಳುಗಳಲ್ಲಿ ಈ ಸ್ಕೂಟರ್‌ನ ಬೇಡಿಕೆ ಮೂರು ಪಟ್ಟು ಹೆಚ್ಚಾಗಿದೆ.

ಭಾರೀ ಪ್ರಮಾಣದಲ್ಲಿ ಇಳಿಕೆಯಾಯ್ತು ಒಕಿನಾವಾ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬೆಲೆ

ಒಕಿನಾವಾ ಐಪ್ರೈಸ್ ಪ್ಲಸ್ ಸ್ಕೂಟರಿನಲ್ಲಿ 1 ಕಿ.ವ್ಯಾ ಬಿಎಲ್‌ಡಿಸಿ ಎಲೆಕ್ಟ್ರಿಕ್ ಮೋಟರ್ ಅಳವಡಿಸಲಾಗಿದೆ. ಈ ಮೋಟರ್ ಅನ್ನು ಪೋರ್ಟಬಲ್ ಬ್ಯಾಟರಿಯೊಂದಿಗೆ ಜೋಡಿಸಲಾಗಿದೆ.

ಭಾರೀ ಪ್ರಮಾಣದಲ್ಲಿ ಇಳಿಕೆಯಾಯ್ತು ಒಕಿನಾವಾ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬೆಲೆ

ಈ ಬ್ಯಾಟರಿಯು ಪೂರ್ತಿಯಾಗಿ ಚಾರ್ಜ್ ಆದ ನಂತರ ಗರಿಷ್ಠ 160 ಕಿ.ಮೀಗಳವರೆಗೆ ಚಲಿಸುತ್ತದೆ ಎಂದು ಕಂಪನಿ ಹೇಳಿಕೊಂಡಿದೆ. ಈ ಬ್ಯಾಟರಿಯನ್ನು 1 ಗಂಟೆಯಲ್ಲಿ 0 - 80% ವರೆಗೂ ಚಾರ್ಜ್ ಮಾಡಬಹುದು.

ಭಾರೀ ಪ್ರಮಾಣದಲ್ಲಿ ಇಳಿಕೆಯಾಯ್ತು ಒಕಿನಾವಾ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬೆಲೆ

ಈ ಬ್ಯಾಟರಿಯು 3 ಗಂಟೆಗಳಲ್ಲಿ ಪೂರ್ತಿಯಾಗಿ ಚಾರ್ಜ್ ಆಗುತ್ತದೆ. ಈ ಎಲೆಕ್ಟ್ರಿಕ್ ಸ್ಕೂಟರಿನ ಟಾಪ್ ಸ್ಪೀಡ್ ಪ್ರತಿ ಗಂಟೆಗೆ 58 ಕಿ.ಮೀಗಳಾಗಿದೆ. ಐಪ್ರೈಸ್ ಪ್ಲಸ್ ಎಲೆಕ್ಟ್ರಿಕ್ ಸ್ಕೂಟರಿನಲ್ಲಿ ಐಒಟಿ ಟೆಕ್ನಾಲಜಿಯನ್ನು ಅಳವಡಿಸಲಾಗಿದೆ.

ಭಾರೀ ಪ್ರಮಾಣದಲ್ಲಿ ಇಳಿಕೆಯಾಯ್ತು ಒಕಿನಾವಾ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬೆಲೆ

ಈ ಟೆಕ್ನಾಲಜಿ ಮೊಬೈಲ್ ಅಪ್ಲಿಕೇಶನ್ ಹಾಗೂ ಎಂಡ್ಯಾಶ್ ಒಕಿನಾವಾ ಇಕೋ ಆ್ಯಪ್'ಗೆ ಕನೆಕ್ಟ್ ಮಾಡುತ್ತದೆ. ಸ್ಕೂಟರ್ ಬಳಕೆಯನ್ನು ಟ್ರ್ಯಾಕ್ ಮಾಡಲು, ನಿರ್ದೇಶನಗಳನ್ನು ಪಡೆಯಲು ಆ್ಯಪ್'ಗೆ ಅನುಮತಿ ನೀಡುತ್ತದೆ.

ಭಾರೀ ಪ್ರಮಾಣದಲ್ಲಿ ಇಳಿಕೆಯಾಯ್ತು ಒಕಿನಾವಾ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬೆಲೆ

ಒಕಿನಾವಾ ಐಪ್ರೈಸ್ ಪ್ಲಸ್ ಎಲೆಕ್ಟ್ರಿಕ್ ಸ್ಕೂಟರಿನಲ್ಲಿ ಡಿಟ್ಯಾಚೇಬಲ್ ಲಿಥಿಯಂ-ಐಯಾನ್ ಬ್ಯಾಟರಿ, ಸ್ಕೂಟರ್ ಟ್ರ್ಯಾಕಿಂಗ್, ಜಿಯೋಫೆನ್ಸಿಂಗ್ ಹಾಗೂ ರಿಮೋಟ್ಇಮೊಬೈಲೈಸರ್ ನಂತಹ ಫೀಚರ್'ಗಳನ್ನು ಅಳವಡಿಸಲಾಗಿದೆ.

ಭಾರೀ ಪ್ರಮಾಣದಲ್ಲಿ ಇಳಿಕೆಯಾಯ್ತು ಒಕಿನಾವಾ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬೆಲೆ

ಕಂಪನಿಯು ತನ್ನ ಎಲೆಕ್ಟ್ರಿಕ್ ಸ್ಕೂಟರ್'ಗಳ ಬೆಲೆ ಇಳಿಸಿರುವ ಬಗ್ಗೆ ಓಕಿನಾವಾ ಆಟೊಟೆಕ್‌ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಂಸ್ಥಾಪಕರಾದ ಜಿತೇಂದ್ರ ಶರ್ಮಾರವರು ಮಾಹಿತಿ ನೀಡಿದ್ದಾರೆ.

ಭಾರೀ ಪ್ರಮಾಣದಲ್ಲಿ ಇಳಿಕೆಯಾಯ್ತು ಒಕಿನಾವಾ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬೆಲೆ

ಗ್ರಾಹಕರಿಗೆ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಕೈಗೆಟುಕುವ ಬೆಲೆಯಲ್ಲಿ ಒದಗಿಸಲು ನಾವು ಉತ್ಸುಕರಾಗಿದ್ದೇವೆ. ದೇಶದಲ್ಲಿ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬೆಲೆಯನ್ನು ಕಡಿಮೆ ಮಾಡುವುದು ದೊಡ್ಡ ಹೆಜ್ಜೆಯಾಗಿದೆ ಎಂದು ಅವರು ಹೇಳಿದರು.

ಭಾರೀ ಪ್ರಮಾಣದಲ್ಲಿ ಇಳಿಕೆಯಾಯ್ತು ಒಕಿನಾವಾ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬೆಲೆ

ಇದರಿಂದ ಗ್ರಾಹಕರು ಪೆಟ್ರೋಲ್ ಸ್ಕೂಟರಿಗಳಿಗೆ ಬದಲು ಎಲೆಕ್ಟ್ರಿಕ್ ಸ್ಕೂಟರ್ ಖರೀದಿಸಲು ಅನುಕೂಲವಾಗುತ್ತದೆ. ಈ ಮಹತ್ವದ ಹೆಜ್ಜೆಗೆ ನಾವು ಕೇಂದ್ರ ಸರ್ಕಾರಕ್ಕೆ ಧನ್ಯವಾದ ಸಲ್ಲಿಸುತ್ತೇವೆ.

ಮಾದರಿ ಮುಂಚಿನ ದರ ಈಗಿನ ದರ ಇಳಿಕೆ ಮೊತ್ತ
ಐಪ್ರೈಸ್ ಪ್ಲಸ್ ರೂ.1,17,600 ರೂ.99,708 ರೂ.17,892
ಪ್ರೈಸ್ ಪ್ರೊ ರೂ.84,795 ರೂ.76,848 ರೂ.7,947
ರಿಜ್ ಪ್ಲಸ್ ರೂ.69,000 ರೂ.61,791 ರೂ.7,203
ಭಾರೀ ಪ್ರಮಾಣದಲ್ಲಿ ಇಳಿಕೆಯಾಯ್ತು ಒಕಿನಾವಾ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬೆಲೆ

ಒಕಿನಾವಾ ಕಂಪನಿಯಲ್ಲಿರುವ ಸ್ಥಳೀಕರಣ ತಂತ್ರವು ನಮಗೆ ಸಹಾಯ ಮಾಡಿದೆ. ಉತ್ತಮ ಗುಣಮಟ್ಟದ ಉತ್ಪನ್ನಗಳನ್ನು ಹೊಂದಿಸಲು ಅನುಮತಿ ನೀಡಲಾಗಿದೆ. ಎಲೆಕ್ಟ್ರಿಕ್ ಸ್ಕೂಟರ್'ಗಳ ಬೆಲೆ ಇಳಿಕೆಯಿಂದಾಗಿ ಗ್ರಾಹಕರು ಎಲೆಕ್ಟ್ರಿಕ್ ಸ್ಕೂಟರ್'ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಖರೀದಿಸಲು ಸಾಧ್ಯವಾಗಲಿದೆ ಎಂದು ಜಿತೇಂದ್ರ ಶರ್ಮಾ ತಿಳಿಸಿದರು.

ಭಾರೀ ಪ್ರಮಾಣದಲ್ಲಿ ಇಳಿಕೆಯಾಯ್ತು ಒಕಿನಾವಾ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬೆಲೆ

ಇತ್ತೀಚಿಗೆ ಕೇಂದ್ರ ಸರ್ಕಾರವು ಫೇಮ್ 2 ಯೋಜನೆಯಡಿಯಲ್ಲಿ ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಬಳಸುವ ಬ್ಯಾಟರಿ ಪ್ಯಾಕ್‌ಗಳಿಗೆ ನೀಡಲಾಗುವ ಸಬ್ಸಿಡಿ ಮೊತ್ತವನ್ನು ಪ್ರತಿ ಕಿ.ವ್ಯಾಗೆ ರೂ.10,000ಗಳಿಂದ ರೂ.15,000ಗಳಿಗೆ ಹೆಚ್ಚಿಸಿದೆ.

ಭಾರೀ ಪ್ರಮಾಣದಲ್ಲಿ ಇಳಿಕೆಯಾಯ್ತು ಒಕಿನಾವಾ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬೆಲೆ

ಸಬ್ಸಿಡಿ ಮೊತ್ತವನ್ನು 50%ನಷ್ಟು ಹೆಚ್ಚಳ ಮಾಡಿರುವುದರಿಂದ ಎಲೆಕ್ಟ್ರಿಕ್ ವಾಹನ ತಯಾರಕ ಕಂಪನಿಗಳು ತಮ್ಮ ವಾಹನಗಳ ಬೆಲೆಯನ್ನು ಕಡಿಮೆ ಮಾಡಿ ಅದರ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸುತ್ತಿವೆ.

Most Read Articles

Kannada
English summary
Okinawa reduces its electric scooters price due to Fame 2 subsidy. Read in Kannada.
Story first published: Wednesday, June 16, 2021, 18:22 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X