ಹೊಸ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಘಟಕದ ಮೇಲೆ ಭಾರೀ ಪ್ರಮಾಣದ ಹೂಡಿಕೆಗೆ ಸಿದ್ದವಾದ ಒಕಿನಾವ

ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟವು ಹೆಚ್ಚುತ್ತಿರುವ ಹಿನ್ನಲೆ ವಿವಿಧ ವಾಹನ ಉತ್ಪಾದನಾ ಕಂಪನಿಗಳು ಗ್ರಾಹಕರ ಬೇಡಿಕೆ ಪೂರೈಸಲು ಉತ್ಪಾದನಾ ಪ್ರಮಾಣವನ್ನು ದ್ವಿಗುಣಗೊಳಿಸಿದ್ದು, ಒಕಿನಾವ ಕೂಡಾ ತನ್ನ ಪ್ರಮುಖ ಎಲೆಕ್ಟ್ರಿಕ್ ಸ್ಕೂಟರ್‌ಗಳ ಉತ್ಪಾದನಾ ಪ್ರಮಾಣವನ್ನು ಹೆಚ್ಚಳ ಮಾಡಲು ಹೊಸ ಘಟಕ ತೆರೆಯಲು ಸಿದ್ದವಾಗಿದೆ.

ಹೊಸ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಘಟಕದ ಮೇಲೆ ಭಾರೀ ಪ್ರಮಾಣದ ಹೂಡಿಕೆಗೆ ಸಿದ್ದವಾದ ಒಕಿನಾವ

ಎಲೆಕ್ಟ್ರಿಕ್ ವಾಹನ ಮಾರಾಟ ಆರಂಭಿಸಿದ 6 ವರ್ಷಗಳ ಅವಧಿಯಲ್ಲಿ ಇದೇ ಮೊದಲ ಬಾರಿಗೆ ಅತಿ ಹೆಚ್ಚು ಬೇಡಿಕೆ ಪಡೆದುಕೊಳ್ಳುತ್ತಿರುವ ಒಕಿನಾವ ಕಂಪನಿಯು ಶೀಘ್ರದಲ್ಲೇ ಮತ್ತಷ್ಟು ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಲಿದ್ದು, ಹೊಸ ಯೋಜನೆಗೆ ಪೂರಕವಾಗಿ ಉತ್ಪಾದನಾ ಪ್ರಮಾಣವನ್ನು ಹೆಚ್ಚಿಸಲು ರಾಜಸ್ತಾನದಲ್ಲೇ ಎರಡನೇ ಉತ್ಪಾದನಾ ಘಟಕವನ್ನು ನಿರ್ಮಾಣ ಮಾಡುವ ಸಿದ್ದತೆ ನಡೆಸಿದೆ.

ಹೊಸ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಘಟಕದ ಮೇಲೆ ಭಾರೀ ಪ್ರಮಾಣದ ಹೂಡಿಕೆಗೆ ಸಿದ್ದವಾದ ಒಕಿನಾವ

ಎರಡನೇ ವಾಹನ ಉತ್ಪಾದನಾ ಘಟಕದ ಮೂಲಕ ವಾರ್ಷಿಕವಾಗಿ 1 ಲಕ್ಷ ಎಲೆಕ್ಟ್ರಿಕ್ ಸ್ಕೂಟರ್ ಮತ್ತು ಬೈಕ್ ಮಾದರಿಗಳನ್ನು ಉತ್ಪಾದನೆಗೊಳಿಸಲಿರುವ ಒಕಿನಾವ ಕಂಪನಿಯು ಹೊಸ ಘಟಕದ ನಿರ್ಮಾಣಕ್ಕಾಗಿ ಬರೋಬ್ಬರಿ ರೂ. 150 ಕೋಟಿ ಹೂಡಿಕೆ ಮಾಡುವ ಸುಳಿವು ನೀಡಿದೆ.

ಹೊಸ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಘಟಕದ ಮೇಲೆ ಭಾರೀ ಪ್ರಮಾಣದ ಹೂಡಿಕೆಗೆ ಸಿದ್ದವಾದ ಒಕಿನಾವ

ಒಕಿನಾವ ಕಂಪನಿಯ ಹೊಸ ಯೋಜನೆಗಾಗಿ ಪ್ರಮುಖ ಕಂಪನಿಗಳು ಭಾರೀ ಪ್ರಮಾಣದ ಬಂಡವಾಳ ಹೂಡಿಕೆ ಆಸಕ್ತಿ ಹೊಂದಿದ್ದು, ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿರುವ ಒಕಿನಾವ ಕಂಪನಿಯು ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಮಾದರಿಯ ಎಲೆಕ್ಟ್ರಿಕ್ ಸ್ಕೂಟರ್ ಮತ್ತು ಬೈಕ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸಲಿದೆ.

ಹೊಸ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಘಟಕದ ಮೇಲೆ ಭಾರೀ ಪ್ರಮಾಣದ ಹೂಡಿಕೆಗೆ ಸಿದ್ದವಾದ ಒಕಿನಾವ

ಬಜೆಟ್ ಬೆಲೆಯಲ್ಲಿ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹಲವಾರು ಎಲೆಕ್ಟ್ರಿಕ್ ಸ್ಕೂಟರ್ ಮಾದರಿಗಳನ್ನು ಮಾರಾಟ ಮಾಡುತ್ತಿರುವ ಒಕಿನಾವ ಕಂಪನಿಯು ಒಕಿ100 ಇವಿ ಬೈಕ್ ಸೇರಿದಂತೆ ಒಟ್ಟು ನಾಲ್ಕು ಹೊಸ ದ್ವಿಚಕ್ರ ವಾಹನಗಳನ್ನು ಬಿಡುಗಡೆ ಮಾಡಲಿದ್ದು, ಹೊಸ ವಾಹನಗಳ ಜೊತೆಗೆ ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾದರಿಗಳನ್ನು ಸಹ ಗ್ರಾಹಕರ ಬೇಡಿಕೆಯೆಂತೆ ಹೊಸ ಫೀಚರ್ಸ್‌ಗಳೊಂದಿಗೆ ಉನ್ನತೀಕರಿಸುತ್ತಿದೆ.

ಹೊಸ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಘಟಕದ ಮೇಲೆ ಭಾರೀ ಪ್ರಮಾಣದ ಹೂಡಿಕೆಗೆ ಸಿದ್ದವಾದ ಒಕಿನಾವ

ಒಕಿನಾವ ಕಂಪನಿಯು ಕಂಪನಿಯು ಸದ್ಯ ಗ್ರಾಹಕರ ಬೇಡಿಕೆಯೆಂತೆ ಪ್ರೈಸ್, ಆರ್30, ಲೈಟ್, ರಿಡ್ಜ್ ಪ್ಲಸ್, ಪ್ರೈಸ್ ಪ್ರೊ ಮತ್ತು ಐ-ಪ್ರೈಸ್ ಪ್ರೊ ಪ್ಲಸ್ ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, ಭವಿಷ್ಯ ಯೋಜನೆಗಳಲ್ಲಿ ಒಕಿ100 ಸೇರಿದಂತೆ ಒಂದು ಮ್ಯಾಕ್ಸಿ ಸ್ಕೂಟರ್ ಮತ್ತು ಎರಡು ಹೈ ಸ್ಪೀಡ್ ಎಲೆಕ್ಟ್ರಿಕ್ ಮಾದರಿಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಹೊಸ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಘಟಕದ ಮೇಲೆ ಭಾರೀ ಪ್ರಮಾಣದ ಹೂಡಿಕೆಗೆ ಸಿದ್ದವಾದ ಒಕಿನಾವ

ಕೋವಿಡ್ 19 ಪರಿಣಾಮ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಆಟೋ ಉತ್ಪಾದನಾ ವಿಭಾಗವು ಇದೀಗ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದು, ವೈರಸ್ ಭೀತಿಯು ಹೊಸ ವಾಹನಗಳ ಖರೀದಿ ಹೆಚ್ಚಳಕ್ಕೆ ಪ್ರಮುಖ ಕಾರಣವಾಗುತ್ತಿರುವುದು ಆಟೋ ಉತ್ಪಾದನಾ ಕಂಪನಿಗಳಿಗೆ ಮತ್ತಷ್ಟು ಬಲಬಂದಿದೆ.

ಹೊಸ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಘಟಕದ ಮೇಲೆ ಭಾರೀ ಪ್ರಮಾಣದ ಹೂಡಿಕೆಗೆ ಸಿದ್ದವಾದ ಒಕಿನಾವ

ಕೋವಿಡ್ ಭೀತಿಯಿಂದಗಿ ಬಹುತೇಕರು ಸ್ವಂತ ವಾಹನಗಳ ಬಳಕೆಯನ್ನು ಹೆಚ್ಚಿಸುತ್ತಿರುವುದು ಹೊಸ ವಾಹನಗಳ ಮಾರಾಟವು ಚೇತರಿಸಿಕೊಳ್ಳುತ್ತಿರುವುದಕ್ಕೆ ಪ್ರಮುಖ ಕಾರಣವಾಗಿದ್ದು, ಈ ಅವಕಾಶವನ್ನು ಬಳಸಿಕೊಳ್ಳುತ್ತಿರುವ ಆಟೋ ಕಂಪನಿಗಳು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹಲವಾರು ಹೊಸ ಮಾದರಿಯ ವಾಹನಗಳನ್ನು ಪರಿಚಯಿಸುತ್ತಿವೆ.

MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಹೊಸ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಘಟಕದ ಮೇಲೆ ಭಾರೀ ಪ್ರಮಾಣದ ಹೂಡಿಕೆಗೆ ಸಿದ್ದವಾದ ಒಕಿನಾವ

ಒಕಿನಾವ ಕಂಪನಿಯು ಕೂಡಾ ಲಾಕ್‌ಡೌನ್ ಸಡಿಲಿಕೆ ನಂತರ ತಜ್ಞರ ಅಭಿಪ್ರಾಯದ ಮೇಲೆ ಶೋರೂಂಗಳ ಸಂಖ್ಯೆಯನ್ನು ಹೆಚ್ಚಿಸುವುದ ಜೊತೆಗೆ ಮತ್ತಷ್ಟು ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡುತ್ತಿದ್ದು, ಹೊಸ ಇವಿ ಬೈಕ್ ಮತ್ತು ಮ್ಯಾಕ್ಸಿ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಪ್ರಮುಖ ಆಕರ್ಷಣೆಯಾಗಲಿದೆ.

Most Read Articles

Kannada
English summary
Okinawa to setup new manufacturing unit in Rajasthan. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X