ಪ್ರತಿ 2 ಸೆಕೆಂಡುಗಳಿಗೆ ಒಂದು ಸ್ಕೂಟರ್ ಉತ್ಪಾದನೆ ಮಾಡಲಿದೆ ಓಲಾ ಎಲೆಕ್ಟ್ರಿಕ್
ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ದೇಶಿಯ ಮಾರುಕಟ್ಟೆಯಲ್ಲಿ ಹಲವಾರು ಸ್ಟಾಟ್ ಅಪ್ ಕಂಪನಿಗಳು ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಮುಂಚೂಣಿ ಸಾಧಿಸುತ್ತಿದ್ದು, ವಿವಿಧ ಮಾದರಿಯ ಎಲೆಕ್ಟ್ರಿಕ್ ವಾಹನಗಳೊಂದಿಗೆ ಗ್ರಾಹಕರ ಸೆಳೆಯುವಲ್ಲಿ ಯಶಸ್ವಿಯಾಗುತ್ತಿವೆ.

ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಿರುವುದರಿಂದ ಆಟೋ ಉತ್ಪಾದನಾ ಕ್ಷೇತ್ರಕ್ಕೆ ಅಧಿಕೃತವಾಗಿ ಪ್ರವೇಶಿಸಿರುವ ಕ್ಯಾಬ್ ಸೇವಾ ಕಂಪನಿ ಓಲಾ ಅಂಗಸಂಸ್ಥೆಯ ಓಲಾ ಎಲೆಕ್ಟ್ರಿಕ್ ಬಾರಿಗೆ ವಾಹನಗಳ ಉತ್ಪಾದನೆದಲ್ಲಿ ಭಾರೀ ಪ್ರಮಾಣದ ಹೂಡಿಕೆ ಮಾಡಿದೆ. ಭಾರತದಲ್ಲೇ ಪೂರ್ಣ ಪ್ರಮಾಣದ ವಾಹನ ಉತ್ಪಾದನೆಯ ಗುರಿಹೊಂದಿರುವ ಓಲಾ ಎಲೆಕ್ಟ್ರಿಕ್ ಕಂಪನಿಯು ದೇಶಿಯ ಮಾರುಕಟ್ಟೆಯಿಂದಲೇ ವಿಶ್ವದ ಪ್ರಮುಖ ರಾಷ್ಟ್ರಗಳಿಗೆ ಇವಿ ವಾಹನಗಳನ್ನು ರಫ್ತು ಮಾಡಲು ಸಿದ್ದವಾಗಿದೆ.

ಈ ವರ್ಷಾಂತ್ಯಕ್ಕೆ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡುವ ಸಿದ್ದತೆಯಲ್ಲಿರುವ ಓಲಾ ಕಂಪನಿಯು ತಮಿಳುನಾಡಿನ ಹೊಸೂರಿನಲ್ಲಿ ಹೊಸ ವಾಹನ ಉತ್ಪಾದನಾ ಘಟಕ ನಿರ್ಮಾಣಕ್ಕೆ ಚಾಲನೆ ನೀಡಿದ್ದು, ಮೊದಲ ಹಂತದ ನಿರ್ಮಾಣ ಪ್ರಕ್ರಿಯೆಗಳನ್ನು ಆರಂಭಿಸಿದೆ.

ಬೃಹತ್ ಪ್ರಮಾಣದ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನಾ ಯೋಜನೆಗಾಗಿ ನೇದರ್ಲ್ಯಾಂಡ್ ಮೂಲದ ಎಟರ್ಗೋ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನಾ ಕಂಪನಿಯೊಂದಿಗೆ ಜೊತೆಗೂಡಿಸಿರುವ ಓಲಾ ಕಂಪನಿಯು ಭಾರತದಲ್ಲಿ ಮಾತ್ರವಲ್ಲ ಅಂತರಾಷ್ಟ್ರೀಯ ಮಾರುಕಟ್ಟೆಗಳಲ್ಲೂ ಹೊಸ ಇವಿ ವಾಹನಗಳನ್ನು ರಫ್ತು ಮಾಡುವ ಬೃಹತ್ ಯೋಜನೆ ಹೊಂದಿದೆ.

ಓಲಾ ಕಂಪನಿಯು ಹೊಸ ವಾಹನ ಉತ್ಪಾದನಾ ಘಟಕವನ್ನು ಇಂಡಸ್ಟ್ರಿ 4.0 ತತ್ವದ ಆಧಾರದ ಮೇಲೆ ನಿರ್ಮಾಣ ಮಾಡಲಾಗುತ್ತಿದ್ದು, ಈ ಮೂಲಕ ಹೊಸ ಘಟಕವು ದೇಶದ ಅತ್ಯಾಧುನಿಕ ವಾಹನ ಉತ್ಪಾದನಾ ಘಟಕಗಳಲ್ಲಿ ಒಂದಾಗಲಿದೆ. ಆಧುನಿಕ ವಾಹನ ಉತ್ಪಾದನಾ ಘಟಕದಲ್ಲಿ ಸಾವಿರಾರು ಉದ್ಯೋಗಗಳ ಜೊತೆಗೆ ವಿವಿಧ ಕಾರ್ಯಗಳಿಗಾಗಿ ಸುಮಾರು 5 ಸಾವಿರ ರೋಬೋಟ್‌ಗಳನ್ನು ಹೊಸ ಘಟಕದಲ್ಲಿ ನಿಯೋಜಿಸಲು ನಿರ್ಧರಿಸಲಾಗುತ್ತಿದೆ.

ಬರೋಬ್ಬರಿ 500 ಎಕರೆ ವ್ಯಾಪ್ತಿ ಹೊಂದಿರುವ ಹೊಸ ವಾಹನ ಉತ್ಪಾದನಾ ಘಟಕದಲ್ಲಿ ವಾರ್ಷಿಕವಾಗಿ 20 ಲಕ್ಷ ಎಲೆಕ್ಟ್ರಿಕ್ ಸ್ಕೂಟರ್‌ಗಳ ನಿರ್ಮಾಣದ ಗುರಿ ಹೊಂದಲಾಗಿದ್ದು, ಪ್ರತಿ 2 ಸೆಕೆಂಡುಗಳಲ್ಲಿ 1 ಎಲೆಕ್ಟ್ರಿಕ್ ಸ್ಕೂಟರ್ ನಿರ್ಮಾಣಗೊಳ್ಳಲಿದೆ.

ವಿವಿಧ ಉತ್ಪಾದನಾ ಹಂತಗಳಲ್ಲಿ ಒಂದೇ ಬಾರಿಗೆ ನೂರಾರು ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಅಸೆಂಬ್ಲಿ ಮಾಡುವ ರೋಬೋಟ್‌ಗಳು ಅಂತಿಮವಾಗಿ ಪ್ರತಿ ಸೆಕೆಂಡುಗಳಲ್ಲಿ ಒಂದು ಉತ್ಪಾದನಾ ಮಾದರಿಯನ್ನು ಮಾರಾಟಕ್ಕೆ ಸಿದ್ದಗೊಳಿಸಲಿವೆ.

ಹೊಸ ಯೋಜನೆಗಾಗಿ ಓಲಾ ಕಂಪನಿಯು ಆರಂಭಿಕ ಬಂಡವಾಳವಾಗಿ ರೂ. 2,400 ಕೋಟಿ ಹೂಡಿಕೆ ಮಾಡಲಾಗುತ್ತಿದ್ದು, ಸದ್ಯ ಇವಿ ಸ್ಕೂಟರ್ ಮಾತ್ರ ಉತ್ಪಾದನೆ ಮಾಡಲಿರುವ ಕಂಪನಿಯು ಮುಂಬರುವ ದಿನಗಳಲ್ಲಿ ಗ್ರಾಹಕರ ಬೇಡಿಕೆಯೆಂತೆ ಹಲವು ಹೊಸ ಇವಿ ವಾಹನಗಳನ್ನು ಅಭಿವೃದ್ದಿಪಡಿಸಲಿದೆ.
MOST READ: ಅತಿ ಕಡಿಮೆ ಬೆಲೆಯಲ್ಲಿ ಬಿಎಸ್ಐ ಸರ್ಟಿಫೈಡ್ ಟ್ರೆಡ್ ಹೆಲ್ಮೆಟ್ ಬಿಡುಗಡೆ

ಬೃಹತ್ ಯೋಜನೆಯಲ್ಲಿ ಹೊಸ ವಾಹನಗಳ ಅಭಿವೃದ್ದಿಗಾಗಿ ಎಟರ್ಗೋ ಕೈ ಜೋಡಿಸಿರುವ ಓಲಾ ಕಂಪನಿಯು ರೋಬೋಟ್ ತಂತ್ರಜ್ಞಾನ ನಿರ್ವಹಣೆಯನ್ನು ಸೀಮನ್ಸ್ ಕಂಪನಿಗೆ ಉಸ್ತುವಾರಿ ವಹಿಸಿದ್ದು, ಮಾರುಕಟ್ಟೆ ಮತ್ತು ಮಾರಾಟ ವಿಭಾಗವನ್ನು ಓಲಾ ಕಂಪನಿಯು ನಿರ್ವಹಿಸಲಿದೆ.

ಹೊಸ ಇವಿ ವಾಹನ ಉತ್ಪಾದನಾ ಘಟಕದೊಂದಿಗೆ ಓಲಾ ಕಂಪನಿಯು ಜಾಗತಿಕ ಮಾರುಕಟ್ಟೆಗೆ ಪ್ರವೇಶ ಪಡೆಯುತ್ತಿದ್ದು, ಹೊಸ ವಾಹನ ಉತ್ಪಾದನಾ ಘಟಕದಲ್ಲಿ ಉತ್ಪಾದಿಸುವ ಸ್ಕೂಟರ್‌ಗಳನ್ನು ಭಾರತದಲ್ಲಿ ಮಾತ್ರವಲ್ಲದೇ ಯುರೋಪ್, ಇಂಗ್ಲೆಂಡ್, ಲ್ಯಾಟಿನ್ ಅಮೆರಿಕಾದ ಪ್ರಮುಖ ರಾಷ್ಟ್ರಗಳಲ್ಲಿ ಮಾರಾಟಗೊಳ್ಳಲಿವೆ.

ಓಲಾ ಜೊತೆಗೂಡಿರುವ ಎಟರ್ಗೋ ಕಂಪನಿಯು ಈಗಾಗಲೇ ಯುರೋಪಿನ ಪ್ರಮುಖ ಮಾರುಕಟ್ಟೆಯಲ್ಲಿ ಭಾರೀ ಜನಪ್ರಿಯತೆಯೊಂದಿಗೆ ವಿವಿಧ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, ಇದರಲ್ಲಿ ಸುಧಾರಿತ ತಂತ್ರಜ್ಞಾನ ಪ್ರೇರಣೆ ಹೊಂದಿರುವ ಆ್ಯಪ್ ಸ್ಕೂಟರ್ ಮಾದರಿಯನ್ನೇ ಓಲಾ ಕಂಪನಿಯು ಕೆಲವು ಪ್ರಮುಖ ಬದಲಾವಣೆಗಳೊಂದಿಗೆ ಭಾರತದಲ್ಲೂ ಬಿಡುಗಡೆ ಮಾಡಲು ಸಿದ್ದವಾಗಿದೆ.
MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಹೊಸ ಸ್ಕೂಟರಿನ ಅಧಿಕೃತ ಚಿತ್ರಗಳನ್ನು ಈಗಾಗಲೇ ಬಹಿರಂಗಪಡಿಸಿರುವ ಓಲಾ ಕಂಪನಿಯು ಪ್ರತಿ ಚಾರ್ಜ್‌ಗೆ ಗರಿಷ್ಠ 240 ಕಿ.ಮೀ ಮೈಲೇಜ್ ಹಿಂದಿರುಗಿಸುವ ಭರವಸೆ ನೀಡಿದ್ದು, ಹಲವಾರು ಸುಧಾರಿತ ತಂತ್ರಜ್ಞಾನ ಸೌಲಭ್ಯ ಹೊಂದಿರುವ ಹೊಸ ಇವಿ ಸ್ಕೂಟರ್ ಮಾದರಿಯು ಮುಂಬರುವ ಕೆಲವೇ ತಿಂಗಳಿನಲ್ಲಿ ಮಾರುಕಟ್ಟೆ ಪ್ರವೇಶಿಸಲಿದೆ.


Click it and Unblock the Notifications








